ಮಂಗಳೂರು (ಜನವರಿ 20); ನಗರದ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವ ಶಂಕಿತ ವ್ಯಕ್ತಿಯ ಪೋಟೋ ಹಾಗೂ ಆತನ ವಿಮಾನ ನಿಲ್ದಾಣಕ್ಕೆ ಬಾಂಬ್ ಸಾಗಿಸಿದ ಆಟೋ ಚಿತ್ರವನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ.
ಇಂದು ಬೆಳಗ್ಗೆ 7 ರಿಂದ 8 ಗಂಟೆಯ ಅವಧಿಯಲ್ಲಿ ಆಟೋದಲ್ಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ವ್ಯಕ್ತಿ ಒಂದು ಲ್ಯಾಪ್ಟಾಪ್ ಬ್ಯಾಗ್ ಅನ್ನು ಅಲ್ಲಿಯೇ ಬಿಟ್ಟು ಹೋಗಿದ್ದ. ಆದರೆ, ಅದರಲ್ಲಿ ಸುದಾರಿತ ಸ್ಪೋಟ ಇದೆ ಎಂದು ನಂತರ ತಿಳಿದು ಬಂದಿತ್ತು. ಇದರ ಬೆನ್ನಿಗೆ ಮಂಗಳೂರಿನಿಂದ ಹೈದರಾಬಾದ್ಗೆ ತೆರಳುತ್ತಿದ್ದ ವಿಮಾನದಲ್ಲೂ ಮತ್ತೊಂದು ಬಾಂಬ್ ಪತ್ತೆ ಮಾಡಲಾಗಿತ್ತು.
ಈ ಬಾಂಬ್ ಅನ್ನು ವಿಮಾನ ನಿಲ್ದಾಣದಲ್ಲಿ ಇಟ್ಟುಹೋದವರು ಯಾರು? ಎಂಬ ಕುರಿತು ಬೆಳಗ್ಗೆಯಿಂದ ತನಿಖೆ ನಡೆಸುತ್ತಿದ್ದ ಪೊಲೀಸರು ಇದೀಗ ಬಾಂಬ್ ಇಟ್ಟಿರುವ ಶಂಕಿತ ವ್ಯಕ್ತಿ ಹಾಗೂ ಆತನ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಆಟೋ ಚಿತ್ರವನ್ನು ಬಿಡುಗಡೆ ಮಾಡಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ. ಹರ್ಷ, "ಸಿಸಿಟಿವಿ ಕ್ಯಾಮೆರಾ ಮೂಲಕ ಶಂಕಿತ ವ್ಯಕ್ತಿಯ ಪೋಟೋ ಲಭ್ಯವಾಗಿದ್ದು, ಶೀಘ್ರದಲ್ಲಿ ಆತನನ್ನು ಪತ್ತೆಹಚ್ಚಲಾಗುವುದು" ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : ಮಂಗಳೂರು ವಿಮಾನ ನಿಲ್ದಾಣದಲ್ಲಿ ಪತ್ತೆಯಾದ ಬಾಂಬ್; ನಿಷ್ಕ್ರಿಯಕ್ಕೆ ಬದಲು ಸ್ಫೋಟಿಸಲು ಸಿದ್ಧತೆ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ