ಮಹದಾಯಿ, ಕಳಸಾ-ಬಂಡೂರಿ ಯೋಜನೆ ಜಾರಿಗೆ ಪ್ರತ್ಯೇಕ ಸಮಿತಿ ರಚಿಸಿ - ವ್ಯಾಜ್ಯ ಬಗೆಹರಿಸಲು ಸೂಕ್ತ ಕ್ರಮ ಕೈಗೊಳ್ಳಿ ; ಶಂಕರ್ ಅಂಬಲಿ ಆಗ್ರಹ

ಕೇಂದ್ರ ಸಚಿವ ಗಜೇಂದ್ರಸಿಂಗ್ ಶೇಖಾವತ್ ಕೆಲವು ಕಾನೂನು ತೊಡಕುಗಳ ಕುರಿತು ಮಾಹಿತಿ ನೀಡಿದ್ದಾರೆ. ನ್ಯಾಯಾಧಿಕರಣದ ಆದೇಶ ಪ್ರಶ್ನಿಸಿ ಮೂರೂ ರಾಜ್ಯಗಳು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿವೆ. ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ಸಹಮತವಿಲ್ಲದೆ ಗೆಜೆಟ್ ನೋಟಿಫಿಕೇಶನ್ ಹೊರಡಿಸಲು ಬರಲ್ಲ

news18-kannada
Updated:January 14, 2020, 4:17 PM IST
ಮಹದಾಯಿ, ಕಳಸಾ-ಬಂಡೂರಿ ಯೋಜನೆ ಜಾರಿಗೆ ಪ್ರತ್ಯೇಕ ಸಮಿತಿ ರಚಿಸಿ - ವ್ಯಾಜ್ಯ ಬಗೆಹರಿಸಲು ಸೂಕ್ತ ಕ್ರಮ ಕೈಗೊಳ್ಳಿ ; ಶಂಕರ್ ಅಂಬಲಿ ಆಗ್ರಹ
ಮಹದಾಯಿ
  • Share this:
ಹುಬ್ಬಳ್ಳಿ(ಜ.14) : ಮಹದಾಯಿ ಮತ್ತು ಕಳಸಾ- ಬಂಡೂರಿ ಯೋಜನೆ ಜಾರಿಗೆ ರಾಜ್ಯ ಸರ್ಕಾರ ಕಾನೂನು ತಜ್ಞರು, ತಾಂತ್ರಿಕ ಸಲಹೆಗಾರರು ಮತ್ತು ಹೋರಾಟಗಾರರ ಸಮಿತಿ ನೇಮಿಸಬೇಕು. ವ್ಯಾಜ್ಯ ಬಗೆಹರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮಹದಾಯಿ ಹೋರಾಟಗಾರ ಶಂಕರ್ ಅಂಬಲಿ ಸರ್ಕಾರವನ್ನುಆಗ್ರಹಿಸಿದ್ದಾರೆ.

ಮಹದಾಯಿ ನ್ಯಾಯಾಧಿಕರಣದ ತೀರ್ಪು ಜಾರಿಗೆ ಗೆಜೆಟ್ ನೋಟಿಫಿಕೇಶನ್ ಹೊರಡಿಸುವಂತೆ ಒತ್ತಾಯಿಸಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರಸಿಂಗ್ ಶೇಖಾವತ್‌ಗೆ ಮನವಿ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.

ಕೇಂದ್ರ ಸಚಿವ ಗಜೇಂದ್ರಸಿಂಗ್ ಶೇಖಾವತ್ ಕೆಲವು ಕಾನೂನು ತೊಡಕುಗಳ ಕುರಿತು ಮಾಹಿತಿ ನೀಡಿದ್ದಾರೆ. ನ್ಯಾಯಾಧಿಕರಣದ ಆದೇಶ ಪ್ರಶ್ನಿಸಿ ಮೂರೂ ರಾಜ್ಯಗಳು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿವೆ. ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ಸಹಮತವಿಲ್ಲದೆ ಗೆಜೆಟ್ ನೋಟಿಫಿಕೇಶನ್ ಹೊರಡಿಸಲು ಬರಲ್ಲ. ರಿವಿಜನ್ ಪಿಟಿಷನ್ ಆಫ್ ಕ್ಲ್ಯಾರಿಫಿಕೇಶನ್ಸ್‌ನ ಅಂತಿಮ ತೀರ್ಪು ಬರಬೇಕಿದೆ. ಅಂದಾಗ ಮಾತ್ರ ಕೇಂದ್ರ ಗೆಜೆಟ್ ನೋಟಿಫಿಕೇಷನ್ ಹೊರಡಿಸಲಿದೆ ಎಂದವರು ಮಾಹಿತಿ ನೀಡಿದ್ದಾರೆ.

ಮಲಪ್ರಭಾ ವ್ಯಾಪ್ತಿಯಲ್ಲಿ ಸ್ಮಾರ್ಟ್ ವಿಲೇಜ್ ಯೋಜನೆ ಜಾರಿಗೆ ತರಬೇಕು‌. ಒಂಭತ್ತು ತಾಲ್ಲೂಕುಗಳ ನಾಲ್ಕು ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಕಲ್ಪಿಸಬೇಕು. ಈ ಬಗ್ಗೆ ಕೇಂದ್ರ ನೀತಿ ಆಯೋಗ ಮತ್ತು ಜಲಶಕ್ತಿ ಸಚಿವರಿಗೆ ಮನವಿ ಸಲ್ಲಿಸಲಾಗಿದೆ ಎಂದರು.

ಇದನ್ನೂ ಓದಿ : ಎಸ್​ಎಸ್​ಎಲ್​ಸಿ ಫಲಿತಾಂಶದಲ್ಲಿ ಮೊದಲ ಸ್ಥಾನ ಬಿಟ್ಟು ಕೊಡೋ ಮನಸ್ಸಿಲ್ಲ - ಮಕ್ಕಳ ಪ್ರಗತಿಗಾಗಿ ಕುಟುಂಬ ಸಮೇತ ದುಡೀತೀವಿ ; ಭವಾನಿ ರೇವಣ್ಣ

ಕೇಂದ್ರ ಸರ್ಕಾರದಿಂದ ಸಕಾರಾತ್ಮಕ ಸ್ಪಂಧನೆ ಸಿಕ್ಕಿದೆ. ಮಹದಾಯಿ ವಿವಾದ ಬಗೆಹರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ತ್ವರಿತ ಗತಿಯ ಕ್ರಮಗಳನ್ನು ಜರುಗಿಸಬೇಕಿದೆ. ಈ ಕುರಿತು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮತ್ತು ಸಚಿವ ಜಗದೀಶ್ ಶೆಟ್ಟರ್‌ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಶಂಕರ್‌ ಅಂಬಲಿ ತಿಳಿಸಿದ್ದಾರೆ.
First published:January 14, 2020
ಮತ್ತಷ್ಟು ಓದಿರಿ
ಮುಂದಿನ ಸುದ್ದಿ