Ayodhya Verdict; ಅಯೋಧ್ಯೆ ತೀರ್ಪು ಹಿನ್ನೆಲೆ, ಇಂದಿನ ಜೆಡಿಎಸ್ ಸ್ವಾಭಿಮಾನಿ ಮತದಾರರ ಸಮಾವೇಶ ರದ್ದು

JDS Mega Rally: ಮುಂಜಾಗ್ರತೆ ಕ್ರಮವಾಗಿ ಬೆಂಗಳೂರು ನಗರ ಪೊಲೀಸ್​​ ಆಯುಕ್ತರು ನಗರದಾದ್ಯಂತ 144 ಸೆಕ್ಷನ್ ಜಾರಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಮಾವೇಶವನ್ನು ಮುಂದೂಡಲಾಗಿದ್ದು, ಜೆಡಿಸ್ ವರಿಷ್ಠ ಹೆಚ್​ ಡಿ ದೇವೇಗೌಡರು ಮಂಗಳೂರಿಗೆ ತೆರಳಿದ್ದಾರೆ.

G Hareeshkumar | news18-kannada
Updated:November 9, 2019, 9:46 AM IST
Ayodhya Verdict; ಅಯೋಧ್ಯೆ ತೀರ್ಪು ಹಿನ್ನೆಲೆ, ಇಂದಿನ ಜೆಡಿಎಸ್ ಸ್ವಾಭಿಮಾನಿ ಮತದಾರರ ಸಮಾವೇಶ ರದ್ದು
ಜೆಡಿಎಸ್​
G Hareeshkumar | news18-kannada
Updated: November 9, 2019, 9:46 AM IST
ಬೆಂಗಳೂರು(ನ.09):ಅಯೋಧ್ಯೆ ತೀರ್ಪು ಪ್ರಕಟವಾಗುವ ಹಿನ್ನೆಲೆಯಲ್ಲಿ ಮಹಾಲಕ್ಷ್ಮಿಲೇಔಟ್‌ನಲ್ಲಿಇಂದು ನಡೆಯಬೇಕಿದ್ದ ಜೆಡಿಎಸ್ ಸ್ವಾಭಿಮಾನಿ ಮತದಾರರ ಸಮಾವೇಶವನ್ನು ರದ್ದು ಪಡಿಸಲಾಗಿದೆ.  

ಮುಂಜಾಗ್ರತೆ ಕ್ರಮವಾಗಿ ಬೆಂಗಳೂರು ನಗರ ನಗರ ಪೊಲೀಸ್​​ ಆಯುಕ್ತರು ನಗರದಾದ್ಯಂತ 144 ಸೆಕ್ಷನ್ ಜಾರಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಮಾವೇಶವನ್ನು ಮುಂದೂಡಲಾಗಿದ್ದು, ಜೆಡಿಸ್ ವರಿಷ್ಠ ಹೆಚ್​ ಡಿ ದೇವೇಗೌಡರು ಮಂಗಳೂರಿಗೆ ತೆರಳಿದ್ದಾರೆ. ಅಲ್ಲದೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೂಡ ಲಂಡನ್ ಪ್ರವಾಸದಿಂದ ಬಂದಿಲ್ಲ. ನಾಳೆ ಲಂಡನ್ ನಿಂದ ಬೆಂಗಳೂರಿಗೆ ಮರಳಿದ್ದಾರೆ ಎನ್ನಲಾಗಿದೆ.

2018ರಲ್ಲಿ ಜೆಡಿಎಸ್‌ನಿಂದ ಕಣಕ್ಕಿಳಿದು ಗೆದ್ದಿದ್ದ ಕೆ. ಗೋಪಾಲಯ್ಯ ಈಗ ಅನರ್ಹರಾಗಿದ್ದು ಉಪ ಚುನಾವಣೆ ಎದುರಾಗಿದೆ. ಕೆ. ಗೋಪಾಲಯ್ಯ ಕ್ಷೇತ್ರದಲ್ಲಿ ಶಕ್ತಿ ಪ್ರದರ್ಶನ ಮಾಡಲು ಜೆಡಿಎಸ್ ನವೆಂಬರ್ 9 ರ ಶನಿವಾರ ಸ್ವಾಭಿಮಾನಿ ಮತದಾರ ಎಂಬ ಸಮಾವೇಶವನ್ನು ಆಯೋಜನೆ ಮಾಡಲಾಗಿತ್ತು.

ಇದನ್ನೂ ಓದಿ : Ayodhya Verdict: ಅಯೋಧ್ಯೆ ತೀರ್ಪು ಹಿನ್ನೆಲೆ, ರಾಜ್ಯಾದ್ಯಂತ ಬಿಗಿಭದ್ರತೆ; ಸೆಕ್ಷನ್ 144 ಜಾರಿ

ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಎಂ. ಶಿವರಾಜ್ ಅಭ್ಯರ್ಥಿ ಎಂದು ಘೋಷಣೆ ಮಾಡಿದೆ. ಬಿಜೆಪಿಯಲ್ಲಿ ಟಿಕೆಟ್‌ಗಾಗಿ ಪೈಪೋಟಿ ನಡೆಯುತ್ತಿದೆ, ಜೆಡಿಎಸ್ ಆಭ್ಯರ್ಥಿ ಘೋಷಣೆಯಾಗ ಬೇಕಿದೆ.

ಅನರ್ಹ ಶಾಸಕ ಕೆ. ಗೋಪಾಲಯ್ಯಗೆ ಹಲವು ಸಂಕಷ್ಟಗಳು ಎದುರಾಗಿವೆ. ಅನರ್ಹತೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ತೀರ್ಪನ್ನು ಸುಪ್ರೀಂಕೋರ್ಟ್ ಇನ್ನೂ ನೀಡಿಲ್ಲ. ಮತ್ತೊಂದು ಕಡೆ ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದ ಬಿಜೆಪಿ ನಾಯಕರು ಕೆ. ಗೋಪಾಲಯ್ಯಗೆ ಟಿಕೆಟ್ ನೀಡಲು ವಿರೋಧ ಮಾಡುತ್ತಿದ್ದಾರೆ.

2013 ಮತ್ತು 2018ರ ಚುನಾವಣೆಯಲ್ಲಿ ಜೆಡಿಎಸ್ ಮಹಾಲಕ್ಷ್ಮೀ ಲೇಔಟ್ ಕ್ಷೇತ್ರವನ್ನು ಗೆದ್ದುಕೊಂಡಿತ್ತು. ಆದರೆ, ಈ ಉಪ ಚುನಾವಣೆ ಗೆಲ್ಲಲು ಮೂರು ಪಕ್ಷಗಳು ತಾಲೀಮು ನಡೆಸುತ್ತಿವೆ. ಜೆಡಿಎಸ್ ಕ್ಷೇತ್ರವನ್ನು ಉಳಿಸಿಕೊಳ್ಳಲಿದೆಯೇ? ಕಾದು ನೋಡಬೇಕಿದೆ.
Loading...



 

 
First published:November 9, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...