ಮಂಗಳೂರು: ಮೇ 10 ರಂದು ನಡೆದ ವಿಧಾನಸಭೆ ಚುನಾವಣೆಯ (Karnataka Elections 2023) ಮತದಾನ ಎಣಿಕೆಯು ಮೇ 13 ರಂದು ನಡೆಯಲಿದೆ. ದಕ್ಷಿಣ ಕನ್ನಡ ಜಿಲ್ಲೆಯ (Dakshina Kannada News) 8 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆಯು ನಗರದ ಹೊರವಲಯದಲ್ಲಿರುವ ಸುರತ್ಕಲ್ ಎನ್‌ಐಟಿಕೆಯಲ್ಲಿ ನಡೆಯಲಿದೆ. ಹೀಗಾಗಿ ಆ ದಿನ ಮತ ಎಣಿಕಾ ಕೇಂದ್ರಕ್ಕೆ ತೆರಳುವ ಅಭ್ಯರ್ಥಿಗಳು, ಚುನಾವಣಾ ಏಜೆಂಟ್ ಸಹಿತ ಅಧಿಕಾರಿಗಳು ಈ ಅಂಶಗಳನ್ನು ಗಮನಿಸಬೇಕಿದೆ.
ಯಾರಿಗೆಲ್ಲ ಪ್ರವೇಶವಿರುತ್ತೆ?
ಮತ ಎಣಿಕೆಯ ದಿನದಂದು ಎಲ್ಲರೂ ಮತ ಎಣಿಕೆ ಕೇಂದ್ರಕ್ಕೆ ಹೋಗಲು ಸಾಧ್ಯವಿಲ್ಲ. ಸಾಮಾನ್ಯವಾಗಿ ಚುನಾವಣಾ ಅಭ್ಯರ್ಥಿಗಳು, ಚುನಾವಣಾ ಏಜೆಂಟರುಗಳು, ಮತ ಎಣಿಕೆ ಏಜೆಂಟ್‍ಗಳು, ಮತ ಎಣಿಕೆ ಕೇಂದ್ರಕ್ಕೆ ಎಣಿಕೆ ಕಾರ್ಯಕ್ಕೆ ನಿಯೋಜಿಸಲಾದ ಮೇಲ್ವಿಚಾರಕರು, ಸಹಾಯಕರು, ಗ್ರೂಪ್ ಡಿ ಸಿಬ್ಬಂದಿಗಳು ಮತ್ತು ಇನ್ನಿತರ ನೇಮಿಸಲ್ಪಟ್ಟ ಸಿಬ್ಬಂದಿಗಳು ಮತ ಎಣಿಕೆ ಕೇಂದ್ರದ ಆವರಣದೊಳಗೆ ಪ್ರವೇಶಿಸಬಹುದಾಗಿದೆ. ಅಂತಹ ಸಮಯದಲ್ಲಿ ಕೆಲವೊಂದು ನಿಯಮಗಳನ್ನು ಇವರೆಲ್ಲರೂ ಪಾಲಿಸಬೇಕಾಗುತ್ತೆ.
ಇದನ್ನೂ ಓದಿ: Mangaluru News: ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಮಾಸ್ಟರ್ ಪ್ಲ್ಯಾನ್!
ಎಣಿಕಾ ಕೇಂದ್ರದಲ್ಲಿ ನಿಷೇಧ!
ಮತ ಎಣಿಕಾ ಕೇಂದ್ರಕ್ಕೆ ಹೋಗುವವರು ಕಡ್ಡಾಯವಾಗಿ ಮೊಬೈಲ್, ಎಲೆಕ್ಟ್ರಾನಿಕ್ಸ್ ವಾಚ್ ಮತ್ತು ಇನ್ನಿತರೇ ಡಿಜಿಟಲ್ ತಂತ್ರಜ್ಞಾನದ ಉಪಕರಣಗಳೊಂದಿಗೆ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ.
ಹೀಗಾಗಿ ಮತ ಎಣಿಕಾ ಕೇಂದ್ರಗಳಿಗೆ ಪ್ರವೇಶಿಸುವ ಯಾರೇ ಇದ್ದರೂ ಈ ನಿಯಮವನ್ನು ಪಾಲಿಸಬೇಕಿದೆ. ಕಡ್ಡಾಯವಾಗಿ ಈ ಮೇಲೆ ತಿಳಿಸಲಾದ ವಸ್ತುಗಳನ್ನು ಕೇಂದ್ರದ ಹೊರಗಡೆಯೇ ಇಟ್ಟು ಹೋಗುವುದು ಸೂಕ್ತ.
ಇದನ್ನೂ ಓದಿ: Matsyagandha Express: ಕರಾವಳಿಯ ಕಣ್ಮಣಿ ಮತ್ಸ್ಯಗಂಧ ಎಕ್ಸ್ಪ್ರೆಸ್ಗೆ 25 ವರ್ಷ, ಇದು ಕೇವಲ ರೈಲಲ್ಲ, ಬದುಕು!
ನಿಯಮ ಉಲ್ಲಂಘಿಸಿದ್ರೆ ಕ್ರಮ!
ಈ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕಿದೆ. ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಪ್ರಜಾಪ್ರತಿನಿಧಿ ಕಾಯಿದೆ 1951ರ ಕಲಂ 126 ಹಾಗೂ ಭಾರತೀಯ ದಂಡ ಸಂಹಿತೆಯ ಕಾಯಿದನ್ವಯ ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಹಾಗೂ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ತಿಳಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ