ಮಂಡ್ಯ(ಡಿ.19): ಕಬ್ಬಿನ (Sugarcane) ದರ ನಿಗದಿ, ಹಾಲಿನ ದರ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ನಿರ್ಲಕ್ಷ್ಯ ಖಂಡಿಸಿ ಡಿ.19ರಂದು ಜಿಲ್ಲಾ ರೈತ ಸಂಘ ನೀಡಿರುವ ಮಂಡ್ಯ (Mandya) ನಗರ ಬಂದ್ಗೆ ಹಲವು ಸಂಘಟನೆಗಳು ಬೆಂಬಲ ನೀಡಿವೆ. ಹೀಗಾಗಿ ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಸಕ್ಕರೆನಾಡು ಮಂಡ್ಯದಲ್ಲಿ ಬಂದ್ ಇರಲಿದೆ. ಕಬ್ಬು ಸೇರಿದಂತೆ ವಿವಿಧ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿ ಪಡಿಸಬೇಕು ಎಂದ ರೈತರು ಒತ್ತಾಯಿಸಿದ್ದಾರೆ.
ಹೌದು ಪ್ರತಿ ಲೀಟರ್ ಹಾಲಿಗೆ 40 ರೂ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಕೋರಿ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಕಳೆದ 43 ದಿನಗಳಿಂದ ರೈತರು ಧರಣಿ ನಡೆಸುತ್ತಿದ್ದಾರೆ ಹೀಗಿದ್ದರೂ ರೈತರ ಮನವಿಯನ್ನು ಮಾತ್ರ ಸರ್ಕಾರ ಕಿವಿಗೆ ಹಾಕಿಕೊಂಡಿರಲಿಲ್ಲ. ಆದರೀಗ ರೈತರ ಮೇಲೆ ಸರ್ಕಾರದ ಧೋರಣೆ ಖಂಡಿಸಿ ಬಂದ್ ಗೆ ಕರೆ ನೀಡಲಾಗಿದ್ದು, ಬಂದ್ ಹಾಗೂ ಬೃಹತ್ ಪ್ರತಿಭಟನೆ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಅನ್ನದಾತ ಸಜ್ಜಾಗಿದ್ದಾನೆ.
ಬಂದ್ ಗೆ ವರ್ತಕರು, ಹೋಟೇಲ್ ಮಾಲೀಕರು, ಆಟೋ, ಬಸ್ ಮಾಲೀಕರೂ ಬೆಂಬಲ ಸೂಚಿಸಿದ್ದಾರೆ. ಪ್ರಗತಿಪರರು, ದಲಿತ ಸಂಘಟನೆಗಳು, ಕನ್ನಡ ಪರ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳು ಬಂದ್ ಗೆ ಬೆಂಬಲ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಬೆಳಗ್ಗೆ 10 ಗಂಟೆಗೆ ಬೃಹತ್ ಪ್ರತಿಭಟನೆ ನಡೆಸಲು ಪ್ಲಾನ್ ಮಾಡಲಾಗಿದೆ. ಜಿಲ್ಲೆಯ ನಾನಾಕಡೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಸಾವಿರಾರು ರೈತರು, ಮಹಿಳೆಯರು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ. ಮೈಸೂರು-ಬೆಂಗಳೂರು ಹೆದ್ದಾರಿ ತಡೆಯುವ ಸಾಧ್ಯತೆಯೂ ಇದೆ.
ರೈತರಿಗೆ ಸಂಕಟ
ಕೇಂದ್ರ ಸರ್ಕಾರ ಘೋಷಿಸಿರುವ ಬೆಂಬಲ ಬೆಲೆ ಯೋಜನೆಯಡಿ ರಾಗಿ, ಜೋಳ, ಭತ್ತ ಮಾರಾಟ ಮಾಡಲು ನೋಂದಣಿ ಕೇಂದ್ರಗಳಿಗೆ ಹೆಸರು ನೋಂದಣಿಗಾಗಿ ತೆರಳಿದ ಅನ್ನದಾತರಿಗೆ ನಿರಾಸೆ ಎದುರಾಗಿ ನೋಂದಣಿಗಾಗಿ ಪರದಾಡುವಂತಾಯಿತು. ಹೌದು, ಡಿ.15 ರಿಂದಲೇ ಬೆಂಬಲ ಬೆಲೆ ಯೋಜನೆಯಡಿ ರಾಗಿ, ಭತ್ತ , ಜೋಳ ಮಾರಾಟಕ್ಕೆ ರೈತರು ನೋಂದಣಿ ಮಾಡಿಕೊಳ್ಳಬಹುದೆಂದು ಜಿಲ್ಲಾಡಳಿತ ಪ್ರಕಟಿಸಿದರೂ ಗುರುವಾರ ಜಿಲ್ಲೆಯ ಬಹುತೇಕ ನೋಂದಣಿ ಕೇಂದ್ರಗಳಲ್ಲಿ ರೈತರ ನೊಂದಣಿಗೆ ವಿವಿಧ ವಿಘ್ನಗಳು ಎದುರಾಗಿ ಬಂದ ದಾರಿಗೆ ಸುಂಕ ಇಲ್ಲ ಎಂಬಂತೆ ಬಂದ ರೈತರು ಬರಿಗೈಯಲ್ಲಿ ಹಿಂತಿರುಗಿದರು.
Mandya: ಮಂಡ್ಯ ನಗರ ಬಂದ್; ಮತ್ತೊಂದು ಸುತ್ತಿನ ಹೋರಾಟಕ್ಕೆ ರೈತರ ಕರೆ
ಅಧಿಕಾರಿಗಳ ನೂರೆಂಟು ಸಮಸ್ಯೆ
ಕಚೇರಿಯಲ್ಲಿ ಸೂಕ್ತ ಸಿಬ್ಬಂದಿ ಕೊರತೆ ಇದೆ. ಕಂಪ್ಯೂಟರ್ ಸಮಸ್ಯೆ ಇದೆ. ಸಫ್ಟ್ವೇರ್ ಅಪ್ಡೇಟ್ ಆಗಬೇಕು, ಕೋಡ್, ಪಾಸ್ವರ್ಡ್ ಕ್ರಿಯೆಟ್ ಆಗಬೇಕೆಂದು ಹೇಳಿ ರೈತರನ್ನು ವಾಪಸ್ಸು ಕಳುಹಿಸಿದ್ದಾರೆ. ರೈತರ ನೋಂದಣಿ ಕಾರ್ಯ ಸಮರ್ಪಕವಾಗಿ ಸರಿ ಸರಿಯಾಬೇಕಿದ್ದರೆ ಒಂದರೆಡು ದಿನ ಕಾಯಬೇಕಾಗುತ್ತದೆ ಎಂದು ಜಿಲ್ಲೆಯಲ್ಲಿ ರೈತರಿಂದ ಬೆಂಬಲ ಬೆಲೆ ಯೋಜನೆಯಡಿ ರಾಗಿ, ಭತ್ತ, ಜೋಳ ಸಂಗ್ರಹಣೆಗಾಗಿ ಸರ್ಕಾರದಿಂದ ನೇಮಕವಾಗಿರುವ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ