Mandya Politics: ಒಂದು ಕೆಲಸದ ಕ್ರೆಡಿಟ್ ಪಡೆಯಲು ರಾಜಕೀಯ ನಾಯಕರ ಸರ್ಕಸ್; ಯಾರು ಏನು ಹೇಳ್ತಾರೆ?

ಇದೀಗ ಸೇತುವೆಯೊಂದರ ನಿರ್ಮಾಣಕ್ಕೆ ಒಪ್ಪಿಗೆ ಸಿಕ್ಕಿರುವ ವಿಚಾರ ಮಂಡ್ಯದಲ್ಲಿ ಸದ್ದು ಮಾಡುತ್ತಿದೆ. ಈ ಸೇತುವೆ ನಿರ್ಮಾಣಕ್ಕೆ ಒಪ್ಪಿಗೆ ಸಿಕ್ಕಿರೋದು ತಮ್ಮಿಂದಲೇ ಎಂದು ಹೇಳುವ ಮೂಲಕ ಕಿತ್ತಾಡಿಕೊಳ್ಳುತ್ತಿದ್ದಾರೆ.

ಕ್ರೆಡಿಟ್ ಪಾಲಿಟಿಕ್ಸ್

ಕ್ರೆಡಿಟ್ ಪಾಲಿಟಿಕ್ಸ್

  • Share this:
ರಾಜ್ಯ ರಾಜಕಾರಣದಲ್ಲಿ ಮಂಡ್ಯ ರಾಜಕಾರಣ (Mandya Politics) ಸ್ವಲ್ಪ ಭಿನ್ನವಾಗಿಯೇ ಕಾಣಿಸಿಕೊಳ್ಳುತ್ತದೆ. ಇಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು (Development Work) ನಡೆದರೂ ಅದರ ಕ್ರೆಡಿಟ್ ಪಡೆಯಲು ಎಲ್ಲರೂ ಪ್ರಯತ್ನಿಸುತ್ತಾರೆ. ಪರಿಣಾಮ ರಾಜಕೀಯ ನಾಯಕರ (Political Leaders) ನಡುವೆ ವಾಕ್ಸಮರವೇ ನಡೆಯುತ್ತದೆ. ಈ ಹಿಂದೆಯೂ ಜೆಡಿಎಸ್ ನಾಯಕರು (JDS Leaders) ಮತ್ತು ಸಂಸದೆ ಸುಮಲತಾ ಅಂಬರೀಶ್ (MP Sumalatha Ambareesh) ಹಾಗೂ ಸಂಸದ ಪ್ರತಾಪ್ ಸಿಂಹ (MP Pratap Simha) ಮೂವರ ನಡುವೆ ಆಗಾಗ ಕ್ರೆಡಿಟ್ ಪಾಲಿಟಿಕ್ಸ್ (Credit Politics) ನಡೆಯುತ್ತದೆ. ಈ ಎಲ್ಲದರ ನಡುವೆ ಕಾಂಗ್ರೆಸ್ (Congress) ಸಹ ಕ್ರೆಡಿಟ್ ತೆಗೆದುಕೊಳ್ಳಲು ಪ್ರಯತ್ನಿಸುತ್ತದೆ.

ಇದೀಗ ಸೇತುವೆಯೊಂದರ ನಿರ್ಮಾಣಕ್ಕೆ ಒಪ್ಪಿಗೆ ಸಿಕ್ಕಿರುವ ವಿಚಾರ ಮಂಡ್ಯದಲ್ಲಿ ಸದ್ದು ಮಾಡುತ್ತಿದೆ. ಈ ಸೇತುವೆ ನಿರ್ಮಾಣಕ್ಕೆ ಒಪ್ಪಿಗೆ ಸಿಕ್ಕಿರೋದು ತಮ್ಮಿಂದಲೇ ಎಂದು ಹೇಳುವ ಮೂಲಕ ಕಿತ್ತಾಡಿಕೊಳ್ಳುತ್ತಿದ್ದಾರೆ.

ಮಂಡ್ಯ ಜಿಲ್ಲೆಯ ಮದ್ದೂರು ಬಳಿಯ ಶಿಂಷಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಸೇತುವೆ ನಿರ್ಮಾಣಕ್ಕಾಗಿ ಕಳೆದ 6 ತಿಂಗಳಿಂದ ಗ್ರಾಮಸ್ಥರು ಹೋರಾಟ ಮಾಡಿದ್ದರು. ಇದೀಗ ಕಾಮಗಾರಿಗೆ ಅನುಮೋದನೆ ಸಿಕ್ಕಿರೋದಕ್ಕೆ ಜನರು ಸಂತಸ ವ್ಯಕ್ತಪಡಿಸಿದ್ರೆ ಮತ್ತೊಂದೆಡೆ ಕ್ರೆಡಿಟ್ ತೆಗೆದುಕೊಳ್ಳಲು ಜನಪ್ರತಿನಿಧಿಗಳ ಸರ್ಕಸ್ ನಡೆಸುತ್ತಿದ್ದಾರೆ.

ಇದನ್ನೂ ಓದಿ:  ಪ್ರತಾಪ್ ಸಿಂಹ, ಸುಮಲತಾ ಅಂಬರೀಶ್ ನಡುವೆ ಹೆದ್ದಾರಿ ಪಾಲಿಟಿಕ್ಸ್

ಸುಮಲತಾ ಅಂಬರೀಶ್ ಹೇಳಿದ್ದೇನು?

ಮೈಸೂರು-ಬೆಂಗಳೂರು 10 ಪಥದ ರಾಷ್ಟ್ರೀಯ ಹೆದ್ದಾರಿ ಪೈಕಿ ಮದ್ದೂರು ತಾಲ್ಲೂಕಿನ ಕೆ.ಕೋಡಿಹಳ್ಳಿ ಗ್ರಾಮದ ಶಿಂಷಾ ನದಿ ಬಳಿ ಹಾದು ಹೋಗಿರುವ ಬೈಪಾಸ್ ರಸ್ತೆಗೆ ಸರ್ವಿಸ್ ರಸ್ತೆ ನಿರ್ಮಿಸದೆ ಕೇವಲ 6 ಪಥದ ರಸ್ತೆಗೆ ಮಾತ್ರ ಫೈಓವರ್ ಸೇತುವೆ ನಿರ್ಮಾಣ ಮಾಡಲಾಗಿದೆ ಎಂದು ಸಾರ್ವಜನಿಕರು ನನಗೆ ಮನವಿ ನೀಡಿದ ದಿನಾಂಕದಂದೇ ಆದ್ಯತೆ ಮೇರೆಗೆ ಪರಿಗಣಿಸಿ 2021 ಜುಲೈ ತಿಂಗಳಲ್ಲಿ ನಡೆದ ದಿಶಾ ಸಭೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದೆ.

ನಂತರ 2021 ಆಗಸ್ಟ್ ತಿಂಗಳಲ್ಲಿ ಮಾನ್ಯ ಕೇಂದ್ರ ಸಚಿವರಾದ ಶ್ರೀ ನಿತಿನ್ ಗಡ್ಕರಿ ಅವರನ್ನು ಖುದ್ದಾಗಿ ಭೇಟಿ ಮಾಡಿ ಪತ್ರದ ಮುಖೇನ ಮನವಿ ಸಲ್ಲಿಸಿದ್ದೆ, ವಸ್ತುಸ್ಥಿತಿಯನ್ನು ಸಚಿವರಿಗೆ ಅರ್ಥೈಸಿ ಈ ಸಮಸ್ಯೆಯನ್ನು ಪರಿಹರಿಸಲು ಕೋರಿದೆ. ಅನಂತರ ಪುನಃ 2021 ಸೆಪ್ಟೆಂಬರ್ ತಿಂಗಳಲ್ಲಿ ಮಾನ್ಯ ಕೇಂದ್ರ ಸಚಿವರಿಗೆ ಪತ್ರದ ಮುಖೇನ ಮನವಿ ಮಾಡಿದೆ.

ಇದಕ್ಕೆ ಧನಾತ್ಮಕವಾಗಿ ಸ್ಪಂದಿಸಿ ಶಿಂಷಾ ನದಿಗೆ ಅಡ್ಡಲಾಗಿ ಸರ್ವಿಸ್ ರಸ್ತೆ ನಿರ್ಮಾಣ ಕಾಮಗಾರಿಗೆ ಮಾನ್ಯ ಸಚಿವರು ಅನುಮೋದನೆ ನೀಡಿರುತ್ತಾರೆ ಎಂದು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಯೋಜನಾ ನಿರ್ದೇಶಕರಾದ ಶ್ರೀಧರ್ ಅವರು ದೂರವಾಣಿ ಮೂಲಕ ತಿಳಿಸಿರುತ್ತಾರೆ.



ಈ ಕಾಮಗಾರಿಗೆ ಅನುಮೋದನೆ ನೀಡಿದ ಮಾನ್ಯ ಕೇಂದ್ರ ಸಾರಿಗೆ ಸಚಿವರಾದ ನಿತಿನ್ ಗಡ್ಕರಿಜಿ ರವರಿಗೆ ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ರವರಿಗೆ ಮಂಡ್ಯ ಜಿಲ್ಲೆಯ ಜನತೆಯ ಪರವಾಗಿ ಅನಂತ ಅನಂತ ಧನ್ಯವಾದಗಳು ಎಂದು ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ:  ಅಂಬರೀಶ್ ಇರುವವರೆಗೂ ಯಾರಿಗೂ ಮಾತನಾಡುವ ಧೈರ್ಯ ಇರಲಿಲ್ಲ; ಪ್ರತಾಪ್ ಸಿಂಹ ಹೇಳಿಕೆಗೆ ಸುಮಲತಾ ತಿರುಗೇಟು

ಸುಮಲತಾ ಅಂಬರೀಶ್ ಗೆ ಡಿ.ಸಿ.ತಮ್ಮಣ್ಣ ತಿರುಗೇಟು

ಇನ್ನು ಸುಮಲತಾ ಅಂಬರೀಶ್ ಅವರ ಹೇಳಿಕೆಗೆ ಜೆಡಿಎಸ್ ಶಾಸಕ ಡಿ.ಸಿ.ತಮ್ಮಣ್ಣ ತಿರುಗೇಟು ನೀಡಿದ್ದಾರೆ. ಮಾಜಿ ಪ್ರಧಾನಿ  ಎಚ್.ಡಿ.ದೇವೇಗೌಡ ಹಾಗೂ ಸಂಸದ ಪ್ರತಾಪ್ ಸಿಂಹ ಒತ್ತಡದಿಂದಲೇ ಕಾಮಗಾರಿಗೆ ಒಪ್ಪಿಗೆ ಸಿಕ್ಕಿದೆ. ದೇವೇಗೌಡ್ರು ಪ್ರಧಾನಿಗೆ ಪತ್ರ ಬರೆದು ಸೇತುವೆ ನಿರ್ಮಾಣಕ್ಕೆ ಮನವಿ ಸಲ್ಲಿಸಿದ್ದರು. ಪ್ರತಾಪ್ ಸಿಂಹ ಕೂಡ ಕೇಂದ್ರದ ಗಮನ ಸೆಳೆದಿದ್ದಾರೆ ಎಂದು ಹೇಳುವ  ಮೂಲಕ ಸುಮಲತಾಗೆ ಡಿ.ಸಿ.ತಮ್ಮಣ್ಣ ಪರೋಕ್ಷ ಟಾಂಗ್ ನೀಡಿದ್ದಾರೆ.
Published by:Mahmadrafik K
First published: