ಮಂಗಳೂರು: ಎಸ್​ಎಸ್​ಎಲ್​ಸಿ ಪರೀಕ್ಷಾ ಕೇಂದ್ರದಲ್ಲಿ ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

Fire During SSLC Exam: ಇಂದು ಬೆಳಗ್ಗೆ ಸುಮಾರು 10. 45ರ ಸಮಯದಲ್ಲಿ ಕಾಲೇಜಿನ ಬಯೋಲಾಜಿ ಲ್ಯಾಬ್​​ನಲ್ಲಿ ಶಾರ್ಟ್​ ಸರ್ಕ್ಯೂಟ್​ ಸಂಭವಿಸಿದೆ

ಘಟನೆ ಪರಿಶೀಲನೆ ನಡೆಸುತ್ತಿರುವ ಪೊಲೀಸರು

ಘಟನೆ ಪರಿಶೀಲನೆ ನಡೆಸುತ್ತಿರುವ ಪೊಲೀಸರು

 • Share this:
  ಮಂಗಳೂರು (ಜು. 19): ಕೊರೋನಾ ಮುನ್ನೆಚ್ಚರಿಕೆಯೊಂದಿಗೆ ಇಂದು ಎಸ್​ಎಸ್​ಎಲ್​ಸಿ ಪರೀಕ್ಷೆ ಆರಂಭವಾಗಿದೆ. ಆದರೆ, ಮಂಗಳೂರಿನಲ್ಲಿ ಈ ಪರೀಕ್ಷಾ ಕೇಂದ್ರದ ವೇಳೆ ಶಾರ್ಟ್​ ಸರ್ಕ್ಯೂಟ್​ನಿಂದ ಅಗ್ನಿ ಅವಘಡ ನಡೆದಿದೆ. ಅದೃಷ್ಟವಶಾತ್​ ಈ ಘಟನೆಯಲ್ಲಿ ಯಾವುದೇ ಹಾನಿಯಾಗಿಲ್ಲ. ಮಂಗಳೂರು ಹೊರವಲಯದ ಬಬ್ಬುಕಟ್ಟೆಯ ಖಾಸಗಿ ಕಾಲೇಜಿಯಲ್ಲಿ ಈ ಅನಾಹುತ ಸಂಭವಿಸಿದೆ. ಬಬ್ಬುಕಟ್ಟೆಯ ಹಿರಾ ಮಹಿಳಾ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಇಂದು ಪರೀಕ್ಷೆಗೆ ಸಕಲ ಸಿದ್ಧತೆ ನಡೆಸಲಾಗಿತ್ತು. ಇನ್ನೇನು ಪರೀಕ್ಷೆ ಆರಂಭಕ್ಕೆ ಅರ್ಧ ಗಂಟೆ ಇದೆ ಎನ್ನುವಾಗ ಕೇಂದ್ರದ ಜೀವಶಾಸ್ತ್ರ ಪ್ರಯೋಗಾಲಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ತಕ್ಷಣಕ್ಕೆ ಎಚ್ಚೆತ್ತ ಶಾಲಾ ಆಡಳಿತ ಸಿಬ್ಬಂದಿಗಳು ಭಾರೀ ಅನಾಹುತ ತಪ್ಪಿಸಿದ್ದಾರೆ.  ಇಂದು ಬೆಳಗ್ಗೆ ಸುಮಾರು 10. 45ರ ಸಮಯದಲ್ಲಿ ಕಾಲೇಜಿನ ಬಯೋಲಾಜಿ ಲ್ಯಾಬ್​​ನಲ್ಲಿ ಶಾರ್ಟ್​ ಸರ್ಕ್ಯೂಟ್​ ಸಂಭವಿಸಿದೆ. ಇದರಿಂದ ಕಾಲೇಜಿನ ಕೋಣೆಯಲ್ಲಿ ದಟ್ಟ ಹೊಗೆ ಕಾಣಿಸಿಕೊಂಡಿದೆ. ಈ ವೇಳೆ ಎಚ್ಚೆತ್ತ ಸಿಬ್ಬಂದಿಗಳು ಪರೀಕ್ಷೆ ಬರೆಯುತ್ತಿದ್ದ 208 ವಿದ್ಯಾರ್ಥಿಗಳನ್ನು ಮೊದಲ ಮಹಡಿಗೆ ಕಳುಹಿಸಿಕೊಟ್ಟು ಅಲ್ಲಿ ಸರಾಗ ವಾಗಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟಿದ್ದಾರೆ.  ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ತಕ್ಷಣಕ್ಕೆ ಮಂಗಳೂರು ನಗರ ಪೊಲೀಸ್​ ಕಮಿಷನರ್​ ಎನ್​ ಶಶಿಕುಮಾರ್​ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದರು. ಅನಿರೀಕ್ಷಿತವಾಗಿ ನಡೆದ ಈ ಘಟನೆ ಕ್ಷಣಕಾಲ ಪರೀಕ್ಷಾ ಕೇಂದ್ರದಲ್ಲಿ ಗೊಂದಲವನ್ನು ಉಂಟು ಮಾಡಿತ್ತು. ಆದರೆ, ಇದರಿಂದ ಯಾವುದೇ ತೊಂದರೆಯಾಗಿಲ್ಲ. ವಿದ್ಯಾರ್ಥಿಗಳಿಗೆ ಆರಾಮವಾಗಿ ಪರೀಕ್ಷೆ ಬರೆಯಲು ವ್ಯವಸ್ಥೆಯನ್ನು ತಕ್ಷಣಕ್ಕೆ ನಡೆಸಲಾಗಿದೆ. ವಿದ್ಯಾರ್ಥಿಗಳು ಕೂಡ ನಿರಾತಂಕವಾಗಿ ಪರೀಕ್ಷೆ ಬರೆದಿದ್ದಾರೆ ಎಂದಿದ್ದಾರೆ.
  Published by:Seema R
  First published: