Hijab Row: ಮಂಗಳೂರಿನ ಪ್ರಭಾವಿ ಶಾಸಕರೊಬ್ಬರು ಕಾಲೇಜು ಕ್ಯಾಂಪಸ್ ನಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡುವಂತೆ ಪ್ರಾಂಶುಪಾಲರಿಗೆ ಒತ್ತಾಯ ಮಾಡಿರುವ ವಿಷಯ ಬೆಳಕಿಗೆ ಬಂದಿದೆ. ನ್ಯೂಸ್ 18 ಜೊತೆ ಮಾತನಾಡಿರುವ ಮಂಗಳೂರು ವಿಶ್ವ ವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲೆ (Mangalore university College Principal) ಡಾ.ಅನುಸೂಯ ರೈ ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ನನಗೆ ಎಲ್ಲಾ ಶಾಸಕರು (MLA) ಫೋನ್ ಮಾಡಿ ಜೋರು ಮಾಡುತ್ತಾರೆ. ನೀವು ಯಾಕೆ ಮಾಡಿದ್ರಿ ಅಂತಾ ಜೋರು ಮಾಡುತ್ತಾರೆ. ಯಾರು ಪ್ರಭಾವಿ ಶಾಸಕ ಅಂತಾ ಹೇಳುತ್ತಾರೋ ಅವರು ಜೋರು ಮಾಡುತ್ತಿದ್ದಾರೆ. ಯಾರ ಮಾತು ಕೇಳಿ ಕ್ಯಾಂಪಸ್ ನಲ್ಲಿ ಹಿಜಾಬ್ ತೆಗೆಸುತ್ತಿದ್ದಿರಾ ಅಂತಾ ಹೇಳಿದ್ದಾರೆ. ನಮ್ಮ ಲೋಕಲ್ ಎಂಎಲ್ ಎ ಕೂಡಾ ಕೇಳುತ್ತಿದ್ದಾರೆ.ಯಾಕೆ ಕೋರ್ಟ್ ನಿಯಮ (Court Rules) ಪಾಲಿಸಿಲ್ಲ ಅಂತಾ ಜೋರು ಮಾಡುತ್ತಾರೆ ಎಂದಿದ್ದಾರೆ.
ಎಲ್ಲರ ಮಾತು ಎಲ್ಲಾ ಸಹೋದ್ಯೋಗಿಗಳ ಮಾತು ಗಣನೆಗೆ ತೆಗೆದುಕೊಂಡು ಆದೇಶ ಮಾಡಿದ್ದೇನೆ. ನಾನು ಮಕ್ಕಳ ಹೇಳಿಕೆಗಳಿಗೆ ದಾಖಲೆ ಕೇಳಬಹುದು. ಆದರೆ ಅವರ ಲೆವೆಲ್ ಗೆ ನಾನು ಹೋಗೋದಿಲ್ಲ. ಪರಿಸ್ಥಿತಿ ಕೂಲ್ ಆಗಲು ಸುಮ್ಮನಿದ್ದೇನೆ.ಪ್ರಭಾವಿ ಶಾಸಕರು ಯಾರು? ಅವರ ಬಗ್ಗೆ ದಾಖಲೆಗಳು ಇದ್ದರೆ ತೋರಿಸಿ
ಮಾಧ್ಯಮಗಳಿಗೆ ವಿದ್ಯಾರ್ಥಿ ನಾಯಕರು ಹೇಳಿಕೆ ಕೊಡುತ್ತಿಲ್ಲ. ವಿದ್ಯಾರ್ಥಿಗಳು ಹೇಳಿಕೆ ಕೊಡುತ್ತಿದ್ದಾರೆ ಎಂದು ಮಂಗಳೂರು ವಿಶ್ವ ವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲೆ ಡಾ.ಅನುಸೂಯ ರೈ ಹೇಳಿದ್ದಾರೆ.
ಹಿಜಾಬ್ ವಿದ್ಯಾರ್ಥಿಗಳು ಗೈರು
ಇಡೀ ಕಾಲೇಜಿನಲ್ಲಿ 44 ಮುಸ್ಲಿಂ ಮಕ್ಕಳಿದ್ದು, ವಿವಾದ ಒಂದು ತಂಡದಿಂದಷ್ಟೇ ಆಗಿದೆ. 15 ಮಂದಿ ವಿದ್ಯಾರ್ಥಿಗಳಷ್ಟೇ ಹಿಜಾಬ್ ಕುರಿತು ಮಾತನಾಡ್ತಿದಾರೆ. ನಿನ್ನೆ ಅವರು ಬಂದಾಗ ನಾವೇ ಅವರನ್ನು ಹಿಜಾಬ್ ತೆಗೆದು ಬನ್ನಿ ಅಂತ ಕಳಿಸಿದ್ದೇವ. ಹಾಗಾಗಿ ಅವರು ನಿನ್ನೆ ಡಿಸಿ ಕಚೇರಿಗೆ ಹೋಗಿದ್ದರು, ಆ 15 ಮಂದಿ ಇವತ್ತು ತರಗತಿಗೆ ಬಂದಿಲ್ಲ ಎಂದು ತಿಳಿಸಿದರು.
ಇದನ್ನೂ ಓದಿ: Hijab Row: ಸೊಕ್ಕಿನಿಂದ ವರ್ತನೆ ಮಾಡುತ್ತ ಹಿಜಾಬ್ ಧರಿಸಿ ಬಂದವರ ಮೇಲೆ ಕೇಸ್ ಹಾಕಿ: ಪ್ರಮೋದ್ ಮುತಾಲಿಕ್
ಇದು 15 ವಿದ್ಯಾರ್ಥಿಗಳ ಸಮಸ್ಯೆ
ಆ 15 ವಿದ್ಯಾರ್ಥಿಗಳನ್ನು ಹೊರತುಪಡಿಸಿ ಉಳಿದ ಕೆಲ ಮಕ್ಕಳು ಹಿಜಾಬ್ ತೆಗೆದು ಕಾಲೇಜಿಗೆ ಬಂದಿದ್ದಾರೆ. ಕೆಲ ವಿದ್ಯಾರ್ಥಿಗಳು ಹೈ ಕೋರ್ಟ್ ತೀರ್ಪಿನ ಬಳಿಕ ಕಾಲೇಜಿಗೆ ಬರುತ್ತಿಲ್ಲ. ಮೂರ್ನಾಲ್ಕು ವಿದ್ಯಾರ್ಥಿಗಳು ಟಿಸಿ ತೆಗೆದುಕೊಂಡು ಹೋಗಿದ್ದಾರೆ. ಆದರೆ ಇದು ಎಲ್ಲಾ ವಿದ್ಯಾರ್ಥಿಗಳ ಸಮಸ್ಯೆ ಅಲ್ಲ, ಕೆಲ 15 ವಿದ್ಯಾರ್ಥಿಗಳ ಸಮಸ್ಯೆ ಅಷ್ಟೇ ಎಂದರು.
ಶಾಸಕ ವೇದವ್ಯಾಸ ಕಾಮತ್ ಹೇಳಿಕೆ
ಮಂಗಳೂರು ಯೂನಿವರ್ಸಿಟಿ ಕಾಲೇಜಿನಲ್ಲಿ ಹಿಜಾಬ್ ವಿವಾದ ಕುರಿತು ಮಾತನಾಡಿರುವ ಶಾಸಕ ವೇದವ್ಯಾಸ ಕಾಮತ್, ನಾನು ಈ ಕಾಲೇಜಿನ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಮಾತ್ರ. ವಿಶ್ವವಿದ್ಯಾನಿಲಯದ ಕುಲಪತಿ ಗಳು ಯೂನಿವರ್ಸಿಟಿ ಕಾಲೇಜಿನ ಮೇಲ್ವೀಚಾರಕರು, ಕುಲಪತಿಗಳು ಸಂಜೆ ಈ ಬಗ್ಗೆ ಸಭೆಯನ್ನು ಕರೆದಿದ್ದಾರೆ. ಆ ಸಭೆಯಲ್ಲಿ ಭಾಗವಹಿಸುತ್ತೇನೆ. ಕಾಲೇಜಿನಲ್ಲಿ ಕೋರ್ಟ್ ನಿಯಮ ಅನುಷ್ಠಾನ ಆಗದ ವಿಚಾರ ಗೊತ್ತಾಗಿದೆ.
ಇದರಲ್ಲಿ ಯಾರ ನಿರ್ಲಕ್ಷ್ಯ ಇದೆ ಎಂಬುವುದರ ಬಗ್ಗೆ ಸಭೆ ಮಾಡುತ್ತೇವೆ. ಈ ಬಗ್ಗೆ ಸೆನೆಟ್ ಸಭೆಯಲ್ಲಿ ಚರ್ಚೆ ಮಾಡುತ್ತೇವ. ವಿದ್ಯಾರ್ಥಿಗಳು ಕೋರ್ಟ್ ಆದೇಶವನ್ನು ಪಾಲನೆ ಮಾಡಬೇಕು. ನನಗೆ ಈ ವಿಚಾರ ಮಾಧ್ಯಮಗಳಿಂದ ತಿಳಿದು ಬಂದಿದೆ. ಕಾಲೇಜು ಆರಂಭವಾದ ಬಳಿಕ ರೀತಿಯ ಗೊಂದಲ ಆರಂಭವಾಗಿದೆ ಎಂದರು.
ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ
ಇನ್ನೂ ಇದೇ ವಿಷಯದ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಇದರಲ್ಲಿ ಸರ್ಕಾರ, ಪೊಲೀಸರು, ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಈಗಾಗಲೇ ಹಿಜಾಬ್ ಕುರಿತು ಕೋರ್ಟ್ ತೀರ್ಮಾನ ಆಗಿದೆ. ಬೇಕಿದ್ದರೆ ಸುಪ್ರಿಂಕೋರ್ಟ್‌ನಲ್ಲಿ ಹೋರಾಡಬಹುದು. ಹೈಕೋರ್ಟ್ ಆದೇಶ ಆಗಿ. ದೆಅದನ್ನು ಪಾಲನೆ ಮಾಡದಿದ್ದರೆ ಹೇಗೆ ಎಂದು ಕಿಡಿಕಾರಿದರು.
ಇದನ್ನೂ ಓದಿ: Text Book Row: ಪಠ್ಯಪುಸ್ತಕ ಪರಿಷ್ಕರಣೆ ವಿರೋಧ; ಮೇ 31ರಂದು ರಾಜ್ಯಾದ್ಯಂತ ಹೋರಾಟಕ್ಕೆ ಕರವೇ ಸಜ್ಜು
ಇದಕ್ಕೆಲ್ಲಾ ಕಾಂಗ್ರೆಸ್ ಕುಮ್ಮಕ್ಕು
ದೇಶದ ಸಂವಿಧಾನಕ್ಕೆ ಇವರ ಬದ್ಧತೆ ಇಲ್ಲವಾ? ಈ ರೀತಿಯಲ್ಲಿ ಕಾನೂನು, ಕೋರ್ಟ್, ಸಂವಿಧಾನಕ್ಕೆ ವ್ಯತಿರಿಕ್ತವಾಗಿ ನಡೆದುಕೊಳ್ಳಬಾರದು. ಹೀಗೆ ನಡೆದುಕೊಳ್ಳುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ಇದೆಲ್ಲ ಕಾಂಗ್ರೆಸ್ ಕುಮ್ಮಕ್ಕಿನಿಂದಲೇ ನಡೆಯುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ