ಮಂಗಳೂರು: ಜಿಲ್ಲಾ ಪೊಲೀಸರ ಬೃಹತ್ ಕಾರ್ಯಾಚರಣೆ ನಡೆಸಿ ಮಾನವ ಕಳ್ಳಸಾಗಾಟ ಜಾಲ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಕ್ರಮವಾಗಿ ದೇಶದೊಳಗೆ ನುಸುಳಿದ ಶ್ರೀಲಂಕಾ ಪ್ರಜೆಗಳನ್ನು ಬಂಧಿಸಲಾಗಿದೆ. ಅಕ್ರಮವಾಗಿ ಭಾರತದೊಳಗೆ ನುಸುಳಿದ್ದ 44 ಶ್ರೀಲಂಕಾ ಪ್ರಜೆಗಳು ಬಂಧನಕ್ಕೊಳಗಾಗಿದ್ದಾರೆ. ಶ್ರೀಲಂಕಾದಿಂದ ಸಮುದ್ರ ಮಾರ್ಗವಾಗಿ ತಮಿಳುನಾಡಿಗೆ ಬಂದಿದ್ದ ಇವರು ಅಲ್ಲಿಂದ ಮಂಗಳೂರಿಗೆ ಬಂದಿದ್ದರು ಎಂದು ತಿಳಿದು ಬಂದಿದೆ. ಮಂಗಳೂರಿನಲ್ಲಿ ಕಳೆದ 2 ತಿಂಗಳಿಂದ ಶ್ರೀಲಂಕಾದ ಅಕ್ರಮ ವಲಸಿಗರು ನೆಲೆಸಿರುವುದು ಬಯಲಾಗಿದೆ.
ಲಾಕ್ ಡೌನ್ ಹಿನ್ನೆಲೆಯಲ್ಲಿ ಮಂಗಳೂರಿನಲ್ಲೇ ಅಕ್ರಮ ನುಸುಳು ಕೋರರು ಸಿಕ್ಕಿಹಾಕಿಕೊಂಡಿದ್ದರು . ಸಮುದ್ರ ಮಾರ್ಗವಾಗಿ ಕೆನಡಾ ದೇಶಕ್ಕೆ ತೆರಳಲು ಅಣಿಯಾಗಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇನ್ನು ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಲು 6-7 ಮಂದಿ ಸ್ಥಳೀಯರು ಸಹಾಯ ಮಾಡುತ್ತಿದ್ದ ವಿಚಾರವೂ ಬಯಲಾಗಿದೆ. ಆದರಷ್ಟು ಬೇಗ ಅವರನ್ನೂ ಬಂಧಿಸಲಾಗುವುದು ಎಂದು ಪೊಲೀಸ್ ಕಮಿಷನಲ್ ಶಶಿಕುಮಾರ್ ತಿಳಿಸಿದ್ದಾರೆ.
ಸಮುದ್ರವಾಗಿ ಅಕ್ರಮವಾಗಿ ಕೆನಡಾಕ್ಕೆ ತೆರಳಲು ಯೋಜಿಸಿದ್ದ ಬರೋಬ್ಬರಿ 44 ಶ್ರೀಲಂಕಾ ಪ್ರಜೆಗಳನ್ನು ಮಂಗಳೂರಿನಲ್ಲಿ ಪತ್ತೆ ಹಚ್ಚಿ ಬಂಧಿಸಲಾಗಿದೆ. ಬಂಧಿತರ ಬಳಿ ಯಾವುದೇ ಪಾಸ್ಪೋರ್ಟ್, ವೀಸಾ ಸೇರಿದಂತೆ ಸೂಕ್ತ ದಾಖಲೆಗಳು ಇಲ್ಲ. ಮೊದಲು ತಮಿಳುನಾಡಿನ ಮೂಲಕ ಭಾರತಕ್ಕೆ ಪ್ರವೇಶಿದ ನುಸುಳುಕೋರರು ನಂತರ ಕರ್ನಾಟಕದ ಮಂಗಳೂರಿಗೆ ಆಗಮಿಸಿದ್ದಾರೆ. ಅಷ್ಟರಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಕೋವಿಡ್ ಹಿನ್ನೆಲೆ ಲಾಕ್ಡೌನ್ ಘೋಷಿಸಿದೆ. ಇದರಿಂದ ಸಮುದ್ರ ಮಾರ್ಗವಾಗಿ ಕೆನಡಾಗೆ ಹೋಗುವ ಇವರ ಪ್ಲಾನ್ಗೆ ಹಿನ್ನೆಲೆಯಾಗಿದೆ. ಲಾಕ್ಡೌನ್ ಮುಗಿಯುವವರೆಗೆ ಮಂಗಳೂರಿನಲ್ಲೇ ನೆಲೆಸಿದ್ದ 44 ಶ್ರೀಲಂಕಾ ಪ್ರಜೆಗಳು ಸ್ಥಳೀಯರಿಂದ ಸಹಾಯ ಪಡೆದಿದ್ದಾರೆ.
ಇನ್ನು ದೇಶದಲ್ಲಿ ಕೊರೋನಾ 2ನೇ ಅಲೆ ತಗ್ಗುತ್ತಿದ್ದು, ಲಸಿಕೆ ಅಭಿಯಾನ ಸಮರೋಪಾದಿಯಲ್ಲಿ ನಡೆಯುತ್ತಿದೆ. ಈವರೆಗೂ ಕೇಂದ್ರದಿಂದ ರಾಜ್ಯಗಳಿಗೆ 25.60 ಕೋಟಿ ಡೋಸ್ ಹಂಚಿಕೆಯಾಗಿದೆ. ಈವರೆಗೂ 24.44 ಕೋಟಿ ಡೋಸ್ ಬಳಕೆಯಾಗಿದೆ. ರಾಜ್ಯಗಳಲ್ಲಿ ಸದ್ಯ 1.17 ಕೋಟಿ ಡೋಸ್ ಬಳಕೆಗೆ ಲಭ್ಯವಿದೆ. ಇನ್ನು ಮೂರು ದಿನಗಳಲ್ಲಿ 38 ಲಕ್ಷ ಡೋಸ್ ಹಂಚಿಕೆಯಾಗಕಲಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹಂಚಿಕೆ ಮಾಡಲಾಗುವುದು ಎಂದು ಕೇಂದ್ರ ಆರೋಗ್ಯ ಇಲಾಖೆಯಿಂದ ಮಾಹಿತಿ ನೀಡಿದೆ.
ನ್ಯೂಸ್18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್ಡೌನ್ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ