• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Makar Sankranti 2021: ಚನ್ನಪಟ್ಟಣದ ಕರಿಕಬ್ಬಿಗೆ ಎಲ್ಲೆಡೆ ಬೇಡಿಕೆ; ಕೊರೋನಾ ಗಾಳಿಗೆ ಇಳಿಮುಖವಾದ ಕಬ್ಬಿನ ಬೆಲೆ

Makar Sankranti 2021: ಚನ್ನಪಟ್ಟಣದ ಕರಿಕಬ್ಬಿಗೆ ಎಲ್ಲೆಡೆ ಬೇಡಿಕೆ; ಕೊರೋನಾ ಗಾಳಿಗೆ ಇಳಿಮುಖವಾದ ಕಬ್ಬಿನ ಬೆಲೆ

ಕಪ್ಪು ಕಬ್ಬು

ಕಪ್ಪು ಕಬ್ಬು

ಈ ಕಬ್ಬಿನ ಬೇಡಿಕೆ ರಾಜ್ಯವನ್ನೂ ದಾಟಿ ನೆರೆಯ ಕೇರಳ, ತಮಿಳುನಾಡು, ಗುಜರಾತ್ ರಾಜ್ಯಗಳಿಗೂ ಇಲ್ಲಿನ ಕಬ್ಬು ರಫ್ತಾಗುತ್ತದೆ. ಈ ಗ್ರಾಮಗಳ ಬಹುತೇಕ ರೈತರು ಕರಿ ಕಬ್ಬಿನ ವ್ಯವಸಾಯವನ್ನೇ ನೆಚ್ಚಿಕೊಂಡಿದ್ದಾರೆ. ಸುಮಾರು 40-50 ಎಕರೆಗೂ ಹೆಚ್ಚು ಪ್ರದೇಶಗಳಲ್ಲಿ ಈ ಕಬ್ಬನ್ನು ವಾಣಿಜ್ಯ ಬೆಳೆಯಾಗಿ ಗ್ರಾಮಸ್ಥರು ಬೆಳೆದಿದ್ದು ರೈತರು ಉತ್ತಮ ಆದಾಯದ ನಿರೀಕ್ಷೆಯಲ್ಲಿದ್ದಾರೆ.

ಮುಂದೆ ಓದಿ ...
  • Share this:

ರಾಮನಗರ(ಜ.13): ಹೊಸ ವರ್ಷದ ಮೊದಲ‌ ಹಬ್ಬ ಸಂಕ್ರಾಂತಿ. ಎಳ್ಳು ಬೆಲ್ಲ, ಕಬ್ಬನ್ನು ಸವಿಯುವ ಹಬ್ಬ. ಈ ಸಂಕ್ರಾಂತಿ ಹಬ್ಬ ಬಂತು ಅಂದ್ರೆ ಕಬ್ಬಿಗೆ ಎಲ್ಲಿಲ್ಲದ ಬೇಡಿಕೆ. ಅದರಲ್ಲೂ ಕರಿ ಕಬ್ಬಿಗೆ ತುಂಬಾ ಬೇಡಿಕೆ ಇದೆ. ರಾಜ್ಯದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬಿಳಿ ಕಬ್ಬು ಬೆಳೆಯುತ್ತಿದ್ದರೂ ಸಹ, ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಮಾತ್ರ ಬಹುತೇಕರ ಆಯ್ಕೆ ಮಾತ್ರ ಈ ಕರಿ ಕಬ್ಬು. ಆದ್ರೆ ಈ ರೀತಿಯ ಕರಿ ಕಬ್ಬು ಬೆಳೆಯುವ ರೈತರು ಮತ್ತು ಗ್ರಾಮಗಳು ಮಾತ್ರ ರಾಜ್ಯದಲ್ಲಿ ಅತೀ ವಿರಳ. ಆದ್ರೆ ಈ 2-3 ಗ್ರಾಮಗಳು ಮಾತ್ರ ಕರಿ ಕಬ್ಬು ಗ್ರಾಮ ಎಂದೇ ಹೆಸರುವಾಸಿ ಪಡೆದಿದೆ.


ಹೌದು, ರಾಮನಗರ ಜಿಲ್ಲೆಯ ಬೊಂಬೆನಗರಿ ಖ್ಯಾತಿಯ ಚನ್ನಪಟ್ಟಣ ತಾಲೂಕಿನ ಪಟ್ಲು, ತಿಟ್ಟಮಾರನಹಳ್ಳಿ, ಚಿಕ್ಕನದೊಡ್ಡಿ ಗ್ರಾಮದ ರೈತರು ನಂಬಿಕೊಂಡಿರುವುದು ಈ ಕರಿಕಬ್ಬು ಬೇಸಾಯವನ್ನೇ. ಇಡೀ ರಾಮನಗರ ಜಿಲ್ಲೆಯಲ್ಲಿ ಕರಿ ಕಬ್ಬನ್ನು ಬೆಳೆಯುವ ಗ್ರಾಮಗಳು ಎಂಬ ಹಿರಿಮೆಯನ್ನು ಈ ಗ್ರಾಮಗಳು ಹೊಂದಿವೆ. ಈ ಗ್ರಾಮಗಳ ಕರಿ ಕಬ್ಬಿಗೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯ ಹಾಗೂ ಹೊರರಾಜ್ಯದಲ್ಲೂ ಬಹು ಬೇಡಿಕೆ ಇದೆ.


ಈ ಕಬ್ಬಿನ ಬೇಡಿಕೆ ರಾಜ್ಯವನ್ನೂ ದಾಟಿ ನೆರೆಯ ಕೇರಳ, ತಮಿಳುನಾಡು, ಗುಜರಾತ್ ರಾಜ್ಯಗಳಿಗೂ ಇಲ್ಲಿನ ಕಬ್ಬು ರಫ್ತಾಗುತ್ತದೆ. ಈ ಗ್ರಾಮಗಳ ಬಹುತೇಕ ರೈತರು ಕರಿ ಕಬ್ಬಿನ ವ್ಯವಸಾಯವನ್ನೇ ನೆಚ್ಚಿಕೊಂಡಿದ್ದಾರೆ. ಸುಮಾರು 40-50 ಎಕರೆಗೂ ಹೆಚ್ಚು ಪ್ರದೇಶಗಳಲ್ಲಿ ಈ ಕಬ್ಬನ್ನು ವಾಣಿಜ್ಯ ಬೆಳೆಯಾಗಿ ಗ್ರಾಮಸ್ಥರು ಬೆಳೆದಿದ್ದು ರೈತರು ಉತ್ತಮ ಆದಾಯದ ನಿರೀಕ್ಷೆಯಲ್ಲಿದ್ದಾರೆ.


Chikmagalur Murder: ಕಡೂರಿನಲ್ಲಿ ಊರ ಮಧ್ಯೆ ಅಪ್ಪನನ್ನು ಕತ್ತಿಯಿಂದ ಕೊಚ್ಚಿ ಕೊಂದ ಮಗ!


ಆದ್ರೆ ಈ ಭಾರೀ ಕರಿ ಕಬ್ಬಿನ ಬೆಳೆಯಲ್ಲಿ ವ್ಯತ್ಯಯವಾಗಿದ್ದು, ಸರ್ಕಾರ ಮುಂದಿನ ದಿನಗಳಲ್ಲಿ ಪ್ರೇತ್ಸಾಹ ಧನವನ್ನು ನೀಡಿದ್ರೆ, ರೈತರಿಗೆ ಅನುಕೂಲವಾಗಲಿದೆ ಎಂದು ಸರ್ಕಾರಕ್ಕೆ ಬೇಡಿಕೆಯನ್ನು ಇಟ್ಟಿದ್ದಾರೆ.


ಅಂದ ಹಾಗೆ ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಮಾತ್ರ ಬಹುತೇಕ ಕರಿ ಕಬ್ಬನ್ನು ಬೆಳೆಯಲಾಗುತ್ತದೆ. ಈ ಕಬ್ಬನ್ನು ಈ ಗ್ರಾಮಗಳಲ್ಲಿ ಮಾತ್ರ 40 ರಿಂದ 50 ವರ್ಷಗಳಿಂದ ಬೆಳೆಸಿಕೊಂಡು ಬರಲಾಗುತ್ತಿದೆ. ಸಂಕ್ರಾಂತಿ ಹಬ್ಬದ ವೇಳೆ ಎಳ್ಳು ಬೆಲ್ಲದ ಜೊತೆಗೆ ಈ ಕರಿ ಕಬ್ಬಿನ ಒಂದು ತುಂಡನ್ನ ನೀಡುವುದು ಹಾಗೂ ಈ ಹಬ್ಬದ ಸಂದರ್ಭದಲ್ಲಿ ಒಂದು ಗೇಣು ಕರಿ ಕಬ್ಬು ತಿಂದರೆ ನೆಮ್ಮದಿ ಎಂಬ ವಾಡಿಕೆ ಕೂಡ ಜನರಲ್ಲಿ ಇದೆ.


ಒಂದು ಎಕರೆ ಪ್ರದೇಶದಲ್ಲಿ ಕಬ್ಬು ಬೆಳೆಯಲು ಸುಮಾರು 1 ರಿಂದ 2 ಲಕ್ಷ ಖರ್ಚಾಗುತ್ತದೆ. 3 ಲಕ್ಷಕ್ಕೂ ಹೆಚ್ಚು ಲಾಭ ದೊರೆಯುತ್ತದೆ ಎಂಬುದು ಕಬ್ಬು ಬೆಳೆಗಾರರ ಮಾತು. ಆದರೆ ಈ ಬಾರಿ ಕೊರೋನಾದಿಂದಾಗಿ ಅದು ಸಹ ಮಂದಗತಿಯಾಗಿದೆ.  ಸಂಕ್ರಾಂತಿ ಸಮಯದಲ್ಲಿ ಮಾತ್ರ ಈ ಕಬ್ಬು ಚೆನ್ನಾಗಿ ಬರುತ್ತದೆ. ಹೀಗಾಗಿ ಸಂಕ್ರಾಂತಿ ಸಮಯದಲ್ಲಿ ಈ ಕಬ್ಬಿಗೆ ಎಲ್ಲಿಲ್ಲದ ಬೇಡಿಕೆ ಇದೆ.


ವರ್ಷಕ್ಕೊಮ್ಮೆ ವಿಶೇಷವಾಗಿ ಬೆಳೆಯುವ ಈ ಕರಿ ಕಬ್ಬನ್ನು ಮನೆ ಮಂದಿಯೆಲ್ಲಾ ಬಹಳ ಶ್ರಮಪಟ್ಟು ಬೆಳೆಸುತ್ತಾರೆ. ವಿದ್ಯುತ್ ಹಾಗೂ ನೀರಿನ ಕೊರತೆ ನಡುವೆಯೂ ಈ ಭಾಗದ ರೈತರು ಈ ಕರಿ ಕಬ್ಬನ್ನ ಬೆಳೆದು ಬೇರೆ ರೈತರಿಗೆ ಮಾದರಿಯಾಗಿದ್ದಾರೆ. ಸರ್ಕಾರ ಮುಂದಿನ ದಿನಗಳಲ್ಲಿ ಈ ಕರಿ ಕಬ್ಬು ಬೆಳೆಯುವ ರೈತರಿಗೆ ಪ್ರೋತ್ಸಾಹ ಧನವನ್ನು ನೀಡಿ ಬೆಂಬಲಿಸಲಿ ಎಂಬಿದು ಈ ಭಾಗದ ರೈತರ ಆಶಯ.


(ವರದಿ : ಎ.ಟಿ.ವೆಂಕಟೇಶ್)

top videos
    First published: