ದಕ್ಷಿಣ ಕನ್ನಡದಲ್ಲಿ ಇನ್ನೆರಡು ದಿನ ಭಾರೀ ಮಳೆ; ಕರಾವಳಿಯಲ್ಲಿ ರೆಡ್ ಅಲರ್ಟ್​ ಘೋಷಣೆ

Mangalore Rain Updates: ಕರಾವಳಿ ಭಾಗದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆ ಆರಂಭವಾಗಿದ್ದು, ಸಾಧಾರಣ ಮಳೆಯಾಗುತ್ತಿದೆ. ಇಂದು ಮತ್ತು ನಾಳೆ ಮಂಗಳೂರು ಭಾಗದಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಯಿದ್ದು, ಕರಾವಳಿಯಲ್ಲಿ ರೆಡ್ ಅಲರ್ಟ್​ ಘೋಷಣೆ ಮಾಡಲಾಗಿದೆ.

news18-kannada
Updated:October 23, 2019, 11:42 AM IST
ದಕ್ಷಿಣ ಕನ್ನಡದಲ್ಲಿ ಇನ್ನೆರಡು ದಿನ ಭಾರೀ ಮಳೆ; ಕರಾವಳಿಯಲ್ಲಿ ರೆಡ್ ಅಲರ್ಟ್​ ಘೋಷಣೆ
ಸಾಂದರ್ಭಿಕ ಚಿತ್ರ
news18-kannada
Updated: October 23, 2019, 11:42 AM IST
ಮಂಗಳೂರು (ಅ.23): ರಾಜ್ಯಾದ್ಯಂತ ಮೂರ್ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಮಲೆನಾಡು, ಕರಾವಳಿ ಭಾಗ, ಕೊಡಗು, ಮೈಸೂರು, ಬೆಂಗಳೂರು, ಉತ್ತರ ಕರ್ನಾಟಕ ಸೇರಿದಂತೆ ಹಲವಾರು ಕಡೆ ಮಳೆಯ ಅಬ್ಬರ ಜೋರಾಗಿದ್ದು, ಒಟ್ಟು 15 ಜಿಲ್ಲೆಗಳಲ್ಲಿ ನಿನ್ನೆ ಆರೆಂಜ್ ಅಲರ್ಟ್​ ಘೋಷಿಸಲಾಗಿತ್ತು.

ಕರಾವಳಿ ಭಾಗದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆ ಆರಂಭವಾಗಿದ್ದು, ಸಾಧಾರಣ ಮಳೆಯಾಗುತ್ತಿದೆ. ಇಂದು ಮತ್ತು ನಾಳೆ ಮಂಗಳೂರು ಭಾಗದಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಯಿದ್ದು, ಕರಾವಳಿಯಲ್ಲಿ ರೆಡ್ ಅಲರ್ಟ್​ ಘೋಷಣೆ ಮಾಡಲಾಗಿದೆ. ಮಳೆಯ ಅಬ್ಬರ ಹೆಚ್ಚಾಗುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಉತ್ತರ ಕರ್ನಾಟಕದಲ್ಲಿ ಮತ್ತೆ ಪ್ರವಾಹ ಪರಿಸ್ಥಿತಿ; ಡಿಸಿಗಳ ಜೊತೆ ಸಿಎಂ ಬಿಎಸ್​ ಯಡಿಯೂರಪ್ಪ ವಿಡಿಯೋ ಸಂವಾದ

ಮಂಗಳೂರಿನ ಬಂಟ್ವಾಳ, ಸುಳ್ಯ, ಪುತ್ತೂರು, ಬೆಳ್ತಂಗಡಿ ತಾಲೂಕುಗಳು ಸೇರಿದಂತೆ ಉಡುಪಿ ಜಿಲ್ಲೆಯ ಕೆಲವು ಭಾಗದಲ್ಲೂ ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಇಂದು ಮತ್ತು ನಾಳೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ. ಮಳೆಯ ಹಿನ್ನೆಲೆಯಲ್ಲಿ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆಯಿದೆ. ಕರಾವಳಿ ಭಾಗದಲ್ಲಿ ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.

First published:October 23, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...