Vistadome: ಬೆಂಗಳೂರು - ಮಂಗಳೂರು ನಡುವೆ ಐಶಾರಾಮಿ ರೈಲು ಪ್ರಯಾಣ ಇಂದಿನಿಂದ ಶುರು, ವಿಸ್ಟಾಡೋಮ್ ಒಳಗೆ ಏನಿದೆ ?

Vistadome: ಈ ಬೋಗಿಗಳು ಗಾಜಿನ ಮೇಲ್ಚಾವಣಿ  ಹೊಂದಿದ್ದು, ಇದು ಆಕಾಶದ ಸ್ಪಷ್ಟ ನೋಟ ನೀಡುತ್ತದೆ. ಕೋಚ್‌ನಲ್ಲಿ ಸಿಸಿಟಿವಿ ಕಣ್ಗಾವಲು, ಅಗ್ನಿಶಾಮಕ ಸುರಕ್ಷತಾ ವ್ಯವಸ್ಥೆಗಳು, ಎಲ್‌ಇಡಿ, ಓವನ್ ಮತ್ತು ರೆಫ್ರಿಜರೇಟರ್, ಮಿನಿ ಪ್ಯಾಂಟ್ರಿ, ಮಲ್ಟಿ-ಟೈರ್ಡ್ ಸ್ಟೀಲ್ ಲಗೇಜ್ ಕಪಾಟುಗಳು, ಪ್ರತಿ ಸೀಟಿನಲ್ಲಿ ಮೊಬೈಲ್ ಚಾರ್ಜಿಂಗ್ ಸಾಕೆಟ್ ಗಳಿವೆ.

ವಿಸ್ಟಾಡೋಮ್ ಒಳನೋಟ

ವಿಸ್ಟಾಡೋಮ್ ಒಳನೋಟ

  • Share this:
ಮಂಗಳೂರು(ಜುಲೈ 11): ರೈಲ್ವೇ ಇಲಾಖೆಯ ವಿನೂತನ ವಿಸ್ಡಾಡೋಮ್ ಕೋಚ್ ಗೆ ರಾಜ್ಯದಲ್ಲಿ ಇಂದು ಚಾಲನೆ ದೊರಕಿದೆ..ರಾಜ್ಯದ ಪ್ರವಾಸೋದ್ಯಮದ ಸಾಧ್ಯತೆಗಳನ್ನು ಮತ್ತಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಮಂಗಳೂರು ಹಾಗೂ ಬೆಂಗಳೂರಿನ ನಡುವೆ  ಹಗಲಿನಲ್ಲಿ ವಿಸ್ಡಾಡೋಮ್ ಕೋಚ್ ಅಳವಡಿಸಲಾಗಿದೆ...ಪ್ರಕೃತಿಯ ರಮಣೀಯ ದೃಶ್ಯಗಳನ್ನು  ವೀಕ್ಷಿಸಲು ಅನುಕೂಲವುಳ್ಳ ವಿಸ್ಟಾಡೋಮ್ ರೈಲಿನ ಸಂಚಾರಕ್ಕೆ ಭಾನುವಾರ ಬೆಳಿಗ್ಗೆ 9 ಗಂಟೆಗೆ ಚಾಲನೆ ನೀಡಲಾಗಿದೆ. ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಹಸಿರು ನಿಶಾನೆ ತೋರಲಾಗಿದೆ. ಮಂಗಳೂರು ಜಂಕ್ಷನ್ ರೈಲ್ವೇ ನಿಲ್ದಾಣ ದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಧಾರ್ಮಿಕ ದತ್ತಿ ಹಾಗೂ ಧರ್ಮಾದಾಯ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ವಿಸ್ಡಾಡೋನ್ ಕೋಚ್ ಗೆ ಚಾಲನೆ ನೀಡಿದರು. ಈ ಕಾರ್ಯಕ್ರಮ  ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರು ಅಧ್ಯಕ್ಷತೆಯಲ್ಲಿ ನಡೆದಿದ್ದು, ಶಾಸಕರಾದ ವೇದವ್ಯಾಸ ಕಾಮತ್, ಮೇಯರ್ ಪ್ರೇಮಾನಂದ ಶೆಟ್ಟಿ ಹಾಗೂ ರೈಲ್ವೆ ಇಲಾಖೆಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ವಿಸ್ಟಾಡೋಮ್ ಬೋಗಿಗಳನ್ನು ಒಳಗೊಂಡಂತಹ ಈ  ರೈಲು ದಕ್ಷಿಣ ಭಾರತದಲ್ಲಿ ರೈಲ್ವೆ ಇಲಾಖೆಯಿಂದ ಮೊದಲ ಬಾರಿಗೆ  ಪರಿಚಯಿಸಲಾಗಿದೆ.  ಮಂಗಳೂರು ಜಂಕ್ಷನ್ ನಲ್ಲಿ  ರೈಲು ಸಂಖ್ಯೆ 06540/06539 ಮಂಗಳೂರು ಜೆಎನ್ - ಯಶವಂತಪುರ ಎಕ್ಸ್ ಪ್ರೆಸ್  ರೈಲಿಗೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ  ಹಸಿರು ನಿಶಾನೆ ತೋರಿದ್ದಾರೆ. ಮಂಗಳೂರು ಜಂಕ್ಷನ್ ಮತ್ತು ಯಶವಂತಪುರ ನಿಲ್ದಾಣಗಳ ನಡುವೆ ಚಲಿಸುವ ಈ ಎಕ್ಸ್‌ಪ್ರೆಸ್ ರೈಲಿಗೆ ಅಳವಡಿಸಲಾದ ವಿಸ್ಟಾಡೋಮ್ ಬೋಗಿಗಳು ಪಶ್ಚಿಮ ಘಟ್ಟಗಳ ಮೂಲಕ ಸಂಚರಿಸುವಾಗ ರಮಣೀಯ ಪ್ರಾಕೃತಿಕ ಸೊಬಗನ್ನು ನೋಡಬಹುದಾಗಿದೆ. ಎತ್ತರದ ಪರ್ವತಗಳ ಅದ್ಭುತ ನೋಟ, ಕಣಿವೆಗಳು, ಆಳವಾದ ಕಮರಿಗಳು ಮತ್ತು ಹಚ್ಚ ಹಸಿರಿನ ಈ ಪ್ರದೇಶವು ಮಾನ್ಸೂನ್‌ನಲ್ಲಿ ಇನ್ನಷ್ಟು ಸುಂದರ ದೃಶ್ಯಾವಳಿಗಳು ನೋಡುಗರನ್ನು ಬೆರಗುಗೊಳಿಸುತ್ತದೆ.

ಇದನ್ನೂ ಓದಿ: Love Affair: ಹೆಂಡತಿಯನ್ನು ಮನೆಯಲ್ಲೇ ಬಿಟ್ಟು ಅವಳ ಬೆಸ್ಟ್ ಫ್ರೆಂಡ್​ ಜೊತೆ ಹನಿಮೂನ್ ಹೋದ ಗಂಡ !

ವಿಸ್ಟಾಡೋಮ್ ಒಳಗೆ ಏನೇನಿದೆ? 

ರೈಲಿನಲ್ಲಿ ಎರಡು ವಿಸ್ಟಾಡೋಮ್ ಬೋಗಿಗಳಿದ್ದು, ಪ್ರತಿ ಬೋಗಿಯಲ್ಲಿ 44 ಆಸನ ಸಾಮರ್ಥ್ಯ ಹೊಂದಿದೆ, ಅಗಲವಾದ, ದೊಡ್ಡ ಕಿಟಕಿಗಳು ಪ್ರಯಾಣಿಕರಿಗೆ ಸ್ಪಷ್ಟವಾದ ನೋಟವನ್ನು ನೀಡುತ್ತದೆ. ವಿಸ್ಟಾಡೋಮ್ ಬೋಗಿಗಳನ್ನು ಚೆನ್ನೈನ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ ಎಲ್‌ಎಚ್‌ಬಿ (ಲಿಂಕೆ-ಹಾಫ್ಮನ್-ಬುಶ್ ಪ್ಲಾಟ್‌ಫಾರ್ಮ್ / ತಂತ್ರಜ್ಞಾನ) ನಲ್ಲಿ ತಯಾರಿಸಲಾಗಿದೆ. ಈ ಬೋಗಿಗಳು ಗಾಜಿನ ಮೇಲ್ಚಾವಣಿ  ಹೊಂದಿದ್ದು, ಇದು ಬೇಸಿಗೆಯಲ್ಲೂ ಆಕಾಶದ ಸ್ಪಷ್ಟ ನೋಟಗಳನ್ನು ನೀಡುತ್ತದೆ. ಕೋಚ್‌ನಲ್ಲಿ ಸಿಸಿಟಿವಿ ಕಣ್ಗಾವಲು, ಅಗ್ನಿಶಾಮಕ ಸುರಕ್ಷತಾ ವ್ಯವಸ್ಥೆಗಳು, ಎಲ್‌ಇಡಿ, ಓವನ್ ಮತ್ತು ರೆಫ್ರಿಜರೇಟರ್, ಮಿನಿ ಪ್ಯಾಂಟ್ರಿ, ಮಲ್ಟಿ-ಟೈರ್ಡ್ ಸ್ಟೀಲ್ ಲಗೇಜ್ ಕಪಾಟುಗಳು, ಪ್ರತಿ ಸೀಟಿನಲ್ಲಿ ಮೊಬೈಲ್ ಚಾರ್ಜಿಂಗ್ ಸಾಕೆಟ್ ಗಳಿವೆ. ಇದಲ್ಲದೆ, ಕೋಚ್ ಸ್ವಯಂಚಾಲಿತ ಸ್ಲೈಡಿಂಗ್ ಬಾಗಿಲುಗಳು ಮತ್ತು ಜೈವಿಕ ಶೌಚಾಲಯಗಳನ್ನು ಹೊಂದಿದೆ.

ಮಂಗಳೂರು-ಮತ್ತು ಬೆಂಗಳೂರು ನಡುವೆ ಸಂಚರಿಸುವ ಹಗಲು ರೈಲಿನಲ್ಲಿ ವಿಸ್ಡಾಡೋನ್ ಕೋಚ್ ಅಳವಡಿಸಲಾಗಿದ್ದು,ಮೊದಲ ಪಯಣದಲ್ಲಿ  84 ಆಸನಗಳ ಪೈಕಿ 73 ಆಸನಗಳು ಈಗಾಗಲೇ ಭರ್ತಿಯಾಗಿವೆ..ಸುಬ್ರಹ್ಮಣ್ಯ, ಸಕಲೇಶಪುರ ದ ಪಶ್ಚಿಮ ಘಟ್ಟ ಪ್ರದೇಶಗಳ ಅದ್ಭುತ ಸೌಂದರ್ಯ ವನ್ನು ಕಾಣಲು ವಿಸ್ಡಾಡೋನ್ ಕೋಚ್ ಅದ್ಭುತ ಅವಕಾಶವನ್ನು ಮಾಡಿಕೊಟ್ಟಿದೆ.

ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ತಮ್ಮ ತಮ್ಮ ಸರದಿ ಬಂದಾಗ ತಪ್ಪದೇ ಲಸಿಕೆ ಪಡೆಯಬೇಕು. ಈಗಿನ ಪರಿಸ್ಥಿತಿಯಲ್ಲಿ ಲಸಿಕೆ ಒಂದೇ ಸೋಂಕಿನ ವಿರುದ್ಧ ಹೋರಾಡುವ ಮಾರ್ಗವಾಗಿದೆ. ಅತ್ಯಗತ್ಯವಿದ್ದರೆ ಮಾತ್ರವೇ ಮನೆಯಿಂದ ಹೊರಗೆ ಹೋಗುವ ಅಭ್ಯಾಸ ರೂಢಿಸಿಕೊಳ್ಳಬೇಕು.
Published by:Soumya KN
First published: