ಬೆಳಗಾವಿ (ಡಿ.13): ಮಹಾರಾಷ್ಟ್ರದ (Maharashtra) ಎಲ್ಲಾ ರಾಜಕೀಯ ಪಕ್ಷಗಳಿಗೆ ಗಡಿ ವಿವಾದವೇ ಪ್ರಮುಖ ಅಸ್ತ್ರ. ಗಡಿ ವಿವಾದ ಜೀವಂತ ಇರಬೇಕೆಂದೇ ಮಹಾರಾಷ್ಟ್ರ ನಾಯಕರು (Leader) ಪದೇ ಪದೇ ಕ್ಯಾತೆ ತೆಗೆಯುತ್ತಲೇ ಇರುತ್ತಾರೆ. ಈ ವಿವಾದ ಸುಪ್ರೀಂ ಕೋರ್ಟ್ನಲ್ಲಿ (Supreme Court) ಅಂತಿಮ ವಿಚಾರಣೆಗೆ ದಿನಗಣನೇ ಆರಂಭವಾಗಿದೆ. ಈ ಕಾರಣಕ್ಕೆ ಗಡಿ ಉಸ್ತುವಾರಿ ಸಚಿವರು ಬೆಳಗಾವಿ (Belagavi) ಬರುವುದಾಗಿ ಹೇಳಿ ಬಳಿಕ ಪ್ರವಾಸ ರದ್ದು ಮಾಡಿದ್ರು. ಮಹಾರಾಷ್ಟ್ರ ಬಿಜೆಪಿ ಸರ್ಕಾರದ (BJP Government) ವರ್ತನೆ ಖಂಡಿಸಿ ಮಹಾ ವಿಕಾಸ ಆಘಾಡಿ ಕೂಡ ಇತ್ತೀಚೆಗಷ್ಟೇ ಕೊಲ್ಲಾಪುರದಲ್ಲಿ ಪ್ರತಿಭಟನೆಯನ್ನೂ (Protest) ನಡೆಸಿತ್ತು.
ಬೆಳಗಾವಿಗೆ ರೋಹಿತ್ ಪವಾರ್ ಭೇಟಿ
ಈ ಮಧ್ಯೆ ಎನ್ಸಿಪಿ ನಾಯಕ ಶರದ್ ಪವಾರ್ ಸಹೋದರನ ಪುತ್ರ, ಶಾಸಕ ರೋಹಿತ್ ಪವಾರ್ ಬೆಳಗಾವಿಗೆ ಕಳ್ಳನಂತೆ ಭೇಟಿ ನೀಡಿ ಹೋಗಿದ್ದಾರೆ. ಪುಣೆ ಜಿಲ್ಲೆಯ ಕರ್ಜತ್-ಜಮ್ಕೆಡ್ ವಿಧಾನಸಭೆ ಕ್ಷೇತ್ರದ ಎನ್ಸಿಪಿ ಶಾಸಕನಾಗಿರುವ ರೋಹಿತ್ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಮಧ್ಯೆಯೇ ಬೆಳಗಾವಿಗೆ ಗಪ್ಚುಪ್ ಭೇಟಿ ನೀಡಿ ಹೋಗಿದ್ದಾನೆ. ಕೊಲ್ಲಾಪುರ- ಕುಗನೊಳ್ಳಿ ಮಾರ್ಗವಾಗಿ ರೋಹಿತ್ ನಿನ್ನೆ ರಾತ್ರಿಯೇ ಬೆಳಗಾವಿಗೆ ಆಗಮಿಸಿದ್ದ. ಅನಾರೋಗ್ಯಕ್ಕೆ ತುತ್ತಾಗಿರುವ ಎಂಇಎಸ್ ಬೆಳಗಾವಿ ನಗರ ಅಧ್ಯಕ್ಷ ದೀಪಕ್ ದಳವಿ ಆರೋಗ್ಯ ವಿಚಾರಿಸಿ ಇಂದು ಬೆಳಗ್ಗೆ ಬೆಳಗಾವಿ ತಾಲೂಕಿನ ವಿವಿಧ ಭಾಗಗಳಿಗೆ ಭೇಟಿ ನೀಡಿದ್ರು.
ಉರಿಯುವ ಬೆಂಕಿಗೆ ತುಪ್ಪ ಸುರಿದ ಎನ್ಸಿಪಿ
ಗಡಿ ಹೋರಾಟದಲ್ಲಿ ಗಲಭೆ ಸೃಷ್ಟಿಸಿ ಗೋಲಿಬಾರ್ಗೆ ಮೃತರಾದವರ ಹೆಸರಲ್ಲಿ ಹಿಂಡಲಗಾದಲ್ಲಿ ನಿರ್ಮಿಸಿರುವ ಹುತಾತ್ಮ ಸ್ಮಾರಕಕ್ಕೆ ರೋಹಿತ್ ಭೇಟಿ ನೀಡಿದ್ದಾನೆ. ಶಿವಾಜಿ ಪುತ್ಥಳಿಗೆ ಮಾಲಾರ್ಪಣೆ ಸಲ್ಲಿಸಿ ನಂತ್ರ ಯಳ್ಳೂರ ಗ್ರಾಮದಲ್ಲಿರುವ ಮಹಾರಾಷ್ಟ್ರ ಹೈಸ್ಕೂಲ್ಗೆ ಭೇಟಿ ನೀಡಿದ್ರು. ಎನ್ಸಿಪಿ ಶಾಸಕ ರೋಹಿತ್ ಪವಾರ್ಗೆ ಸ್ಥಳೀಯ ಎಂಇಎಸ್ ಕಾರ್ಯಕರ್ತರು ಸಾಥ್ ನೀಡಿದ್ರು. ಆ ಮೂಲಕ ಉರಿಯುವ ಬೆಂಕಿಗೆ ಎನ್ಸಿಪಿ ತುಪ್ಪ ಸುರಿಯುವ ಕೆಲಸ ಮಾಡಿದ್ರು.
ಕನ್ನಡ ಪರ ಸಂಘಟನೆ ಕಿಡಿ
ಗಡಿವಿವಾದ ಮುನ್ನೆಲೆಗೆ ಬರುತ್ತಿದ್ದಂತೆ ಮಹಾರಾಷ್ಟ್ರ ನಾಯಕರು ಪ್ರಚೋದನಾತ್ಮಕ ಹೇಳಿಕೆ ನೀಡಲು ಮುಂದಾಗಿದ್ದಾರೆ. ಇನ್ನೂ ಒಂದು ಹೆಜ್ಜೆ ಮುಂದೆ ಇಟ್ಟಿರುವ ಎನ್ಸಿಪಿ ಶಾಸಕ ಬೆಳಗಾವಿಗೂ ಭೇಟಿ ನೀಡಿ ಹೋಗಿದ್ದಾನೆ. ಎನ್ಸಿಪಿ ಶಾಸಕನ ವರ್ತನೆ ಕನ್ನಡ ಪರ ಸಂಘಟನೆಗಳನ್ನು ಕೆರಳಿಸುವಂತೆ ಮಾಡಿದೆ.
ಹುಲಿಯಂತೆ ಮಾತನಾಡಿ, ನರಿಯಂತೆ ವರ್ತನೆ
ಈ ಬಗ್ಗೆ ಪ್ರತಿಕ್ರಿಯಿಸಿರುವ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ, ಗಡಿ ವಿವಾದ ಬಗ್ಗೆ ಮಹಾರಾಷ್ಟ್ರ ನಾಯಕರು ಹುಲಿಯಂತೆ ಮಾತನಾಡಿ, ನರಿಯಂತೆ ವರ್ತನೆ ತೋರಿದ್ದಾರೆ. ಎನ್ಸಿಪಿ ಶಾಸಕ ರೋಹಿತ್ ಪವಾರ್ ಬೆಳಗಾವಿ ಗಪ್ಚುಪ್ ಭೇಟಿಗೆ ಅಶೋಕ ಚಂದರಗಿ ಕಿಡಿ ಕಾರಿದ್ದಾರೆ. ಶಾಸಕ ರೋಹಿತ್ ಪವಾರ್ ಕಳ್ಳರಂತೆ ಬೆಳಗಾವಿಗೆ ಭೇಟಿ ನೀಡಿರುವುದು ಸೌಜನ್ಯ ಸಭ್ಯತೆ ಮೀರಿದ ವರ್ತನೆ.
ಇದನ್ನೂ ಓದಿ: Vegetable Price Hike: ಮಾರುಕಟ್ಟೆಯಲ್ಲಿ ಗಗನಕ್ಕೇರಿದೆ ತರಕಾರಿ ಬೆಲೆ! ಇದು ಸೈಕ್ಲೋನ್ ಎಫೆಕ್ಟ್
ರಾಜಕಾರಣದಲ್ಲಿ ಯಾವಾಗಲೂ ನೇರಾ ನೇರ ಇರಬೇಕು. ಆದರೆ ರೋಹಿತ್ ಬೆಳಗಾವಿಗೆ ಕಳ್ಳರಂತೆ ಬಂದು ಹೋಗಿದ್ದು ಮಹಾರಾಷ್ಟ್ರ ಮರ್ಯಾದೆ ಹೋಗಿದೆ. ಗಡಿವಿವಾದ ಸಂಬಂಧ ಮಹಾ ನಾಯಕರು ಹುಲಿಗಳಂತೆ ಮಾತನಾಡಿ, ನರಿಯಂತೆ ವರ್ತಿಸುವುದು ಸರಿಯಲ್ಲ. ಬೆಳಗಾವಿಗೆ ಬರುವುದಾದ್ರೆ ಹೇಳಿ ಬರಲಿ, ಚೆನ್ನಮ್ಮ ವೃತ್ತದಲ್ಲಿ ನಿಂತು ಮಾತಾಡಲಿ. ಗಡಿವಿವಾದ ಬಗ್ಗೆ ತಮ್ಮ ನಿಲುವು ವ್ಯಕ್ತಪಡಿಸಲಿ, ನಮ್ಮ ನಿಲುವನ್ನೂ ನಾವು ಹೇಳುತ್ತೇವೆ. ಆದರೆ ಕಳ್ಳರ ರೀತಿ ಬೆಳಗಾವಿಗೆ ಬರುವುದು ತಪ್ಪು ಎನ್ಸಿಪಿ ಶಾಸಕ ಕಳ್ಳರಂತೆ ವರ್ತನೆ ತೋರಿರುವುದು ಹಾಸ್ಯಾಸ್ಪದ ಎಂದು ವ್ಯಂಗ್ಯವಾಡಿದ್ರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ