Controversy Statement: ನಾವು ಗಾಂಧೀಜಿಯನ್ನೇ ಬಿಟ್ಟಿಲ್ಲ, ಇನ್ನು ನಿಮ್ಮನ್ನು ಬಿಡುತ್ತೇವಾ?: ಸಿಎಂಗೆ ಕೊಲೆ ಬೆದರಿಕೆ ಹಾಕಿದ ಹಿಂದೂ ಮಹಾಸಭಾ

ದೇವಸ್ಥಾನ ಧ್ವಂಸವಾದ ಬಗ್ಗೆ ಅಸಹನೆಯಿಂದ ಮಾತನಾಡಿದ್ದೇನೆ. ಇದರ ಹಿಂದೆ ಯಾವುದೇ ಬೆದರಿಕೆ ಹಾಕುವ ದುರುದ್ದೇಶ ಇಲ್ಲ. ಗಾಂಧೀಜಿ ಹತ್ಯೆಯ ಕಾರಣವನ್ನು ವಿವರಿಸುವ ಭರದಲ್ಲಿ ಈ ಹೇಳಿಕೆ ಬಂದಿದೆ. ಈ ಹೇಳಿಕೆ ಕುರಿತು ವಿಷಾದ ವ್ಯಕ್ತಪಡಿಸುತ್ತೇನೆ ಅಂತಾ ಹೇಳಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಿಂದೂ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ.

ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಿಂದೂ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ.

  • Share this:
ಮಂಗಳೂರು: ಮೈಸೂರು ದೇಗುಲ ಧ್ವಂಸ (Mysuru Temple Collapse) ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ ಬೊಮ್ಮಾಯಿ (CM Basavaraja Bommai) ವಿರುದ್ಧ ಬಹಿರಂಗವಾಗಿ ಬೆದರಿಕೆ ಹಾಕಿದ್ದ ಅಖಿಲ ಭಾರತ ಹಿಂದೂ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿ ‌ಧರ್ಮೇಂದ್ರ (Akhila Bharata Hindu Mahasabha General Secratary Dharmendra) , ಬೆದರಿಕೆ ಹಾಕಿದ ಕೆಲವೇ ಕ್ಷಣಗಳಲ್ಲಿ ತನ್ನ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ. ಮೈಸೂರಿನ‌ ನಂಜನಗೂಡಿನ ಹುಚ್ಚುಗಣಿ ಗ್ರಾಮದ ಮಹಾದೇವಮ್ಮನ ದೇವಸ್ಥಾನ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಹಿಂದೂ ಮಹಾಸಭಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ, ಹಿಂದೂಗಳ ಮೇಲೆ ದಾಳಿಯಾದಾಗ ಗಾಂಧೀಜಿಯನ್ನೇ ಬಿಟ್ಟಿಲ್ಲ. ಗಾಂಧೀಜಿ ಹತ್ಯೆ ಮಾಡೋಕೆ ಆಗುತ್ತೆ, ಇನ್ನು ನಿಮ್ಮ ಬಗ್ಗೆ ಆಲೋಚನೆ ಮಾಡೋಕೆ ಸಾಧ್ಯ ಇಲ್ವಾ ಬಸವರಾಜ ಬೊಮ್ಮಾಯಿ ಅವರೇ, ಬಿಎಸ್ ಯಡಿಯೂರಪ್ಪ ಅವರೇ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಬಿಎಸ್​ವೈ ವಿರುದ್ಧ ಬಹಿರಂಗವಾಗಿಯೇ ಬೆದರಿಕೆ ಹಾಕಿದ್ದಾರೆ. ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಮತ್ತು ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದ್ದಂತೆಯೇ ಧರ್ಮೇಂದ್ರ ತನ್ನ ಹೇಳಿಕೆಯ ಬಗ್ಗೆ ಕ್ಷಮೆಯಾಚನೆ ಮಾಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಧರ್ಮೇಂದ್ರ, ಹಿಂದೂವಾಗಿ ನಮ್ಮ ಶ್ರದ್ಧೆಯ ಕೇಂದ್ರ ದೇವಸ್ಥಾನ ಧ್ವಂಸವಾದ ಬಗ್ಗೆ ಅಸಹನೆಯಿಂದ ಮಾತನಾಡಿದ್ದೇನೆ. ಇದರ ಹಿಂದೆ ಯಾವುದೇ ಬೆದರಿಕೆ ಹಾಕುವ ದುರುದ್ದೇಶ ಇಲ್ಲ. ಗಾಂಧೀಜಿ ಹತ್ಯೆಯ ಕಾರಣವನ್ನು ವಿವರಿಸುವ ಭರದಲ್ಲಿ ಈ ಹೇಳಿಕೆ ಬಂದಿದೆ. ಈ ಹೇಳಿಕೆ ಕುರಿತು ವಿಷಾದ ವ್ಯಕ್ತಪಡಿಸುತ್ತೇನೆ ಅಂತಾ ಹೇಳಿದ್ದಾರೆ.

ಮಂಗಳೂರಿನಲ್ಲಿ  ಸುದ್ದಿಗೋಷ್ಠಿ ಯಲ್ಲಿ ಆಕ್ರೋಶ ಹೊರ ಹಾಕಿದ್ದ ಧರ್ಮೇಂದ್ರ, ಬಿಜೆಪಿ ಸರ್ಕಾರ ಅಲ್ಪಸಂಖ್ಯಾತ ಮತ ಓಲೈಕೆಗೆ ಮುಂದಾಗಿದೆ. ದೇವಾಲಯದ ಧ್ವಂಸದ ಮೂಲಕ ಅಲ್ಪಸಂಖ್ಯಾತ ಮತಗಳಿಕೆಗೆ ಬಿಜೆಪಿ ಸರ್ಕಾರ ಮುಂದಾಗಿದೆ. ಹಿಂದೂ ಗಳ ಮೇಲೆ ದಾಳಿಯಾದಾಗ ಅಖಿಲ ಭಾರತೀಯ ಹಿಂದೂ ಮಹಾಸಭಾ ಸುಮ್ಮನೆ ಕೂರೋದಿಲ್ಲ. ಹಿಂದೂಗಳ ಮೇಲೆ ದಾಳಿ ಆದಾಗ ಗಾಂಧೀಜಿಯನ್ನೇ ಬಿಟ್ಟಿಲ್ಲ. ಹಿಂದೂಗಳ ಮೇಲೆ ದಬ್ಬಾಳಿಕೆ ಆದಾಗ ಗಾಂಧೀಜಿಯನ್ನೇ ಹತ್ಯೆ ಮಾಡೋಕೆ ಆಗುತ್ತೆ, ಇನ್ನು ನಿಮ್ಮ ಬಗ್ಗೆ ಆಲೋಚನೆ ಮಾಡೋಕೆ ಸಾಧ್ಯವಿಲ್ವಾ ಅಂತಾ ಧರ್ಮೇಂದ್ರ ಬಹಿರಂಗ ಬೆದರಿಕೆ ಹಾಕಿದ್ದರು.

ಸುಪ್ರೀಂ ಕೋರ್ಟ್ ಆದೇಶ ಅಂತಾ ಹಿಂದೂ ಶ್ರದ್ಧಾ ಕೇಂದ್ರ ಗಳ ಮೇಲೆ ದಾಳಿಯಾಗುತ್ತಿದೆ. ರಾಜ್ಯ ಸರ್ಕಾರ ಕೇವಲ ಹಿಂದೂ ದೇಗುಲಗಳನ್ನು ಮಾತ್ರ ಟಾರ್ಗೆಟ್ ಮಾಡುತ್ತಿದೆ. ರಾಜ್ಯದಲ್ಲಿ ಈವರೆಗೆ ಅನಧಿಕೃತ ಪ್ರಾರ್ಥನಾ ಮಂದಿರದ ಹೆಸರಲ್ಲಿ ಒಂದೇ ಒಂದು ಮಸೀದಿ, ಚರ್ಚ್ ಗಳನ್ನು ಧ್ವಂಸ ಮಾಡಲಾಗಿದ್ಯಾ? ಅಂತಾ ಧರ್ಮೇಂದ್ರ ಕಿಡಿ ಕಾರಿದ್ದರು. ರಾಜ್ಯ ಸರ್ಕಾರದ ವಿರುದ್ಧ ಸಂಘ ಪರಿವಾರದ ಕಾರ್ಯಕರ್ತರು ಪ್ರತಿಭಟನೆ ಮಾಡುತ್ತಾರೆ. ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇರೋವಾಗ ಇವರೇ ಪ್ರತಿಭಟನೆ ಮಾಡುತ್ತಾರೆ. ಹಿಂದೂ ಕಾರ್ಯಕರ್ತರು ಪ್ರತಿಭಟನೆ ಮಾಡೋದು ಬಿಟ್ಟು ಬಿಜೆಪಿಯನ್ನು ಬಹಿಷ್ಕಾರ ಮಾಡಲಿ ಎಂದು ಧರ್ಮೇಂದ್ರ ಸವಾಲೆಸೆದಿದ್ದರು.

ಇದನ್ನು ಓದಿ: BS Yediyurappa: ಈಗಾಗಲೇ ಪ್ರವಾಸ ಆರಂಭಿಸಿದ್ದೇನೆ, ಮುಂದಿನ ಚುನಾವಣೆಯಲ್ಲಿ ಗೆಲುವು ನಿಶ್ಚಿತ; ಬಿಎಸ್ ಯಡಿಯೂರಪ್ಪ ವಿಶ್ವಾಸ

ರಾಜ್ಯ ಬಿಜೆಪಿ ಸರ್ಕಾರದ ನಾಯಕರು ದೇಗುಲ ಧ್ವಂಸ ಮಾಡಿರೋದು ಸಣ್ಣ ತಪ್ಪು ಅಂತಾ ಹೇಳುತ್ತಾರೆ. ದೇಗುಲ ಧ್ವಂಸ ಮಾಡಿರೋದು ಸಣ್ಣ ತಪ್ಪಾ? ಹಾಗಾದರೆ ದೊಡ್ಡ ತಪ್ಪು ಯಾವುದು? ದೇವಸ್ಥಾನವನ್ನು ಮರು ನಿರ್ಮಾಣ ಮಾಡೋದಾಗಿ ರಾಜ್ಯ ಸರ್ಕಾರ ಹೇಳುತ್ತಿದೆ. ಯಾರ ಹಣದಲ್ಲಿ ದೇಗುಲ ನಿರ್ಮಾಣ ಮಾಡುತ್ತೀರಿ? ಜನರ ತೆರಿಗೆ ಹಣದಲ್ಲಿ ದೇವಸ್ಥಾನ ಮರು‌ನಿರ್ಮಾಣ ಮಾಡುತ್ತೀರಾ ಅಂತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇಗುಲ ಧ್ವಂಸ ಮಾಡಿರೋದು ಒಂದು ಕೊಲೆಗೆ ಸಮಾನ. ಆಗಮ ಶಾಸ್ತ್ರದ ಪ್ರಕಾರ ದೇವಸ್ಥಾನವನ್ನು ಮರುನಿರ್ಮಾಣ ಮಾಡಬೇಕು ಅಂತಾ ಆಗ್ರಹಿಸಿದ್ದರು.
Published by:HR Ramesh
First published: