HOME » NEWS » State » MASKI BY ELECTION POLITICAL ACTIVITIES HYPER AT MASKI CONSTITUENCY SBR LG

Maski By Election: ಮಸ್ಕಿ ಉಪಚುನಾವಣೆ; ಗರಿಗೆದರಿದ ರಾಜಕೀಯ ಚಟುವಟಿಕೆಗಳು

ಏಪ್ರಿಲ್ 3  ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಏಪ್ರಿಲ್ 17 ರಂದು ಮತದಾನ, ಮೇ 2 ರಂದು ಮತ ಎಣಿಕೆ ನಡೆಯಲಿದೆ. ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 206354  ಮತದಾರರಿದ್ದು, ಅದರಲ್ಲಿ 101301  ಪುರುಷ ಹಾಗೂ 105040  ಮಹಿಳಾ ಮತದಾರರಿದ್ದಾರೆ. ಇಲ್ಲಿ ಪುರುಷರಿಗಿಂತ ಮಹಿಳಾ ಮತದಾರರೇ ಅಧಿಕವಾಗಿದ್ದಾರೆ.

news18-kannada
Updated:March 18, 2021, 2:02 PM IST
Maski By Election: ಮಸ್ಕಿ ಉಪಚುನಾವಣೆ; ಗರಿಗೆದರಿದ ರಾಜಕೀಯ ಚಟುವಟಿಕೆಗಳು
ಪ್ರತಾಪ್ ಗೌಡ ಪಾಟೀಲ್
  • Share this:
ರಾಯಚೂರು(ಮಾ.18): ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರಕ್ಕೆ ಈಗ ಉಪಚುನಾವಣೆ ಘೋಷಣೆಯಾಗಿದೆ.  ಏಪ್ರಿಲ್ 17ರಂದು ಮತದಾನ ನಡೆಯಲಿದ್ದು, ಈಗಾಗಲೇ ಚುನಾವಣೆಗೆ ಬಿಜೆಪಿ ಹಾಗೂ ಕಾಂಗ್ರೆಸ್ ಸಿದ್ದತೆ ಮಾಡಿಕೊಂಡಿವೆ. ಈ ಬಾರಿಯೂ ಕ್ಷೇತ್ರದಲ್ಲಿ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಹಾಗು ಬಸನಗೌಡ ತುರ್ವಿಹಾಳ ನೇರ ಸ್ಪರ್ಧೆಗಳಾಗಿದ್ದಾರೆ, ಆದರೆ ಈಗ ಅವರು ಸ್ಪರ್ಧಿಸಿರುವ ಪಕ್ಷಗಳು ಮಾತ್ರ ಅದಲು ಬದಲಾಗಿವೆ.  ಪ್ರತಾಪಗೌಡ ಬಿಜೆಪಿಯಿಂದ ಸ್ಪರ್ಧೆಸುತ್ತಿದ್ದರೆ, ಕಳೆದ ಬಾರಿ ಬಿಜೆಪಿಯಿಂದ ಸ್ಪರ್ಧಿಸಿರುವ ಬಸನಗೌಡ ತುರ್ವಿಹಾಳ ಕಾಂಗ್ರೆಸ್ ಅಭ್ಯರ್ಥಿಯಾಗಲಿದ್ದಾರೆ.

2007ರಲ್ಲಿ ಕ್ಷೇತ್ರಗಳ ಪುನರ್ವಿಂಗಡನೆಯಾದ ನಂತರ ಅಸ್ತಿತ್ವಕ್ಕೆ ಬಂದ ಮಸ್ಕಿ ವಿಧಾನಸಭಾ ಕ್ಷೇತ್ರವು ಪರಿಶಿಷ್ಟ ವರ್ಗಗಳಿಗೆ ಮೀಸಲಾತಿ ಹೊಂದಿದೆ. 2008 ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಪ್ರಥಮ ಬಾರಿಗೆ ಪ್ರತಾಪಗೌಡ ಪಾಟೀಲ ಬಿಜೆಪಿಯಿಂದ ಆಯ್ಕೆಯಾಗಿದ್ದರು.  2013ರ ವೇಳೆಗೆ ಪ್ರತಾಪಗೌಡ ಬಿಜೆಪಿ ತೋರೆದು ಕಾಂಗ್ರೆಸ್ ಸೇರಿದ್ದು, 2013, 2018 ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಆದರೆ ಸಮ್ಮಿಶ್ರ ಸರಕಾರ ರಚನೆಯ ವೇಳೆಯಿಂದಲೇ ಬಂಡಾಯ ತೋರೆದ ಪ್ರತಾಪಗೌಡ ಪಾಟೀಲ ಒಂದು ವರ್ಷದ ನಂತರ ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಹಾಗು ಜೆಡಿಎಸ್ ನ  17 ಶಾಸಕರು ರಾಜಿನಾಮೆ ನೀಡಿದ್ದರು, 2019 ಡಿಸೆಂಬರ್ ರಲ್ಲಿ 15 ಕ್ಷೇತ್ರಕ್ಕೆ ಉಪಚುನಾವಣೆ ನಡೆಯಿತು. ಆದರೆ ಪ್ರತಾಪಗೌಡ ಪಾಟೀಲರು 2018ರಲ್ಲಿ ಗೆಲುವು ಸಾಧಿಸುವಾಗ ಅಕ್ರಮವೆಸಗಿದ್ದಾರೆ ಎಂದು ಹೈಕೋರ್ಟ್ ನಲ್ಲಿ ಸೋಲು ಅನುಭವಿಸಿದ ಅಭ್ಯರ್ಥಿಗಳು ಪ್ರಕರಣ ದಾಖಲಿಸಿದ್ದರು. ಇದರಿಂದಾಗಿ ಚುನಾವಣೆ ವಿಳಂಬವಾಗಿದೆ. ಆದರೆ ಹೈ ಕೋರ್ಟ್ ಪ್ರಕರಣವನ್ನು ವಜಾಗೊಳಿಸಿದ ನಂತರ ಈಗ ಚುನಾವಣೆ ನಡೆಯುತ್ತಿದೆ.

ನಿರೀಕ್ಷೆಯಂತೆ 2020ರ ಡಿಸೆಂಬರ್ ತಿಂಗಳಲ್ಲಿಯೇ ಚುನಾವಣೆ ನಡೆಯುತ್ತದೆ ಎಂದುಕೊಂಡಿದ್ದರು, ಆದರೆ ಚುನಾವಣಾ ಆಯೋಗವು ಈಗ ಉಪಚುನಾವಣೆಯ ದಿನಾಂಕ ಘೋಷಣೆ ಮಾಡಿದೆ, ಮಾರ್ಚ್​ 23 ರಂದು ಅಧಿಸೂಚನೆ ಹೊರಡಿಸಿ, ಮಾರ್ಚ 30 ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ನೀಡಲಾಗಿದೆ. ಮಾರ್ಚ್ 31ಕ್ಕೆ ನಾಮಪತ್ರ ಪರಿಶೀಲನೆ ಮಾಡಲಾಗುವುದು.

Bangalore: ಹೂವಿನ ಮಾರುಕಟ್ಟೆಯಲ್ಲಿ 300 ಕೋಟಿಗೂ ಅಧಿಕ ನಷ್ಟ; ಬಾಡುತ್ತಿದೆ ಹೂ ಬೆಳೆಗಾರರ ಬದುಕು

ಏಪ್ರಿಲ್ 3  ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಏಪ್ರಿಲ್ 17 ರಂದು ಮತದಾನ, ಮೇ 2 ರಂದು ಮತ ಎಣಿಕೆ ನಡೆಯಲಿದೆ. ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 206354  ಮತದಾರರಿದ್ದು, ಅದರಲ್ಲಿ 101301  ಪುರುಷ ಹಾಗೂ 105040  ಮಹಿಳಾ ಮತದಾರರಿದ್ದಾರೆ. ಇಲ್ಲಿ ಪುರುಷರಿಗಿಂತ ಮಹಿಳಾ ಮತದಾರರೇ ಅಧಿಕವಾಗಿದ್ದಾರೆ.

2018 ರಲ್ಲಿ ಕಾಂಗ್ರೆಸ್ಸಿನಿಂದ ಸ್ಪರ್ಧಿಸಿದ್ದ ಪ್ರತಾಪಗೌಡರಿಗಿಂತ ಕೇವಲ 213 ಮತಗಳ ಅಂತರದಲ್ಲಿ ಸೋಲು ಅನುಭವಿಸಿದ್ದ ಬಸನಗೌಡ ಬಿಜೆಪಿಯಿಂದ ಸ್ಪರ್ಧಿಸಿದ್ದರು, ಬದಲಾದ ರಾಜಕೀಯ ಸನ್ನಿವೇಶದಲ್ಲಿ ಪ್ರತಾಪಗೌಡ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದರೆ, ಬಸನಗೌಡ ತುರ್ವಿಹಾಳ ಕಾಂಗ್ರೆಸ್ ಅಭ್ಯರ್ಥಿಯಾಗುವುದು ಖಚಿತವಾಗಿದೆ. ಎರಡು ಪಕ್ಷದ ಅಭ್ಯರ್ಥಿಗಳು ಈಗಾಗಲೇ ಇಡೀ ಕ್ಷೇತ್ರದಲ್ಲಿ ಹಲವಾರು ಬಾರಿ ಗ್ರಾಮೀಣ ಪ್ರದೇಶದಲ್ಲಿ ಅಬ್ಬರದ ಪ್ರಚಾರ ಮಾಡಿದ್ದಾರೆ.ಈ ಮಧ್ಯೆ ಪ್ರತಾಪಗೌಡರ ಚುನಾವಣೆಯ ಮುನ್ನ ಸಾವಿರಾರು ಕೋಟಿ ರೂಪಾಯಿಯ ಯೋಜ‌ನೆಗಳಿಗೆ ಚಾಲನೆ ಕೊಡಿಸಲು ಮುಂದಾಗಿದ್ದರು.ಕೆರೆಗಳಿಗೆ ನೀರು ತುಂಬಿಸುವ ಯೋಜನೆ, ವಟಗಲ್ ಬಸವೇಶ್ವರ ಏತ ನೀರಾವರಿ, ಮಸ್ಕಿ ನಾಲಾ ಅಧುನಿಕರಣ, ಕನಕ, ಹೇಮರಡ್ಡಿ ಮಲ್ಲಮ್ಮ ಭವನ ಸೇರಿದಂತೆ 55 ಕಾಮಗಾರಿಗಳಿಗೆ ಸಿಎಂ ಬಿ ಎಸ್ ಯಡಿಯೂರಪ್ಪರಿಂದ ಮಾರ್ಚ್​ 20 ರಂದು ಶಂಕುಸ್ಥಾಪನೆ ಮಾಡಲಿದ್ದರು. ಈ ನಿಟ್ಟಿನಲ್ಲಿ ಈಗಾಗಲೇ ಸಿದ್ದತೆಗಳು ನಡೆದಿದ್ದವು, ಕಾರ್ಯಕ್ರಮ ನಡೆಯುವ ಸ್ಥಳವನ್ನು ರಾಯಚೂರು ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಳು ಪರಿಶೀಲನೆ ಮಾಡಿದ್ದರು, ಆದರೆ ಇದೇ ವೇಳೆ ಚುನಾವಣೆ ಘೋಷಣೆಯಾಗಿದ್ದರಿಂದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ಮುಂದೊಡಲಾಗಿದೆ.

ಇದೇ ವೇಳೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡುವ ಬದಲು ಬಿಜೆಪಿ ಪಕ್ಷದ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ.ಈಗಾಗಲೇ ಅಭ್ಯರ್ಥಿಗಳ ಪರ ವಿರೋಧ ಚರ್ಚೆ ಆರಂಭವಾಗಿದೆ, ಪ್ರತಾಪಗೌಡ ಮೂರು ಬಾರಿ ಆಯ್ಕೆಯಾದರೂ ಕ್ಷೇತ್ರದ ಅಭಿವೃದ್ಧಿ ಯಾಗಿಲ್ಲ, ಪ್ರತಾಪಗೌಡರು ಪಕ್ಷಾಂತರ ಮಾಡಿರುವುದು ಕ್ಷೇತ್ರದ ಜನರಲ್ಲಿ ಅಸಮಾಧಾನವಿದೆ.
Youtube Video

ಇದೇ ವೇಳೆ ಬಸನಗೌಡ ಪರ ಕಡಿಮೆ ಮತಗಳ ಅಂತರದಲ್ಲಿ ಸೋಲು ಅನುಭವಿಸಿದ್ದು ಅನುಕಂಪವಿದೆ, ಆದರೆ ಬಸನಗೌಡರಿಗೆ ಸರಿಯಾದ ರಾಜಕೀಯ ಅನುಭವವಿಲ್ಲ, ಅಧಿಕಾರಕ್ಕಾಗಿ ಪಕ್ಷ ಬದಲಾವಣೆ ಮಾಡಿದ್ದಾರೆ ಹಾಗೂ ಪ್ರತಾಪಗೌಡ ಗೆದ್ದರೆ ಸಚಿವರಾಗುತ್ತಾರೆ ಇದರಿಂದಾಗಿ ಕ್ಷೇತ್ರ ಅಭಿವೃದ್ಧಿ ಯಾಗುತ್ತದೆ ಎಂಬ ಅಭಿಪ್ರಾಯವು. ಒಟ್ಟಾರೆಯಾಗಿ ಮಸ್ಕಿಯಲ್ಲಿ ಈಗ ಚುನಾವಣೆಯ ಅಖಾಡ ಸಿದ್ದವಾಗಿದೆ.
Published by: Latha CG
First published: March 18, 2021, 2:02 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories