ಮಂಗಳೂರು: ಡಿಪ್ಲೊಮಾ ಕೋರ್ಸ್ ಮಾಡಲು ಉದ್ದೇಶಿಸಿರುವ ವಿದ್ಯಾರ್ಥಿನಿಯರಿಗೆ (Students) ಉತ್ತಮ ಅವಕಾಶ. ಮಹಿಳಾ ಪಾಲಿಟೆಕ್ನಿಕ್ನಲ್ಲಿ ಡಿಪ್ಲೊಮಾ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ಡಿಪ್ಲೊಮಾ ಕೋರ್ಸ್ ಗಳಿಗಾಗಿ ಕೂಡಲೇ ಅರ್ಜಿ ಸಲ್ಲಿಸುವ ಮೂಲಕ ಉತ್ತಮ ಶಿಕ್ಷಣವನ್ನು(Good Education) ಪಡೆಯಬಹುದಾಗಿದೆ. ಹಾಗಿದರೆ ಅಭ್ಯರ್ಥಿಗಳು ಏನು ಮಾಡಬೇಕು? ಯಾರನ್ನ ಸಂಪರ್ಕಿಸಬೇಕು? ಇದೆಲ್ಲದರ ಮಾಹಿತಿ ಇಲ್ಲಿದೆ.
ಯಾರೆಲ್ಲ ಅರ್ಜಿ ಸಲ್ಲಿಸಬಹುದು?
ಸರಕಾರಿ ಮಹಿಳಾ ಪಾಲಿಟೆಕ್ನಿಕ್ ಶಿಕ್ಷಣ ಸಂಸ್ಥೆಯು ಮಂಗಳೂರು ನಗರದ ಬೋಂದೆಲ್ ನಲ್ಲಿದ್ದು, ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಕೆ ಹೇಗೆ?
ಆಸಕ್ತ ವಿದ್ಯಾರ್ಥಿನಿಯರು ಬೊಂದೇಲ್ನಲ್ಲಿರುವ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಅನ್ನು ಸಂಪರ್ಕಿಸಿ, ನೇರವಾಗಿ ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಬಹುದು.
ಅರ್ಜಿ ಸಲ್ಲಿಕೆ ಕೊನೆ ಯಾವಾಗ?
ಮೇ 18 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದ್ದು ಅದರ ಮುಂಚಿತವಾಗಿ ಅರ್ಜಿ ಸಲ್ಲಿಸಬೇಕಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ
ಹೆಚ್ಚಿನ ಮಾಹಿತಿಗೆ ಕಚೇರಿಯ ದೂರವಾಣಿ ಸಂಖ್ಯೆ 0824-2482334, 9448869332, 9844744845 ಅನ್ನು ಸಂಪರ್ಕಿಸವಂತೆ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ನ ಪ್ರಾಂಶುಪಾಲರು ತಿಳಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ