• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Rape Case: ಗೋವಾದ ರೆಸಾರ್ಟ್‌ನಲ್ಲಿ ರಷ್ಯಾ ಬಾಲಕಿ ಮೇಲೆ ಅತ್ಯಾಚಾರ; ಗದಗದಲ್ಲಿ ಸಿಕ್ಕಿಬಿದ್ದ ಆರೋಪಿ

Rape Case: ಗೋವಾದ ರೆಸಾರ್ಟ್‌ನಲ್ಲಿ ರಷ್ಯಾ ಬಾಲಕಿ ಮೇಲೆ ಅತ್ಯಾಚಾರ; ಗದಗದಲ್ಲಿ ಸಿಕ್ಕಿಬಿದ್ದ ಆರೋಪಿ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ರೆಸಾರ್ಟ್ ನ ಸ್ವೀಮ್ಮಿಂಗ್ ಪೂಲ್ ಹಾಗೂ ಹೋಟೆಲ್ ನಲ್ಲಿ ಕೊಠಡಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಬಗ್ಗೆ ಆಕೆಯ ತಾಯಿ ದೂರು ನೀಡಿದ್ದಾಗಿ ಪೆರ್ನೆಮ್ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ವಿಕ್ರಮ್ ನಾಯಕ್ ಹೇಳಿದ್ದಾರೆ.

  • Share this:

ಬೆಂಗಳೂರು (ಮೇ 12) : ಉತ್ತರ ಗೋವಾದ ಅರಂಬೋಲ್ ನ ರೆಸಾರ್ಟ್ (Resort) ವೊಂದರಲ್ಲಿ 12 ವರ್ಷದ ರಷ್ಯಾದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇರೆಗೆ ಕರ್ನಾಟಕದಲ್ಲಿ (Karnataka) ವ್ಯಕ್ತಿಯೊಬ್ಬನನ್ನು ಗೋವಾ ಪೊಲೀಸರು (Goa Police) ಬಂಧಿಸಿರುವುದಾಗಿ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ರವಿ ಲಮಾಣಿ (Ravi lamani) ಬಂಧಿತ ಆರೋಪಿಯಾಗಿದ್ದಾನೆ. ಮೇ 6 ರಂದು ಗೋವಾದ ನಡೆದ ಅತ್ಯಾಚಾರ (Rape) ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ತಾಯಿ ಮೇ 9 ರಂದು ದೂರು ದಾಖಲಿಸಿದ್ದರು. ನಂತರ ಮೇ 10 ರಂದು ವಿವಾಹಿತ ರವಿ ಲಮಾಣಿಯನ್ನು ಗದಗದಲ್ಲಿ ಪೆರ್ನೆಮ್ ಪೊಲೀಸರ ತಂಡವೊಂದು ಬಂಧಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.


ಬಾಲಕಿ ತಾಯಿಯಿಂದ ಪೊಲೀಸರಿಗೆ ದೂರು


ರೆಸಾರ್ಟ್ ನ ಸ್ವೀಮ್ಮಿಂಗ್ ಪೂಲ್ ಹಾಗೂ ಹೋಟೆಲ್ ನಲ್ಲಿ ಕೊಠಡಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಬಗ್ಗೆ ಆಕೆಯ ತಾಯಿ ದೂರು ನೀಡಿದ್ದಾಗಿ ಪೆರ್ನೆಮ್ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ವಿಕ್ರಮ್ ನಾಯಕ್ ಹೇಳಿದ್ದಾರೆ. ಕೆಲವು ಅಗತ್ಯ ವಸ್ತಗಳನ್ನು ಖರೀದಿಸಲು ಮಾರುಕಟ್ಟೆಗೆ ಹೋಗಿದ್ದಾಗ ತನ್ನ ಮಗಳ ಮೇಲೆ ಅತ್ಯಾಚಾರವಾಗಿದೆ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.


24 ಗಂಟೆಯಲ್ಲೇ ಆರೋಪಿ ಬಂಧನ


ಘಟನೆ ನಂತರ ಆರೋಪಿ ಅಲ್ಲಿಂದ ಪರಾರಿಯಾಗಿದ್ದ. ಆದರೆ, ದೂರು ಸ್ವೀಕರಿಸಿದ 24 ಗಂಟೆಯೊಳಗೆ ಆತನನ್ನು ಗದಗದಲ್ಲಿ ಪತ್ತೆ ಹಚ್ಚಿ ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಆರೋಪಿ ರವಿ ಲಮಾಣಿ ವಿರುದ್ಧ ಐಪಿಸಿ ಸೆಕ್ಷನ್ 376 ( ಅತ್ಯಾಚಾರ) ಗೋವಾ ಬಾಲಕರ ಕಾಯ್ದೆಯ ಸೆಕ್ಷನ್ 8 ಮತ್ತು ಪೋಕ್ಸೊ ಕಾಯ್ಡೆಯ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ನಾಯಕ್ ಹೇಳಿದ್ದಾರೆ.


ಇದನ್ನು ಓದಿ: ವಾರಣಾಸಿಯ ಜ್ಞಾನವಾಪಿ ಮಸೀದಿ ಸರ್ವೆ ನಿಲ್ಲಿಸ್ಬೇಡಿ; ಕೋರ್ಟ್ ಖಡಕ್ ಸೂಚನೆ


ಅರ್ಹತೆಗೆ ತಕ್ಕ ಉದ್ಯೋಗ ಸಿಗಲಿಲ್ಲವೆಂದು ಯುವತಿ ಆತ್ಮಹತ್ಯೆ


ಉಡುಪಿ: ಅರ್ಹತೆಗೆ ತಕ್ಕ ಉದ್ಯೋಗ ಸಿಗದ ಹಿನ್ನೆಲೆಯಲ್ಲಿ ತೀವ್ರವಾಗಿ ನೊಂದಿದ್ದ ಪದವೀಧರೆಯೋರ್ವಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಂಬಿಎ ಪದವಿಧರೆ 23 ವರ್ಷ ವಯಸ್ಸಿನ ಸಹನಾ ವಿಷ ಸೇವಿಸಿ ಕಾಪು ತಾಲೂಕಿನ ಕಟ್ಟಿಂಗೇರಿ ಗ್ರಾಮದಲ್ಲಿ ಮೇ 9ರಂದು ಆತ್ಮಹತ್ಯೆಗೆ ಶರಣಾಗಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಮೂಲದ ಯುವತಿ ಇವರಾಗಿದ್ದು, ಉಡುಪಿ ಜಿಲ್ಲೆಯ ಕಟ್ಟಿಂಗೇರಿ ಗ್ರಾಮದಲ್ಲಿ ವಿಷ ಸೇವಿಸಿದ್ದರು. ಸಹನಾ ಕಟ್ಟಿಂಗೇರಿಯ ಅಕ್ಕನ ಮನೆಗೆ ಬಂದು ವಿಷ ಸೇವಿಸಿದ್ದರಿಂದ ಉಡುಪಿಯ ಮಿಷನ್ ಆಸ್ಪತ್ರೆ, ಕೆಎಂಸಿ, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಸಹನಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ಅರ್ಹತೆಗೆ ತಕ್ಕ ಉದ್ಯೋಗ ಸಿಗಲಿಲ್ಲ ಎಂದು ವಿಷ ಸೇವಿಸಿದ್ದ ಸಹನಾ ಒಂದು ವರ್ಷದ ಹಿಂದೆ ಮಂಗಳೂರಲ್ಲಿ ಎಂಬಿಎ ಮಾಡಿದ್ದರು. ಮೂರು ಆಸ್ಪತ್ರೆಗಳಲ್ಲಿ 10 ದಿನ ಚಿಕಿತ್ಸೆ ನೀಡಲಾಗಿತ್ತು. ಉಡುಪಿಯ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ರಾಜ್ಯ, ಕೇಂದ್ರ ಸರ್ಕಾರ ಹೊಣೆ - ಕಾಂಗ್ರೆಸ್​ ಪ್ರತಿಭಟನೆ


ಪದವಿಧರರಿಗೆ ಅರ್ಹತೆಗೆ ತಕ್ಕಂತೆ ಸೂಕ್ತ ಉದ್ಯೋಗಗಳು ದೊರೆಯುತ್ತಿಲ್ಲ. ಇದಕ್ಕೆ ರಾಜ್ಯ, ಕೇಂದ್ರ ಸರ್ಕಾರ ಹೊಣೆ ಎಂದು ಆರೋಪಿಸಿ ಯುವ ಕಾಂಗ್ರೆಸ್ ಇಂದು ಉಡುಪಿಯಲ್ಲಿ ಮೊಹಮ್ಮದ್ ನಲಪಾಡ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದೆ.




ಗುಂಡಿಯಲ್ಲಿ ಕಾಲುಜಾರಿ ಬಿದ್ದು ಬಾಲಕಿ ಸಾವು


ಕೊಪ್ಪಳ: ಕಟ್ಟಡ ಕಾಮಗಾರಿಗೆ ತೆಗೆಯಲಾಗಿದ್ದ ಗುಂಡಿಯಲ್ಲಿ ಕಾಲುಜಾರಿ ಬಿದ್ದು 15 ವರ್ಷದ ಬಾಲಕಿ ಸಾವಿಗೀಡಾದ ಘಟನೆ ಬುಧವಾರ ಕೊಪ್ಪಳದಲ್ಲಿ ಜರುಗಿದೆ. ಶ್ರೀದೇವಿ ಮೃತ ಬಾಲಕಿ. ಕೊಪ್ಪಳ ನಗರದ ಹೊಸಪೇಟೆ ರಸ್ತೆಯಲ್ಲಿರುವ ಕೆ.ಎಸ್.ಆಸ್ಪತ್ರೆ ಪಕ್ಕದಲ್ಲಿ ಕಟ್ಟಡ ಕಾಮಗಾರಿಗೆಂದು ಅಗೆಯಲಾಗಿದ್ದ ಗುಂಡಿ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಗೆ ತುಂಬಿಕೊಂಡಿತ್ತು. ಕೆ.ಎಸ್.ಆಸ್ಪತ್ರೆಯಲ್ಲಿ ದಾಖಲಾಗಿದ್ದ ಸಂಬಂಧಿಗೆ ಊಟ ಕೊಡಲು ಮಂಗಳವಾರ ಬಂದಿದ್ದ 15 ವರ್ಷದ ಬಾಲಕಿ ಶ್ರೀದೇವಿ ಕಾಲು ಜಾರಿ ಗುಂಡಿಗೆ ಬಿದ್ದಿದ್ದಾಳೆ.

top videos
    First published: