HOME » NEWS » State » MANY DIGNITARIES CONDOLENCES FOR MOS CENTRAL MINISTER SURESH ANGADI DEATH HK

Suresh Angadi : ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನಕ್ಕೆ ಸಂತಾಪ ಸೂಚಿಸಿದ ರಾಜಕೀಯ ನಾಯಕರು

ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ನಿಧನಕ್ಕೆ ಪ್ರಧಾನ ಮಂತ್ರಿ ನರೇದ್ರ ಮೋದಿ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಸಂತಾಪವನ್ನು ಸೂಚಿಸಿದ್ದಾರೆ.

news18-kannada
Updated:September 23, 2020, 10:37 PM IST
Suresh Angadi : ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನಕ್ಕೆ ಸಂತಾಪ ಸೂಚಿಸಿದ ರಾಜಕೀಯ ನಾಯಕರು
ರೈಲ್ವೆ ರಾಜ್ಯ ಖಾತೆ ಸಚಿವ ಸುರೇಶ್ ಅಂಗಡಿ.
  • Share this:
ಬೆಂಗಳೂರು (ಸೆಪ್ಟೆಂಬರ್​. 23): ಕೊರೋನಾ ಸೋಂಕಿಗೆ ತುತ್ತಾಗಿ ನಿಧನ ಹೊಂದಿದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ನಿಧನಕ್ಕೆ ಪ್ರಧಾನ ಮಂತ್ರಿ ನರೇದ್ರ ಮೋದಿ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಸಂತಾಪವನ್ನು ಸೂಚಿಸಿದ್ದಾರೆ.  ಕಳೆದ ವಾರ ಸುರೇಶ್ ಅಂಗಡಿ ಅವರಿಗೆ ಕೊರೊನಾ ಸೋಂಕು ತಗುಲಿತ್ತು. ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಂಜೆ ನಿಧನರಾಗಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರವನ್ನು ಸುರೇಶ್ ಅಂಗಡಿ ಪ್ರತಿನಿಧಿಸುತ್ತಿದ್ದರು. ಮುಂಬೈ ಕರ್ನಾಟಕ ಭಾಗದಲ್ಲಿ ಬಿಜೆಪಿಯ ಪ್ರಬಲ ಮುಖಂಡರಾಗಿದ್ದರು. ಕೇಂದ್ರ  ಸಚಿವ ಸಂಪುಟದ ರಾಜ್ಯ ರೈಲ್ವೇ ಸಚಿವರಾಗಿ ಕೆಲಸ ಮಾಡುತ್ತಿದ್ದರು. ಅಧಿವೇಶನ ಆರಂಭವಾದಾಗ ಎಲ್ಲ ಸಂಸದರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ವೇಳೆ ಅಂಗಡಿ ಅವರಿಗೆ ಸೋಂಕು ತಗುಲಿರುವುದು ದೃಢಪಟ್ಟಿತ್ತು.


ಪ್ರಧಾನ ಮಂತ್ರಿ ನರೇಂದ್ರ ಮೋದಿ

ಹಿರಿಯ ನಾಯಕರು, ಕೇಂದ್ರ ರೈಲ್ವೆ ರಾಜ್ಯ ಸಚಿವ ಶ್ರೀ ಸುರೇಶ್ ಅಂಗಡಿ ಅವರ ಅಕಾಲಿಕ ನಿಧನದ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ಇದನ್ನು ನಂಬಲಿಕ್ಕೆ ಸಾಧ್ಯವಾಗುತ್ತಿಲ್ಲ. ಸಭ್ಯ, ಸೌಮ್ಯ ಸ್ವಭಾವದವರಾಗಿ, ಜನಪ್ರಿಯ ನಾಯಕರಾಗಿದ್ದ ಸುರೇಶ್ ಅಂಗಡಿಯವಾರ ನಿಧನ, ಪಕ್ಷಕ್ಕೆ, ರಾಜ್ಯಕ್ಕೆ ಮಾತ್ರವಲ್ಲ, ಇಡೀ ದೇಶಕ್ಕೆ ಬಹುದೊಡ್ಡ ನಷ್ಟವಾಗಿದೆ..

-  ಬಿ ಎಸ್ ಯಡಿಯೂರಪ್ಪ, ಮುಖ್ಯಮಂತ್ರಿಹೆಚ್ ಡಿ ದೇವೇಗೌಡ , ಮಾಜಿ ಪ್ರಧಾನಿಬೆಳಗಾವಿ ಸಂಸದರು, ಕೇಂದ್ರ ರೈಲ್ವೆ ರಾಜ್ಯ ಸಚಿವರೂ ಆದ ಸುರೇಶ್ ಅಂಗಡಿ ಅವರು ವಿಧಿವಶರಾದದ್ದು ತೀವ್ರ ದಿಗ್ಭ್ರಮೆಯನ್ನುಂಟು ಮಾಡಿದೆ

- ಹೆಚ್ ಡಿ ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರ ಸಾವು ಆಘಾತಕಾರಿಯಾದುದು. ಸ್ನೇಹಜೀವಿಯಾಗಿದ್ದ ಸುರೇಶ್ ಅಂಗಡಿ ರಾಜ್ಯದ ಅಭಿವೃದ್ದಿ ಬಗ್ಗೆ ಅಪಾರ ಕಾಳಜಿ ಉಳ್ಳವರಾಗಿದ್ದರು. ಅವರ ಕುಟುಂಬ ವರ್ಗಕ್ಕೆ ನನ್ನ ಸಂತಾಪಗಳು,
ಅವರ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ.

-ಸಿದ್ದರಾಮಯ್ಯ, ಪ್ರತಿಪಕ್ಷದ ನಾಯಕಆತ್ಮೀಯರು, ಕೇಂದ್ರದ ರೈಲ್ವೆ ರಾಜ್ಯ ಸಚಿವರಾದ ಶ್ರೀ ಸುರೇಶ ಅಂಗಡಿ ಅವರ ನಿಧನ ತೀವ್ರ ಅಘಾತವನ್ನುಂಟು ಮಾಡಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿ ಕೊಡಲಿ ಎಂದು ಪ್ರಾರ್ಥಿಸುತ್ತೇನೆ.

-ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವರುಕೇಂದ್ರ ರೈಲ್ವೆ ಸಚಿವರಾದ ಸುರೇಶ್ ಅಂಗಡಿಯವರ ಅಕಾಲಿಕ ನಿಧನ ಸುದ್ಧಿ ನನಗೆ ತೀವ್ರ ಆಘಾತವುಂಟುಮಾಡಿದೆ. ನಂಬಲಸಾಧ್ಯ ಸಂಗತಿ. ಕೊರೋನಾ ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಶೀಘ್ರ ಗುಣಮುಖರಾಗುತ್ತಾರೆಂದು ಭಾವಿಸಿದ್ದೆವು. ಕುಟುಂಬವರ್ಗದವರಿಗೆ ಈ ನೋವನ್ನು ತಡೆದುಕೊಳ್ಳುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.

- ಎಂ ಬಿ ಪಾಟೀಲ್​​​, ಮಾಜಿ ಸಚಿವರುಕೇಂದ್ರ ಸಚಿವರಾಗಿದ್ದ ಶ್ರೀ ಸುರೇಶ್ ಅಂಗಡಿಯವರು ನಮ್ಮನ್ನು ಅಗಲಿರುವುದು ತೀವ್ರ ನೋವು ತಂದಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಕುಟುಂಬ, ಹಿತೈಷಿ ವರ್ಗ ಹಾಗೂ ಅಪಾರ ಬೆಂಬಲಿಗರಿಗೆ ಈ ನೋವನ್ನು ಭರಿಸುವ ಶಕ್ತಿ ಭಗವಂತನು ನೀಡಲಿ ಎಂದು ನನ್ನ ಪ್ರಾರ್ಥನೆ.

- ಡಾ.ಅಶ್ವತ್ಥ ನಾರಾಯಣ, ಉಪಮುಖ್ಯಮಂತ್ರಿಪಿಯೂಷ್ ಗೋಯಲ್, ಕೇಂದ್ರ ರೈಲ್ವೆ ಸಚಿವಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರು ಮತ್ತು ಬೆಳಗಾವಿ ಲೋಕಸಭಾ ಕ್ಷೇತ್ರದ ಜನಪ್ರಿಯ ಸಂಸದರಾದ ಶ್ರೀ ಸುರೇಶ್ ಅಂಗಡಿ ಅವರು ದೈವಾಧೀನರಾಗಿರುವ ವಿಷಯ ತಿಳಿದು ಆಘಾತವಾಗಿದೆ. ಶ್ರೀಯುತರ ಆತ್ಮಕ್ಕೆ ಸದ್ಗತಿ ದೊರಕಲಿ ಮತ್ತು ಅವರ ಕುಟುಂಬ ಸದಸ್ಯರಿಗೆ ಈ ಅಗಲಿಕೆಯನ್ನು ಭರಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.

- ಡಾ. ಕೆ ಸುಧಾಕರ್​, ವೈದ್ಯಕೀಯ ಶಿಕ್ಷಣ ಸಚಿವ

ಸುರೇಶ್ ಅಂಗಡಿ ಅವರು ಅಭಿವೃದ್ಧಿ ಪರವಾಗಿದ್ದರು. ಬಿಜೆಪಿ ಪಕ್ಷದ ಏಳಿಗೆಗಾಗಿ ಅಪಾರವಾಗಿ ಶ್ರಮಿಸಿದ್ದಾರೆ. ಅವರ ಅಗಲಿಕೆಯಿಂದ ರಾಜ್ಯಕ್ಕೆ , ರಾಷ್ಟ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಅವರ ಕುಟುಂಬ ಪರಿವಾರದವರಿಗೆ&ಅನುಯಾಯಿಗಳಿಗೆ ದುಃಖವನ್ನು ಭರಿಸುವ ಶಕ್ತಿ ನೀಡಿ, ಮೃತರ ಆತ್ಮಕ್ಕೆ ಚಿರ ಶಾಂತಿ ನೀಡುವಂತೆ ಭಗವಂತನಲ್ಲಿ‌ ಪ್ರಾರ್ಥನೆ

-ಗೋವಿಂದ್ ಕಾರಜೋಳ , ಉಪಮುಖ್ಯಮಂತ್ರಿ

ಕೇಂದ್ರ ಸಚಿವ, ಬೆಳಗಾವಿಯ ಸಂಸದರಾದ, ಸಜ್ಜನ ಶ್ರೀ ಸುರೇಶ್ ಅಂಗಡಿಯವರ ಅಕಾಲಿಕ ಮರಣ ಅತೀವ ದುಃಖ ತಂದಿದೆ. ಅವರ ಕುಟುಂಬಕ್ಕೆ ಭಗವಂತನು ನೋವನ್ನು ಭರಿಸುವ ಶಕ್ತಿ ಕೊಡಲಿ. ಅವರ ಆತ್ಮಕ್ಕೆ ಭಗವಂತ ಚಿರ ಶಾಂತಿ ನೀಡಲಿ.

- ಸಚಿವ ಕೆ ಎಸ್ ಈಶ್ವರಪ್ಪ Published by: G Hareeshkumar
First published: September 23, 2020, 9:37 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading