ಸುಳ್ಳು ಹೇಳುವುದರಲ್ಲಿ ಪ್ರಧಾನಿ ಮೋದಿ ನಂಬರ್​ ಒನ್​; ಮಲ್ಲಿಕಾರ್ಜುನ ಖರ್ಗೆ ವ್ಯಂಗ್ಯ

news18
Updated:October 28, 2018, 3:58 PM IST
ಸುಳ್ಳು ಹೇಳುವುದರಲ್ಲಿ ಪ್ರಧಾನಿ ಮೋದಿ ನಂಬರ್​ ಒನ್​; ಮಲ್ಲಿಕಾರ್ಜುನ ಖರ್ಗೆ ವ್ಯಂಗ್ಯ
  • News18
  • Last Updated: October 28, 2018, 3:58 PM IST
  • Share this:
-ರಾಚಪ್ಪ ಬನ್ನಿದಿನ್ನಿ, ನ್ಯೂಸ್​ 18 ಕನ್ನಡ

ಬಾಗಲಕೋಟೆ,(ಅ.28): ಮೋದಿ ಸುಳ್ಳು ಹೇಳಿದರೂ ಸತ್ಯದ ತಲೆ ಮೇಲೆ ಹೊಡೆದಂಗೆ ಹೇಳುತ್ತಾರೆ ಎಂದು ಕೇಂದ್ರ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ವ್ಯಂಗ್ಯ ಮಾಡಿದ್ದಾರೆ.

ಜಮಖಂಡಿ ವಿಧಾನಸಭಾ ಉಪ ಚುನಾವಣೆ ಹಿನ್ನೆಲೆ ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸತ್ಯದ ತಲೆ ಮೇಲೆ ಹೊಡೆದಂಗೆ ಸುಳ್ಳು ಹೇಳೋದು ಮೋದಿ ಕೆಲಸ. ಸುಳ್ಳು ಹೇಳುವುದರಲ್ಲಿ ಪ್ರಧಾನಿ ಮೋದಿ ನಂಬರ್ ಒನ್ ಎಂದು ಟೀಕಿಸಿದ್ದಾರೆ.

ಈ ಹಿಂದೆ ಮೋದಿ ನಾನು ಅಧಿಕಾರಕ್ಕೆ ಬಂದರೆ ಪ್ರತಿ ವರ್ಷ ಎರಡು ಕೋಟಿ ನೌಕರಿ ಕೊಡಿಸುತ್ತೇನೆ ಎಂದಿದ್ದರು. ವಿದೇಶದಲ್ಲಿ ಇಟ್ಟಿರುವ ಕಪ್ಪು ಹಣ ತಂದು ನಿಮ್ಮ ಜೇಬಿಗೆ ಹದಿನೈದು ಲಕ್ಷ ಹಾಕ್ತೀನಿ ಎಂದಿದ್ದರು. ಹೇಳಿದ್ದನ್ನು ಏನಾದರೂ ಮಾಡಿದ್ರಾ..? ಸಾವಳಗಿ ಜನರಿಗೆ ಏನಾದರೂ ಕೊಟ್ಟಿದ್ದಾರಾ? ಮೋಸ ಮಾಡಿದ್ದರೂ ಯುವಕರು ಮೋದಿ ಮೋದಿ ಎನ್ನುತ್ತಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಮೋದಿ ರೈತರ ಸಾಲ ಮನ್ನಾ ಯಾಕೆ ಮಾಡುತ್ತಿಲ್ಲ. ನಮ್ಮ ಈ ಹಿಂದಿನ ಯಪಿಎ ಸರ್ಕಾರ ರೈತರ ಸಾಲಮನ್ನಾ ಮಾಡಿದೆ. ಹಿಂದಿನ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರೈತರ ಸಾಲ ಮನ್ನಾ ಮಾಡಿದೆ. ಕೆಲಸ‌ ಮಾಡಿದವರಿಗೆ ಓಟು ಕೊಡ್ತಿರೋ ? ಸುಳ್ಳು ಹೇಳುವವರಿಗೆ ಓಟು ಕೊಡ್ತಿರೋ? ಎಂದು ಖರ್ಗೆ ಜನರಿಗೆ ಪ್ರಶ್ನೆ ಹಾಕಿದರು.

‌ನಾವು ಸ್ವಾತಂತ್ರ್ಯ ತಂದು ಕೊಟ್ಟಿದ್ದೇವೆ. ನಮ್ಮವರು ತ್ಯಾಗ ಮಾಡಿದ್ದಾರೆ. ಮಹಾತ್ಮ ಗಾಂಧಿ‌ ದೇಶಕ್ಕೆ ಬಲಿದಾನ‌ ಕೊಟ್ಟಿದ್ದಾರೆ. ಇಂದಿರಾಗಾಂಧಿ ಹಾಗೂ ರಾಜೀವ್​​ ಗಾಂಧಿ ದೇಶಕ್ಕಾಗಿ ತಮ್ಮ ಪ್ರಾಣವನ್ನೇ ನೀಡಿದ್ದಾರೆ . ಹೀಗೆ ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯಬೇಕು. ಸಮಾಜಕ್ಕಾಗಿ ನಮ್ಮ ಪಕ್ಷ ಕೆಲಸ ಮಾಡಿದೆ. ಬಿಜೆಪಿ ಪಕ್ಷ ಏನು ಮಾಡುತ್ತಿದೆ ? ಬಿಜೆಪಿ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದೆ. ರೈತರು,ಬಡವರನ್ನು ತುಳಿಯುವ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
First published: October 28, 2018, 3:58 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading