ಗಡಿ ವಿವಾದ ತಾರಕಕ್ಕೇರುತ್ತಿದ್ದು, ನಿನ್ನೆ ಕರ್ನಾಟಕದ ಬಸ್ಗೆ (Karnataka Bus) ಮಹಾರಾಷ್ಟ್ರದಲ್ಲಿ ಮಸಿ ಬಳಿಯಲಾಗಿತ್ತು. ಇದೀಗ ಬೆಳಗಾವಿಯಲ್ಲಿ (Belagavi) ಮಹಾರಾಷ್ಟ್ರ ವಾಹನಕ್ಕೆ ಮಸಿ ಬಳಿಯಲಾಗಿದೆ. ಮಹಾರಾಷ್ಟ್ರದಲ್ಲಿ (Maharashtra) ಕನ್ನಡಿಗರ ಮೇಲೆ ಆಗುತ್ತಿರುವ ಅನ್ಯಾಯವನ್ನು ನಾವು ಸಹಿಸುವುದಿಲ್ಲ. ನಮ್ಮ ತಾಳ್ಮೆಯ ದುರುಪಯೋಗ ಪಡೆದುಕೊಳ್ಳಬೇಡಿ. ಒಂದು ವೇಳೆ ನಾವು ಸಿಡಿದೆದ್ದರೆ, ಮಹಾರಾಷ್ಟ್ರ ಸರ್ಕಾರ (Maharashtra Government) ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಕರವೇ ಕಾರ್ಯಕರ್ತರ ಪ್ರತಿಭಟನೆ
ನಿನ್ನೆ ಮಹಾರಾಷ್ಟ್ರದಲ್ಲಿ ರಾಜ್ಯದ ಬಸ್ಗೆ ಮಸಿ ಬಳಿದ ವಿಚಾರಕ್ಕೆ ಕರವೇ ಕಾರ್ಯಕರ್ತರು ಪ್ರತಿಭಟನೆ ಮಾಡಿ ಆಕ್ರೋಶ ಹೊರಹಾಕಿದ್ರು.
ಮಹಾರಾಷ್ಟ್ರದಲ್ಲಿ ನಮ್ಮ ಬಸ್ಗಳಿಗೆ ಮಸಿ ಬಳಿದು ಕಲ್ಲು ತೂರಿದ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಬೇಕು ಎಂದು ಆಗ್ರಹಿಸಿದರು.
ದೇವೇಂದ್ರ ಫಡ್ನವೀಸ್ ಪ್ರತಿಕೃತಿ ದಹಿಸಿ ಆಕ್ರೋಶ
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ, ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ದೀಪಕ ಗುಡಗನಟ್ಟಿ, ‘ಗಡಿ ವಿವಾದ ಕುರಿತು ಮಹಾರಾಷ್ಟ್ರ ಸುಪ್ರೀಂ ಕೋರ್ಟ್ನಲ್ಲಿ ದಾವೆ ಹೂಡಿದೆ. ಈ ಮಧ್ಯೆ, ಅಲ್ಲಿನ ಜನಪ್ರತಿನಿಧಿಗಳು ರಾಜಕೀಯ ಪ್ರೇರಿತ ಹೇಳಿಕೆಗಳನ್ನು ನೀಡುತ್ತ ಗಡಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರಲು ಯತ್ನಿಸುತ್ತಿದ್ದಾರೆ.
ಗಡಿಯಲ್ಲಿ ಶಿಸ್ತು ಕ್ರಮ ಜರುಗಿಸಬೇಕು
ಆ ರಾಜ್ಯಕ್ಕೆ ಕಾರ್ಯಾಚರಣೆಗೆ ಹೋದ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ಬಸ್ಗಳ ಮೇಲೆ ಕಿಡಿಗೇಡಿಗಳು ಕಲ್ಲು ತೂರುತ್ತಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಮಹಾರಾಷ್ಟ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಬೇಕು. ಜನರ ದಿಕ್ಕು ತಪ್ಪಿಸಿ, ಗಡಿಯಲ್ಲಿ ಗೊಂದಲ ಸೃಷ್ಟಿಸುತ್ತಿರುವವರ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿದರು.
ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ಅಸ್ಥವ್ಯಸ್ತ
ಗಡಿ ವಿವಾದ ಪ್ರಕರಣದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ಮೌನ ಮುರಿಯಬೇಕು. ಇಲ್ಲದಿದ್ದರೆ ನಿಮ್ಮ ವಿರುದ್ಧ ಹೋರಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ವೇದಿಕೆ ಸಂಚಾಲಕ ಮಹಾದೇವ ತಳವಾರ, ಮಹೇಶ ಹಟ್ಟಿಹೊಳಿ, ರುದ್ರಗೌಡ ಪಾಟೀಲ, ರಮೇಶ ಯರಗಣ್ಣವರ ಇತರರಿದ್ದರು. ಪ್ರತಿಭಟನೆ ಹಿನ್ನೆಲೆಯಲ್ಲಿ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ಸ್ಥಗಿತಗೊಂಡು, ವಾಹನಗಳ ಚಾಲಕರು ಪರದಾಡುವಂತಾಯಿತು.
ಹೆಚ್ಡಿಕೆಗೆ ಆರ್ ಅಶೋಕ್ ತಿರುಗೇಟು
ಬೆಳಗಾವಿ ಗಡಿ ವಿವಾದದ ಬಗ್ಗೆ ಮಾತಾಡಿದ ಕುಮಾರಸ್ವಾಮಿಯವ್ರಿಗೆ ಸಚಿವ ಆರ್ ಅಶೋಕ್ ತಿರುಗೇಟು ಕೊಟ್ಟಿದ್ದಾರೆ. ನಮ್ಮದು ರಾಷ್ಟ್ರೀಯ ಪಕ್ಷ. ಜೆಡಿಎಸ್ ಹೆಬ್ಬೆಟ್ಟು ಪಾರ್ಟಿ. ಅವರ ಕುಟುಂಬದವರು ಹೇಳಿದ್ರೆ ಮಾತ್ರ ಹೆಬ್ಬೆಟ್ಟು ಒತ್ತೋದು. ಅಲ್ಲಿ ಈಗಲೂ ದೇವೆಗೌಡ ಇನ್ಮಂದೆನೂ ದೇವೇಗೌಡ. ಆದರೆ, ನಮ್ಮಲ್ಲಿ ವಾಜಪೇಯಿ, ಅಡ್ವಾಣಿ, ನರೇಂದ್ರ ಮೋದಿ ಇದ್ದಾರೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: Karnataka: ಮಹಾರಾಷ್ಟ್ರದ ಕನ್ನಡ ಶಾಲೆಗಳಿಗೆ ಸರ್ಕಾರದಿಂದ ಅನುದಾನ; ಸಿಎಂ ಬೊಮ್ಮಾಯಿ
ಮಹಾ ಸರ್ಕಾರಕ್ಕೆ ಸಿಎಂ ಬೊಮ್ಮಾಯಿ ತಿರುಗೇಟು
ಗಡಿ ವಿಚಾರದಲ್ಲಿ ಉದ್ಧಟತನ ತೋರಿದ್ದ ಮಹಾರಾಷ್ಟ್ರ ಸರ್ಕಾರಕ್ಕೆ (Maharashtra Government) ಕರ್ನಾಟಕ (Karnataka) ತಿರುಗೇಟು ನೀಡಿದೆ. ಮಹಾರಾಷ್ಟ್ರದಲ್ಲಿರುವ ಕನ್ನಡ ಶಾಲೆಗಳ (Kannada School) ಅಭಿವೃದ್ಧಿಗೆ ಹೆಚ್ಚಿನ ಹಣ ನೀಡೋದಾಗಿ ಸಿಎಂ ಬಸವರಾಜ್ ಬೊಮ್ಮಾಯಿ (CM Basavaraj Bommai) ತಿಳಿಸಿದ್ದಾರೆ.
ಜೊತೆಗೆ ಮಹಾರಾಷ್ಟ್ರದಲ್ಲಿ ಕನ್ನಡಿಗ ಸ್ವಾತಂತ್ರ್ಯ ಹೋರಾಟಗಾರರಿಗೆ ಪಿಂಚಣಿ ನೀಡಲು (Pension) ಕರ್ನಾಟಕ ಸರ್ಕಾರ (Karnataka Government) ಮುಂದಾಗಿದೆ. ಅಷ್ಟೇ ಅಲ್ಲದೆ ಮಹಾರಾಷ್ಟ್ರದ ಜತ್ (Jatt, Maharasgtra) ತಾಲೂಕನ್ನ ಕರ್ನಾಟಕಕ್ಕೆ ಸೇರಿಸಿಕೊಳ್ಳುವ ಬಗ್ಗೆ ಚಿಂತನೆ ಮಾಡ್ತಿರೋದಾಗಿ ತಿಳಿಸಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ