ಮಂಡ್ಯ(ಫೆ.28): ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ರೌಡಿಗಳ ಆರ್ಭಟ ದಿನೇ ದಿನೇ ಜೋರಾಗುತ್ತಿದೆ. ಒಂದೇ ತಿಂಗಳಲ್ಲಿ ನಾಲ್ಕು ಹೆಣ ಉರುಳಿದ ಬೆನ್ನಲ್ಲೇ ರೌಡಿಶೀಟರ್ ಸೀಮೆಎಣ್ಣೆ ಕುಮಾರನ ಮೇಲೆ ಲಾಂಗ್, ಮಚ್ಚಿನಿಂದ ಬರ್ಬರವಾಗಿ ಹಲ್ಲೆ ಮಾಡಲಾಗಿದೆ.
ಕೆ.ಆರ್.ಪೇಟೆ ತಾಲೂಕಿನ ಸಂತೇಬಾಚಹಳ್ಳಿಯ ಹನುಮನಹಳ್ಳಿಗೆ ಕಾರಿನಲ್ಲಿ ಬಂದಿದ್ದ
ದುಷ್ಕರ್ಮಿಗಳು ಸೀಮೆಎಣ್ಣೆ ಕುಮಾರ್ ಮೇಲೆ ಮಚ್ಚಿನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಕುತ್ತಿಗೆ, ತಲೆ ಭಾಗಕ್ಕೆ ಗಂಭೀರ ಗಾಯವಾಗಿದೆ. ಗಾಯಾಳುವನ್ನು ಕೆ.ಆರ್. ಪೇಟೆಯ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ದೆಹಲಿ ಹಿಂಸಾಚಾರ: ಎಎಪಿ ಕಾರ್ಪೋರೇಟರ್ ವಿರುದ್ಧ ಕೊಲೆ ಪ್ರಕರಣ; ತಾಹೀರ್ಗಾಗಿ ಪೊಲೀಸರ ಶೋಧಕಾರ್ಯ
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸರ್ಕಲ್ ಇನ್ಸ್ ಪೆಕ್ಟರ್ ಸುಧಾಕರ್, ಕೆ.ಆರ್.ಪೇಟೆ ಟೌನ್ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಬ್ಯಾಟರಾಯಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹಳೆ ದ್ವೇಷದ ಹಿನ್ನೆಲೆ ದಾಳಿ ನಡೆಸಿದ್ದಾರೆ ಎಂದು
ಪೊಲೀಸರು ಶಂಕಿಸಿದ್ದಾರೆ. ಕೃತ್ಯ ಎಸಗಿದ ಆರೋಪಿಗಳ ಸೆರೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಈ ಸಂಬಂಧ ಕೆ.ಆರ್.ಪೇಟೆ ಟೌನ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bangalore Accident: ಬೆಂಗಳೂರಲ್ಲಿ ಬಿಎಂಟಿಸಿ ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಯುವಕ ಸಾವು! ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ