ಮಂಗಳೂರು: ಕಳೆದ ಕೆಲ ದಿನಗಳ ಹಿಂದೆ ಮಧ್ಯಪ್ರದೇಶದ ಇಂದೋರ್ (Indore) ನಗರದ ಶಾಲಿನಿ ಚೌಹಾಣ್ ಎಂಬ ಪೊಲೀಸ್ (Police) ಅಧಿಕಾರಿ, ವಿದ್ಯಾರ್ಥಿನಿಯಂತೆ (Student) ಕಾಲೇಜಿಗೆ ತೆರಳಿ ಅಲ್ಲಿ ನಡೆಯುತ್ತಿದ್ದ ರ್ಯಾಗಿಂಗ್ (Ragging) ಪ್ರಕರಣವನ್ನು ಬೆಳಕಿಗೆ ಬಂತು, ಆರೋಪಿಗಳು ಜೈಲು ಸೇರುವಂತೆ ಮಾಡಿದ್ದರು. ಈ ಸುದ್ದಿ ದೇಶದಾದ್ಯಂತ ಭಾರೀ ವೈರಲ್ ಆಗಿತ್ತು, ಅಲ್ಲದೇ ಮಹಿಳಾ ಪೊಲೀಸ್ ಅಧಿಕಾರಿಯ ಧೈರ್ಯ ಹಾಗೂ ಕಾರ್ಯಕ್ಕೆ ಹಲವರು ಮೆಚ್ಚುಗೆ ಸೂಚಿಸಿದ್ದರು. ಸದ್ಯ ಮೋದಿ ಸ್ಟೇಟಸ್ (Modi Status) ಹಾಕಿದ್ದಕ್ಕೆ ಡೆಂಟಲ್ ವಿದ್ಯಾರ್ಥಿನಿಗೆ (Dental Student) ರ್ಯಾಗಿಂಗ್ ಮಾಡಿರುವ ಘಟನೆ ಸುಳ್ಯದ ಕೆ.ವಿ.ಜಿ ಡೆಂಟಲ್ ಕಾಲೇಜಿನಲ್ಲಿ ನಡೆದಿದ್ದು, ವಿದ್ಯಾರ್ಥಿನಿ ಕಾಲೇಜಿನ ಆರು ವಿದ್ಯಾರ್ಥಿಗಳ ವಿರುದ್ಧ ದೂರು ನೀಡಿದ್ದಾರೆ. ಘಟನೆ ಸಂಬಂಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಏನಿದು ಪ್ರಕರಣ?
ಬೆಂಗಳೂರಿನ ವೈಟ್ ಫೀಲ್ಡ್ ನಿವಾಸಿಯಾಗಿರುವ ಅನು (ಹೆಸರು ಬದಲಿಸಲಾಗಿದೆ) ರ್ಯಾಗಿಂಗ್ಗೆ ಒಳಗಾಗಿದ್ದ ವಿದ್ಯಾರ್ಥಿಯಾಗಿದ್ದು, ಮೂರನೇ ವರ್ಷದ ವಿದ್ಯಾರ್ಥಿನಿಯಾಗಿದ್ದಾರೆ. ರ್ಯಾಂಕ್ ಹೋಲ್ಡರ್ ಆಗಿರುವ ವಿದ್ಯಾರ್ಥಿನಿ, ದಕ್ಷಿಣಕನ್ನಡ ಜಿಲ್ಲೆಯ ಸುಳ್ಯದ ಕೆ.ವಿ.ಜಿ ಡೆಂಟಲ್ ಕಾಲೇಜಿನಲ್ಲಿ ಅಭ್ಯಾಸ ಮಾಡ್ತಿದ್ದಾರೆ.
ವಿದ್ಯಾರ್ಥಿನಿ ತಮ್ಮ ಮೊಬೈಲ್ ಖಾತೆಯಲ್ಲಿ ಸ್ಟೇಟಸ್ ಹಾಕಿದ್ದು, ಈ ಕಾರಣಕ್ಕೆ ಕೇರಳ ಮೂಲದ ಆರು ಮಂದಿ ವಿದ್ಯಾರ್ಥಿಗಳು ರ್ಯಾಗಿಂಗ್ ಮಾಡಿ ಹಲ್ಲೆ ಮಾಡಿದ್ದರಂತೆ. ಇದರಿಂದ ನೊಂದ ವಿದ್ಯಾರ್ಥಿನಿ ಸುಳ್ಯ ಪೊಲೀಸ್ ಠಾಣೆಗೆ ತೆರಳಿ ರ್ಯಾಗಿಂಗ್ ಹಾಗೂ ಪರಿಶಿಷ್ಟ ಜಾತಿ ದೌರ್ಜನ್ಯ ತಡೆ ಕಾಯ್ದೆ ಅಡಿ ದೂರು ದಾಖಲು ಮಾಡಿದ್ದಾರೆ. ವಿದ್ಯಾರ್ಥಿನಿಯ ದೂರಿನ ಮೇರೆಗೆ ಕಾಲೇಜಿನ ಮೂರನೇ ವರ್ಷದ ಡೆಂಟಲ್ ವಿದ್ಯಾರ್ಥಿ ವಿಶಾಖ್ ಸೇರಿದಂತೆ ಆರು ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ.
ಇದನ್ನೂ ಓದಿ: Modi Mother: ತಾಯಿ ನೋಡಲು ಆಸ್ಪತ್ರೆಗೆ ಧಾವಿಸಿದ ಪ್ರಧಾನಿ, ವೈದ್ಯರಿಂದ ಹೀರಾಬೆನ್ ಆರೋಗ್ಯ ಮಾಹಿತಿ ಪಡೆದ ಮೋದಿ
ಗಾಂಜಾ ಮಾರಾಟ ಮಾಡ್ತಿದ್ದ ಆರೋಪಿ ಬಂಧನ
ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧನ ಮಾಡಿದ್ದಾರೆ. ರಾಯಚೂರು ಮೂಲದ ಮಲ್ಲಿನಾಥ್ (19) ಬಂಧಿತ ಆರೋಪಿಯಾಗಿದ್ದಾರೆ. ಬಂಧಿತ ಆರೋಪಿಯಿಂದ ಒಂದು ಲಕ್ಷ ಮೌಲ್ಯದ 2 ಕೆಜಿ 515 ಗ್ರಾಂ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ನಗರದ ಪಿಇಎಸ್ ಕಾಲೇಜಿನಿಂದ ಗೋವಿಂದಶೆಟ್ಟಿ ಪಾಳ್ಯಕ್ಕೆ ಹೋಗುವ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ, ಟ್ರಾವೆಲ್ ಬ್ಯಾಗ್ ನಲ್ಲಿ ಗಾಂಜಾ ತಂದಿದ್ದನಂತೆ. ಖಚಿತ ಮಾಹಿತಿ ಮೇರೆಗೆ ಪರಪ್ಪನ ಅಗ್ರಹಾರ ಪೊಲೀಸರು ದಾಳಿ ನಡೆಸಿದ್ದು, ಘಟನೆ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಇದನ್ನೂ ಓದಿ: Crime News: ಶಿಕ್ಷಕನಿಂದ ಹಲ್ಲೆಗೊಳಗಾಗಿದ್ದ ಟೀಚರ್ ಸಾವು; ಟ್ರಯಾಂಗಲ್ ಲವ್ ಸ್ಟೋರಿಗೆ ತಾಯಿ-ಮಗ ಬಲಿ
ಪಾಠ ಮಾಡ್ತಿದ್ದ ಶಿಕ್ಷಕನ ಮೇಲೆ ಮಚ್ಚಿನಿಂದ ದಾಳಿ
ತರಗತಿಯಲ್ಲಿ ಪಾಠ ಮಾಡುತ್ತಿದ್ದ ಶಿಕ್ಷಕನ ಮೇಲೆ ಏಕಾಏಕಿ ಮಚ್ಚಿನಿಂದ ದಾಳಿ ನಡೆಸಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನಲ್ಲಿ ಘಟನೆ ನಡೆದಿದೆ. ಕೂರಿಗೇಪಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕ ವೆಂಕಟಶಿವ ಎಂಬುವರ ಮೇಲೆ ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದಾರೆ.
ಕೂರಿಗೇಪಲ್ಲಿ ಗ್ರಾಮದ ಮಂಜುನಾಥ್ ಹಲ್ಲೆ ಮಾಡಿದ ಆರೋಪಿಯಾಗಿದ್ದು, ಘಟನೆಯಲ್ಲಿ ಗಾಯಗೊಂಡಿರುವ ಶಿಕ್ಷಕರಿಗೆ ಶ್ರೀನಿವಾಸಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ್ದು, ಹೆಚ್ಚಿನ ಚಿಕಿತ್ಸೆಗೆ ಕೋಲಾರದ ಆರ್.ಎಲ್ ಜಾಲಪ್ಪ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ರಾಯಲ್ಪಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ