• Home
 • »
 • News
 • »
 • state
 • »
 • Dharmasthala Lakshadeepotsava: 5 ದಿನಗಳ ಕಾಲ ಧರ್ಮಸ್ಥಳ ಲಕ್ಷದೀಪೋತ್ಸವ; ಇಲ್ಲಿದೆ ಪ್ರತಿದಿನದ ಕಾರ್ಯಕ್ರಮ ವಿವರ

Dharmasthala Lakshadeepotsava: 5 ದಿನಗಳ ಕಾಲ ಧರ್ಮಸ್ಥಳ ಲಕ್ಷದೀಪೋತ್ಸವ; ಇಲ್ಲಿದೆ ಪ್ರತಿದಿನದ ಕಾರ್ಯಕ್ರಮ ವಿವರ

ಧರ್ಮಸ್ಥಳ

ಧರ್ಮಸ್ಥಳ

ಐದು ದಿವಸಗಳ ಕಾಲ ನಡೆಯಲಿರುವ ಲಕ್ಷದೀಪೋತ್ಸವ ಕಾರ್ಯಕ್ರಮದ ಮೆರುಗು ಹೇಗಿರಲಿದೆ ಅನ್ನೋ ಮಾಹಿತಿ‌ ಇಲ್ಲಿದೆ.

 • News18 Kannada
 • Last Updated :
 • Mangalore, India
 • Share this:

  ದಕ್ಷಿಣ ಕನ್ನಡ: ಧರ್ಮಸ್ಥಳ ಕ್ಷೇತ್ರದಲ್ಲಿ ನಡೆಯುವ ಲಕ್ಷದೀಪೋತ್ಸವಕ್ಕೆ (Dharmasthala Lakshadeepotsava) ದಿನ‌‌ ನಿಗದಿಪಡಿಸಲಾಗಿದೆ. ದೀಪಗಳಿಂದ ಕಂಗೊಳಿಸಲು ಶ್ರೀಕ್ಷೇತ್ರ ಧರ್ಮಸ್ಥಳವು (Sri Kshetra Dharmasthala) ಸಜ್ಜಾಗಿದೆ. ಮಂಜುನಾಥ ಸ್ವಾಮಿಯ ಸನ್ನಿಧಾನದಲ್ಲಿ  ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಹಾಗೂ ಸರ್ವಧರ್ಮ ಮತ್ತು ಸಾಹಿತ್ಯ ಸಮ್ಮೇಳನದ 90ನೇ ಅಧಿವೇಶನವು ನವೆಂಬರ್ 19 ರಿಂದ ನವೆಂಬರ್ 23ರ ವರೆಗೆ ನೆರವೇರಲಿದೆ. ಹಾಗಿದ್ರೆ ಐದು ದಿವಸಗಳ ಕಾಲ ನಡೆಯಲಿರುವ ಲಕ್ಷದೀಪೋತ್ಸವ ಕಾರ್ಯಕ್ರಮದ (Dharmasthala Lakshadeepotsava Programme List)  ಮೆರುಗು ಹೇಗಿರಲಿದೆ ಅನ್ನೋ ಮಾಹಿತಿ‌ ಇಲ್ಲಿದೆ.


  ನವೆಂಬರ್ 19ರಂದು ವಸ್ತು ಪ್ರದರ್ಶನ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.
  ಅಂದು ಬೆಳಿಗ್ಗೆ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ ಉದ್ಘಾಟಿಸಲಿದ್ದಾರೆ. ವಸ್ತುಪ್ರದರ್ಶನ ಮಂಟಪ ಮತ್ತು ಅಮೃತವರ್ಷಿಣಿ ಸಭಾಭವನದಲ್ಲಿ ಪ್ರತಿ ದಿನವೂ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.


  ಲಲಿತಕಲಾಗೋಷ್ಠಿಯ ವಿವರ ಹೀಗಿದೆ
  ನವೆಂಬರ್ 21ರ ಕಾರ್ಯಕ್ರಮ ಅಮೃತವರ್ಷಿಣಿ ಸಭಾಭವನದಲ್ಲಿ ಲಲಿತಕಲಾಗೋಷ್ಠಿ ನಡೆಯಲಿದೆ. ರಾತ್ರಿ 8.30ರಿಂದ ವಿದುಷಿ ಡಾ. ಜಯಂತಿ ಮತ್ತು ಕುಮರೇಶ್‌ ಮತ್ತು ತಂಡದವರಿಂದ ಜುಗಲ್‌ ಬಂದಿ ಕಾರ್ಯಕ್ರಮ ನಡೆಯಲಿದೆ.
  ನವೆಂಬರ್ 22ರಂದು ಸರ್ವ ಧರ್ಮ ಸಮ್ಮೇಳನ; ಕೇಂದ್ರ ಸಚಿವೆ ಸ್ಮೃತಿ ಇರಾನಿ ಉದ್ಘಾಟನೆ
  ನವೆಂಬರ್ 22ರಂದು ಸಂಜೆ 5ಕ್ಕೆ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯುವ ಸರ್ವಧರ್ಮ ಸಮ್ಮೇಳನವನ್ನು ಕೇಂದ್ರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮತಿ ಇರಾನಿ ಉದ್ಘಾಟಿಸಲಿದ್ದಾರೆ. ಶಿವಮೊಗ್ಗದ ನ್ಯಾಯವಾದಿ ಎಂ.ಆರ್‌. ಸತ್ಯನಾರಾಯಣ ಅಧ್ಯಕ್ಷತೆ ವಹಿಸಲಿದ್ದಾರೆ. ಬಸ್ರಿಕಟ್ಟೆ ಧರ್ಮಗುರು ಫಾ| ಮಾರ್ಸೆಲ್‌ ಪಿಂಟೋ, ವಿಜಯಪುರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಹಾಸಿಂಪೀರ ಇ ವಾಲೀಕಾರ, ವಿಶ್ರಾಂತ ಮುಖ್ಯೋಪಾಧ್ಯಾಯ ಮತ್ತು ವಾಗ್ಮಿ ಮೂಡುಬಿದಿರೆಯ ಮುನಿರಾಜ ರೆಂಜಾಳ ಉಪನ್ಯಾಸ ನೀಡಲಿದ್ದಾರೆ.


  ನವೆಂಬರ್ 23 ಕ್ಕೆ ಸಾಹಿತ್ಯ ಸಮ್ಮೇಳನ
  ಸಾಹಿತ್ಯ ಸಮ್ಮೇಳನ ನವೆಂಬರ್ 23 ರಂದು ನಡೆಯಲಿದೆ. ಆ ದಿನ ಸಂಜೆ 5ಕ್ಕೆ ರಾಷ್ಟ್ರಪ್ರಶಸ್ತಿ ವಿಜೇತ ಶ್ರೇಷ್ಠ ಚಲನಚಿತ್ರ ನಿರ್ದೇಶಕ ಬೆಂಗಳೂರಿನ ಪಿ.ಶೇಷಾದ್ರಿ ಉದ್ಘಾಟಿಸಲಿದ್ದಾರೆ. ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನು ರಾಷ್ಟ್ರಪ್ರಶಸ್ತಿ ಪುರಸ್ಕೃತ ವಿದ್ವಾಂಸ ಡಾ. ಎಚ್‌.ವಿ. ನಾಗರಾಜ ರಾವ್‌ ಮೈಸೂರು ವಹಿಸಲಿದ್ದಾರೆ. ಬೆಂಗಳೂರಿನ ಸಾಹಿತ್ಯ ಪರಿಚಾರಕ ಮತ್ತು ಸುಶಿಕ್ಷಣ ಸೇವಾಪರ ಸಂಸ್ಥೆಯ ಸ್ಥಾಪಕ ಸತ್ಯೇಶ್‌ ಎನ್‌. ಬೆಳ್ಳೂರು, ಪತ್ರಕರ್ತ ರವೀಂದ್ರ ಭಟ್‌, ಲೇಖಕ ಡಾ. ಗೀತಾ ವಸಂತ ಮೊದಲಾದವರು ಉಪನ್ಯಾಸ ನೀಡಲಿದ್ದಾರೆ.


  ಸಮವಸರಣ ಪೂಜೆ
  ನವೆಂಬರ್ 24ರಂದು ಸಂಜೆ 6.30 ರಿಂದ ಶ್ರೀ ಚಂದ್ರನಾಥ ಸ್ವಾಮಿಯ ಬಸದಿಯಲ್ಲಿ ಬಾಹುಬಲಿ ಸೇವಾ ಸಮಿತಿ ಶ್ರಾವಕರಿಂದ ಶ್ರೀ ಚಂದ್ರನಾಥ ಸ್ವಾಮಿಯ ಸಮವಸರಣ ಪೂಜಾ ಕಾರ್ಯಕ್ರಮ ನಡೆಯಲಿದೆ. ಶ್ರೀಮತ್‌ ಪುಷ್ಪದಂತ ಭೂತಬಲಿ ವಿರಚಿತ ಷಟ್ಖಂಡಾಗಮಾಧಾರಿತ ಸಿದ್ಧಾಂತ ಚಿಂತಾಮಣಿ-3 ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಲಿದ್ದು, ಜೈನಸಾಹಿತ್ಯ ವಿಶಾರದೆ ವೀಣಾ ರಘುಚಂದ್ರ ಶೆಟ್ಟಿ ಸಮ್ಮಾನ ಕಾರ್ಯಕ್ರಮ ನಡೆಯಲಿದೆ. ಬಳಿಕ ಶ್ರಾವಕ-ಶ್ರಾವಕಿಯರಿಂದ ಜಿನಭಜನ ಕಾರ್ಯಕ್ರಮ ನಡೆಯಲಿದೆ.

  Published by:ಗುರುಗಣೇಶ ಡಬ್ಗುಳಿ
  First published: