• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Narendra Modi ಸ್ವಾಗತಿಸಲು ಮಂಡ್ಯದಲ್ಲಿ ಹಾಕಿದ್ದ ಉರಿಗೌಡ-ನಂಜೇಗೌಡ ಹೆಸರಿನ ದ್ವಾರ ರಾತ್ರೋರಾತ್ರಿ ತೆರವು!

Narendra Modi ಸ್ವಾಗತಿಸಲು ಮಂಡ್ಯದಲ್ಲಿ ಹಾಕಿದ್ದ ಉರಿಗೌಡ-ನಂಜೇಗೌಡ ಹೆಸರಿನ ದ್ವಾರ ರಾತ್ರೋರಾತ್ರಿ ತೆರವು!

 ಉರಿಗೌಡ-ನಂಜೇಗೌಡ ಹೆಸರಿನ ದ್ವಾರ

ಉರಿಗೌಡ-ನಂಜೇಗೌಡ ಹೆಸರಿನ ದ್ವಾರ

ಇಂದು ಪ್ರಧಾನಿ ನರೇಂದ್ರ ಮೋದಿ ಮಂಡ್ಯ ಜಿಲ್ಲೆಯಲ್ಲಿ ರೋಡ್ ಶೋ ನಡೆಸಲಿದ್ದಾರೆ. ಹೀಗಾಗಿ ಅವರನ್ನು ಸ್ವಾಗತಿಸಲು ಮಂಡ್ಯ ಬಿಜೆಪಿ ಘಟಕದಿಂದ ಫ್ಯಾಕ್ಟರಿ ಸರ್ಕಲ್‌ನಲ್ಲಿ ಉರಿಗೌಡ ಮತ್ತು ದೊಡ್ಡನಂಜೇಗೌಡ ಮಹಾದ್ವಾರ ಹಾಕಲಾಗಿತ್ತು. ಈ ಹೆಸರಿನ ದ್ವಾರಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದ್ದಂತೆ ಅದನ್ನು ತೆರವು ಗೊಳಿಸಲಾಗಿದೆ.

ಮುಂದೆ ಓದಿ ...
  • Share this:

ಮಂಡ್ಯ: ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರನ್ನು ಸ್ವಾಗತಿಸಲು ಮಂಡ್ಯದಲ್ಲಿ (Mandya) ಹಾಕಲಾಗಿದ್ದ ‘ಉರಿಗೌಡ ಮತ್ತು ದೊಡ್ಡ ನಂಜೇಗೌಡ ಮಹಾದ್ವಾರ’ ಹೆಸರಿನ (Uri Gowda And Dodda Nanje Gowda) ದ್ವಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದಂತೆ ರಾತ್ರೋರಾತ್ರಿ ಈ ದ್ವಾರವನ್ನು ತೆರವುಗೊಳಿಸಲಾಗಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಮಂಡ್ಯ ಜಿಲ್ಲೆಯಲ್ಲಿ ರೋಡ್ ಶೋ (Narendra Modi Road Show) ನಡೆಸಲಿದ್ದಾರೆ. ಹೀಗಾಗಿ ಅವರನ್ನು ಸ್ವಾಗತಿಸಲು ಮಂಡ್ಯ ಬಿಜೆಪಿ ಘಟಕದಿಂದ ಫ್ಯಾಕ್ಟರಿ ಸರ್ಕಲ್‌ನಲ್ಲಿ ಉರಿಗೌಡ ಮತ್ತು ದೊಡ್ಡನಂಜೇಗೌಡ ಮಹಾದ್ವಾರ ಹಾಕಲಾಗಿತ್ತು. ಈ ಹೆಸರಿನ ದ್ವಾರಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದ್ದಂತೆ ಅದನ್ನು ತೆರವು ಗೊಳಿಸಲಾಗಿದೆ.


ಮಂಡ್ಯದ ಫ್ಯಾಕ್ಟರಿ ಸರ್ಕಲ್‌ನಲ್ಲಿ ಹಾಕಲಾಗಿದ್ದ ಉರಿಗೌಡ ಮತ್ತು ದೊಡ್ಡನಂಜೇಗೌಡ ಹೆಸರಿನ ಮಹಾದ್ವಾರವನ್ನು ತೆರವುಗೊಳಿಸಿದ್ದು ಮಾತ್ರವಲ್ಲದೇ, ಅದಕ್ಕೆ ಈಗ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಮಹಾದ್ವಾರ ಎಂದು ಹೆಸರು ಇಡಲಾಗಿದೆ. ಕಾಂಗ್ರೆಸ್, ಪ್ರಗತಿಪರ ಸಂಘಟನೆಗಳು, ಮಹಿಳಾ ಸಂಘಟನೆಗಳು ಸೇರಿದಂತೆ ಸಾಮಾಜಿಕ ಜಾಲತಾಣದಲ್ಲೂ ದೊಡ್ಡ ಮಟ್ಟದಲ್ಲಿ ವಿರೋಧ ವ್ಯಕ್ತವಾಗಿರುವುದರಿಂದ ಉರಿಗೌಡ ಮತ್ತು ದೊಡ್ಡನಂಜೇಗೌಡ ಹೆಸರಿನ ದ್ವಾರವನ್ನು ಕಿತ್ತು ಹಾಕಿರುವ ಮಂಡ್ಯ ಜಿಲ್ಲಾಡಳಿತ ಬಾಲಗಂಗಾಧರನಾಥ ಸ್ವಾಮೀಜಿ ಹೆಸರನ್ನು ಇಟ್ಟಿದೆ. ಆ ಮೂಲಕ ವಿರೋಧಕ್ಕೆ ಮಣಿದಿರುವ ಬಿಜೆಪಿಗೆ ಮುಖಭಂಗ ಆದಂತಾಗಿದೆ.


ಇದನ್ನೂ ಓದಿ: Tipu Sultan: ಟಿಪ್ಪುವಿನಿಂದ ಮೈಸೂರು ಉಳಿಸಿದ ನಂಜೇಗೌಡ, ಉರಿಗೌಡ ಕಾಂಗ್ರೆಸ್‌ಗೆ ಬೇಕಾಗಿಲ್ಲ: ಬಿಜೆಪಿ


ರಾಜಕೀಯ ಲಾಭಕ್ಕಾಗಿ ಉರಿಗೌಡ-ನಂಜೇಗೌಡ ಹೆಸರು ಮುನ್ನೆಲೆಗೆ


ಉರಿಗೌಡ ಮತ್ತು ದೊಡ್ಡನಂಜೇಗೌಡ ಎಂಬ ಕಾಲ್ಪನಿಕ ವ್ಯಕ್ತಿಗಳನ್ನು ನಿಜ ಎಂದು ಬಿಜೆಪಿಯವರು ಬಣ್ಣಿಸುತ್ತಿದ್ದಾರೆ. ರಾಜಕೀಯ ಲಾಭಕ್ಕಾಗಿ ಬಿಜೆಪಿ ಮುಖಂಡರು ಟಿಪ್ಪು ಸುಲ್ತಾನ್‌ನನ್ನು ಕೊಂದ ದೋಷವನ್ನು ಒಕ್ಕಲಿಗ ಸಮುದಾಯದ ತಲೆಗೆ ಕಟ್ಟಲು ಮುಂದಾಗಿದ್ದಾರೆ ಎಂದು ಈ ಹಿಂದಿನಿಂದಲೂ ವಿರೋಧ ಕೇಳಿ ಬಂದಿತ್ತು. ಇದೀಗ ಮಹಾದ್ವಾರಕ್ಕೂ ಉರಿಗೌಡ ಮತ್ತು ದೊಡ್ಡ ನಂಜೇಗೌಡ ಹೆಸರು ಇಟ್ಟಿದ್ದರಿಂದ ಉರಿಯುವ ಬೆಂಕಿಗೆ ತುಪ್ಪ ಸುರಿದಂತಾಗಿತ್ತು. ಈ ಹಿನ್ನೆಲೆ ಎಲ್ಲೆಡೆಯಿಂದ ಕೇಳಿಬಂದ ವಿರೋಧಕ್ಕೆ ಮಣಿದ ಬಿಜೆಪಿ ಹೆಸರನ್ನು ಬದಲಿಸಿ ಬೀಸೋ ದೊಣ್ಣೆಯಿಂದ ತಪ್ಪಿಸಿಕೊಂಡಿದೆ.


ಮಂಡ್ಯ ನಗರ ವ್ಯಾಪ್ತಿಯ ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರಧಾನಿ 1.8 ಕಿ.ಮೀ ರೋಡ್‌ ಶೋ ನಡೆಸಲಿದ್ದಾರೆ. ಈ ಮಾರ್ಗದಲ್ಲಿ ಒಟ್ಟು 4 ಮಹಾದ್ವಾರ ಅಳವಡಿಸಲಾಗಿದ್ದು, ರೋಡ್‌ ಶೋ ಆರಂಭವಾಗುವ ಪ್ರವಾಸಿ ಮಂದಿರದ ಬಳಿ ಸರ್‌. ಎಂ.ವಿಶ್ವೇಶ್ವರಯ್ಯ ಮಹಾದ್ವಾರ, ಜೆಸಿ ವೃತ್ತದಲ್ಲಿ ಕೆಂಪೇಗೌಡ, ಮಹಾವೀರ ವೃತ್ತದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಮಹಾದ್ವಾರ, ಫ್ಯಾಕ್ಟರಿ ಸರ್ಕಲ್‌ನಲ್ಲಿ ಉರಿಗೌಡ ಮತ್ತು ದೊಡ್ಡನಂಜೇಗೌಡ ಮಹಾದ್ವಾರ ಹಾಕಲಾಗಿತ್ತು.


ಇದನ್ನೂ ಓದಿ: Karnataka Bandh: ಕೆಪಿಸಿಸಿ ಅಧ್ಯಕ್ಷರೇನು ಸ್ವಾತಂತ್ರ್ಯ ಹೋರಾಟ ಮಾಡಿ ಜೈಲಿಗೆ ಹೋಗಿದ್ದರಾ? ಕಾಂಗ್ರೆಸ್ ಕರೆಕೊಟ್ಟ ಬಂದ್‌ಗೆ ಸಿಟಿ ರವಿ ವ್ಯಂಗ್ಯ!


'ಉರಿಗೌಡ-ನಂಜೇ ಗೌಡ ಬದುಕಿದ್ದಕ್ಕೆ ದಾಖಲೆಯೇ ಇಲ್ಲ'


ಉರಿಗೌಡ ಮತ್ತು ದೊಡ್ಡ ನಂಜೇಗೌಡರು ಟಿಪ್ಪು ಸುಲ್ತಾನ್‌ನನ್ನು ಕೊಂದರು ಎಂದು ಬಿಜೆಪಿ ನಾಯಕರು ಸಭೆ ಸಮಾರಂಭಗಳಲ್ಲಿ ಹೇಳಿಕೊಳ್ಳುತ್ತಿದ್ದರು. ಆದರೆ, ಈ ಇಬ್ಬರು ವ್ಯಕ್ತಿಗಳು ಬದುಕಿದ್ದ ಬಗ್ಗೆ ಯಾವುದೇ ದಾಖಲೆಗಳಿಲ್ಲ ಎಂದು ಇತಿಹಾಸ ತಜ್ಞರು ತಿಳಿಸಿದ್ದರು. ಆದರೂ, ಬಿಜೆಪಿ ನಾಯಕರು ಟಿಪ್ಪು ಸುಲ್ತಾನ್‌ನನ್ನು ರಾಜಕೀಯ ದಾಳ ಮಾಡಿಕೊಂಡಿದ್ದಾರೆ. ಗೌಡ ಸಮುದಾಯದ ಮಹಾನಾಯಕರಾದ ಉರಿಗೌಡ ಮತ್ತು ದೊಡ್ಡ ನಂಜೇಗೌಡರೇ ಟಿಪ್ಪುಅನ್ನು ಕೊಂದಿದ್ದಾಗಿ ವಾದ ಮಂಡಿಸುತ್ತಿದ್ದರು.


ಪ್ರಧಾನಿ ಮೋದಿ ರೋಡ್‌ ಶೋ ಮಾರ್ಗದ ಫ್ಯಾಕ್ಟರಿ ಸರ್ಕಲ್‌ನಲ್ಲಿ ಹಾಕಲಾಗಿದ್ದ ಉರಿಗೌಡ ಮತ್ತು ದೊಡ್ಡನಂಜೇಗೌಡ ಮಹಾದ್ವಾರ ತೆರವು ಮಾಡದಿದ್ದರೆ ಅಥವಾ ಹೆಸರು ಬದಲಾಯಿಸದಿದ್ದರೆ ಪ್ರತಿಭಟನೆ ನಡೆಸಲಾಗುವುದು ಎಂದು ಪ್ರಗತಿಪರ ಸಂಘಟನೆಗಳು ಎಚ್ಚರಿಕೆ ನೀಡಿದ್ದವು. ಜತೆಗೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮುಖಂಡರು ಕೂಡಾ ವಿರೋಧ ವ್ಯಕ್ತಪಡಿಸಿದ್ದರು.

Published by:Avinash K
First published: