Aditya Rao: ರಹಸ್ಯ ಸ್ಥಳದಲ್ಲಿ ಮಂಗಳೂರು ಬಾಂಬರ್​ ಆದಿತ್ಯ ರಾವ್​ ವಿಚಾರಣೆ

ಠಾಣೆಗೆ ಬಂದ ಇನ್ಸ್​ಪೆಕ್ಟರ್ ಹರಿವರ್ಧನ್, ಆದಿತ್ಯರಾವ್ ವಿಚಾರಣೆ ಮಾಡಿದ್ದಾರೆ. ಮೈಸೂರು ಬ್ಯಾಂಕ್ ಸರ್ಕಲ್ ಕಡೆಯಿಂದ ಪೊಲೀಸರು ಈತನನ್ನು ರಹಸ್ಯ ಸ್ಥಳಕ್ಕೆ ಆಗಮಿಸಿದ್ದಾರೆ. ಇಲ್ಲಿ ಹೆಚ್ಚಿನ ವಿಚಾರಣೆ ನಡೆಯುವ ಸಾಧ್ಯತೆ ಇದೆ. 

ಸಿಸಿಟಿವಿಯಲ್ಲಿ ಪತ್ತೆಯಾಗಿರುವ ಶಂಕಿತ ವ್ಯಕ್ತಿ.

ಸಿಸಿಟಿವಿಯಲ್ಲಿ ಪತ್ತೆಯಾಗಿರುವ ಶಂಕಿತ ವ್ಯಕ್ತಿ.

 • Share this:
  ಬೆಂಗಳೂರು (ಜ.22): ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಮಂಗಳೂರು ವಿಮಾನ ನಿಲ್ದಾಣದ ಬಾಂಬ್​ ಪತ್ತೆ ಪ್ರಕರಣದ ಆರೋಪಿ ಆದಿತ್ಯ ರಾವ್ ಎಂಬಾತ ಪೊಲೀಸರಿಗೆ ಶರಣಾಗಿದ್ದಾನೆ. ಈತನನ್ನು ಬಂಧಿಸಿ ಪೊಲೀಸರು ರಹಸ್ಯ ಸ್ಥಳಕ್ಕೆ ಕರೆದೊಯ್ದಿದ್ದಾರೆ. 

  ಶಂಕಿತನ ಜಾಡು ಹಿಡಿದ ಪೊಲೀಸರು ಉಡುಪಿ ಮನೆಯನ್ನು ಶೋಧಿಸಿದ್ದರು. ಮನೆಯಲ್ಲಿದ್ದವರನ್ನು ವಿಚಾರಣೆ ಮಾಡಿದ್ದರು. ಪ್ರಕರಣದಲ್ಲಿ  ಆದಿತ್ಯ ರಾವ್ ಕೈವಾಡದ ಬಗ್ಗೆ ಪ್ರಶ್ನೆ ಮಾಡಲಾಗಿತ್ತು. ಈಗ ಬೆಂಗಳೂರಿಗೆ ಬಂದು ಆದಿತ್ಯ ರಾವ್ ಶರಣಾಗಿದ್ದಾನೆ. ಶರಣಾದ ಬಳಿಕ ಆತನನ್ನು ಖಾಕಿ ಪಡೆ ಬಂಧಿಸಿದೆ.

  ಬೆಂಗಳೂರು ಡಿಜಿ ಕಚೇರಿಗೆ ಹೋಗಿ ನಾನೇ ಆದಿತ್ಯರಾವ್ ಅಂತ ಹೇಳಿಕೊಂಡಿದ್ದ. ತಕ್ಷಣ ಹೊಯ್ಸಳ ವಾಹನದಲ್ಲಿ ಹಲಸೂರು ಗೇಟ್ ಪೊಲೀಸ್ ಠಾಣೆಗೆ ಈತನನ್ನು ಕರೆತರಲಾಗಿತ್ತು. ಠಾಣೆಗೆ ಬಂದ ಇನ್ಸ್​ಪೆಕ್ಟರ್ ಹರಿವರ್ಧನ್, ಆದಿತ್ಯರಾವ್ ವಿಚಾರಣೆ ಮಾಡಿದ್ದಾರೆ. ಮೈಸೂರು ಬ್ಯಾಂಕ್ ಸರ್ಕಲ್ ಕಡೆಯಿಂದ ಪೊಲೀಸರು ಈತನನ್ನು ರಹಸ್ಯ ಸ್ಥಳಕ್ಕೆ ಆಗಮಿಸಿದ್ದಾರೆ. ಇಲ್ಲಿ ಹೆಚ್ಚಿನ ವಿಚಾರಣೆ ನಡೆಯುವ ಸಾಧ್ಯತೆ ಇದೆ.

  ಸೋಮವಾರ ಮಂಗಳೂರು ಏರ್​ಪೋರ್ಟ್​ನಲ್ಲಿ ಸಜೀವ ಬಾಂಬ್ ಪತ್ತೆಯಾಗಿತ್ತು. ಈ ಕಾರಣ ವಿಮಾನಗಳ ಹಾರಾಟದಲ್ಲಿ ಕೆಲ ಕಾಲ ವ್ಯತ್ಯಯ ಉಂಟಾಗಿತ್ತು.  ಬೆಳಗ್ಗೆ 7 ರಿಂದ 8 ಗಂಟೆ ಸಂದರ್ಭದಲ್ಲಿ ವಿಮಾನ ನಿಲ್ದಾಣಕ್ಕೆ ಆಟೋ ಮೂಲಕ ವ್ಯಕ್ತಿಯೋರ್ವ ಬಂದಿದ್ದ . ಈ ವೇಳೆ ಬಾಂಬ್ ಇದ್ದ ಲ್ಯಾಪ್​ಟಾಪ್​ ಬ್ಯಾಗ್ ಅನ್ನು ವಿಮಾನ ನಿಲ್ದಾಣದಲ್ಲೇ ಬಿಟ್ಟು ಹೋಗಿದ್ದ. ಆದರೆ, ಈ ಬ್ಯಾಗ್​ನಲ್ಲಿ ಸಜೀವ ಬಾಂಬ್ ಇರುವುದು ನಂತರ ಪತ್ತೆಯಾಗಿದೆ. ಹೀಗಾಗಿ ಕೆಲ ಕಾಲ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ನಂತರ ಈ ಬಾಂಬ್​ಅನ್ನು ಖಾಲಿ ಪ್ರದೇಶದಲ್ಲಿ ನಿಷ್ಕ್ರಿಯಗೊಳಿಸಿಸಲಾಗಿತ್ತು.

   
  First published: