ವಿಶ್ವ ಆರೋಗ್ಯ ಸಂಸ್ಥೆಯ ನಿರ್ದೇಶಕ ಎಂದು ಹೇಳಿಕೊಂಡು ಮಂಗಳೂರಿಗೆ ಬಂದಿದ್ದ ಕಾಶ್ಮೀರಿ ವ್ಯಕ್ತಿ ಸೇರಿ ಇಬ್ಬರ ಬಂಧನ

ಕೆಲವು ಸೂಕ್ಷ್ಮ ವಿಚಾರಗಳಿಗೆ ಸಂಬಂಧಿಸಿದಂತೆ ಆರೋಪಿಗಳನ್ನು ತೀವ್ರವಾಗಿ ವಿಚಾರಣೆ ನಡೆಸಲಾಗುತ್ತಿದೆ. ಬಂಧನದ ಕುರಿತು ಕೇಂದ್ರೀಯ ತನಿಖಾ ಸಂಸ್ಥೆಗಳಿಗೂ ಮಾಹಿತಿ ನೀಡಲಾಗಿದೆ. ಅವರಿಂದಲೂ ತನಿಖೆಗೆ ನೆರವು ಪಡೆಯಲಾಗುತ್ತಿದೆ ಎಂದರು.

HR Ramesh | news18-kannada
Updated:August 24, 2019, 4:30 PM IST
ವಿಶ್ವ ಆರೋಗ್ಯ ಸಂಸ್ಥೆಯ ನಿರ್ದೇಶಕ ಎಂದು ಹೇಳಿಕೊಂಡು ಮಂಗಳೂರಿಗೆ ಬಂದಿದ್ದ ಕಾಶ್ಮೀರಿ ವ್ಯಕ್ತಿ ಸೇರಿ ಇಬ್ಬರ ಬಂಧನ
ಬಂಧಿತ ಆರೋಪಿಗಳಾದ ಬಲ್ಜಿಂದರ್ ಸಿಂಗ್ ಮತ್ತು ಶೌಕತ್ ಅಹ್ಮದ್​ ಲೋನ್
HR Ramesh | news18-kannada
Updated: August 24, 2019, 4:30 PM IST
ಮಂಗಳೂರು: ವಿಶ್ವ ಆರೋಗ್ಯ ಸಂಸ್ಥೆಯ ನಿರ್ದೇಶಕರ ಸೋಗಿನಲ್ಲಿ ನಗರ ಪ್ರವೇಶಿಸಿದ್ದ ಕಾಶ್ಮೀರದ ವ್ಯಕ್ತಿ ಸೇರಿದಂತೆ ಇಬ್ಬರನ್ನು ಮಂಗಳೂರಿನ ಬರ್ಕೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಆಗಸ್ಟ್​ 17ರಂದು ಖಚಿತ ಮಾಹಿತಿ ಆಧಾರದ ಮೇಲೆ ಕಾರ್ಯಾಚರಣೆ ಆರಂಭಿಸಿದ ಪೊಲೀಸರು ಕಾಶ್ಮೀರದ ಗಂಧರ್ಬಾಲ್​ ಜಿಲ್ಲೆಯ ಗಂಜೀಪುರ್​ ನಿವಾಸಿ ಶೌಕತ್​ ಅಹ್ಮದ್ ಲೋನ್​ ಅಲಿಯಾಸ್ ಬಲ್ಜಿತ್​ ಷಾ ಮತ್ತು ಆತನ ಚಾಲಕ ಬಲ್ಜಿಂದರ್ ಸಿಂಗ್ ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ಮತ್ತೆ ವಶಕ್ಕೆ ಪಡೆದಿರುವ ತನಿಖಾ ತಂಡ ಹೆಚ್ಚಿನ ವಿಚಾರಣೆ ನಡೆಸುತ್ತಿದೆ ಎಂದು ಮಂಗಳೂರು ಕಮಿಷನರ್ ಡಾ.ಪಿ.ಎಸ್.ಹರ್ಷ ಅವರು ಇಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಪ್ರಮುಖ ಆರೋಪಿ ಶೌಕತ್​ ಲೋನ್​ ತಾನು ವಿಶ್ವ ಆರೋಗ್ಯ ಸಂಸ್ಥೆಯ ನಿರ್ದೇಶಕ ಬಲ್ಜಿತ್​ ಷಾ ಎಂದು ಹೇಳಿಕೊಂಡಿದ್ದ. ಕೆಲಸ ಕೊಡಿಸುವ ಹೆಸರಿನಲ್ಲಿ ಹಲವು ರಾಜ್ಯಗಳಲ್ಲಿ ಯುವಜನರಿಗೆ ವಂಚಿಸಿದ್ದಾನೆ. ಮ್ಯಾಟ್ರಿಮೋನಿಯಲ್ ವೆಬ್​ಸೈಟ್​ಗಳ ಮೂಲಕ ಹಲವು ಯುವತಿಯರಿಗೆ ವಂಚಿಸಿದ್ದಾನೆ ಎಂದರು.

ಆರೋಪಿಗಳು ಮಂಗಳೂರಿಗೆ ಬರುವ ಮುನ್ನ ಗೋವಾ, ಹೈದರಾಬಾದ್, ಸೇರಿದಂತೆ ಹಲವು ಕಡೆಗಳಲ್ಲಿ ವಾಸ್ತವ್ಯ ಹೂಡದ್ದರು. ಕೆಲವು ಸೂಕ್ಷ್ಮ ಪ್ರದೇಶಗಳಲ್ಲಿ ಓಡಾಟ ಮಾಡಿರುವುದು ಗೊತ್ತಾಗಿದೆ. ಆಗಸ್ಟ್​ 16ರಂದು ಮಂಗಳೂರಿಗೆ ಬಂದಿದ್ದ ಇಬ್ಬರೂ ಇಲ್ಲಿಯೂ ಕೆಲವು ಸೂಕ್ಷ್ಮ ಸ್ಥಳಗಳಲ್ಲಿ ಓಡಾಡಿದ್ದಾರೆ. ಕೆಲವು ಸೂಕ್ಷ್ಮ ವಿಚಾರಗಳಿಗೆ ಸಂಬಂಧಿಸಿದಂತೆ ಆರೋಪಿಗಳನ್ನು ತೀವ್ರವಾಗಿ ವಿಚಾರಣೆ ನಡೆಸಲಾಗುತ್ತಿದೆ. ಬಂಧನದ ಕುರಿತು ಕೇಂದ್ರೀಯ ತನಿಖಾ ಸಂಸ್ಥೆಗಳಿಗೂ ಮಾಹಿತಿ ನೀಡಲಾಗಿದೆ. ಅವರಿಂದಲೂ ತನಿಖೆಗೆ ನೆರವು ಪಡೆಯಲಾಗುತ್ತಿದೆ ಎಂದರು.

ಇದನ್ನು ಓದಿ: ಶ್ರೀನಗರಕ್ಕೆ ಆಗಮಿಸಿದ ರಾಹುಲ್​ ಗಾಂಧಿ ನಿಯೋಗ; ವಾಪಸ್​ ಹೋಗಿ ಎಂದ ಜಮ್ಮು-ಕಾಶ್ಮೀರ ಸರ್ಕಾರ

ಆರೋಪಿಗಳು ಯಾವ ಉದ್ದೇಶದಿಂದ ಮಂಗಳೂರಿಗೆ ಬಂದಿದ್ದರು? ಯಾವುದಾದರೂ ಸಂಘಟನೆಗಳೊಂದಿಗೆ ಸಂಬಂಧ ಹೊಂದಿದ್ದಾರೆಯೇ ಎಂಬುದರ ಬಗ್ಗೆಯೂ ತನಿಖೆ ನಡೆಯುತ್ತಿದೆ ಎಂದು ತಿಳಿಸಿದರು.

ಕ್ಷಣಕ್ಷಣದ ಬ್ರೇಕಿಂಗ್ ನ್ಯೂಸ್ ಅಲರ್ಟ್​​ಗಾಗಿ ನಿಮ್ಮ ನ್ಯೂಸ್18 ಕನ್ನಡವನ್ನು ಫೇಸ್​ಬುಕ್ ಮೆಸೆಂಜರ್​ನಲ್ಲಿ ಸಬ್​ಸ್ಕ್ರೈಬ್​ ಮಾಡಲು ಇಲ್ಲಿ ಕ್ಲಿಕ್​ ಮಾಡಿ
Loading...

First published:August 24, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...