ಬೆಂಗಳೂರು (ಡಿ.06): ಬೆಳಗಾವಿ ಗಡಿ ಬಿಕ್ಕಟ್ಟು (Belagavi Border Crisis) ತಾರಕ್ಕೇರಿದ್ದು, ಎರಡು ರಾಜ್ಯದ ಸಿಎಂ ವಿವಾದವನ್ನು ಶಾಂತಿಯುತವಾಗಿ ಇತ್ಯರ್ಥ ಮಾಡಲು ಮುಂದಾಗಿದ್ದಾರೆ. ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ (Eknath Shinde) ಅವರು ಸಿಎಂ ಬಸವರಾಜ ಬೊಮ್ಮಾಯಿಗೆ (Basavaraj Bommai) ದೂರವಾಣಿ ಕರೆ ಮಾಡಿದ್ದಾರೆ. ಎರಡೂ ರಾಜ್ಯಗಳ ಗಡಿ ಪ್ರದೇಶದಲ್ಲಿ ಪರಸ್ಪರ ಶಾಂತಿ, ಕಾನೂನು ಸುವ್ಯವಸ್ಥೆ ನೆಲೆಸುವಂತೆ ಮಾಡುವ ಬಗ್ಗೆ ಉಭಯ ನಾಯಕರು (Two Leaders) ಮಾತುಕತೆ ನಡೆಸಿದ್ದಾರೆ.
ಬಸವರಾಜ ಬೊಮ್ಮಾಯಿ ಟ್ವೀಟ್
ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಟ್ವೀಟ್ ಮಾಡಿದ್ದು, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ನನ್ನೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಎರಡೂ ರಾಜ್ಯಗಳಲ್ಲಿ ಶಾಂತಿ ಮತ್ತು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ನಾವಿಬ್ಬರೂ ಒಪ್ಪಿಕೊಂಡಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.
Maharashtra Chief Minister Shri Eknath Shinde had telephonic discussion with me, we both agreed that there should be peace and law and order to be maintain in both the states.
1/2
— Basavaraj S Bommai (@BSBommai) December 6, 2022
ಎರಡೂ ರಾಜ್ಯಗಳ ಜನರ ನಡುವೆ ಸೌಹಾರ್ದಯುತ ಬಾಂಧವ್ಯ ಇರುವುದರಿಂದ ಕರ್ನಾಟಕದ ಗಡಿಗೆ ಸಂಬಂಧಿಸಿದಂತೆ ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಮತ್ತು ಕಾನೂನು ಹೋರಾಟವನ್ನು ಸುಪ್ರೀಂ ಕೋರ್ಟ್ನಲ್ಲಿ ಗ್ರಹಿಸಲಾಗುವುದು ಎಂದು ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
ಸಚಿವರು ಭೇಟಿ ವಿರೋಧ
ಗಡಿ ವಿವಾದದ ನಡುವೆಯೇ ಮಂಗಳವಾರ ಮಹಾರಾಷ್ಟ್ರ ಗಡಿ ಸಮನ್ವಯ ಸಚಿವ ಚಂದ್ರಕಾಂತ ಪಾಟೀಲ್, ಶಂಭುರಾಜ ದೇಸಾಯಿ ಮತ್ತು ಮಹಾರಾಷ್ಟ್ರದ ಗಡಿತಜ್ಞ ಸಮಿತಿ ಅಧ್ಯಕ್ಷ, ಸಂಸದ ಧೈರ್ಯಶೀಲ ಬೆಳಗಾವಿಗೆ ಭೇಟಿ ನೀಡಬೇಕಿತ್ತು. ಆದರೆ ಕನ್ನಡ ಪರ ಸಂಘಟನೆಗಳು ಈ ಭೇಟಿಗೆ ವಿರೋಧ ವ್ಯಕ್ತಪಡಿಸಿದ್ದವು. ಮಹಾರಾಷ್ಟ್ರದ ಸಚಿವರು, ಸಂಸದರು ಬೆಳಗಾವಿಗೆ ಬಂದು ಸಭೆ ನಡೆಸಲು ಅವಕಾಶ ನೀಡಬಾರದು ಎಂದು ಆಗ್ರಹಿಸಿದ್ದರು.
ಎಂಇಎಸ್ ಕಾರ್ಯಕರ್ತರ ಪುಂಡಾಟ
ಎಂಇಎಸ್ ಪುಂಡರು ಮತ್ತೆ ಕನ್ನಡ ನೆಲದಲ್ಲಿ ನಾಡದ್ರೋಹಿ ಘೊಷಣೆ ಕೂಗಿದ್ದಾರೆ. ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ (District Collector Office) ಎದುರು ಎಂಇಎಸ್ ಕಾರ್ಯಕರ್ತರು (MES Activist) ಪ್ರತಿಭಟನೆ ನಡೆಸಿದ್ರು. ಈ ವೇಳೆ ಬೆಳಗಾವಿ, ಕಾರವಾರ ನಿಪ್ಪಾಣಿ ಬಾಲ್ಕಿ ಸಂಯಕ್ತ ಮಹಾರಾಷ್ಟ್ರ ಎಂದು ಘೋಷಣೆ ಕೂಗಿದ್ದಾರೆ.
ಮಹಾರಾಷ್ಟ್ರದ ಸಚಿವರಿಗೆ ಕರ್ನಾಟಕ ಪ್ರವೇಶ ಅನುಮತಿ ನೀಡುವಂತೆ ಮನವಿ ಮಾಡಲು ಬೆಳಗಾವಿ ಜಿಲ್ಲಾಧಿಕಾರಿಗೆ ಎಂಇಎಸ್ ಮುಖಂಡರು ಆಗಮಿಸಿದ್ರು. ಈ ಬಗ್ಗೆ ಬೆಳಗಾವಿ ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ಭೇಟಿ ಮಾಡಿದ ಎಂಇಎಸ್ ಕಾರ್ಯಕರ್ತರು ಮನವಿ ಮಾಡಿದ್ರು. ಗಡಿ ವಿಚಾರವಾಗಿ ಮಹಾರಾಷ್ಟ್ರದ ಸಚಿವರೊಂದಿಗೆ ಚರ್ಚೆ ಮಾಡಲು ಅನುಮತಿ ನೀಡಲು ಕೋರಿದ್ದಾರೆ. ಮಾಜಿ ಶಾಸಕ ದಿಗಂಬರ್ ಪಾಟೀಲ್ ಪ್ರಕಾಶ್ ಮರಗಾಳೆ, ರಂಜೀತ್ ಚೌವ್ಹಾಣ ಪಾಟೀಲ್ ನೇತೃತ್ವದಲ್ಲಿ ಮನವಿ ಡಿಸಿಗೆ ಮನವಿ ಸಲ್ಲಿಸಿದ್ದಾರೆ.
ಇದನ್ನೂ ಓದಿ: CM Basavaraj Bommai: ರಾಜ್ಯದಲ್ಲಿ 2023ಕ್ಕೆ ನೂರಕ್ಕೆ ನೂರು ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತೆ- ಸಿಎಂ ಬೊಮ್ಮಾಯಿ
2 ರಾಜ್ಯಗಳ ಬಸ್ ಸಂಚಾರ ಸಂಪೂರ್ಣ ಸ್ಥಗಿತ
ಬೆಳಗಾವಿ ಗಡಿ ವಿವಾದದ ಕಿಚ್ಚು ದಿನೇ ದಿನೇ ಜೋರಾಗುತ್ತಿದೆ. ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆ 2 ರಾಜ್ಯಗಳ ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಸಾರಿಗೆ ಇಲಾಖೆ (Department Of Transport) ಮುಂಜಾಗೃತಾ ಕ್ರಮವಾಗಿ ಬಸ್ ತಡೆ ಹಿಡಿದಿದ್ದಾರೆ. ಅಥಣಿ, ಚಿಕ್ಕೋಡಿ, ನಿಪ್ಪಾಣಿ, ಕಾಗವಾಡದಿಂದ ಮಹಾರಾಷ್ಟ್ರಕ್ಕೆ (Maharashtra) ಹೋಗುವ ಬಸ್ಗಳನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ