Karnataka Monsoon Rain: ಬೆಂಗಳೂರು (ಜೂನ್ 11): ಕರ್ನಾಟಕದಲ್ಲಿ ಮುಂಗಾರಿನ ಅಬ್ಬರ ಶುರುವಾಗಿದ್ದು, ಇಂದಿನಿಂದ ರಾಜ್ಯಾದ್ಯಂತ ಮಳೆ ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದಿನಿಂದ 1 ವಾರಗಳ ಕಾಲ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮಳೆ ತೀವ್ರಗೊಳ್ಳಲಿದೆ. ದಕ್ಷಿಣ ಒಳನಾಡಿನಲ್ಲಿಯೂ ಇಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಇಂದಿನಿಂದ ಜೂನ್ 13ರವರೆಗೆ ಭಾರೀ ಮಳೆಯಾಗಲಿದೆ. ಅದಾದ ಬಳಿಕವೂ ಮೂರ್ನಾಲ್ಕು ದಿನ ಮಳೆ ಮುಂದುವರೆಯಲಿದೆ. ಇಂದಿನಿಂದ ಭಾರೀ ಮಳೆಯಾಗುವ ನಿರೀಕ್ಷೆ ಇರುವುದರಿಂದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇಂದಿನಿಂದ 3 ದಿನ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಿಡಿಲು ಸಹಿತ ಮಳೆಯಾಗಲಿದೆ.
ಕರಾವಳಿ ಜಿಲ್ಲೆಗಳಲ್ಲಿ ಜೂನ್ 14ರಂದು ಮಳೆ ಹೆಚ್ಚಾಗುವುದರಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯಿಂದ ಭೂಕುಸಿತವಾಗುವ ಸಾಧ್ಯತೆಯೂ ಇದೆ ಎಂದು ಮುನ್ನೆಚ್ಚರಿಕೆ ನೀಡಲಾಗಿದೆ. ಹೀಗಾಗಿ, ದಕ್ಷಿಣ ಕನ್ನಡ, ಉಡುಪಿ, ರಾಯಚೂರು, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಎಸ್ಡಿಆರ್ಎಫ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಮಳೆಯ ಅಬ್ಬರ ಹೆಚ್ಚಾಗಿದೆ. ಕರಾವಳಿ ಮಾತ್ರವಲ್ಲದೆ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಬೀದರ್, ಗದಗ , ಬೆಂಗಳೂರು ನಗರ, ಕಲಬುರ್ಗಿ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಕೋಲಾರ, ತುಮಕೂರು, ಕೊಪ್ಪಳ, ದಾವಣಗೆರೆ ಜಿಲ್ಲೆಗಳಲ್ಲಿಯೂ ಇಂದಿನಿಂದ 1 ವಾರ ಮಳೆಯಾಗಲಿದೆ. ಹೀಗಾಗಿ, ಹಳದಿ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿ: Crime News: ಮಗನಿಗೆ ತಿಳಿಯದಂತೆ ಸೊಸೆಯನ್ನೇ ಮಾರಾಟ ಮಾಡಿದ ಮಾವ; ಕಾರಣ ಕೇಳಿದ್ರೆ ಶಾಕ್ ಆಗ್ತೀರ!
ಜೂನ್ 3ಕ್ಕೆ ಕೇರಳವನ್ನು ಪ್ರವೇಶಿಸಿರುವ ಮುಂಗಾರು ಕರ್ನಾಟಕಕ್ಕೆ ಎಂಟ್ರಿ ನೀಡಲು ಮೂರ್ನಾಲ್ಕು ದಿನಗಳು ಬೇಕಾಗುತ್ತದೆ ಎನ್ನಲಾಗಿತ್ತು. ಆದರೆ, ಜೂನ್ 5ಕ್ಕೇ ಕರ್ನಾಟಕಕ್ಕೆ ಮುಂಗಾರಿನ ಪ್ರವೇಶವಾಗಿದೆ. ಜೂನ್ ಮೂರನೇ ವಾರದ ವೇಳೆಗೆ ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ. ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇಂದು ಸಾಧಾರಣ ಮಳೆಯಾಗಲಿದೆ. ಮಲೆನಾಡಿನಲ್ಲಿ ಇಂದು ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದೆ.
ಇಂದಿನಿಂದ ಜೂನ್ 15ರವರೆಗೆ ಕೇರಳದಲ್ಲೂ ಭಾರೀ ಮಳೆಯಾಗಲಿದೆ. ರಾಜಸ್ಥಾನ, ಮಹಾರಾಷ್ಟ್ರ ಭಾಗದಲ್ಲೂ ಮಳೆಯ ತೀವ್ರತೆ ಹೆಚ್ಚಾಗಲಿದೆ. ಈಗಾಗಲೇ ಕೇರಳ, ಅಸ್ಸಾಂ, ಮೇಘಾಲಯ, ಆಂಧ್ರಪ್ರದೇಶದ ಕರಾವಳಿ ಪ್ರದೇಶ, ಅರುಣಾಚಲ ಪ್ರದೇಶದಲ್ಲಿ ಮಳೆಯಾಗುತ್ತಿದೆ. ಇಂದು ಕರ್ನಾಟಕ, ಛತ್ತೀಸ್ಘಡ, ಕೇರಳ, ಮಾಹೆ, ಗೋವಾ, ಅಂಡಮಾನ್ ನಿಕೋಬಾರ್, ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ, ಸಿಕ್ಕಿಂ, ನಾಗಾಲ್ಯಾಂಡ್, ಮಣಿಪುರ, ತ್ರಿಪುರ ರಾಜ್ಯಗಳಲ್ಲಿ ಮಳೆ ಹೆಚ್ಚಾಗಲಿದೆ.
ಇದನ್ನೂ ಓದಿ: Chikmagalur: ಕಾಫಿನಾಡಿಗೆ ಬೆಂಗಳೂರೇ ಕಂಟಕ; ಗ್ರೀನ್ ಜೋನ್ನಲ್ಲಿದ್ದ ಚಿಕ್ಕಮಗಳೂರಿನಲ್ಲಿ ಕೊರೋನಾ ಹೆಚ್ಚಲು ಇದೇ ಕಾರಣ?
ಒಂದು ಬಾರಿ ಮುಂಗಾರು ಆರಂಭವಾದ ನಂತರ ಅದರ ಪರಿಣಾಮ ಯಾವ ರೀತಿ ಇರಬಹುದು ಎಂದು ನಾವು ಅಂದಾಜಿಸಬಹುದು. ಜೂನ್ನಿಂದ ಸೆಪ್ಟೆಂಬರ್ವರೆಗೆ ಮಳೆಯ ಆರ್ಭಟವಿರಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಈ ವರ್ಷ ಸಾಧಾರಣದಿಂದ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ.
ಕರ್ನಾಟಕದ ಧಾರವಾಡ, ಬೆಳಗಾವಿ, ಗದಗ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಶಿವಮೊಗ್ಗ, ಹಾಸನ, ಕೊಡಗು, ಕೋಲಾರ, ಚಾಮರಾಜನಗರ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರ್ಗಿ, ಬೀದರ್, ಚಿಕ್ಕಮಗಳೂರಿನಲ್ಲಿ ಇಂದು ಸಾಧಾರಣ ಮಳೆಯಾಗಲಿದೆ. ಹೀಗಾಗಿ, ಹಳದಿ ಅಲರ್ಟ್ ಘೋಷಿಸಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ