ಚಿಕ್ಕಮಗಳೂರಿನಲ್ಲಿ ಸಾಮೂಹಿಕ ಮತದಾನ ಬಹಿಷ್ಕಾರ: ಗ್ರಾಮಕ್ಕೆ ಮೂಲಭೂತ ಸೌಲಭ್ಯ ಬರುವವರೆಗೆ ಮತದಾನವಿಲ್ಲ!

lok sabha elections 2019: ತಮ್ಮ ಗ್ರಾಮಗಳಿಗೆ ಯಾವುದೇ ಸರ್ಕಾರಗಳು ಜನಪ್ರತಿನಿಧಿಗಳು ಅವಶ್ಯಕವಾದ ಕನಿಷ್ಠ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡಲು ಮನಸ್ಸು ಮಾಡುತ್ತಿಲ್ಲ. ದಶಕಗಳ ಕಾಲ ರಸ್ತೆ ಇಲ್ಲದೆ, ಸೇತುವೆ ಹಾಗೂ ವಿದ್ಯುತ್​ ಇಲ್ಲದೆ ಸಂಕಷ್ಟದಲ್ಲಿ ಬದುಕು ಸವೆಸುತ್ತಿದ್ದೇವೆ ಎಂದು ತಮ್ಮ ಅಳಲು ತೋಡಿಕೊಂಡ ಗ್ರಾಮಸ್ಥರು.

MAshok Kumar | news18
Updated:April 17, 2019, 2:48 PM IST
ಚಿಕ್ಕಮಗಳೂರಿನಲ್ಲಿ ಸಾಮೂಹಿಕ ಮತದಾನ ಬಹಿಷ್ಕಾರ: ಗ್ರಾಮಕ್ಕೆ ಮೂಲಭೂತ ಸೌಲಭ್ಯ ಬರುವವರೆಗೆ ಮತದಾನವಿಲ್ಲ!
ಮತದಾನ ಬಹಿಷ್ಕಾರಕ್ಕೆ ಮುಂದಾಗಿರುವ ಗ್ರಾಮಸ್ಥರು.
MAshok Kumar | news18
Updated: April 17, 2019, 2:48 PM IST
ಚಿಕ್ಕಮಗಳೂರು (ಏ.17):  ರಾಜ್ಯದಲ್ಲಿ ಮೊದಲ ಹಂತದ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದೆ.  ಆದರೆ, ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮೂಲಭೂತ ಸೌಲಭ್ಯ ವಂಚಿತ ಕೆಲ ಗ್ರಾಮಗಳು ಸಾಮೂಹಿಕ ಮತದಾನ ಬಹಿಷ್ಕಾರಕ್ಕೆ ಮುಂದಾಗಿರುವುದು ಚುನಾವಣಾ ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ.

ಅರೆಮಲೆನಾಡು ಭಾಗವಾದ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ನೆಮ್ಮಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಾದ ಹೆಮ್ಮಿಗೆ, ಗೂಳಿಮಕ್ಕಿ, ಅಬಿವರೆ ಗ್ರಾಮಗಳು ಮತದಾನದ ಬಹಿಷ್ಕಾರಕ್ಕೆ ಮುಂದಾಗಿವೆ.

ಇದನ್ನೂ ಓದಿ : ಚುನಾವಣಾ ಸಮೀಕ್ಷೆ; ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜೆ ಕನಸಿಗೆ ಕುತ್ತಾಗಲಿರುವ ಮೈತ್ರಿ ಅಭ್ಯರ್ಥಿ

"ತಮ್ಮ ಗ್ರಾಮಗಳಿಗೆ ಯಾವುದೇ ಸರ್ಕಾರಗಳು ಜನಪ್ರತಿನಿಧಿಗಳು ಅವಶ್ಯಕವಾದ ಕನಿಷ್ಠ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡಲು ಮನಸ್ಸು ಮಾಡುತ್ತಿಲ್ಲ. ದಶಕಗಳ ಕಾಲ ರಸ್ತೆ ಇಲ್ಲದೆ, ಸೇತುವೆ ಹಾಗೂ ವಿದ್ಯುತ್​ ಇಲ್ಲದೆ ಸಂಕಷ್ಟದಲ್ಲಿ ಬದುಕು ಸವೆಸುವ ಸ್ಥಿತಿ ಇದೆ. ಇದೇ ಕಾರಣಕ್ಕೆ ತಾವು ಸಾಮೂಹಿಕ ಮತದಾನ ಬಹಿಷ್ಕಾರಕ್ಕೆ ಮುಂದಾಗಿದ್ದೇವೆ. ಅಲ್ಲದೆ ಗ್ರಾಮಗಳಿಗೆ ಮೂಲಭೂತ ಸೌಲಭ್ಯ ಬರುವವರೆಗೆ ಮತದಾನ ಮಅಡುವುದಿಲ್ಲ" ಎಂದು ಹಳ್ಳಿಯ ಪ್ರಮುಖರು ಸ್ಪಷ್ಟಪಡಿಸಿದ್ದಾರೆ.

ಈ ಗ್ರಾಮಗಳಿಗೆ ಹೋಗಲು ರಸ್ತೆ ಮಾರ್ಗವಿಲ್ಲ. ಸೇತುವೆ ವ್ಯವಸ್ಥೆ ಇಲ್ಲ. ಹೀಗಾಗಿ ಶೃಂಗೇರಿಯ ಬಹುತೇಕ ಗ್ರಾಮಗಳು ನಗರ ಪ್ರದೇಶಗಳ ಜೊತೆಗೆ ಸಂಪರ್ಕ ಸಾಧಿಸುವುದೇ ದೊಡ್ಡ ಹರಸಾಹಸವಾಗಿದೆ. ಇದೇ ಕಾರಣಕ್ಕೆ ಇಲ್ಲಿನ ಸ್ಥಳೀಯರು ಕೃತಕ ಸೇತುವೆಯ ಮೂಲಕ ಬದುಕು ಸಾಗಿಸುತ್ತಿದ್ದಾರೆ. ಇನ್ನೂ ಮಳೆಗಾಲದಲ್ಲಿ ಜೀವವನ್ನ ಕೈಯಲ್ಲಿ ಹಿಡಿದು ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ.

ಇದನ್ನೂ ಓದಿ : ಚಿಕ್ಕಮಗಳೂರು ಉಡುಪಿ ಲೋಕಸಭಾ ಕ್ಷೇತ್ರದಲ್ಲಿ ಟಿಕೆಟ್​​ಗಾಗಿ ಭಾರೀ ಪೈಪೋಟಿ
Loading...

ಹಲವು ವರ್ಷಗಳಿಂದ ಈ ಭಾಗಕ್ಕೆ ಒಂದು ಸೇತು ನಿರ್ಮಿಸಿಕೊಡುವಂತೆ ಸ್ಥಳೀಯರು ಪ್ರತಿನಿಧಿಗಳ ಬಳಿ ಬೇಡಿಕೆ ಇಡುತ್ತಲೇ ಬಂದಿದ್ದಾರೆ. ಪರಿಣಾಮ ಕಳೆದ ಕೆಲ ವರ್ಷಗಳ ಹಿಂದೆ ಸರ್ಕಾರ 65 ಲಕ್ಷ ವೆಚ್ಚದಲ್ಲಿ ಈ ಗ್ರಾಮಗಳ ಮಾರ್ಗಕ್ಕೆ ಸೇತುವೆ ನಿರ್ಮಾಣ ಕಾರ್ಯಕ್ಕೆ ಮುಂದಾಗಿತ್ತು. ಆದ್ರೆ, ಸುಮಾರು 15 ಲಕ್ಷ ಮೌಲ್ಯದ ಕೆಲಸವಾದ ಮೇಲೆ ಅರಣ್ಯ ಇಲಾಖೆ ಕಾಮಗಾರಿಗೆ ತಡೆಯೊಡ್ಡಿದ್ದು ಕಾಮಗಾರಿ ಅರ್ಧಕ್ಕೆ ನಿಂತಿದೆ. ಅರಣ್ಯ ಇಲಾಖೆಯ ದೌರ್ಜನ್ಯಕ್ಕೆ ಮನನೊಂದಿರುವ ಈ ಮೂರು ಗ್ರಾಮಗಳ ಜನ ಮತದಾನದ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ.

First published:April 17, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...
  • I agree to receive emails from NW18

  • I promise to vote in this year's elections no matter what the odds are.

    Please check above checkbox.

  • SUBMIT

Thank you for
taking the pledge

But the job is not done yet!
vote for the deserving condidate
this year

Click your email to know more

Disclaimer:

Issued in public interest by HDFC Life. HDFC Life Insurance Company Limited (Formerly HDFC Standard Life Insurance Company Limited) (“HDFC Life”). CIN: L65110MH2000PLC128245, IRDAI Reg. No. 101 . The name/letters "HDFC" in the name/logo of the company belongs to Housing Development Finance Corporation Limited ("HDFC Limited") and is used by HDFC Life under an agreement entered into with HDFC Limited. ARN EU/04/19/13618
T&C Apply. ARN EU/04/19/13626