Cabinet Meeting: ಪೌರಕಾರ್ಮಿಕರಿಗೆ ಗುಡ್​ ನ್ಯೂಸ್​; ಸರ್ಕಾರಿ ನೌಕರರೆಂದು ನೇಮಕಾತಿಗೆ ಸಂಪುಟ ಸೂಚನೆ

ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷಾ ಮಂಡಳಿ ವಿಲೀನ ವಿಚಾರ ಕೂಡ ಚರ್ಚೆಗೆ ಬಂತು ಎರಡೂ ಪರೀಕ್ಷಾ ಮಂಡಳಿ ವಿಲೀನಕ್ಕೆ ಸಂಪುಟ ಒಪ್ಪಿಗೆ ಸೂಚಿಸಿದೆ. ಸಚಿವ ಸಂಪುಟದ ಉಪಸಮಿತಿಯ ಶಿಫಾರಸು ಆಧರಿಸಿ 35 ವ್ಯಕ್ತಿಗಳ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳನ್ನು ವಾಪಸ್ ಪಡೆಯಲು ನಿರ್ಧರಿಸಲಾಗಿದೆ.

ಬಸವರಾಜ ಬೊಮ್ಮಾಯಿ

ಬಸವರಾಜ ಬೊಮ್ಮಾಯಿ

  • Share this:
ಬೆಂಗಳೂರು (ಸೆ.19): ವಿಧಾನಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಸಲಾಯ್ತು. ಕ್ಯಾಬಿನೆಟ್​ ಸಭೆಯಲ್ಲಿ (Cabinet Meeting) ಹಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಬಿಜೆಪಿ ಕಾರ್ಯಕರ್ತರು, ಹಿಂದೂ ಪರ ಕಾರ್ಯಕರ್ತರು, ಕನ್ನಡ ಪರ ಮತ್ತು ರೈತ ಮುಖಂಡರ ಮೊಕದ್ದಮೆ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯ್ತು. ಸಚಿವ ಸಂಪುಟದ ಉಪಸಮಿತಿಯ ಶಿಫಾರಸು ಆಧರಿಸಿ 35 ವ್ಯಕ್ತಿಗಳ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳನ್ನು ವಾಪಸ್ ಪಡೆಯಲು ನಿರ್ಧರಿಸಲಾಗಿದೆ.

 2 ಪರೀಕ್ಷಾ ಮಂಡಳಿ ವಿಲೀನಕ್ಕೆ ಸಂಪುಟ ಒಪ್ಪಿಗೆ

ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷಾ ಮಂಡಳಿ ವಿಲೀನ ವಿಚಾರ ಕೂಡ ಚರ್ಚೆಗೆ ಬಂತು ಎರಡೂ ಪರೀಕ್ಷಾ ಮಂಡಳಿ ವಿಲೀನಕ್ಕೆ ಸಂಪುಟ ಒಪ್ಪಿಗೆ ಸೂಚಿಸಿದೆ. ಪರೀಕ್ಷೆ ಸಂದರ್ಭದಲ್ಲಿ ಮಾತ್ರ ಪಿಯು ಪರೀಕ್ಷಾ ಮಂಡಳಿ ಕೆಲಸ ನಿರ್ವಹಿಸುತ್ತಿದೆ. ಆದ್ರೆ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಮಂಡಳಿ ಇತರೆ ಪರೀಕ್ಷೆಯನ್ನೂ ನಡೆಸುತ್ತಿದೆ. ಇದರಿಂದ ಆರ್ಥಿಕ ನಷ್ಟ ಮತ್ತು ಹೆಚ್ಚುವರಿ ಸಿಬ್ಬಂದಿ ಅವಶ್ಯಕತೆ ಇದೆ. ಹೀಗಾಗಿ ಪರೀಕ್ಷಾ ಬೋರ್ಡ್ ವಿಲೀನಗೊಳಿಸಲು ನಿರ್ಧಾರ. ಮಾಡಲಾಗಿದ್ದು, ಶಿಕ್ಷಕರ ಮ್ಯೂಚುಯಲ್‌ ವರ್ಗಾವಣೆಗೂ ಒಪ್ಪಿಗೆ ನೀಡಲಾಗಿದೆ. ಒಂದೇ ವಿಷಯದ ಇಬ್ಬರೂ ಶಿಕ್ಷಕರು ಒಪ್ಪಿಗೆ ಇದ್ದಲ್ಲಿ ವರ್ಗಾವಣೆ ಮಾಡಿಸಿಕೊಳ್ಳಬಹುದು.

ಕರ್ನಾಟಕ ಶಿಕ್ಷಕರ ವರ್ಗಾವಣೆ ನಿಯಂತ್ರಣ ತಿದ್ದುಪಡಿ ವಿಧೇಯಕ್ಕೆ ಒಪ್ಪಿಗೆ ನೀಡಲಾಗಿದೆ. ಶಿಕ್ಷಕರ ವರ್ಗಾವಣೆಯಲ್ಲಿ ಕೆಲ ಗೊಂದಲಗಳ ನಿವಾರಣೆ ಕುರಿತ ವಿಧೇಯಕಕ್ಕೆ ಒಪ್ಪಿಗೆ ನೀಡಲಾಗಿದ್ದು, ನಾಳೆ ವಿಧೇಯಕ ಮಂಡನೆಯಾಗಲಿದೆ.

ಇದನ್ನೂ ಓದಿ: V Munirathna: 50 ಕೋಟಿ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ; ಕೆಂಪಣ್ಣ ಸೇರಿ 18 ಜನರಿಗೆ ಮುನಿರತ್ನ ಕೊಟ್ರು ವಾರ್ನಿಂಗ್​!

ಸಭಾಪತಿ ಚುನಾವಣೆ ಬಗ್ಗೆ ನಾಳೆಯೇ ತೀರ್ಮಾನ

ವಿಧಾನಪರಿಷತ್ ಸಭಾಪತಿ ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಕ್ಯಾಬಿನೆಟ್​ ಸಭೆಯಲ್ಲಿ ಚರ್ಚೆ ನಡೆಸಲಾಯ್ತು. ಈ ಕುರಿತು ರಾಜ್ಯ ಸರ್ಕಾರ ನಾಳೆ ಅಂತಿಮ ನಿರ್ಧಾರ ಕೈಗೊಳ್ಳಲಿದೆ. ಗುರುವಾರದೊಳಗೆ ಸಭಾಪತಿ ಆಯ್ಕೆಯಾಗಬೇಕಿದೆ. ಹೀಗಾಗಿ ನಾಳೆಯೇ ಅಂತಿಮ ತೀರ್ಮಾನ ಮಾಡಲು ನಿರ್ಧರಿಸಲಾಗಿದೆ.

ಪೌರಕಾರ್ಮಿಕರಿಗೆ ಗುಡ್​ ನ್ಯೂಸ್​

ಪೌರಕಾರ್ಮಿಕರಿಗೆ ವಿಶೇಷ ನೇಮಕಾತಿ ನಿಯಮಗಳ ಅಡಿಯಲ್ಲಿ ಸರ್ಕಾರಿ ನೌಕರರೆಂದು ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. ರಾಜ್ಯದ ನಗರಸಭೆ ಪುರಸಭೆ ಮತ್ತು ಇತರ ಪಟ್ಟಣ ಪಟ್ಟಣ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರಿಗೆ ಗುಡ್​ ನ್ಯೂಸ್​ ನೀಡಿದೆ. ಈ ನೌಕರರು ಈಗ 17000-28980 ವೇತನ ಶ್ರೇಣಿ ಅಡಿಯಲ್ಲಿ ಸೇವೆ ಸಲ್ಲಿಸುವಂತೆ ಅವಕಾಶ ಕಲ್ಪಿಸಲಾಗಿದೆ. ಪೌರ ಕಾರ್ಮಿಕ ಖಾಯಮಾತಿಯಾಗಿದ್ದು ರಾಜ್ಯದ ಇತಿಹಾಸದಲ್ಲಿಯೇ ಮೊದಲ ಬಾರಿಯಾಗಿದೆ. ಅನೇಕ ದಿನಗಳಿಂದ ಹೋರಾಟ ಮಾಡುತ್ತಿದ್ದ ಪೌರಕಾರ್ಮಿಕರ ಹೋರಾಟಕ್ಕೆ ನ್ಯಾಯ ಸಿಕ್ಕಿದೆ.

ಇದನ್ನೂ ಓದಿ: BBMP: ವಿಪ್ರೋ ಮುಂದೆ ಮಂಡಿಯೂರಿದ್ರಾ ಬಿಬಿಎಂಪಿ, ಕಂದಾಯ ಇಲಾಖೆ ಅಧಿಕಾರಿಗಳು?

ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಬಗ್ಗೆ ನಾಳೆ ಸಭೆ

ಉತ್ತರ ಕನ್ನಡ ಜಿಲ್ಲೆಗೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ವಿಚಾರ ಭಾರೀ ಚರ್ಚೆಯಗುತ್ತಿದೆ. ಈಗಾಗಲೇ ಉತ್ತರ ಕನ್ನಡ ಜಿಲ್ಲೆಗೆ ಆಸ್ಪತ್ರೆ ಮಂಜೂರು ವಿಳಂಬ ಆಗಿರುವ ಹಿನ್ನೆಲೆ. ನಾಳೆ ಆರೋಗ್ಯ ಸಚಿವ ಡಾ. ಕೆ ಸುಧಾಕರ್‌ ನೇತೃತ್ವದಲ್ಲಿ ಸಭೆ ನಡೆಯಲಿದೆ. ಆರೋಗ್ಯ ಸಚಿವ ಸುಧಾಕರ್‌ ನಿವಾಸದಲ್ಲಿ ಬೆಳಗ್ಗೆ 9 ಗಂಟೆಗೆ ನಡೆಯಲಿದ್ದು, ಸಭೆಯಲ್ಲಿ ಸಚಿವರಾದ ಕೋಟಾ ಶ್ರೀನಿವಾಸ್ ಪೂಜಾರಿ,ಶಿವರಾಮ್ ಹೆಬ್ಬಾರ್ ಹಾಗೂ ಉತ್ತರ ಕನ್ನಡ ಜಿಲ್ಲೆಯ ಶಾಸಕರು ಪರಿಷತ್ ಸದಸ್ಯರು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ವಿಳಂಬ  ನೀತಿಗೆ ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು. ಹೀಗಾಗಿ ಆರೋಗ್ಯ ಸಚಿವರ ನೇತೃತ್ವದಲ್ಲಿ ನಾಳೆ ಮಹತ್ವದ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಿದ್ದಾರೆ.
Published by:ಪಾವನ ಎಚ್ ಎಸ್
First published: