• Home
  • »
  • News
  • »
  • state
  • »
  • Kukke Subramanya Darshan: ಕುಕ್ಕೆ ಸುಬ್ರಹ್ಮಣ್ಯ ದೇಗುಲ ದರ್ಶನಕ್ಕೆ ನಿರ್ಬಂಧ

Kukke Subramanya Darshan: ಕುಕ್ಕೆ ಸುಬ್ರಹ್ಮಣ್ಯ ದೇಗುಲ ದರ್ಶನಕ್ಕೆ ನಿರ್ಬಂಧ

ಕುಕ್ಕೆ ದೇಗುಲ

ಕುಕ್ಕೆ ದೇಗುಲ

ನವೆಂಬರ್ 20ರ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ ದರ್ಶನ ಇರುವುದಿಲ್ಲ.

  • News18 Kannada
  • Last Updated :
  • Mangalore, India
  • Share this:

    ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ದರ್ಶನ (Kukke Subramanya Temple) ಮಾಡಲು ಯೋಜನೆ ರೂಪಿಸುತ್ತಿದ್ದೀರಾ? ಹಾಗಾದರೆ ನಿಮಗೆಂದೇ ಇಲ್ಲೊಂದು ಮಹತ್ವದ ಸುದ್ದಿಯಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನವೆಂಬರ್ 20 ರಂದು ಬೆಳಗ್ಗೆಯಿಂದ ಮಧ್ಯಾಹ್ನ 2 ಗಂಟೆಯವರೆಗೂ ದರ್ಶನವನ್ನು ನಿರ್ಬಂಧಿಸಲಾಗಿದೆ. ನವೆಂಬರ್ 20ರಂದು ಚಂಪಾಷಷ್ಠಿ (Kukke Subramanya Temple Champa Shashti) ವಾರ್ಷಿಕ ಮೂಲಮೃತ್ತಿಕೆಯ ಪ್ರಸಾದ ತೆಗೆಯುವ ಆಚರಣೆ ನಡೆಸಲಾಗುತ್ತದೆ. ಈ ಕಾರಣಕ್ಕೆ ನವೆಂಬರ್ 20ರ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ(Kukke Temple Rathotsav) ದರ್ಶನ ಇರುವುದಿಲ್ಲ. ಮಧ್ಯಾಹ್ನ 2 ಗಂಟೆಯ ನಂತರವಷ್ಟೇ ದೇವರ ದರ್ಶನ ಲಭ್ಯವಾಗಲಿದೆ.


    ಚಂಪಾಷಷ್ಠಿ ಕೊರೋನಾ ಹಿನ್ನೆಲೆಯಲ್ಲಿ ಕಳೆದೆರಡು ವರ್ಷಗಳಿಂದ ನಿರ್ಬಂಧಿಸಲಾಗಿದ್ದ ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿನ ಚಂಪಾ ಷಷ್ಠಿಯ ಎಡೆಸ್ನಾನ ಸೇವೆಗೆ ಈ ಬಾರಿ ಅವಕಾಶ ನೀಡಲಾಗಿದೆ.


    ಬೀದಿ ಉರುಳು ಸೇವೆ ಮಾಡುವವರಿಗೆ ಅವಕಾಶ
    ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ನವೆಂಬರ್‌ 21ರಿಂದ ನಡೆಯಲಿರುವ ಚಂಪಾಷಷ್ಠಿ ಜಾತ್ರಾ ಮಹೋತ್ಸವದ  ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಬೀದಿ ಉರುಳು ಸೇವೆ ಮಾಡುವವರಿಗೆ ಲಕ್ಷ ದೀಪೋತ್ಸವ ದಿನದಂದು ರಾತ್ರಿ ರಥೋತ್ಸವದ ಬಳಿಕ ಸಂಜೆ 5ರಿಂದ ಬೆಳಗ್ಗೆ 6 ಗಂಟೆವರೆಗೆ ಅವಕಾಶ ನೀಡುವ ಬಗ್ಗೆ ಚರ್ಚೆ ನಡೆದಿದೆ.


    ಇದನ್ನೂ ಓದಿ: Cricket News: ಕರಾವಳಿ ಕ್ರಿಕೆಟ್ ಪ್ರೇಮಿಗಳ ಬೇಡಿಕೆಗೆ ಕೊನೆಗೂ ಸಿಕ್ಕ ಮನ್ನಣೆ; ಪುತ್ತೂರಲ್ಲಿ ಅಂತರಾಷ್ಟ್ರೀಯ ಕ್ರೀಡಾಂಗಣ


    ಈ ಬಾರಿ ಕುಣಿತ ಭಜನೋತ್ಸವ ಮೆರುಗು
    ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ವಾರ್ಷಿಕ ಚಂಪಾಷಷ್ಠಿ ಮಹೋತ್ಸವಕ್ಕೆ ಈ ಬಾರಿ ಕುಣಿತ ಭಜನೋತ್ಸವ ಮೆರುಗು ನೀಡಲಿದೆ. ನವೆಂಬರ್ 23ರಂದು ನಡೆಯಲಿರುವ ಲಕ್ಷದೀಪೋತ್ಸವ ಸಮಯದಲ್ಲಿ ಕುಣಿತಾ ಭಜನೋತ್ಸವ ಅದ್ಧೂರಿಯಾಗಿ ನಡೆಯಲಿದೆ. ಸುಮಾರು ಒಂದು ಸಾವಿರ ತಂಡಗಳು ಕುಣಿಯುತ್ತಾ ನಡೆಸುವ ಭಜನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಹೊಂದಲಾಗಿದೆ. ಅದಕ್ಕಾಗಿ ಸಿದ್ಧತೆಗಳನ್ನು ನಡೆಸಲಾಗುತ್ತಿದೆ. ಆಸಕ್ತ ತಂಡಗಳು ಭಜನಾ ಕುಣಿತದಲ್ಲಿ ಭಾಗವಹಿಸಲು ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ.


    ಎಲ್ಲಿ ನಡೆಯುತ್ತೆ ಕುಣಿತ ಭಜನೆ?
    ನವೆಂಬರ್ 23 ರ ಲಕ್ಷದೀಪೋತ್ಸವದ ದಿನ ಸಂಜೆ 7ರಿಂದ ರಾಜಗೋಪುರದ ಬಳಿಯಿಂದ ರಥಬೀದಿ, ಅಡ್ಡಬೀದಿ ಕಾಶಿಕಟ್ಟೆಯಾಗಿ ಕುಮಾರಧಾರದವರೆಗೆ ಕುಣಿತ ಭಜನೆ ಸಂಭ್ರಮವನ್ನು ವಿಶೇಷವಾಗಿ ಹಮ್ಮಿಕೊಳ್ಳಲಾಗಿದೆ. ನಿರಂತರ ಕುಣಿತಾ ಭಜನೆ ವಿಶೇಷ ಮೆರುಗು ನೀಡಲಿದೆ.


    ಒಂದು ಸಾವಿರ ತಂಡ!
    ಕುಣಿತಾ ಭಜನೋತ್ಸವದಲ್ಲಿ ಸುಮಾರು 1,000 ತಂಡಗಳು ಭಾಗವಹಿಸುವ ನಿರೀಕ್ಷೆ ಹೊಂದಲಾಗಿದೆ. ಖ್ಯಾತ ಗಾಯಕ ಜಗದೀಶ ಆಚಾರ್ಯ ಪುತ್ತೂರು ಅವರು ಭಾಗವಹಿಸಲಿದ್ದಾರೆ.


    ಇದನ್ನೂ ಓದಿ: Dharmasthala Lakshadeepotsava: 5 ದಿನಗಳ ಕಾಲ ಧರ್ಮಸ್ಥಳ ಲಕ್ಷದೀಪೋತ್ಸವ; ಇಲ್ಲಿದೆ ಪ್ರತಿದಿನದ ಕಾರ್ಯಕ್ರಮ ವಿವರ


    ತಂಡದಲ್ಲಿ ಇರಬೇಕಾದ ಸದಸ್ಯರು?
    ಕುಣಿತಾ ಭಜನೋತ್ಸವದಲ್ಲಿ ಸಾರ್ವಜನಿಕರಲ್ಲದೇ ರಾಜ್ಯಾದ್ಯಂತ ಭಕ್ತರು ಸೇವೆ ನೆರವೇರಿಸಲು ಅವಕಾಶ ಕಲ್ಪಿಸಲಾಗಿದೆ. ಆದರೆ ಪ್ರತಿಯೊಂದು ತಂಡದಲ್ಲಿ ಗರಿಷ್ಟ 10 ಮಂದಿಗಷ್ಟೇ ಅವಕಾಶವಿರಲಿದೆ.


    ನೋಂದಣಿ ಕೊನೆಯ ದಿನಾಂಕ
    ಕುಣಿತಾ ಭಜನೋತ್ಸವದಲ್ಲಿ ಪಾಲ್ಗೊಳ್ಳುವ ಆಸಕ್ತರಿರುವ ತಂಡಗಳು ನವೆಂಬರ್ 20ರ ಒಳಗಾಗಿ ಕುಕ್ಕೆ ದೇಗುಲದ ಕಚೇರಿಯಲ್ಲಿ ಹೆಸರು ನೋಂದಾಯಿಸಬೇಕಾಗುತ್ತದೆ.

    Published by:ಗುರುಗಣೇಶ ಡಬ್ಗುಳಿ
    First published: