ನನ್ನಷ್ಟು ವರ್ಷ ವಿಧಾನಸಭೆಗೆ ಆಯ್ಕೆಯಾದವರು ಬಿಜೆಪಿಯಲ್ಲಿ ಯಾರಿದ್ದಾರೆ?; ಮಲ್ಲಿಕಾರ್ಜುನ ಖರ್ಗೆ ಸವಾಲು

ಬಿಜೆಪಿ ನಾಯಕರ ಈ ಟೀಕೆಗೆ ಇಂದು ಖಡಕ್‌ ಉತ್ತರ ನೀಡಿರುವ ಖರ್ಗೆ, ನನ್ನಷ್ಟು ವರ್ಷ ವಿಧಾನಸಭೆಗೆ ಆಯ್ಕೆ ಯಾದವರು ಬಿಜೆಪಿಯಲ್ಲಿ ಯಾರಿದ್ದಾರೆ? ಬಿಜೆಪಿಯವರು ನನ್ನಷ್ಟು ವರ್ಷ ರಾಜಕಾರಣ ಮಾಡಲಿ ನೋಡೊಣ. ಅದರಲ್ಲೂ ಅವರ ಪಕ್ಷ ಅವಕಾಶ ನೀಡುತ್ತೊ ಏನೊ ನೊಡೋಣ? ಎಂದು ತಮ್ಮ ಮೇಲಿನ ಆರೋಪಗಳಿಗೆ ಪ್ರತ್ಯುತ್ತರ ನೀಡಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ

ಮಲ್ಲಿಕಾರ್ಜುನ ಖರ್ಗೆ

  • Share this:
ಬೆಂಗಳೂರು (ಜೂನ್ 12); ಕರ್ನಾಟಕ ರಾಜ್ಯಸಭಾ ಚುನಾವಣಾ ಫಲಿತಾಂಶ ಹೊರ ಬೀಳುತ್ತಿದ್ದಂತೆ ಬಿಜೆಪಿ ನಾಯಕರಿಗೆ ಸವಾಲೆಸೆದಿರುವ ಕಾಂಗ್ರೆಸ್‌ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, "ಬಿಜೆಪಿ ಪಕ್ಷದಲ್ಲಿ ನನ್ನಷ್ಟು ವರ್ಷ ವಿಧಾನಸಭೆಗೆ ಆಯ್ಕೆಯಾದವರು ಯಾರಿದ್ದಾರೆ?" ಎಂದು ಕಿಡಿಕಾರಿದ್ದಾರೆ.

ನಾಡಿನ ರಾಜಕೀಯ ಮುತ್ಸದ್ದಿಯೂ ಆಗಿರುವ ಮಲ್ಲಿಕಾರ್ಜುನ ಖರ್ಗೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಸೋಲನುಭವಿಸಿದ್ದರು. ಹೀಗಾಗಿ ಅವರನ್ನು ಹೇಗಾದರೂ ಮಾಡಿ ಮತ್ತೆ ಸಂಸತ್‌ಗೆ ಪ್ರವೇಶಿಸುವಂತೆ ನೋಡಿಕೊಳ್ಳಬೇಕು ಎಂದು ನಿರ್ಧರಿಸಿದ್ದ ಕಾಂಗ್ರೆಸ್‌ ಹೈಕಮಾಂಡ್‌ ಅವರಿಗೆ ರಾಜ್ಯಸಭೆ ಟಿಕೆಟ್‌ ನೀಡಿ ಇದೀಗ ಗೆಲ್ಲಿಸಿಕೊಂಡಿದೆ.

ಆದರೆ, ಕಾಂಗ್ರೆಸ್‌ ಪಕ್ಷದ ಈ ಬೆಳವಣಿಗೆಯನ್ನು ಟೀಕಿಸಿದ್ದ ಬಿಜೆಪಿ ನಾಯಕರು, "ಮಲ್ಲಿಕಾರ್ಜುನ ಖರ್ಗೆ ಹಿಂಬಾಗಿಲಿನ ಮೂಲಕ ರಾಜ್ಯಸಭೆಗೆ ಪ್ರವೇಶಿಸಿದ್ದಾರೆ" ಎಂದು ಆರೋಪಿಸಿದ್ದರು.

ಬಿಜೆಪಿ ನಾಯಕರ ಈ ಟೀಕೆಗೆ ಇಂದು ಖಡಕ್‌ ಉತ್ತರ ನೀಡಿರುವ ಖರ್ಗೆ, " ನನ್ನಷ್ಟು ವರ್ಷ ವಿಧಾನಸಭೆಗೆ ಆಯ್ಕೆ ಯಾದವರು ಬಿಜೆಪಿಯಲ್ಲಿ ಯಾರಿದ್ದಾರೆ? ಬಿಜೆಪಿಯವರು ನನ್ನಷ್ಟು ವರ್ಷ ರಾಜಕಾರಣ ಮಾಡಲಿ ನೋಡೊಣ. ಅದರಲ್ಲೂ ಅವರ ಪಕ್ಷ ಅವಕಾಶ ನೀಡುತ್ತೊ ಏನೊ ನೊಡೋಣ?" ಎಂದು ತಮ್ಮ ಮೇಲಿನ ಆರೋಪಗಳಿಗೆ ಪ್ರತ್ಯುತ್ತರ ನೀಡಿದ್ದಾರೆ.

ಇದನ್ನೂ ಓದಿ : ಕರ್ನಾಟಕ ರಾಜ್ಯಸಭಾ ಚುನಾವಣಾ ಫಲಿತಾಂಶ; ದೇವೇಗೌಡ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ನಾಲ್ಕೂ ಜನ ಅವಿರೋಧ ಆಯ್ಕೆ

ಇದೇ ಸಂದರ್ಭದಲ್ಲಿ ತಮಗೆ ರಾಜ್ಯಸಭೆಗೆ ಸ್ಥಾನ ನೀಡಿದ ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ಅವರಿಗೂ ಧನ್ಯವಾದಗಳನ್ನು ಅರ್ಪಿಸಿರುವ ಮಲ್ಲಿಕಾರ್ಜುನ ಖರ್ಗೆ, "ಸೋನಿಯಾ ಗಾಂಧಿ ಅವರು ನನ್ನ ಮೇಲೆ ಇಟ್ಟಿರುವ ನಂಬಿಕೆಯನ್ನು ನಾನು ಉಳಿಸಿಕೊಳ್ಳುತ್ತೇನೆ. ರಾಜ್ಯದ, ದೇಶದ ಸಮಸ್ಯೆಗಳನ್ನು ಸಮರ್ಥವಾಗಿ ಸಂಸತ್ತಿನಲ್ಲಿ ಪ್ರಸ್ತಾಪಿಸುತ್ತೇನೆ" ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
First published: