ಮಂಗಳೂರು (ಜು. 21): ಕಾಂಗ್ರೆಸ್ ಹಿರಿಯ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ಆಸ್ಪತ್ರೆಗೆ ದಾಖಲಾಗಿರುವ ಹಿನ್ನಲೆ ಅವರ ಎಂ ಬಿ ಪಾಟೀಲ್ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ಇಲ್ಲಿನ ಯೆನೆಪೋಯಾ ಆಸ್ಪತ್ರೆಯಲ್ಲಿ ಐಸಿಯು ಅಲ್ಲಿ ದಾಖಲಾಗಿರುವ ತಮ್ಮ ಪಕ್ಷದ ಹಿರಿಯ ನಾಯಕರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಇದೇ ವೇಳೆ ಮಾತನಾಡಿದ ಎಂಬಿ ಪಾಟೀಲ್, ಆಸ್ಕರ್ ಅವರಿಗೆ ಸದ್ಯ ಪರಿಣಿತ ತಜ್ಞ ವೈದ್ಯರ ತಂಡ ಚಿಕಿತ್ಸೆ ಕೊಡುತ್ತಿದ್ದಾರೆ. ಮಣಿಪಾಲ್ ವೈದ್ಯರು ಸೇರಿದಂತೆ ಬೇರೆ ಬೇರೆ ತಜ್ಞ ವೈದ್ಯರು ಚಿಕಿತ್ಸೆ ಕೊಡುತ್ತಿದ್ದಾರೆ. ಸೋನಿಯಾ ಗಾಂಧಿ, ರಾಹುಲ್, ಪ್ರಿಯಾಂಕ ಅವರು ಆಸ್ಕರ್ ಅವರ ಕುಟುಂಬದ ಜೊತೆ ಮಾತನಾಡಿ, ಧೈರ್ಯ ಹೇಳಿದ್ದಾರೆ. ಪೇಜಾವರ ಸ್ವಾಮೀಜಿಗಳು ಕೂಡ ಅವರ ಆರೋಗ್ಯ ವಿಚಾರಿಸಿದ್ದಾರೆ ಎಂದು ತಿಳಿಸಿದರು.
ಆಸ್ಕರ್ ಫರ್ನಾಂಡಿಸ್ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರಾಗಿದ್ದಾಗ ನಮ್ಮ ತಂದೆ ಉಪಾಧ್ಯಕ್ಷರಾಗಿದ್ದರು. ನಮ್ಮ ತಂದೆಯವರ ಸ್ವಭಾವ ಮತ್ತು ಆಸ್ಕರ್ ಅವರ ಸ್ವಭಾವ ಒಂದೇ ಆಗಿತ್ತು. ಹೀಗಾಗಿ ನನ್ನ ಮೇಲೂ ಅವರಿಗೆ ವಿಶೇಷ ಪ್ರೀತಿ. ಇದೇ ಕಾರಣ ಅವರು ನನಗೆ ಈ ಸ್ಥಾನಕ್ಕೇರಲು ಸಹಾಯ ಮಾಡಿದ್ದರು. ಅವರ ಶೀಘ್ರವಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇವೆ. ಅವರು ಜಂಟಲ್ ಮೆನ್, ಬಹಳ ಒಳ್ಳೆಯ ಮನುಷ್ಯ. ಅವರು ಬೇಗ ಗುಣಮುಖರಾಗಲಿ ಎಂದು ಹಾರೈಸಿದರು.
ಇದನ್ನು ಓದಿ: 2024ರವರೆಗೂ ಸೋನಿಯಾ ಗಾಂಧಿಯೇ ಕಾಂಗ್ರೆಸ್ ಅಧ್ಯಕ್ಷೆ
ಭಾನುವಾರ ಯೋಗ ಮಾಡುತ್ತಿದ್ದ ವೇಳೆ ಆಸ್ಕರ್ ಫರ್ನಾಂಡಿಸ್ ಜಾರಿ ಬಿದ್ದಿದ್ದರು. ಈ ವೇಳೆ ಅವರಿಗೆ ಯಾವುದೇ ಗಾಯಗಳಾಗಿರಲಿಲ್ಲ. ಡಯಾಲಿಸಿಸ್ ವೇಳೆ ಅವರ ರಕ್ತ ಹೆಪ್ಪುಗಟ್ಟಿರುವದು ಪತ್ತೆಯಾಗಿದೆ. ಅವರ ಮೆದುಳಿಗೆ ಪೆಟ್ಟು ಬಿದ್ದಿದ್ದು, ಪ್ರಜ್ಞಾ ಹೀನ ಸ್ಥಿತಿಯಲ್ಲಿದ್ದಾರೆ. ಸದ್ಯ ಐಸಿಯಿ ಅವಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಜ್ಯ ಸಭಾ ಸದಸ್ಯರಾಗಿರುವ ಆಸ್ಕರ್ ಫರ್ನಾಂಡಿಸ್ ಮನಮೋಹನ್ ನೇತೃತ್ವದ ಸರ್ಕಾರದಲ್ಲಿ ಸಾರಿಗೆ, ರಸ್ತೆ ಮತ್ತು ಹೆದ್ದಾರಿ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಇದೇ ವೇಳೇ ಅವರು ಹೆಚ್ಚುವರಿಯಾಗಿ ಕಾರ್ಮಿಕ ಮತ್ತು ಉದ್ಯೋಗ ಸಚಿವರಾಗಿದ್ದರು.
ಉಡುಪಿ ಮೂಲಕ ಆಸ್ಕರ್ ಫರ್ನಾಂಡಿಸ್ 1980ರಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿದ್ದರು. 1983ರಲ್ಲಿ ಅವರು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಜಂಟಿ ಕಾರ್ಯದರ್ಶಿಯಾಗಿದ್ದರು. 1983 ರಿಂದ 1997ರವರೆಗೆ ಐದು ಬಾರಿ ಲೋಕಸಭಾ ಸಂಸದರಾಗಿ ಆಯ್ಕೆಯಾಗಿದ್ದರು. 1998ರಲ್ಲಿ ಮೊದಲ ಬಾರಿಗೆ ರಾಜ್ಯಸಭೆ ಸದಸ್ಯರಾಗಿದ್ದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ