HOME » NEWS » State » MANGALORE DHARMASTHALA RURAL DEVELOPMENT PROJECT FOR THE RECOVERY OF HINDU CEMETERIES PSUDP MAK

ಹಿಂದೂ ರುದ್ರಭೂಮಿಗಳ ಪುನಶ್ಚೇತನಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

ದಹನ ಚೌಕಿಯನ್ನು ಮಳೆ, ಬಿಸಿಲು, ಗಾಳಿಯಿಂದ ರಕ್ಷಿಸಲು ಸೂಕ್ತ ಮಾಡು ನಿರ್ಮಿಸಿ, ಕಟ್ಟಿಗೆ ದಾಸ್ತಾನು, ಸ್ನಾನ, ಶೌಚದ ವ್ಯವಸ್ಥೆ, ಪೂಜಾ ಕೊಠಡಿಯ ವ್ಯವಸ್ಥೆ ಮುಂತಾದವುಗಳನ್ನು ಕೂಡಾ ಈ ಯೋಜನೆಯಲ್ಲಿ ಅಳವಡಿಸಲಾಗುತ್ತದೆ. 

news18-kannada
Updated:April 22, 2021, 6:54 AM IST
ಹಿಂದೂ ರುದ್ರಭೂಮಿಗಳ ಪುನಶ್ಚೇತನಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
ಹಿಂದೂ ರುದ್ರಭೂಮಿ.
  • Share this:
ದೇಶದಾದ್ಯಂತ ಕೊರೊನಾ ಪಾಸಿಟೀವ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಾವಿನ ಸಂಖ್ಯೆಯಲ್ಲೂ‌ ಗಣನೀಯ‌ ಏರಿಕೆ ಕಾಣುತ್ತಿದೆ. ಕೊರೊನಾ ದಿಂದ ಸಾವಿಗೀಡಾದವರ ಶವ ಸಂಸ್ಕಾರಕ್ಕೂ ಸ್ಮಶಾನದಲ್ಲಿ‌ ಸಾಲುಗಟ್ಟಿ‌ ಕಾಯಬೇಕಾದ ಸ್ಥಿತಿ ನಿರ್ಮಾಣಗೊಂ ಡಿದೆ. ರಾಜ್ಯದಲ್ಲಿರುವ ‌ಹೆಚ್ಚಿನ ಹಿಂದೂ‌ ರುದ್ರಭೂಮಿಗಳಲ್ಲಿ ಹೆಚ್ಚಿನವುಗಳು ನಿರ್ವಹಣೆ ಹಾಗೂ‌ ಸೌಲಭ್ಯಗಳಿಲ್ಲದೆ   ಶಿಥಿಲಾವಸ್ಥೆಯಲ್ಲಿದೆ. ಇಂಥಹ ರುದ್ರ ಭೂಮಿಗಳಿಗೆ ಪುನಶ್ಚೇತನ ಕಲ್ಪಿಸುವ ಕೆಲಸವನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಳೆದ ಹಲವು ವರ್ಷಗಳಿಂದ ಮಾಡುತ್ತಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಪ್ರಾರಂಭಿಸಲಾಗಿರುವ ಸಾರ್ವಜನಿಕ ಹಿಂದೂ ರುದ್ರಭೂಮಿ ಅಭಿವೃದ್ಧಿ ಕಾರ್ಯಕ್ರಮದನ್ವಯ ಇದುವರೆಗೆ ರಾಜ್ಯಾ ದ್ಯಂತ 550 ಹಿಂದೂ ರುದ್ರಭೂಮಿಗಳನ್ನು ಪುನಶ್ಚೇತನಗೊಳಿಸಲಾಗಿದೆ. ಪ್ರಸ್ತುತ ಸಾಲಿನಲ್ಲಿ ರುದ್ರಭೂಮಿ ಕಾರ್ಯಕ್ರಮಕ್ಕೆ 1 ಕೋ.ರೂ. ಮೀಸಲಿಟ್ಟಿದ್ದು, 40 ರುದ್ರಭೂಮಿಗಳನ್ನು ಪುನಶ್ಚೇತನಗೊಳಿಸುವ ಕಾರ್ಯಕ್ರಮ ರೂಪಿಸಿಕೊಳ್ಳಲಾಗಿದೆ.

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರು ಹಿಂದೂ ಧರ್ಮೀಯರ ಶವ ಸಂಸ್ಕಾರವನ್ನು ವ್ಯವಸ್ಥಿತವಾಗಿ ನಡೆಸುವುದಕ್ಕೆ ಪ್ರತಿ ಗ್ರಾಮದಲ್ಲಿಯೂ ಸೂಕ್ತ ಪರಿಕರಗಳನ್ನು ಕಲ್ಪಿಸುವ ದೃಷ್ಟಿಯಿಂದ ಹಿಂದೂ ರುದ್ರಭೂಮಿ ಯೋಜನೆ ಪ್ರಾರಂಭಿಸಿದ್ದರು. ಇದರ ಮೂಲಕ ಕ್ಷೇತ್ರದಿಂದ ಅಗತ್ಯ ಪರಿಕರಗಳಾದ ಶವದಹನ ಛೇಂಬರ್ ಮತ್ತು ಇತರ ಉಪಕರಣಗಳನ್ನು ಅಳವಡಿಸಿಕೊಳ್ಳಲು 2.50 ಲಕ್ಷ ರೂ.ವರೆಗೆ ನೆರವನ್ನು ನೀಡಲಾಗುತ್ತಿದೆ.

ಕ್ಷೇತ್ರದ ನೆರವಿನಿಂದ ಖರೀದಿಸಲಾಗುವ ದಹನ ಚೌಕಿಯನ್ನು ವಿಶೇಷ ಕಬ್ಬಿಣದಿಂದ ಮಾಡಲಾಗಿದ್ದು, 1.2 ಟನ್ ಭಾರ ಇರುತ್ತದೆ. ಈ ಛೇಂಬರನ್ನು ಒಳಬದಿಯಿಂದ ವಿಶೇಷವಾಗಿ ತಯಾರಿಸಿದ ಕಬ್ಬಿಣದ ಪ್ಲೇಟ್‌ಗಳಿಂದ ಮುಚ್ಚಲಾಗಿದೆ. ಇದು 1200 ಕೆ.ಜಿ. ಭಾರವಾಗಿದ್ದು, 24 ಇಂಚು ಉದ್ದ, 39 ಇಂಚು ಅಗಲ ಹಾಗೂ 31 ಇಂಚು ಎತ್ತರ ವಿರುತ್ತದೆ.

ಅಡಿ ಭಾಗದ ಗ್ರೇಟಿಂಗ್ಸ್ ಮೇಲೆ 2 ಸಾಲು ಸೌದೆ, ಅದರ ಮೇಲೆ ಶವ, ಅದರ ಮೇಲೆ ಮೂರು ಸಾಲು ಸೌದೆ ಇಡಲು ಹೆಚ್ಚೆಂದರೆ 250 ರಿಂದ 300 ಕೆ.ಜಿ.ಕಟ್ಟಿಗೆ ಸಾಕಾಗುತ್ತದೆ. ಸ್ಥಳೀಯ ಕ್ರಮದಲ್ಲಿ 800 ರಿಂದ 1000 ಕೆ.ಜಿ. ಕಟ್ಟಿಗೆ ಬೇಕಾಗುತ್ತಿದ್ದು, ಸೌದೆಯ ಉಳಿತಾಯ ಮತ್ತು ಸ್ವಚ್ಛತೆ ಕಾಪಾಡಲುಇದು ಸಹಕಾರಿಯಾಗಿದೆ.

ದಹನ ಚೌಕಿಯನ್ನು ಮಳೆ, ಬಿಸಿಲು, ಗಾಳಿಯಿಂದ ರಕ್ಷಿಸಲು ಸೂಕ್ತ ಮಾಡು ನಿರ್ಮಿಸಿ, ಕಟ್ಟಿಗೆ ದಾಸ್ತಾನು, ಸ್ನಾನ, ಶೌಚದ ವ್ಯವಸ್ಥೆ, ಪೂಜಾ ಕೊಠಡಿಯ ವ್ಯವಸ್ಥೆ ಮುಂತಾದವುಗಳನ್ನು ಕೂಡಾ ಈ ಯೋಜನೆಯಲ್ಲಿ ಅಳವಡಿಸಲಾಗುತ್ತದೆ.

ಇದನ್ನೂ ಓದಿ: CoronaVirus: ನಗರದ ವಿವಿಧ ಆಸ್ಪತ್ರೆಗಳಿಗೆ ಡಿಸಿಎಂ ಮಿಂಚಿನ ಭೇಟಿ; ಕೋವಿಡ್‌ ಪರೀಕ್ಷೆ ಹೆಚ್ಚಿಸಲು ಸೂಚನೆ!

ಇದುವರೆಗೆ ಈ ಕಾರ್ಯಕ್ರಮದನ್ವಯ ಡಾ| ಡಿ.ವೀರೇಂದ್ರ ಹೆಗ್ಗಡೆಯವರು ರಾಜ್ಯದಾದ್ಯಂತ 550 ರುದ್ರಭೂಮಿಗಳಿಗೆ 6.75 ಕೋ.ರೂ. ಮೊತ್ತವನ್ನು ವಿನಿಯೋಗಿಸಿರುತ್ತಾರೆ. ಸ್ಥಳೀಯ ಸಹಭಾಗಿತ್ವನ್ನು ಲೆಕ್ಕಕ್ಕೆ ತೆಗೆದುಕೊಂಡರೆ ಸುಮಾರು 50 ಕೋ.ರೂ. ಮೊತ್ತದ ಆರ್ಥಿಕ ವಿನಿಯೋಗವನ್ನು ಈ ಕಾರ್ಯಕ್ರಮದಲ್ಲಿ ಮಾಡಲಾಗಿದೆ.ರಾಜ್ಯದಲ್ಲೂ ಕೊರೊನಾ ಗೆ ಬಲಿಯಾಗಿ ಹಲವಾರು ಜನ ಸಾವಿಗೀಡಾಗಿದ್ದು, ಕೆಲವು ಕಡೆಗಳಲ್ಲಿ ಇಂಥವರ ಶವ ಸಂಸ್ಕಾರಕ್ಕೂ ಹಲವು ಅಡೆತಡೆಗಳು ಎದುರಾಗಿವೆ.

ಈ ಸಮಸ್ಯೆಗಳು ಮುಂದಿನ ದಿನಗಳಲ್ಲಿ ಹೆಚ್ಚಾಗಿ ಕಾಡದಿರಲಿ ಎನ್ನುವ ಕಾರಣಕ್ಕಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಈ ಬಾರಿ 40 ಹಿಂದೂ ರುದ್ರಭೂಮಿಗಳ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ.
Published by: MAshok Kumar
First published: April 22, 2021, 6:44 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories