ಆರೋಪಿ ಆದಿತ್ಯ ರಾವ್ ಬಂಧನ ಹಿನ್ನೆಲೆ; ವಿಚಾರಣೆಗಾಗಿ ಬೆಂಗಳೂರಿಗೆ ದೌಡಾಯಿಸಿದ ಮಂಗಳೂರು ಪೊಲೀಸರು

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಪ್ರಕರಣದ ಆರೋಪಿ ಆದಿತ್ಯ ರಾವ್ ಬೆಂಗಳೂರಿನಲ್ಲಿ ಸೆರೆಯಾಗಿರುವುದರಿಂದ ಮಂಗಳೂರು ಪೊಲೀಸರ ತಂಡ ಬೆಂಗಳೂರಿಗೆ ತೆರಳಿ, ವಿಚಾರಣೆ ನಡೆಸಲಿದೆ.

ಐಪಿಎಸ್​ ಡಾ. ಹರ್ಷ ಮತ್ತು ಆರೋಪಿ ಆದಿತ್ಯ ರಾವ್​

ಐಪಿಎಸ್​ ಡಾ. ಹರ್ಷ ಮತ್ತು ಆರೋಪಿ ಆದಿತ್ಯ ರಾವ್​

  • Share this:
ಬೆಂಗಳೂರು (ಜ. 22): ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮುಂಜಾನೆ ಆರೋಪಿ ಆದಿತ್ಯ ರಾವ್​ನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ತಾನೇ ಏರ್​ಪೋರ್ಟ್​ನಲ್ಲಿ ಬಾಂಬ್ ಇಟ್ಟಿದ್ದು ಎಂದು ಖುದ್ದು ಆದಿತ್ಯ ರಾವ್  ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದ. ಈ ಕುರಿತು ವಿಚಾರಣೆಗಾಗಿ ಮಂಗಳೂರು ಪೊಲೀಸರು ಬೆಂಗಳೂರಿಗೆ ತೆರಳಿ ವಿಚಾರಣೆ ನಡೆಸುವುದಾಗಿ ಮಂಗಳೂರು ಪೊಲೀಸ್ ಆಯುಕ್ತ ಡಾ. ಹರ್ಷ ಟ್ವೀಟ್ ಮಾಡಿದ್ದಾರೆ. 

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಪ್ರಕರಣದ ಆರೋಪಿ ಬೆಂಗಳೂರಿನಲ್ಲಿ ಸೆರೆಯಾಗಿರುವುದರಿಂದ ಮಂಗಳೂರು ಪೊಲೀಸರ ತಂಡ ಬೆಂಗಳೂರಿಗೆ ತೆರಳಲಿದೆ. ಈ ಪ್ರಕರಣಕ್ಕೆ ಸಂಬಂಧಿಸಿದ ಬೆಳವಣಿಗೆಯ ಕುರಿತು ವಿಚಾರಣೆ ನಡೆಸಲಿದೆ. ಆರೋಪಿ ಆದಿತ್ಯ ರಾವ್​ನನ್ನು ವಿಚಾರಣೆ ಮಾಡಿದ ಬಳಿಕ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ಪೊಲೀಸ್ ಆಯುಕ್ತ ಡಾ. ಹರ್ಷ ಟ್ವೀಟ್ ಮಾಡಿದ್ದಾರೆ.ಸೋಮವಾರ ಮಂಗಳೂರು ಏರ್​ಪೋರ್ಟ್​ನಲ್ಲಿ ಸಜೀವ ಬಾಂಬ್ ಇರುವ ಬ್ಯಾಗ್ ಪತ್ತೆಯಾಗಿತ್ತು. ಈ ಕಾರಣ ವಿಮಾನಗಳ ಹಾರಾಟದಲ್ಲಿ ಕೆಲ ಕಾಲ ವ್ಯತ್ಯಯ ಉಂಟಾಗಿತ್ತು. ಏರ್​​ಪೋರ್ಟ್​ನಲ್ಲಿದ್ದ ಪ್ರಯಾಣಿಕರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಲಾಗಿತ್ತು. ಈ ಬಗ್ಗೆ ಸಿಸಿಟಿವಿ ಪರಿಶೀಲಿಸಿದಾಗ ಆಟೋದಲ್ಲಿ ಬಂದಿದ್ದ ವ್ಯಕ್ತಿಯೋರ್ವ ಆ ಬ್ಯಾಗ್ ಅನ್ನು ವಿಮಾನ ನಿಲ್ದಾಣದಲ್ಲೇ ಬಿಟ್ಟು ಹೋಗಿದ್ದು ಕಂಡು ಬಂದಿತ್ತು.

ಇದನ್ನೂ ಓದಿ: ಮಂಗಳೂರು ಬಾಂಬ್​ ಪತ್ತೆ ಪ್ರಕರಣ; ಆರೋಪಿ ಆದಿತ್ಯ ರಾವ್​ ಪೊಲೀಸರಿಗೆ ಶರಣು

ಶಂಕಿತನ ಜಾಡು ಹಿಡಿದ ಪೊಲೀಸರು ಉಡುಪಿ ಮನೆಯನ್ನು ಶೋಧಿಸಿದ್ದರು. ಮನೆಯಲ್ಲಿದ್ದವರನ್ನು ವಿಚಾರಣೆ ಮಾಡಿದ್ದರು. ಪ್ರಕರಣದಲ್ಲಿ ಆದಿತ್ಯ ರಾವ್ ಕೈವಾಡದ ಬಗ್ಗೆ ಪ್ರಶ್ನೆ ಮಾಡಲಾಗಿತ್ತು. ಈಗ ಬೆಂಗಳೂರಿಗೆ ಬಂದು ಆದಿತ್ಯ ರಾವ್ ಶರಣಾಗಿದ್ದಾನೆ.  ಬೆಂಗಳೂರು ಡಿಜಿ ಕಚೇರಿಗೆ ಹೋಗಿ ನಾನೇ ಆದಿತ್ಯರಾವ್ ಅಂತ ಹೇಳಿಕೊಂಡಿದ್ದ. ತಕ್ಷಣ ಹೊಯ್ಸಳ ವಾಹನದಲ್ಲಿ ಹಲಸೂರು ಗೇಟ್ ಪೊಲೀಸ್ ಠಾಣೆಗೆ ಈತನನ್ನು ಕರೆತರಲಾಗಿತ್ತು. ಠಾಣೆಗೆ ಬಂದ ಇನ್ಸ್​ಪೆಕ್ಟರ್ ಹರಿವರ್ಧನ್ ಆರೋಪಿ ಆದಿತ್ಯ ರಾವ್​ನನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

 
First published: