• Home
  • »
  • News
  • »
  • state
  • »
  • Mallikarjun Kharge: ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ಖರ್ಗೆ ನಾಮಪತ್ರ, ಕನ್ನಡಿಗನ 'ಕೈ'ಗೆ ಸಿಗುತ್ತಾ ಅಧಿಕಾರ?

Mallikarjun Kharge: ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ಖರ್ಗೆ ನಾಮಪತ್ರ, ಕನ್ನಡಿಗನ 'ಕೈ'ಗೆ ಸಿಗುತ್ತಾ ಅಧಿಕಾರ?

ಮಲ್ಲಿಕಾರ್ಜುನ್ ಖರ್ಗೆ

ಮಲ್ಲಿಕಾರ್ಜುನ್ ಖರ್ಗೆ

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧಿಸುತ್ತಿದ್ದಾರೆ. ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಖರ್ಗೆ ಇಂದು ಮಧ್ಯಾಹ್ನ ನಾಮಪತ್ರ ಸಲ್ಲಿಸಿದ್ದಾರೆ. ಇದರೊಂದಿಗೆ ಚುನಾವಣೆ ಮತ್ತಷ್ಟು ಕುತೂಹಲ ಕೆರಳಿಸಿದೆ.

  • Share this:

ನವದೆಹಲಿ: ದೇಶದ ಅತ್ಯಂತ ಹಳೆಯ ರಾಜಕೀಯ ಪಕ್ಷ (oldest political party) ಎಂಬ ಹೆಸರು ಪಡೆದ ಕಾಂಗ್ರೆಸ್‌ನಲ್ಲಿ (Congress) ಬದಲಾವಣೆ ಗಾಳಿ ಬೀಸುತ್ತಿದೆ. ಹಂಗಾಮಿ ಅಧ್ಯಕ್ಷೆ ಸೋನಿಯಾಗಾಂಧಿ (Sonia Gandhi) ಅನಾರೋಗ್ಯ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷರ (AICC Precident) ಬದಲಾವಣೆ ಅನಿವಾರ್ಯವಾಗಿದೆ. ಹೀಗಾಗಿ ಶೀಘ್ರವೇ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ತೀವ್ರ ಕುತೂಹಲ ಮೂಡಿಸಿದೆ. ಕಾಂಗ್ರೆಸ್ ಹಿರಿಯ ನಾಯಕರಾದ ಶಶಿ ತರೂರ್ (Shashi Tharoor), ದಿಗ್ವಿಜಯ್ ಸಿಂಗ್ (Digvijay Singh) ಸೇರಿದಂತೆ ಘಟಾನುಘಟಿಗಳು ಸ್ಪರ್ಧೆಗೆ ಮುಂದಾಗಿದ್ದರು. ಇದೀಗ ದಿಗ್ವಿಜಯ್ ಸಿಂಗ್ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. ಮತ್ತೊಂದೆಡೆ ಮಹತ್ವದ ಬೆಳವಣಿಗೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ, ಕರ್ನಾಟಕ ಮೂಲದ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದಾರೆ. ಇದರೊಂದಿಗೆ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ ಮತ್ತಷ್ಟು ಕುತೂಹಲ ಕೆರಳಿಸಿದೆ.


ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧೆ


ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧಿಸುತ್ತಿದ್ದಾರೆ. ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಖರ್ಗೆ ಇಂದು ಮಧ್ಯಾಹ್ನ ನಾಮಪತ್ರ ಸಲ್ಲಿಸಿದ್ದಾರೆ. ಅವರ ಉಮೇದುವಾರಿಕೆಯನ್ನು ಪಕ್ಷದ ಮುಖಂಡರಾದ ಅಶೋಕ್ ಗೆಹ್ಲೋಟ್, ದಿಗ್ವಿಜಯ ಸಿಂಗ್, ಪ್ರಮೋದ್ ತಿವಾರಿ, ಪಿಎಲ್ ಪುನಿಯಾ, ಎಕೆ ಆಂಟನಿ, ಪವನ್ ಕುಮಾರ್ ಬನ್ಸಾಲ್ ಮತ್ತು ಮುಕುಲ್ ವಾಸ್ನಿಕ್ ಬೆಂಬಲಿಸಿದರು.
ಗಾಂಧಿ ಕುಟುಂಬದ ಕ್ಯಾಂಡಿಟೇಟ್‌ ಖರ್ಗೆ?


ಮಲ್ಲಿಕಾರ್ಜುನ ಖರ್ಗೆ ದೇಶದ ರಾಜಕೀಯದಲ್ಲಿ ದೊಡ್ಡ ಹೆಸರು. ಅದರಲ್ಲೂ ಈ ಹಿಂದೆ ಕೇಂದ್ರ ಸರ್ಕಾರದಲ್ಲಿ ಹಲವು ಹುದ್ದೆಗಳನ್ನು ನಿರ್ವಹಿಸಿದ ಅನುಭವವವೂ ಇದೆ. ಜೊತೆಗೆ ಹಿಂದಿನಿಂದಲೂ ಖರ್ಗೆ ಗಾಂಧಿ ಕುಟುಂಬದ ಆಪ್ತರಲ್ಲಿ ಒಬ್ಬರು. ಹೀಗಾಗಿ ಗಾಂಧಿ ಫ್ಯಾಮಿಲಿ ಸಲಹೆಯಂತೆ ಮಲ್ಲಿಕಾರ್ಜುನ್ ಖರ್ಗೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದಾರೆ ಎನ್ನಲಾಗುತ್ತಿದೆ.


ಖರ್ಗೆ ನಾಮಪತ್ರ ಸಲ್ಲಿಕೆ (ಕೃಪೆ: ANI)


ಇದನ್ನೂ ಓದಿ:  Mohan Bhagwat: ಮಾಂಸಾಹಾರಿಗಳಿಗೆ RSS ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?


ಧನ್ಯವಾದ ಅರ್ಪಿಸಿದ ಖರ್ಗೆ


ಪಕ್ಷದಲ್ಲಿ ದೊಡ್ಡ ಬದಲಾವಣೆಗಾಗಿ ಹೋರಾಡುತ್ತಿರುವುದಾಗಿ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಅಲ್ಲದೆ ಎಲ್ಲ ಪ್ರತಿನಿಧಿಗಳು ತಮಗೆ ಮತ ನೀಡುವಂತೆ ಮನವಿ ಮಾಡಿದರು. ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ನನ್ನನ್ನು ಬೆಂಬಲಿಸಿದ್ದಕ್ಕಾಗಿ ಎಲ್ಲಾ ರಾಜ್ಯಗಳ ಹಿರಿಯ ನಾಯಕರಿಗೆ ನಾನು ಧನ್ಯವಾದ ಹೇಳುತ್ತೇನೆ ಎಂದು ಖರ್ಗೆ ಅವರು ನಾಮಪತ್ರ ಸಲ್ಲಿಸಿದ ನಂತರ ಎಐಸಿಸಿ ಕಚೇರಿಯಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ಸ್ಪರ್ಧೆಯಿಂದ ಹಿಂದೆ ಸರಿದ ದಿಗ್ವಿಜಯ್ ಸಿಂಗ್


ಇನ್ನು ಮತ್ತೋರ್ವ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಕೂಡ ಸ್ಪರ್ಧೆಗೆ ಒಲವು ತೋರಿದ್ದರು. ಆದರೆ ಕೊನೆ ಕ್ಷಣದಲ್ಲಿ ಹಿಂದೆ ಸರಿದಿದ್ದಾರೆ. ಶುಕ್ರವಾರ ಬೆಳಿಗ್ಗೆ ಅವರು ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದರು. ಗುರುವಾರ ಅವರು ನಾಮಪತ್ರ ಪಡೆದ ನಂತರ ಶಶಿ ತರೂರ್ ಅವರನ್ನೂ ಭೇಟಿ ಮಾಡಿದ್ದರು. ಆದರೆ ಗಾಂಧಿ ಕುಟುಂಬದ ಅಭ್ಯರ್ಥಿಯಾಗಿ ಖರ್ಗೆ ಅವರ ಆಯ್ಕೆ ಖಚಿತವಾದ ನಂತರ ಸಿಂಗ್ ಚುನಾವಣೆಗೆ ಸ್ಪರ್ಧಿಸಲು ಹಿಂದೇಟು ಹಾಕಿದ್ದಾರೆ.


ಶಶಿ ತರೂರ್ ಮತ್ತು ಖರ್ಗೆ ನಡುವೆ ಪೈಪೋಟಿ


ಇದೀಗ ಶಶಿ ತರೂರ್ ಹಾಗೂ ಮಲ್ಲಿಕಾರ್ಜುನ ಖರ್ಗೆ ನಡುವೆ ಭಾರೀ ಪೈಪೋಟಿ ನಡೆಯುವ ನಿರೀಕ್ಷೆಯಿದೆ. ಗಾಂಧಿ ಕುಟುಂಬದ ಹಾಗೂ ಕಾಂಗ್ರೆಸ್ ಹಿರಿಯರ ಗುಂಪಿನ ಅಭ್ಯರ್ಥಿಯಾಗಿ ಖರ್ಗೆ ಕಣಕ್ಕಿಳಿದಿದ್ದಾರೆ. ಮತ್ತೊಂದೆಡೆ  ಜಿ-23 ಬಣದ ಭಿನ್ನಮತೀಯ ನಾಯಕರ ಜತೆ ಗುರುತಿಸಿಕೊಂಡಿರುವ ಶಶಿ ತರೂರ್ ಕಣದಲ್ಲಿದ್ದಾರೆ.  ಶಶಿ ತರೂರ್ ನಾಮಪತ್ರ ವಾಪಸ್ ಪಡೆದುಕೊಳ್ಳದೆ ಇದ್ದರೆ, ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅ. 17ರಂದು ಚುನಾವಣೆ ನಡೆಯುವುದು ಅನಿವಾರ್ಯವಾಗಲಿದೆ.


ಖರ್ಗೆ ಸ್ಪರ್ಧೆ ಬಗ್ಗೆ ರಾಜ್ಯ ನಾಯಕರು ಹೇಳಿದ್ದೇನು?


ಇನ್ನು ಖರ್ಗೆ ಸ್ಪರ್ಧೆಗೆ ರಾಜ್ಯದ ಕಾಂಗ್ರೆಸ್ ನಾಯಕರು ಸಮ್ಮತಿಸಿದ್ದಾರೆ. ಕೆಲವು ಹಿರಿಯ ನಾಯಕರು ಅಧಿಕಾರ ಸಿಗದೆ ಬಿಟ್ಟು ಹೋಗ್ತಿದ್ದಾರೆ, ಎಲ್ಲರೂ ಕೂಡ ಸೇರಿ ಕಾಂಗ್ರೆಸ್ ಕಟ್ಟುವ ಕೆಲಸ ಮಾಡ್ತೇವೆ, ಜವಾಬ್ದಾರಿಯುತ ಸ್ಥಾನಕ್ಕೆ ಖರ್ಗೆ ಸ್ಪರ್ಧಿಸಿದ್ದಾರೆ. ಇಡೀ ರಾಜ್ಯಕ್ಕೆ ಅಷ್ಟೇ ಅಲ್ಲ, ದೇಶಕ್ಕೆ ಒಬ್ಬ ಬದ್ದತೆ ಇರುವ ನಾಯಕನಿಗೆ ಸ್ಥಾನ ಸಿಕ್ತಾ ಇದೆ ಎಂದು ಬಿಕೆ ಹರಿಪ್ರಸಾದ್ ಹೇಳಿದ್ದಾರೆ.


ಇದನ್ನೂ ಓದಿ: Mohan Bhagawat: ಮೋಹನ್ ಭಾಗವತ್ ರಾಷ್ಟ್ರಪಿತ ಎಂದಿದ್ದ ಇಮಾಮ್‌ಗೆ ಜೀವ ಬೆದರಿಕೆ!


ಖರ್ಗೆ ಬಿಜೆಪಿ ವಿರುದ್ಧದ ದಲಿತ ಅಸ್ತ್ರ ಅಲ್ಲ ಅಂತ ಈಶ್ವರ್ ಖಂಡ್ರೆ ಹೇಳಿದ್ದಾರೆ. ಖರ್ಗೆ ಎಲ್ಲಾ ಸಮುದಾಯದ ನಾಯಕರಾಗಿ ಹೊರ ಹೊಮ್ಮಿದ್ದಾರೆ. ಖರ್ಗೆ ಸಮರ್ಥರಾಗಿದ್ದಾರೆ ಬಿಜೆಪಿ ದುರಾಡಳಿತ ಎದುರಿಸೋ ಶಕ್ತಿ ಅವರಿಗೆ ಇದೆ ಎಂದಿದ್ದಾರೆ. ಇನ್ನು ಮಲ್ಲಿಕಾರ್ಜುನ ಖರ್ಗೆ ಗೆ ರಾಜಕೀಯ ಅನುಭವ ಇದೆ, ಅವರು ಯಾರ ಕೈಗೊಂಬೆಯೂ ಅಲ್ಲ ಅಂತ ಯುಟಿ ಖಾದರ್ ಹೇಳಿದ್ದಾರೆ. ಎಐಸಿಸಿ ಅಧ್ಯಕ್ಷರಾಗಿ ಈ ದೇಶದ ಸಂವಿಧಾನ ಉಳಿಸೋ ಕೆಲಸ ಮಾಡ್ತಾರೆ, ಗಾಂಧಿ ಕುಟುಂಬ ಮತ್ತು ಎಲ್ಲಾ ಹಿರಿಯರ ಸಲಹೆ ಪಡೆದು ಪಕ್ಷ ಮುನ್ನೆಡಸಲಿದ್ದಾರೆ ಅಂತ ಅವರು ಅಭಿಪ್ರಾಯ ಪಟ್ಟಿದ್ದಾರೆ.

Published by:Annappa Achari
First published: