ಚೇತರಿಕೆ ಕಾಣುತ್ತಿರುವ Coastal Tourism ಮೇಲೆ ಮತ್ತೆ Corona ಕರಿನೆರಳು; ಕರಾವಳಿ ಭಾಗದಲ್ಲಿ ಆತಂಕ

ಕೊರೊನಾ ಮೊದಲ ಹಾಗೂ ಎರಡನೇ ಅಲೆಗೆ ಜಿಲ್ಲೆಯ ಪ್ರವಾಸೋದ್ಯಮವೇ ನೆಲಕಚ್ಚಿತ್ತು.‌ ಸದ್ಯ ಕೊರೋನಾ ಕಡಿಮೆಯಾದ ಹಿನ್ನಲೆ ಪ್ರವಾಸೋದ್ಯಮ ಮತ್ತೆ ಸುಧಾರಿಸಿಕೊಳ್ಳುತ್ತಿತ್ತು. ಆದರೆ ರಾಜ್ಯದ ಕೆಲ ಜಿಲ್ಲೆಯಲ್ಲಿ ಕೊರೋನಾ ಸಂಖ್ಯೆ ಹೆಚ್ಚಾಗುತ್ತಿರುವುದು, ಪ್ರವಾಸೋದ್ಯಮ ಚಟುವಟಿಕೆ ಮತ್ತೆ ಸ್ಥಗಿತಗೊಳ್ಳುವ ಆತಂಕ ಕಾಡುತ್ತಿದೆ.

ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

  • Share this:
ಕಾರವಾರ: ಉತ್ತರಕನ್ನಡ ಜಿಲ್ಲೆ (Uttara Kannada) ತಾನು ಹೊಂದಿರುವ ಹತ್ತು ಹಲವು ಪ್ರವಾಸಿ ತಾಣಗಳ (Tourist Places) ಮೂಲಕವೇ ರಾಜ್ಯ, ಹೊರರಾಜ್ಯ ಜೊತೆಗೆ ಸಾಕಷ್ಟು ಸಂಖ್ಯೆಯಲ್ಲಿ ವಿದೇಶಿ ಪ್ರವಾಸಿಗರನ್ನ(Foreign Tourists)  ಸೆಳೆದಿದೆ. ಕಳೆದೆರಡು ವರ್ಷಗಳಿಂದ ಕೊರೊನಾ ಅಟ್ಟಹಾಸ ಜಿಲ್ಲೆಯ ಪ್ರವಾಸೋದ್ಯಮ (Tourism) ಚಟುವಟಿಕೆಗೆ ಹೊಡೆತ ನೀಡಿತ್ತು. ಸದ್ಯ ಪ್ರವಾಸಿಗರ ಆಗಮನದೊಂದಿಗೆ ಸುಧಾರಿಸಿಕೊಳ್ಳುತ್ತಿರುವ ಪ್ರವಾಸೋದ್ಯಮಕ್ಕೆ ಕೊರೊನಾ ಮೂರನೇ ಅಲೆಯ ಆತಂಕ ಎದುರಾಗಿದೆ. ರಾಜ್ಯದಲ್ಲಿಯೇ ಉತ್ತರಕನ್ನಡ ಜಿಲ್ಲೆಯನ್ನ ಪ್ರವಾಸಿಗರ ಸ್ವರ್ಗ ಎಂದು ಕರೆಯಲಾಗುತ್ತದೆ. ಒಂದು ಕಡೆ ಕರಾವಳಿಯಲ್ಲಿ ಸಾಕಷ್ಟು ಕಡಲ ತೀರಗಳು, ಇನ್ನೊಂದೆಡೆ ಘಟ್ಟದ ಮೇಲಿನ ತಾಲೂಕುಗಳಲ್ಲಿನ ಜಲಪಾತಗಳು, ದೇವಸ್ಥಾನ, ರೆಸಾರ್ಟ್, ಹೀಗೆ ಹತ್ತಾರು ಪ್ರವಾಸಿ ತಾಣಗಳು ಪ್ರತಿವರ್ಷ ಲಕ್ಷಾಂತರ ಪ್ರವಾಸಿಗರನ್ನ ಜಿಲ್ಲೆಯತ್ತ ಕೈಬೀಸಿ ಕರೆಯುತ್ತವೆ. 

ಮತ್ತೆ ಪ್ರವಾಸೋದ್ಯಮ ನೆಲಕಚ್ಚುವ ಆತಂಕ

ಕಳೆದೆರಡು ವರ್ಷದಲ್ಲಿ ಕೊರೊನಾ ಮೊದಲ ಹಾಗೂ ಎರಡನೇ ಅಲೆಗೆ ಜಿಲ್ಲೆಯ ಪ್ರವಾಸೋದ್ಯಮವೇ ನೆಲಕಚ್ಚಿತ್ತು.‌ ಸದ್ಯ ಕೊರೋನಾ ಕಡಿಮೆಯಾದ ಹಿನ್ನಲೆ ಪ್ರವಾಸೋದ್ಯಮ ಮತ್ತೆ ಸುಧಾರಿಸಿಕೊಳ್ಳುತ್ತಿತ್ತು. ಆದರೆ ರಾಜ್ಯದ ಕೆಲ ಜಿಲ್ಲೆಯಲ್ಲಿ ಕೊರೋನಾ ಸಂಖ್ಯೆ ಹೆಚ್ಚಾಗುತ್ತಿರುವುದು, ಪ್ರವಾಸೋದ್ಯಮ ಚಟುವಟಿಕೆ ಮತ್ತೆ ಸ್ಥಗಿತಗೊಳ್ಳುವ ಆತಂಕ ಕಾಡುತ್ತಿದೆ. ವರ್ಷಾಂತ್ಯದ ಡಿಸೆಂಬರ್ ತಿಂಗಳಲ್ಲಿ ಪ್ರತಿವರ್ಷ ಸಾಕಷ್ಟು ಪ್ರವಾಸಿಗರು ಜಿಲ್ಲೆಗೆ ಭೇಟಿ ನೀಡುತ್ತಿದ್ದರು. ಅಲ್ಲದೇ ಇದೀಗ ಮದುವೆಗಳ ಸೀಸನ್ ಸಹ ಆಗಿರುವುದರಿಂದ ಸಾಕಷ್ಟು ಸಂಖ್ಯೆಯಲ್ಲಿ ಹೊರಜಿಲ್ಲೆ, ರಾಜ್ಯಗಳಿಂದ ಜನರು ಆಗಮಿಸುತ್ತಾರೆ. ಆದರೆ ಪ್ರವಾಸಿಗರ ಆಗಮನದೊಂದಿಗೆ ಮತ್ತೆ ಕೊರೊನಾ ಪ್ರಕರಣಗಳು ಹೆಚ್ಚಾದಲ್ಲಿ ಪ್ರವಾಸಿಗರ ಆಗಮನದ ಮೇಲೆ ಪರಿಣಾಮ ಬೀರಲಿದ್ದು ಮತ್ತೆ ಪ್ರವಾಸೋದ್ಯಮ ನೆಲಕಚ್ಚುವ ಆತಂಕವನ್ನ ಜನರು ವ್ಯಕ್ತಪಡಿಸಿದ್ದಾರೆ.‘

ಪ್ರವಾಸೋದ್ಯಮ ನಂಬಿಕೊಂಡಿರುವವರಿಗೆ ಶಾಕ್​ 

ಇನ್ನು ಜಿಲ್ಲೆಯ ದಾಂಡೇಲಿ, ಗೋಕರ್ಣ, ಮುರ್ಡೇಶ್ವರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಪ್ರವಾಸೋದ್ಯಮ ಚಟುವಟಿಕೆ ನಂಬಿಕೊಂಡೇ ಸಾವಿರಾರು ಮಂದಿ ಜೀವನ ಸಾಗಿಸುತ್ತಿದ್ದಾರೆ. ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಹಲವರಿಗೆ ಪ್ರವಾಸೋದ್ಯಮ ಉದ್ಯೋಗ ನೀಡಿದೆ. ಸದ್ಯ ಕೊರೋನಾದಿಂದ ಪ್ರವಾಸೋದ್ಯಮಕ್ಕೆ ಹಿನ್ನಡೆಯಾದರೆ ಸಾಕಷ್ಟು ಕಷ್ಟವಾಗಲಿದೆ. ಅಲ್ಲದೇ ಕಳೆದ ಬಾರಿಯಂತೆ ಕೊರೊನಾ ಹೆಚ್ಚಳವಾದ ಬಳಿಕ ಕಟ್ಟುನಿಟ್ಟಿನ ಕ್ರಮಗಳನ್ನ ಕೈಗೊಂಡಲ್ಲಿ ಪ್ರವಾಸೋದ್ಯಮದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದ್ದು ಈ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕು ಅನ್ನೋದು ಸ್ಥಳೀಯರ ಅಭಿಪ್ರಾಯ.

ಇದನ್ನೂ ಓದಿ: International Flights: ಡಿಸೆಂಬರ್ 15 ರಿಂದ ಅಂತರಾಷ್ಟ್ರೀಯ ವಿಮಾನಗಳನ್ನು ಆರಂಭಿಸಲಿರುವ ಭಾರತ; ಅಪಾಯದ ಪಟ್ಟಿಯಲ್ಲಿರುವ 14 ರಾಷ್ಟ್ರಗಳು

ಇನ್ನು ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ತೊಂದರೆಯಾಗದಂತೆ ಕೋವಿಡ್ ನಿಯಮಾವಳಿಗಳನ್ನ ಜಾರಿಗೆ ಮಾಡುತ್ತೇವೆ. ಈಗಾಗಲೇ ದೇವಸ್ಥಾನಗಳಂತಹ ಸ್ಥಳಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ಹದಿನೈದು ದಿನಕ್ಕೊಮ್ಮೆ ಕೋವಿಡ್ ತಪಾಸಣೆ ಮಾಡಿಸಿಕೊಳ್ಳಲು ಸೂಚನೆ ನೀಡಲಾಗಿದ್ದು ಜನರು ಸಹ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಅಂತಾರೇ ಜಿಲ್ಲಾಧಿಕಾರಿಗಳು.  ಹೊಸವರ್ಷವನ್ನ ಸ್ವಾಗತಿಸಲು ಜಿಲ್ಲೆಯಲ್ಲಿ ಪ್ರವಾಸಿ ತಾಣಗಳು ಸಜ್ಜಾಗಿವೆ. ಸಾಕಷ್ಟು ಸಂಖ್ಯೆಯಲ್ಲಿ ಪ್ರವಾಸಿಗರು ಬರುವ ನಿರೀಕ್ಷೆಯಿದ್ದು, ಒಂದೊಮ್ಮೆ ಕೋವಿಡ್ ಹೆಚ್ಚಾದರೆ ಈ ಬಾರಿ ಹೊಸ ವರ್ಷಾಚರಣೆಗೂ ತೊಡಕಾಗಲಿದೆ ಎನ್ನುವುದು ಜನರ ಅಭಿಪ್ರಾಯ. ಒಟ್ಟಿನಲ್ಲಿ ಕೋವಿಡ್ ಮೂರನೇ ಅಲೆ ಉತ್ತರಕನ್ನಡ ಜಿಲ್ಲೆಯ ಪ್ರವಾಸೋದ್ಯಮ ಚಟುವಟಿಕೆಗೆ ಆತಂಕ ಸೃಷ್ಟಿ ಮಾಡಿದ್ದು, ಸರ್ಕಾರ, ಜನರು ಕೋವಿಡ್ ನಿಯಂತ್ರಣಕ್ಕೆ ಯಾವ ನಿಲುವು ತಾಳಲಿದ್ದಾರೆ ಎನ್ನುವುದನ್ನ ಕಾದು ನೋಡಬೇಕಾಗಿದೆ.
Published by:Kavya V
First published: