ಬೆಂಗಳೂರು: ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ (Mandya Assembly Constituency)) ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ (Former CM HD Kumaraswamy) ಮತ್ತು ಸಂಸದೆ ಸುಮಲತಾ ಅಂಬರೀಶ್ (MP Sumalatha Ambareesh) ಸ್ಪರ್ಧೆ ಮಾಡ್ತಾರೆ ವದಂತಿ ಬೆನ್ನಲ್ಲೇ ಕಾಂಗ್ರೆಸ್ ಅಲರ್ಟ್ ಆಗಿದೆ. ಈ ಹಿನ್ನೆಲೆ ಮಂಡ್ಯ ಕಾಂಗ್ರೆಸ್ ಘೋಷಿತ ಕಾಂಗ್ರೆಸ್ ಅಭ್ಯರ್ಥಿ ರವಿ ಗಣಿಗ ಅವರಿಗೆ ನೀಡಬೇಕಾಗಿದ್ದ ಬಿ ಫಾರಂ ತಡೆ ಹಿಡಿಯಲಾಗಿದೆ ಎಂದು ತಿಳಿದು ಬಂದಿದೆ. ಒಂದು ವೇಳೆ ಹೆಚ್ಡಿಕೆ ಮತ್ತು ಸುಮಲತಾ ಸ್ಪರ್ಧೆ ಮಾಡಿದ್ರೆ ಕಾಂಗ್ರೆಸ್ ನಟಿ, ಮಾಜಿ ಸಂಸದೆ ರಮ್ಯಾ ಅವರಿಗೆ ಟಿಕೆಟ್ ನೀಡುವ ಪ್ಲಾನ್ ಮಾಡಿಕೊಂಡಿದೆ ಎನ್ನಲಾಗಿದೆ.
ಒಂದು ವೇಳೆ ಹೆಚ್ ಡಿ ಕುಮಾರಸ್ವಾಮಿ ಮಂಡ್ಯದಿಂದ ಸ್ಪರ್ಧೆ ಮಾಡಿದ್ರೆ ಇಡೀ ಜಿಲ್ಲೆಯ ರಾಜಕಾರಣ ಬದಲಾಗಲಿದೆ ಎಂಬವುದು ರಾಜಕೀಯ ತಜ್ಞರ ವಿಮರ್ಶೆಯಾಗಿದೆ. ಇತ್ತ ಜೆಡಿಎಸ್ ಸಹ ಘೋಷಿತ ಅಭ್ಯರ್ಥಿ ಎಂ.ಶ್ರೀನಿವಾಸ್ ಅವರಿಗೂ ಬಿ ಫಾರಂ ನೀಡಿಲ್ಲ.
ಸೋಮವಾರ ಬಿಜೆಪಿ ಅಭ್ಯರ್ಥಿ ಚುನಾವಣಾ ಪ್ರಚಾರ ನಡೆಸಿದ್ದ ಸುಮಲತಾ ಅಂಬರೀಶ್ ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವ ಇಂಗಿತ ಹೊರ ಹಾಕಿದ್ದರು. ಸುಮಲತಾ ತೆಗೆದುಕೊಳ್ಳುವ ನಿರ್ಧಾರದ ಮೇಲೆ ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳು ಯಾರಾಗ್ತಾರೆ ಅನ್ನೋದು ಅಂತಿಮವಾಗಲಿದೆ.
ಸುಮಲತಾ ಆಪ್ತನ ಸ್ಫೋಟಕ ಹೇಳಿಕೆ
ನ್ಯೂಸ್ 18 ಜೊತೆ ಮಾತನಾಡಿದ ಸುಮಲತಾ ಆಪ್ತ ಹನಕೆರೆ ಶಶಿಕುಮಾರ್, ಮಂಡ್ಯದಿಂದ ಕುಮಾರಸ್ವಾಮಿ ಸ್ಪರ್ಧಿಸಿದ್ರೆ ಅವರ ವಿರುದ್ಧ ಸುಮಲತಾ ಸ್ಪರ್ಧೆ ಖಚಿತ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಆಸ್ತಿ ವಿವರ ಸೇರಿದಂತೆ ಬ್ಯಾಂಕ್ ಖಾತೆ ತೆರೆಯಲು ತಯಾರಿ ಮಾಡಿಕೊಳ್ಳಲಾಗಿದೆ. ಬೇರೆ ಜಿಲ್ಲೆಯ ಕುಮಾರಸ್ವಾಮಿ ನಮ್ಮ ಜಿಲ್ಲೆಗೆ ಬರುವ ಅವಶ್ಯಕತೆ ಇಲ್ಲ ಎಂದು ಹೇಳಿದರು.
ಸ್ವಾಭಿಮಾನಿ ಹೋರಾಟ
ಈಗಾಗಲೇ ಸ್ಪರ್ಧೆ ಬಗ್ಗೆ ಬಿಜೆಪಿ ಹೈಕಮಾಂಡ್ ಜೊತೆ ಕೂಡ ಚರ್ಚೆ ಮಾಡಲಾಗಿದೆ. ಹೈಕಮಾಂಡ್ ಕೂಡ ಸ್ಪರ್ಧೆಗೆ ಸಿದ್ಧತೆ ಮಾಡಿಕೊಳ್ಳುವಂತೆ ತಿಳಿಸಿದೆ.ಕುಮಾರಸ್ವಾಮಿ ನಾಮಪತ್ರ ಸಲ್ಲಿಸುತ್ತಿದ್ದಂತೆ ನಾವು ಕೂಡ ನಾಮಪತ್ರ ಸಲ್ಲಿಸಲಿದ್ದೇವೆ. ಸ್ವಾಭಿಮಾನಿ ಹೋರಾಟ ಮಾಡುತ್ತೇವೆ ಎಂದು ಹನಕೆರೆ ಶಶಿಕಕುಮಾರ್ ಹೇಳಿದರು.
ಇದನ್ನೂ ಓದಿ: Mithun Rai: ಬಿಜೆಪಿ ಭದ್ರಕೋಟೆಯಲ್ಲಿ ಡಿಕೆಶಿ ಆಪ್ತ; ಕಾಂಗ್ರೆಸ್‌ಗೆ ಸಿಹಿ ಕೊಡ್ತಾರಾ ಯುವ ರಾಜಕಾರಣಿ?
ಈಗಾಗಲೇ ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ರೂ ಬಿ ಫಾರಂ ನೀಡದೇ ಕಾದು ನೋಡುವ ತ ತಂತ್ರಕ್ಕೆ ಮೊರೆ ಹೋಗಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ