HOME » NEWS » State » MANDATE TO ISSUE GAZETTE NOTIFICATION ON THE IMPLEMENTATION OF THE MAHADAYI SCHEME HK

ಮಹದಾಯಿ ನ್ಯಾಯಾಧಿಕರಣ ಜಾರಿ ವಿಚಾರ - ಗೆಜೆಟ್ ನೋಟಿಫಿಕೇಶನ್ ಹೊರಡಿಸಲು ಕೇಂದ್ರಕ್ಕೆ ಆಗ್ರಹ

ರಾಜಕಾರಣಿಗಳ ಮೇಲೆ ರೈತರಿಗೆ ವಿಶ್ವಾಸ ಹೋಗಿದೆ. ಆಡಳಿತ ಮತ್ತು ವಿರೋಧ ಪಕ್ಷಗಳು ಮಹದಾಯಿ ವಿಚಾರದಲ್ಲಿ ರಾಜಕೀಯ ಮಾಡುತ್ತಿವೆ. ಕೇಂದ್ರ ಮಂತ್ರಿಗಳು, ಜನಪ್ರತಿನಿಧಿಗಳು ರೈತರ ದಾರಿ ತಪ್ಪಿಸುತ್ತಿದ್ದಾರೆ

news18-kannada
Updated:January 24, 2020, 2:10 PM IST
ಮಹದಾಯಿ ನ್ಯಾಯಾಧಿಕರಣ ಜಾರಿ ವಿಚಾರ - ಗೆಜೆಟ್ ನೋಟಿಫಿಕೇಶನ್ ಹೊರಡಿಸಲು ಕೇಂದ್ರಕ್ಕೆ ಆಗ್ರಹ
ಮಹದಾಯಿ
  • Share this:
ಹುಬ್ಬಳ್ಳಿ(ಜ.24) : ಮಹದಾಯಿ ನ್ಯಾಯಾಧಿಕರಣದ ಆದೇಶ ಜಾರಿಗೆ ತರಬೇಕು. ಈ ಬಗ್ಗೆ ಕೇಂದ್ರ ಸರ್ಕಾರ ಕೂಡಲೇ ಗೆಜೆಟ್ ನೋಟಿಫಿಕೇಶನ್ ಹೊರಡಿಸಬೇಕು. ಈ ಕುರಿತು ಸುಪ್ರೀಂ ಕೋರ್ಟ್‌ಗೆ ಪಿಐಎಲ್ ಸಲ್ಲಿಸಲಾಗಿದೆ ಎಂದು ರೈತಸೇನಾ ಅಧ್ಯಕ್ಷ ವೀರೇಶ್ ಸೊಬರದಮಠ ಹೇಳಿದರು.

ರಾಜ್ಯಕ್ಕೆ ಮಂಜೂರಾದ ನೀರು ಬಳಸಿಕೊಳ್ಳಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು. ಕುಡಿಯುವ ನೀರು ಕೊಡುವಂತೆ ಫೆಬ್ರುವರಿಯಲ್ಲಿ ದೆಹಲಿ ಚಲೋ ನಡೆಸಲು ತಿರ್ಮಾನಿಸಲಾಗಿದೆ. ರಾಜಕಾರಣಿಗಳ ಮೇಲೆ ರೈತರಿಗೆ ವಿಶ್ವಾಸ ಹೋಗಿದೆ. ಆಡಳಿತ ಮತ್ತು ವಿರೋಧ ಪಕ್ಷಗಳು ಮಹದಾಯಿ ವಿಚಾರದಲ್ಲಿ ರಾಜಕೀಯ ಮಾಡುತ್ತಿವೆ. ಕೇಂದ್ರ ಮಂತ್ರಿಗಳು, ಜನಪ್ರತಿನಿಧಿಗಳು ರೈತರ ದಾರಿ ತಪ್ಪಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅತಿವೃಷ್ಟಿ, ಅನಾವೃಷ್ಟಿಯಿಂದ ರೈತರು ಕಂಗಾಲಾಗಿದ್ದೇವೆ. ಕಷ್ಟಪಟ್ಟು ಬೆಳೆದ ಹಿಂಗಾರಿ ಬೆಳೆಗಳಿಗೆ ಸೂಕ್ತ ಬೆಲೆ ಸಿಗುತ್ತಿಲ್ಲ. ದಲ್ಲಾಳಿಗಳು ಮತ್ತು ಅಧಿಕಾರಿಗಳು ಹೊಂದಾಣಿಕೆ ಮಾಡಿಕೊಂಡು ರೈತರಿಗೆ ದ್ರೋಹ ಮಾಡುತ್ತಿದ್ದಾರೆ. ಕಡಲೆ, ಜೋಳ, ಗೋದಿ, ಕುಸುಬಿ, ಸೂರ್ಯಕಾಂತಿ, ಗೋವಿನಜೋಳಕ್ಕೆ ವೈಜ್ಞಾನಿಕ ಬೆಲೆ ನಿಗದಿಪಡಿಸಬೇಕು. ಕೇಂದ್ರ ಸರ್ಕಾರ ಘೋಷಿಸಿರುವ ಬೆಂಬಲ ಬೆಲೆಗೆ ರಾಜ್ಯ ಸರ್ಕಾರ ಹೆಚ್ಚುವರಿ ದರ ನಿಗದಿಪಡಿಸಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ :  ಮಹದಾಯಿ ವಿವಾದ - ಅನ್ಯಾಯದ ವಿರುದ್ಧ ಪಕ್ಷಾತೀತ ಹೋರಾಟಕ್ಕೆ ವೇದಿಕೆ ಸಜ್ಜು

ರಾಜ್ಯ ಸರ್ಕಾರ ಕೂಡಲೇ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಬೇಕು. ಶೀಘ್ರದಲ್ಲಿ ಸೂಕ್ತ ಬೆಂಬಲ ಬೆಲೆ ಘೋಷಿಸಿ ಖರೀದಿ ಕೇಂದ್ರ ಪ್ರಾರಂಭಿಸದಿದ್ದರೆ ಹೋರಾಟ ಪ್ರಾರಂಭಿಸಲಾಗುವುದು. ಜನವರಿ 27 ರಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ನಿರಂತರ ಧರಣಿ ನಡೆಸಲಾಗುವುದು ಎಂದು ತಿಳಿಸಿದರು.
Youtube Video
First published: January 24, 2020, 2:00 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories