Mangalore University Results 2021: ಮಂಗಳೂರು ವಿಶ್ವವಿದ್ಯಾನಿಲಯವು ನವೆಂಬರ್ 23, 2021 ರಂದು ಮಂಗಳವಾರ ಮೊದಲ, ಮೂರನೇ ಮತ್ತು ಐದನೇ ಸೆಮಿಸ್ಟರ್ ಪರೀಕ್ಷೆಗಳ ಫಲಿತಾಂಶಗಳನ್ನು (Exams Results) ಬಿಡುಗಡೆ ಮಾಡಿದೆ. ಸೆಪ್ಟೆಂಬರ್ ಮತ್ತು ಅಕ್ಟೋಬರ್ 2021 ರಲ್ಲಿ ನಡೆಸಿದ ಪದವಿ ಸೆಮಿಸ್ಟರ್ ಪರೀಕ್ಷೆಗಳ ಫಲಿತಾಂಶಗಳನ್ನು ಬಿಡುಗಡೆ ಮಾಡಲಾಗಿದೆ. ಫಲಿತಾಂಶಕ್ಕೆ ಕಾಯುತ್ತಿದ್ದ ವಿದ್ಯಾರ್ಥಿಗಳು (Students) ಈಗ ಆನ್ ಲೈನ್ (online) ಮೂಲಕ ಫಲಿತಾಂಶ ನೋಡಬಹುದಾಗಿದೆ. ಮಂಗಳೂರು ವಿಶ್ವವಿದ್ಯಾನಿಲಯ ಫಲಿತಾಂಶವನ್ನು ವೆಬ್ಸೈಟ್ನಲ್ಲಿ ಅಪ್ಲೋಡ್ (official website of Mangalore University) ಮಾಡಿದೆ. ಅಭ್ಯರ್ಥಿಗಳು ತಮ್ಮ ಡಿಜಿಟಲ್ ಮಾರ್ಕ್ ಶೀಟ್ಗಳನ್ನು ಮಂಗಳೂರು ವಿಶ್ವ ವಿದ್ಯಾಲಯದ ಅಧಿಕೃತ ವೆಬ್ಸೈಟ್, mangaloreuniversity.ac.in ನಿಂದ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
ಈ ಮೊದಲು ವಿದ್ಯಾರ್ಥಿಗಳಿಗೆ ಏಪ್ರಿಲ್ನಲ್ಲಿ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ಹೇಳಲಾಗಿರತ್ತು. ಕೊರೊನಾ ಎರಡನೇ ಅಲೆ (Corona Second Wave) ಹಿನ್ನೆಲೆ ಪರೀಕ್ಷೆಗಳನ್ನು ವಿಶ್ವವಿದ್ಯಾನಿಲಯ ಮುಂದೂಡಿತ್ತು. ಕೋವಿಡ್ ಕಡಿಮೆಯಾದ ಬಳಿಕ ಕೊರೊನಾ ಮಾರ್ಗಸೂಚಿ ಪಾಲಿಸಿ ಪರೀಕ್ಷೆ ನಡೆಸಲಾಗಿತ್ತು.
ಇದನ್ನೂ ಓದಿ: Education Loan: ಶೈಕ್ಷಣಿಕ ಸಾಲ ಪಡೆಯಲು ಈ ದಾಖಲೆಗಳು ಬೇಕೇ ಬೇಕು
ವಿದ್ಯಾರ್ಥಿಗಳು ಮಂಗಳೂರು ವಿಶ್ವವಿದ್ಯಾನಿಲಯದ ಫಲಿತಾಂಶ 2021 ಅನ್ನು ಡೌನ್ಲೋಡ್ ಮಾಡಲು ಕೆಳಗೆ ತಿಳಿಸಲಾದ ಹಂತಗಳನ್ನು ಅನುಸರಿಸಬಹುದು. ಅಂಕಪಟ್ಟಿಗಳನ್ನು (Markssheet) ಡೌನ್ಲೋಡ್ (Download) ಮಾಡಲು ನೇರ ಲಿಂಕ್ ಅನ್ನು ಸಹ ಲಗತ್ತಿಸಲಾಗಿದೆ. ಫಲಿತಾಂಶಗಳನ್ನು ತ್ವರಿತವಾಗಿ ಪರಿಶೀಲಿಸಲು, ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ರೋಲ್ ಸಂಖ್ಯೆ ದಾಖಲಿಸಿ (registration number and roll number) ಫಲಿತಾಂಶ ನೋಡಬಹುದಾಗಿದೆ.
ಮಂಗಳೂರು ವಿಶ್ವವಿದ್ಯಾನಿಲಯ 2021ರ ಫಲಿತಾಂಶ ಈ ಕೆಳಗಿನಂತೆ ನೋಡಬಹುದಾಗಿದೆ
- ವಿದ್ಯಾರ್ಥಿಗಳು ಮಂಗಳೂರು ವಿಶ್ವವಿದ್ಯಾನಿಲಯದ ಅಧಿಕೃತ ವೆಬ್ ಸೈಟ್ mangaloreuniversity.ac.in. ಗೆ ಭೇಟಿ ನೀಡಬೇಕು.
- ಹೋಮ್ ಪೇಜ್ ನಲ್ಲಿ ಪರೀಕ್ಷೆ (Exam) ವಿಭಾಗಕಕ್ಕೆ ಹೋಗಿ ಫಲಿತಾಂಶ (Results) ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಇಲ್ಲಿ ತಿಳಿಸಲಾಗಿರುವ ಸ್ಥಳದಲ್ಲಿ ನಿಮ್ಮ Roll number, security pin ಮತ್ತು ಅಗತ್ಯ ಮಾಹಿತಿ ಹಾಕಿ ಲಾಗ್ ಇನ್ ಮಾಡಿ.
- ಲಾಗ್ ಇನ್ ಬಳಿಕ ನಿಮ್ಮ ಫಲಿತಾಂಶ ನಿಮ್ಮ ಸ್ಕ್ರೀನ್ ಮೇಲೆ ಪ್ರಕಟವಾಗುತ್ತದೆ. ವಿದ್ಯಾರ್ಥಿಗಳು ಫಲಿತಾಂಶವನ್ನು ಪ್ರಿಂಟ್ ಸಹ ತೆಗೆದುಕೊಳ್ಳಬಹುದು.
ಮಂಗಳೂರು ವಿಶ್ವವಿದ್ಯಾನಿಲಯದ ಫಲಿತಾಂಶ ನೋಡಲು ಇಲ್ಲಿ ಕ್ಲಿಕ್ ಮಾಡಿ: http://52.77.88.220:3333/
ಒಟ್ಟು 204 ಕಾಲೇಜುಗಳು ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಗೆ ಒಳಪಡುತ್ತವೆ. BA, B.Sc, B.Com BBA, BCA, B.Ed, BHM, BBM, BSW, BP, Ed, LLB & MA, M.Sc, M.Com, MBA ಮತ್ತು ವಿವಿಧ ಕೋರ್ಸ್ಗಳ ಫಲಿತಾಂಶಗಳನ್ನು ಬಿಡುಗಡೆ ಮಾಡಲಾಗಿದೆ. ಎಂಸಿಎ. ಅಭ್ಯರ್ಥಿಗಳು ತಮ್ಮ ಕಾಲೇಜುಗಳಿಂದ ಅಂಕಪಟ್ಟಿಗಳ ಭೌತಿಕ ಪ್ರತಿಯನ್ನು ಸಂಗ್ರಹಿಸಬೇಕಾಗುತ್ತದೆ. ಕೆಲವೇ ದಿನಗಳಲ್ಲಿ ಕಾಲೇಜುಗಳಿಗೆ ಅಂಕಪಟ್ಟಿ ತಲುಪಲಿದೆ. ಅಲ್ಲಿಯವರೆಗೂ ಆನ್ ಲೈನ್ ನಲ್ಲಿಯ ಪ್ರತಿಯನ್ನು ಪ್ರಿಂಟ್ ತೆಗೆದುಕೊಳ್ಳಬಹುದು.
ಇದನ್ನೂ ಓದಿ: ACB Raid: ಎಸಿಬಿ ದಾಳಿಗೆ ಒಳಗಾದ 15 ಅಧಿಕಾರಿಗಳ ಸಂಪೂರ್ಣ ವಿವರ ಇಲ್ಲಿದೆ
ಕೋವಿಡ್ ಎರಡನೇ ಅಲೆ ಹಿನ್ನೆಲೆ ಮುಂದೂಡಿಕೆಯಾಗಿದ್ದ ಪರೀಕ್ಷೆಗಳು ಆಗಸ್ಟ್ ನಲ್ಲಿ ನಡೆಸಲಾಗಿತ್ತು. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಜುಲೈನಲ್ಲಿಯೇ ಮಂಗಳೂರು ವಿಶ್ವವಿದ್ಯಾಲಯ ಪರೀಕ್ಷೆ ನಡೆಸಿತ್ತು. ಆಗಸ್ಟ್ 2ರಿಂದ ಪದವಿ ಮತ್ತು ಆಗಸ್ಟ್ 5ರಿಂದ ಸ್ನಾತಕೋತ್ತರ ಪರೀಕ್ಷೆಗಳು ನಡೆದಿದ್ದವು.
ಕೊರೊನಾ ಅಲೆ ಹಿನ್ನೆಲೆ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸರ್ಕಾರದ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಲಾಗಿತ್ತು. ಸದ್ಯ ಕೊರೊನಾ ಪಸರಿಸುವಿಕೆ ಪ್ರಮಾಣ ಕ್ಷೀಣಗೊಂಡ ಹಿನ್ನೆಲೆ ಹಂತ ಹಂತವಾಗಿ ಎಲ್ಲ ವರ್ಗದ ಶಾಲೆಗಳನ್ನು ಆರಂಭಿಸಲಾಗಿದೆ. ವಿಶೇಷವಾಗಿ ಪ್ರಾಥಮಿಕ ಶಾಲೆಯ ಎಲ್ಲ ಶಿಕ್ಷಕರು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಎರಡೂ ಡೋಸ್ ಲಸಿಕೆ ಪಡೆಯಬೇಕು ಎಂಬ ಷರತ್ತು ವಿಧಿಸಲಾಗಿದೆ.+
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ