ಇಂಟರ್ನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ: ತಲೆಮರೆಸಿಕೊಂಡಿದ್ದ ವಕೀಲ 2 ತಿಂಗಳ ಬಳಿಕ ಪ್ರತ್ಯಕ್ಷ!

ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ ಪ್ರಕರಣದಲ್ಲಿ ಪೊಲೀಸರಿಂದ ತಲೆಮರೆಸಿಕೊಂಡಿದ್ದ ಆರೋಪಿ ಮಂಗಳೂರಿನ ವಕೀಲ ರಾಜೇಶ್ ಭಟ್ ಕೊನೆಗೂ ಶರಣಾಗಿದ್ದಾರೆ.

ಆರೋಪಿ ರಾಜೇಶ್

ಆರೋಪಿ ರಾಜೇಶ್

  • Share this:
ಮಂಗಳೂರು:  ಕಾನೂನು ವಿದ್ಯಾರ್ಥಿನಿಗೆ ( Law Student) ಲೈಂಗಿಕ ಕಿರುಕುಳ (Sexual harassment) ನೀಡಿದ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ಆರೋಪಿ ವಕೀಲ  ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ವಕೀಲ K.S.N. ರಾಜೇಶ್  ಮಂಗಳೂರಿನ ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ವಕೀಲ ರಾಜೇಶ್ ಅವರು ತಮ್ಮ ಕಚೇರಿಯಲ್ಲಿ ಇಂಟರ್ನ್​ಶಿಪ್​ಗೆ ಬಂದಿದ್ದ ಕಾನೂನು ಕಾಲೇಜಿನ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು. ಜೊತೆಗೆ ದೂರು ನೀಡದಂತೆ ಬೆದರಿಕೆ ಹಾಕಿದ್ದರು ಎಂದು ಸಂತ್ರಸ್ತ ವಿದ್ಯಾರ್ಥಿನಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದರೆ, ಅದಾಗಲೇ ವಕೀಲ ರಾಜೇಶ್ ನಾಪತ್ತೆಯಾಗಿದ್ದರು. ವಕೀಲ ರಾಜೇಶ್ ಬ್ಯಾಂಕ್ ಖಾತೆ ಸ್ಥಗಿತಗೊಳಿಸಿ, ಲುಕ್​​ಔಟ್ ನೋಟಿಸ್ ಜಾರಿಗೊಳಿಸಲಾಗಿತ್ತು. ಆರೋಪಿ ವಕೀಲರಿಗೆ ಸಹಕಾರ ನೀಡಿದ ಕಾರಣಕ್ಕೆ ವಕೀಲನ ಪತ್ನಿ ಸೇರಿದಂತೆ ಹಲವರನ್ನು ಬಂಧಿಸಲ್ಪಟ್ಟಿದ್ದರೂ ಆರೋಪಿ ಪತ್ತೆಯಾಗಿರಲಿಲ್ಲ. ಇದೀಗ ಆರೋಪಿ ಘಟನೆ ನಡೆದ ತಿಂಗಳುಗಳ ಬಳಿಕ ನ್ಯಾಯಾಲಯದ ಮುಂದೆ ಶರಣಾಗಿದ್ದಾರೆ.

ರಾಜೇಶ್ ಭಟ್‌ಗೆ ನ್ಯಾಯಾಂಗ ಬಂಧನ
ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ ಪ್ರಕರಣದಲ್ಲಿ ಪೊಲೀಸರಿಂದ ತಲೆಮರೆಸಿಕೊಂಡಿದ್ದ ಆರೋಪಿ ಮಂಗಳೂರಿನ ವಕೀಲ ರಾಜೇಶ್ ಭಟ್ ಕೊನೆಗೂ ಶರಣಾಗಿದ್ದಾರೆ. ಮಂಗಳೂರಿನ ಜೆ.ಎಂ.ಎಫ್.ಸಿ ಕೋರ್ಟ್‌ಗೆ ಶರಣಾಗಿದ್ದ ರಾಜೇಶ್ ಈ ನಡುವೆ ಮಧ್ಯಂತರ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದರು. ಆದ್ರೆ ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ ರಾಜೇಶ್ ಭಟ್‌ಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಇದನ್ನೂ ಓದಿ: ತಂದೆಯಿಂದಲೇ ಮಗಳ ಮೇಲೆ Rape.. ಅತ್ಯಂತ ವೇಗವಾಗಿ ವಿಚಾರಣೆ ನಡೆಸಿ, ಶಿಕ್ಷೆ ವಿಧಿಸಿದ ಕೋರ್ಟ್

ಅನಾರೋಗ್ಯದ ಕಾರಣ ನೀಡಿ ಮಧ್ಯಂತರ ಜಾಮೀನಿಗೆ ಯತ್ನ 

ತನ್ನದೇ ಕಚೇರಿಯಲ್ಲಿ ಇಂಟರ್ನ್‌ಶಿಪ್ ಮಾಡುತ್ತಿದ್ದ ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಮಂಗಳೂರಿನ ಖ್ಯಾತ ವಕೀಲ ರಾಜೇಶ್ ಭಟ್ ಕೊನೆಗೂ ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ವಕೀಲ ರಾಜೇಶ್ ಭಟ್ ವಿರುದ್ದ ಅಕ್ಟೋಬರ್ 19ರಂದು ಸಂತ್ರಸ್ಥ ಯುವತಿ ಲೈಂಗಿಕ ಕಿರುಕುಳದ ದೂರು ನೀಡಿದ್ದಳು. ಪ್ರಕರಣ ದಾಖಲಾಗುತ್ತಿದ್ದಂತೆ ತಲೆ ಮರೆಸಿಕೊಂಡಿದ್ದ ಆರೋಪಿ ರಾಜೇಶ್ ಭಟ್ ಬರೋಬ್ಬರಿ ಎರಡು ತಿಂಗಳ ಬಳಿಕ  ಮಂಗಳೂರಿನ ಮೂರನೇ ಜೆ.ಎಂ.ಎಫ್.ಸಿ ಕೋರ್ಟ್‌ಗೆ ಶರಣಾಗಿದ್ದಾರೆ. ಈ ನಡುವೆ ಅನಾರೋಗ್ಯದ ಕಾರಣ ನೀಡಿ ಮಧ್ಯಂತರ ಜಾಮೀನಿಗೆ ಆರೋಪಿ ರಾಜೇಶ್ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ಆದ್ರೆ ಮಧ್ಯಂತರ ಜಾಮೀನು ತಿರಸ್ಕರಿಸಿದ ನ್ಯಾಯಾಲಯ ರಾಜೇಶ್ ಭಟ್‌ಗೆ ನ್ಯಾಯಾಂಗ ಬಂಧನ ವಿಧಿಸಿದೆ. ವೈದ್ಯಕೀಯ ಚಿಕಿತ್ಸೆ ನೀಡುವಂತೆ ಜೈಲಾಧಿಕಾರಿಗಳಿಗೆ ನ್ಯಾಯಾಲಯ ಸೂಚಿಸಿದೆ.

ಜಾಮೀನು ನಿರಾಕರಣೆ 
ಲೈಂಗಿಕ ಕಿರುಕುಳದ ಆರೋಪಿ ನ್ಯಾಯವಾದಿ ಕೆಎಸ್ಎನ್ ರಾಜೇಶ್ ಭಟ್ ಗೆ ನ್ಯಾಯಾಲಯ ನ್ಯಾಯಾಂಗ ಬಂಧನ ಆದೇಶಿಸಿದ್ದು, ಜಾಮೀನು ತಿರಸ್ಕರಿಸಿದೆ.ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಎದುರಿಸುತ್ತಿದ್ದ ನ್ಯಾಯವಾದಿ ಕೆಎಸ್ಎನ್ ರಾಜೇಶ್ ಭಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ  ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದರು. 2 ತಿಂಗಳ ಬಳಿಕ ಇದೀಗ ಅವರು ಇಂದು ಮಂಗಳೂರಿನ ನ್ಯಾಯಾಲಯಕ್ಕೆ ಶರಣಾಗಿದ್ದಾರೆ.ಅಲ್ಲದೆ ಆರೋಪಿ ರಾಜೇಶ್ ಭಟ್ ಗೆ ಆರೋಗ್ಯ ತೊಂದರೆ ಇರುವುದರಿಂದ ವೈದ್ಯಕೀಯ ಚಿಕಿತ್ಸೆ ನೀಡುವಂತೆ ನ್ಯಾಯಾಧೀಶರು ಸೂಚನೆ ನೀಡಿದ್ದಾರೆ.
ಮೂಲಗಳ ಪ್ರಕಾರ ವಕೀಲ ರಾಜೇಶ್ ಭಟ್ ಆಂಬುಲೆನ್ಸ್‌ನಲ್ಲಿಯೇ ನ್ಯಾಯಾಲಯಕ್ಕೆ ಶರಣಾಗಿದ್ದ ಎಂಬ ಮಾಹಿತಿಯಿದೆ. ಆದ್ರೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಬಳಿಕ ಪೊಲೀಸ್ ವಾಹನದಲ್ಲೇ ಆರೋಪಿಯನ್ನು ಕರೆದೊಯ್ಯಲಾಯಿತು.

ನಾಳೆ  ಜಾಮೀನು ಅರ್ಜಿಯ ವಿಚಾರಣೆ

ಈ ನಡುವೆ ಇಂದು ಪ್ರಧಾನ ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದ್ದು ಪೊಲೀಸರು ಆರೋಪಿ ವಕೀಲ ರಾಜೇಶ್ ಭಟ್‌ನನ್ನು ಪೊಲೀಸ್ ಕಸ್ಟಡಿಗೆ ಕೇಳುವ ನಿರ್ಧಾರ ಮಾಡಿದ್ದಾರೆ. ಸಂತ್ರಸ್ಥ ಯುವತಿ ವಕೀಲ ರಾಜೇಶ್ ಭಟ್ ವಿರುದ್ದ ಸಾಕಷ್ಟು ಆರೋಪ ಮಾಡಿರುವುದರಿಂದ ಆ ಎಲ್ಲದರ ಬಗ್ಗೆಯೂ ಪೊಲೀಸ್ ವಿಚಾರಣೆ ನಡೆಯಲಿದೆ. ರಾಜೇಶ್ ಆರೋಗ್ಯ ತಪಾಸಣೆ ನಡೆಸುವಂತೆ ಜೈಲಾಧಿಕಾರಿಗಳಿಗೆ  ನ್ಯಾಯಾಲಯ ಸೂಚಿಸಿದ್ದರಿಂದ,ಮಂಗಳೂರಿನ ವೆನ್ ಲಾಕ್ ಜಿಲ್ಲಾಸ್ಪತ್ರೆಯಲ್ಲಿ ರಾಜೇಶ್ ಭಟ್ ಮೆಡಿಕಲ್ ಚೆಕಪ್ ನಡೆಸಲಾಗಿದೆ..ಮೆಡಿಕಲ್ ಟೆಸ್ಟ್ ಬಳಿಕ ಕಾರಾಗೃಹಕ್ಕೆ ಪೊಲೀಸರು ಕರೆದೊಯ್ದಿದ್ದು, ಮಂಗಳವಾರ ಪ್ರಧಾನ ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದೆ.

ಇದನ್ನೂ ಓದಿ: ಬೆಂಗಳೂರಲ್ಲಿ ನಿಶ್ಚಿತಾರ್ಥ ಆಗಿರೋ ಯುವತಿಯ ಬೆತ್ತಲೆ ಫೋಟೋಗಳನ್ನು ಹರಿಬಿಟ್ಟ ಹಳೆ ಲವರ್!

ಎರಡು ತಿಂಗಳಿನಿಂದ ನಾಪತ್ತೆಯಾಗಿದ್ದ ರಾಜೇಶ್ ಭಟ್ ಸಡನ್ ಆಗಿ ಪ್ರತ್ಯಕ್ಷವಾಗಿದ್ದು ಎಲ್ಲಿಂದ ಎಂಬ ಕುತೂಹಲ ಎಲ್ಲರಲ್ಲೂ ಇದೆ. ರಾಜೇಶ್ ಮೇಲೆ ಇನ್ನಷ್ಟು ಆರೋಪಗಳು ಸಹ ಕೇಳಿ ಬಂದಿದ್ದು ಆದ್ರೆ ದೂರು, ಪೂರಕ ಸಾಕ್ಷ್ಯಗಳು ಇಲ್ಲದೇ ಇರುವುದರಿಂದ ಪೊಲೀಸರು ಆ ಬಗ್ಗೆ ಯಾವುದೇ ವಿಚಾರಣೆ ನಡೆಸಲು ಮುಂದೆ ಬಂದಿಲ್ಲ. ಒಟ್ಟಿನಲ್ಲಿ ಈ ಲೈಂಗಿಕ ದೌರ್ಜನ್ಯ ಪ್ರಕರಣ ಮುಂದೆ ಯಾವ ತಿರುವು ಪಡೆದುಕೊಳ್ಳುತ್ತೆ ಎಂದು ಕಾದುನೋಡಬೇಕಿದೆ.
Published by:Kavya V
First published: