• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Hijab Controversy: ಮಂಗಳೂರು ವಿವಿಯಲ್ಲಿ ಮತ್ತೆ ಹಿಜಾಬ್ ವಿವಾದ, ವಿದ್ಯಾರ್ಥಿಗಳಿಂದ ಪ್ರತಿಭಟನೆ

Hijab Controversy: ಮಂಗಳೂರು ವಿವಿಯಲ್ಲಿ ಮತ್ತೆ ಹಿಜಾಬ್ ವಿವಾದ, ವಿದ್ಯಾರ್ಥಿಗಳಿಂದ ಪ್ರತಿಭಟನೆ

ವಿದ್ಯಾರ್ಥಿಗಳ ಪ್ರತಿಭಟನೆ

ವಿದ್ಯಾರ್ಥಿಗಳ ಪ್ರತಿಭಟನೆ

ಹಿಜಾಬ್ ಧರಿಸಿ ಕಾಲೇಜಿಗೆ ಬರಲು ಅವಕಾಶವಿಲ್ಲ. ಆದರೂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಬರುತ್ತಿದ್ದಾರೆ. ಆದ್ದರಿಂದ ಹಿಜಾಬ್ ವಿರುದ್ಧ ಕಟ್ಟುನಿಟ್ಟಾಗಿ ನಿಯಮ ಪಾಲಿಸಬೇಕೆಂದು ವಿದ್ಯಾರ್ಥಿಗಳು ಒತ್ತಾಯಿಸಿದರು.

  • Share this:

ಮಂಗಳೂರು (ಮೇ 26): ರಾಜ್ಯದಲ್ಲಿ ಮತ್ತೆ ಹಿಜಾಬ್​ ವಿವಾದ (Hijab Controversy) ತಲೆ ಎತ್ತಿದೆ. ​ ಮಂಗಳೂರು ವಿಶ್ವವಿದ್ಯಾಲಯ (Mangaluru University) ವ್ಯಾಪ್ತಿಯಲ್ಲಿ ಬರುವ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್​ ಧರಿಸಿ ಬರುತ್ತಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿಗಳು (Student) ಬೃಹತ್​ ಪ್ರತಿಭಟನೆ (Protest) ನಡೆಸಿದರು. ಶಾಲಾ-ಕಾಲೇಜುಗಳಲ್ಲಿ ಹಿಜಾಬ್​ಗೆ ನಿರ್ಬಂಧ ಇದ್ದರೂ ಅನೇಕ ವಿದ್ಯಾರ್ಥಿಗಳು  ಹಿಜಾಬ್​ ಧರಿಸಿಯೇ ಬರ್ತಿದ್ದಾರೆ ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.


ಹಿಜಾಬ್​ ಧರಿಸಿಯೇ ಕಾಲೇಜಿಗೆ ಬರ್ತಿದ್ದಾರೆ


ನಗರದ ಹಂಪನಕಟ್ಟೆಯಲ್ಲಿರುವ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬರುತ್ತಿದ್ದಾರೆ. ನಿಯಮದಂತೆ ಹಿಜಾಬ್ ಧರಿಸಿ ಕಾಲೇಜಿಗೆ ಬರಲು ಅವಕಾಶವಿಲ್ಲ. ಆದರೂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಬರುತ್ತಿದ್ದಾರೆ. ಆದ್ದರಿಂದ ಹಿಜಾಬ್ ವಿರುದ್ಧ ಕಟ್ಟುನಿಟ್ಟಾಗಿ ನಿಯಮ ಪಾಲಿಸಬೇಕೆಂದು ವಿದ್ಯಾರ್ಥಿಗಳು ಒತ್ತಾಯಿಸಿದರು.


ನಿಯಮ ಪಾಲಿಸುವಂತೆ ಪಟ್ಟು


ಪ್ರತಿಭಟನೆ ವಿಷಯ ತಿಳಿದು ಸ್ಥಳಕ್ಕೆ ಪ್ರಾಂಶುಪಾಲರು ಆಗಮಿಸಿ ವಿದ್ಯಾರ್ಥಿಗಳ ಮನವೊಲಿಸಲು ಯತ್ನಿಸಿದರು. ಆದರೆ, ಅದು ಸಫಲವಾಗಲಿಲ್ಲ. ತಕ್ಷಣದಿಂದಲೇ ಹಿಜಾಬ್ ಧರಿಸಲು ಅವಕಾಶ ನೀಡಬಾರದು ಮತ್ತು ವಿದ್ಯಾರ್ಥಿಗಳ ಬೇಡಿಕೆಗೆ ಸ್ಪಂದಿಸದ ವಿದ್ಯಾರ್ಥಿ ಸಂಘದ ಅಧ್ಯಕ್ಷರನ್ನು ಬದಲಾಯಿಸಬೇಕೆಂದು ಪಟ್ಟು ಹಿಡಿದಿದ್ದಾರೆ.


SSLC ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ, 10 ಜನರ ಬಂಧನ


ರಾಮನಗರ ಜಿಲ್ಲೆಯ ಮಾಗಡಿಯಲ್ಲಿ (Magadi, Ramanagara) ಎಸ್ಎಸ್ಎಲ್ ಸಿ ಪ್ರಶ್ನೆ ಪತ್ರಿಕೆ ಸೋರಿಕೆ (SSLC Question Paper Leak) ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು (Police) ನಿನ್ನೆ 10 ಜನರನ್ನು ಬಂಧಿಸಿದ್ದರು. ಮಾಗಡಿಯ ಕೆಂಪೇಗೌಡ ಪ್ರೌಢಶಾಲೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಸ್ಥಳೀಯ ವಿಜಿ, ಕೆಂಪೇಗೌಡ ಶಾಲೆಯ ಪ್ರಿನ್ಸಿಪಲ್ ಶ್ರೀನಿವಾಸ್, ಕ್ಲರ್ಕ್ ರಂಗೇಗೌಡ, ರಂಗನಾಥ ಶಾಲೆಯ ಕೃಷ್ಣಮೂರ್ತಿ, ಸುಬ್ರಹ್ಮಣ್ಯ, ಅರ್ಜುನ್, ಅಲೀಮ್ ಉಲ್ಲಾ ಬೇಗ್, ನಾಗರಾಜು, ಲೋಕೇಶ್, ಶ್ರೀನಿವಾಸ್ ಎಂಬ ಶಿಕ್ಷಕರ ಬಂಧನಕ್ಕೆ ಒಳಪಡಿಸಲಾಗಿತ್ತು. ವಿಚಾರಣೆ ಬಳಿಕ ಎಲ್ಲರೂ ನ್ಯಾಯಾಲಯದ (Court) ಮುಂದೆ ಹಾಜರು ಪಡಿಸಲಾಗಿತ್ತು.


ಕೆಂಪೇಗೌಡ ಶಾಲೆಯ ಪ್ರಿನ್ಸಿಪಲ್ ಶ್ರೀನಿವಾಸ್, ಕ್ಲರ್ಕ್ ರಂಗೇಗೌಡ, ರಂಗನಾಥ ಶಾಲೆಯ ಕೃಷ್ಣಮೂರ್ತಿ ಎಂಬವರನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದ್ದು, ಇನ್ನುಳಿದ ಏಳು ಜನರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಸದ್ಯ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


ಆರೋಪಿಗಳ ಬಂಧನಕ್ಕೆ ಬಿ.ಸಿ.ನಾಗೇಶ್ ಆದೇಶ


ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಆದೇಶದಂತೆ ಶಿಕ್ಷಕರ ಬಂಧನ ಮಾಡಲಾಗಿತ್ತು. ಕಳೆದ ಮೂರು ದಿನಗಳಿಂದ ಬಿಇಒ ಯತಿಕುಮಾರ್ ಎಂಬರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದರೆ. ಪ್ರಶ್ನೆ ಪತ್ರಿಕೆ ಸೋರಿಕೆ ವಿಷಯ ಗೊತ್ತಿದ್ದರೂ ಯತಿಕುಮಾರ್ ಮೌನವಾಗಿದ್ದರು ಎಂಬ ಆರೋಪಗಳು ಕೇಳಿ ಬಂದಿವೆ.


ಪೊಲೀಸ್ ಅಧಿಕಾರಿಗಳ ಪ್ರಕಾರ, ಖಾಸಗಿ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರೊಬ್ಬರು ರಾಮನಗರದ ಪರೀಕ್ಷಾ ಕೇಂದ್ರವೊಂದರಲ್ಲಿ ಸಂಗ್ರಹಿಸಲಾಗಿದ್ದ ವಿಜ್ಞಾನ ಪ್ರಶ್ನೆ ಪತ್ರಿಕೆಯ ಫೋಟೋ ತೆಗೆದಿದ್ದರು.


ರಾಷ್ಟ್ರಕವಿ ಕುವೆಂಪುಗೆ ಅಪಮಾನ: ರೋಹಿತ್ ಚಕ್ರತೀರ್ಥ, ಲಕ್ಷಣ್ ವಿರುದ್ಧ ದೂರು


ಬೆಂಗಳೂರು: ರಾಷ್ಟ್ರಕವಿ ಕುವೆಂಪು ಅವರ ಗೌರವಕ್ಕೆ ಧಕ್ಕೆ ತಂದ ಆರೋಪ ಎದುರಿಸುತ್ತಿರುವ ರೋಹಿತ್ ಚಕ್ರತೀರ್ಥ ಹಾಗೂ ಲಕ್ಷಣ ಆಕಾಶೆ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಪೊಲೀಸರಿಗೆ ವಕೀಲರ ನಿಯೋಗ ಆಗ್ರಹಿಸಿದೆ. ಈ ಸಂಬಂಧ ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷ ಎ.ಪಿ ರಂಗನಾಥ್, ಹಿರಿಯ ವಕೀಲರಾದ ಬಾಲನ್, ಕೆ.ಎನ್ ಜಗದೀಶ್ ಕುಮಾರ್, ಪ್ರದೀಪ್, ಸೂರ್ಯ ಮುಕುಂದರಾಜ್ ಇಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಪ್ರತಾಪ್​ ರೆಡ್ಡಿ ಅವರಿಗೆ ದೂರು ಸಲ್ಲಿಸಿ ಆರೋಪಿತರವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.


ರಾಷ್ಟ್ರಕವಿ ಕುವೆಂಪು ಅವರನ್ನು ಅವಹೇಳನ ಮಾಡಿರುವ ಆರೋಪಿತರು ನಾಡಗೀತೆಗೂ ಅವಮಾನ ಮಾಡಿದ್ದಾರೆ. ಆದ್ದರಿಂದ ರೋಹಿತ್ ಚಕ್ರತೀರ್ಥ ಮತ್ತು ಲಕ್ಷ್ಮಣ ಆಕಾಶೆ ಕಾರ್ಕಳ ವಿರುದ್ಧ ತಕ್ಷಣವೇ ಕಾನೂನು ರೀತಿ ಕ್ರಮ ಜರುಗಿಸುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ.

Published by:Pavana HS
First published: