Crime News: ಸಮನ್ಸ್​ ನೀಡುವ ನೆಪದಲ್ಲಿ ಯುವತಿಯ ಅತ್ಯಾಚಾರ ಮಾಡಿದ ಪೊಲೀಸ್​ ಅಧಿಕಾರಿ

ಎರಡು ವರ್ಷಗಳ ಹಿಂದೆ ನನ್ನ ಮಗಳು ಅತ್ಯಾಚಾರಕ್ಕೊಳಗಾದ ಸಂತ್ರಸ್ಥೆಯಾಗಿದ್ದು, ಪ್ರಕರಣ ಆರು ತಿಂಗಳ ಹಿಂದೆ ಮುಗಿದಿದೆ ಅಷ್ಟೆ, ಈ ಪ್ರಕರಣಕ್ಕೆ ಸಂಬಂಧಿಸಿ ಕಡಬ ?

ಆರೋಪಿ

ಆರೋಪಿ

 • Share this:
  Mangaluru Crime News: ಎರಡು ವರ್ಷಗಳ  ಹಿಂದೆ ನಡೆದ  ಪ್ರಕರಣವೊಂದರಲ್ಲಿ ಸಂತ್ರಸ್ಥೆಯಾಗಿದ್ದ ಅಪ್ರಾಪ್ತೆ ಯುವತಿಯನ್ನು ವಿಚಾರಣೆ ಹಾಗೂ ಸಮನ್ಸ್ ನೀಡುವ ನೆಪದಲ್ಲಿ ಪೋಲೀಸ್ ಸಿಬ್ಬಂದಿಯೋರ್ವ ಅತ್ಯಾಚಾರ ನಡೆಸಿ ಗರ್ಭದಾನ ಮಾಡಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದಿದೆ. ಈ ಸಂಬಂಧ ಕಡಬ ಪೊಲೀಸ್ ಠಾಣೆಯ ಪೊಲೀಸ್​ ಸಿಬ್ಬಂದಿ ಶಿವರಾಜ್ ವಿರುದ್ದ ಕಡಬ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ಯುವತಿಯ ತಂದೆ ದೂರು ನೀಡಿದ್ದು ತನ್ನ ಮಗಳನ್ನು ಬಲತ್ಕಾರ ಮಾಡಿ ಅತ್ಯಾಚಾರ ಎಸಗಿ ಇದೀಗ ಗರ್ಭವತಿಯಾಗಲು ಕಾರಣನಾಗಿದ್ದು, ಗರ್ಭಪಾತ ನಡೆಸುವ ಸಲುವಾಗಿ ಯುವತಿಯನ್ನು ಮಂಗಳೂರಿನಲ್ಲಿ ಅಜ್ಞಾತ ಸ್ಥಳದಲ್ಲಿರಿಸಿದ್ದಾನೆ, ಅಲ್ಲದೆ ಗರ್ಭಪಾತ ನಡೆಸಲು ಹಣವನ್ನು ಕೂಡ ಪೋಲಿಸ್ ಸಿಬ್ಬಂದಿ ಶಿವರಾಜ್ ನೀಡಿದ್ದಾನೆ ಎಂದು ಯುವತಿಯ ತಂದೆ ದೂರಿನಲ್ಲಿ ದಾಖಲಿಸಿದ್ದಾರೆ.

  ಯುವತಿಯ ತಂದೆ ಹೇಳೋದೇನು?:

  ಯುವತಿಯ ತಂದೆ ಹಾಗೂ ತಾಯಿ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಎರಡು ವರ್ಷಗಳ ಹಿಂದೆ ಮಗಳು ಅತ್ಯಾಚಾರಕ್ಕೊಳಗಾದ ಸಂತ್ರಸ್ಥೆಯಾಗಿದ್ದು, ಪ್ರಕರಣ ಆರು ತಿಂಗಳ ಹಿಂದೆ ಮುಗಿದಿದೆ ಅಷ್ಟೆ. ಈ ಪ್ರಕರಣಕ್ಕೆ ಸಂಬಂಧಿಸಿ ಕಡಬ ಠಾಣೆಯ ಪೋಲಿಸ್ ಸಿಬ್ಬಂದಿ ಶಿವರಾಜ್ ಎಂಬಾತ ಯಾವುದೋ ದಾಖಲೆ, ಸಮನ್ಸ್ ನೀಡುವ ವಿಚಾರಕ್ಕೆ ಮನೆಗೆ ಬರುತ್ತಿದ್ದು ಪರಿಚಯವಾಗಿದ್ದ ಎನ್ನಲಾಗಿದೆ. ನ್ಯೂಸ್​18 ಜೊತೆ ಮಾತನಾಡಿದ ಸಂತ್ರಸ್ಥೆಯ ತಂದೆ, ಪ್ರಕರಣ ಮುಗಿದಿದ್ದರೂ ಶಿವರಾಜ್ ಬೇರೆ ಬೇರೆ ನೆಪವೊಡ್ಡಿ ಮನೆಗೆ ಬರುತ್ತಿರುವುದು ನನ್ನ ಗಮನಕ್ಕೆ ಬಂದಿತ್ತು. ಆದರೆ ನನಗೆ ಇಂತಹ ಕೆಟ್ಟ ಚಾಳಿ ಇರುವುದು ನನ್ನ ಗಮನಕ್ಕೆ ಬಂದಿರುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ.

  ಮುಂದುವರೆದ ಅವರು ಇತ್ತಿಚೆಗೆ ಆರೋಗ್ಯದಲ್ಲಿ ಏರು ಪೇರಾಗಿ ಮಗಳು ಗರ್ಭಿಣಿ ಆಗಿರುವುದು ತಿಳಿದು ಬಂದು ಮಗಳನ್ನು ವಿಚಾರಿಸಿದಾಗ ಕಡಬ ಪೋಲಿಸ್ ಶಿವರಾಜ್ ಎಂಬಾತ ನನ್ನನ್ನು ಮದುವೆಯಾಗುವುದಾಗಿ ನಂಬಿಸಿ, ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಆದುದರಿಂದ ನನಗೆ ಐದೂವರೆ ತಿಂಗಳು ಆಗಿದೆ ಎಂದು ಸತ್ಯ ಬಾಯಿಬಿಟ್ಟಿದ್ದಳು. ಇದೇ ವೇಳೆ ನಾನು ಶಿವರಾಜ್ ನನ್ನು ಸಂಪರ್ಕ ಮಾಡಿ ನನ್ನ ಮಗಳನ್ನು ಮದುವೆಯಾಗು ಎಂದು ಹೇಳಿದ್ದೆ. ಆ ವೇಳೆ ನಾನು ಮದುವೆಯಾಗುವುದಿಲ್ಲ, ಗರ್ಭಿಣಿ ಆಗಿದ್ದರೆ ಅದನ್ನು ಅಬಾರ್ಷನ್ ಮಾಡಿಸುತ್ತೇನೆ. ಅದಕ್ಕೆ ತಗಲುವ ಖರ್ಚು ಕೊಡುತ್ತೇನೆ ಎಂದು ಹೇಳಿದ. ಇದಕ್ಕೆ ನಾನು ನೀನು ಖರ್ಚು ಕೊಡುವುದು ಬೇಡ, ಅಬಾರ್ಷನ್ ಮಾಡಿಸುವುದೂ ಬೇಡ ಎಂದು ಹೇಳಿದ್ದೆ.  ಈ ಬಳಿಕ ನಾನು ತುಂಬಾ ಅಘಾತಕ್ಕೊಳಗಾಗಿದ್ದೆ. ಹೀಗಿರುವಾಗ 18-09-2021ರಂದು ನನ್ನ ಹೆಂಡತಿ ಹಾಗೂ ಮಗಳು ಆಸ್ಪತ್ರೆಗೆ ಹೋಗಿ ಬರುವುದಾಗಿ ಹೇಳಿ ಹೋದವರು ಮತ್ತೆ ಮನೆಗೆ ಬಂದಿಲ್ಲ.

  ಪತ್ನಿ ನನಗೆ ಫೋನ್ ಮಾಡುತ್ತಾಳೆ ಆದರೆ ಎಲ್ಲಿದ್ದೇನೆ ಎಂದು ಹೇಳುತ್ತಿಲ್ಲ, ಅಬಾರ್ಷನ್ ಮಾಡಲಾಗಿದೆ. ಅದಕ್ಕೆ 35,000/-ನ್ನು ಶಿವರಾಜ್ ಆನ್ಲೈನ್ ಟ್ರಾನ್ಸ್ಪರ್ ಮಾಡಿದ್ದಾನೆಂದೂ, ನಾವು ಒಂದು ಕಡೆ ಇದ್ದೇವೆ, ಎಲ್ಲಿ ಅಂತ ಹೇಳುವುದಿಲ್ಲ ಎಂದು ನನ್ನ ಪತ್ನಿ ಹೇಳುತ್ತಿದ್ದಾಳೆ ಎಂದು ದೂರಲಾಗಿದೆ.

  ಇದನ್ನೂ ಓದಿ: ಹೆಂಡತಿಯ ಶೀಲ ಶಂಕಿಸಿ ಇಬ್ಬರು ಮಕ್ಕಳನ್ನು ಕೊಂದ ಪಾಪಿ.. ಮಕ್ಕಳೇನು ಮಾಡಿದ್ದರು!?

  ಅತ್ಯಾಚಾರ ಎಸಗಿರುವ ಶಿವರಾಜ್ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ನನ್ನ ಮಗಳು ಹಾಗೂ ಪತ್ನಿ ಶಿವರಾಜ್ ಅವನ ಸುಪರ್ಧಿಯಲ್ಲಿ ಮಂಗಳೂರಿನ ಎಲ್ಲಿಯೋ ಅಜ್ಞಾತ ಸ್ಥಳದಲ್ಲಿರುವ ಅವರನ್ನು ಪತ್ತೆ ಹಚ್ಚಬೇಕು ಎಂದು ಸಂತ್ರಸ್ಥೆಯ ತಂದೆ ಮನವಿ ಮಾಡಿದ್ದಾರೆ. ಇದಕ್ಕೆಲ್ಲ ಪೋಲಿಸ್ ಪ್ರಭಾವ ಬಳಸಿ ನಮ್ಮನ್ನು ಬೆದರಿಸುತ್ತಿರುವ ಶಿವರಾಜ್ ವಿಚಾರಣೆ ನಡೆಸಿದಾಗ ಎಲ್ಲ ವಿಚಾರ ಬಹಿರಂಗವಾಗಲಿದೆ. ಆದುದರಿಂದ ನನ್ನ ಮಗಳಿಗೆ ಆಗಿರುವ ಅನ್ಯಾಯಕ್ಕೆ ಸೂಕ್ತ ನ್ಯಾಯ ಕೊಡಿಸಿ ಎಂದು ಅವರು ವಿನಂತಿಸಿದ್ದಾರೆ.

  ಇದನ್ನೂ ಓದಿ: ಬಿಜೆಪಿಯವರು ತಾಲಿಬಾನಿಗಳು ಎಂದ ಸಿದ್ದರಾಮಯ್ಯಗೆ ಯತ್ನಾಳ್ ತಿರುಗೇಟು

  ಈ ಮಧ್ಯೆ ಆರೋಪಿಯನ್ನು ಅಮಾನತುಗೊಳಿಸಿ, ಕ್ರಮ ಕೈಗೊಳ್ಳದಿದ್ದರೆ, ಉಗ್ರ ಹೋರಾಟ ನಡೆಸಲಾಗುವುದು ,ಇನ್ನಾದರೂ ಕ್ರಮ ಕೈಗೊಳ್ಳಬೇಕು ಎಂದು  ವಿಶ್ವಹಿಂದೂ ಪರಿಷತ್ ಆಗ್ರಹಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನೀತಿ ಎನ್ನುವ ಸಾಮಾಜಿಕ ಸಂಘಟನೆ ಕಡೆಯಿಂದ ಕರ್ನಾಟಕ ಮುಖ್ಯಮಂತ್ರಿಗಳಿಗೆ ಬೆಂಗಳೂರಿನಲ್ಲಿ ಇನ್ನೊಂದು ದೂರು ನೀಡಲಾಗಿದೆ.
  Published by:Sharath Sharma Kalagaru
  First published: