• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Praveen Nettar ಹತ್ಯೆ ಖಂಡಿಸಿ BJP ಕಾರ್ಯಕರ್ತರ ಸಾಮೂಹಿಕ ರಾಜೀನಾಮೆ; ಸರ್ಕಾರಕ್ಕೆ ಬಿಸಿತುಪ್ಪವಾದ ಆಕ್ರೋಶ

Praveen Nettar ಹತ್ಯೆ ಖಂಡಿಸಿ BJP ಕಾರ್ಯಕರ್ತರ ಸಾಮೂಹಿಕ ರಾಜೀನಾಮೆ; ಸರ್ಕಾರಕ್ಕೆ ಬಿಸಿತುಪ್ಪವಾದ ಆಕ್ರೋಶ

ಬಿಜೆಪಿ ಕಾರ್ಯಕರ್ತರ ಸಾಮೂಹಿಕ ರಾಜೀನಾಮೆ

ಬಿಜೆಪಿ ಕಾರ್ಯಕರ್ತರ ಸಾಮೂಹಿಕ ರಾಜೀನಾಮೆ

ಮಂಗಳೂರಿನ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಕೊಲೆಗೆ ಬಿಜೆಪಿ ಕಾರ್ಯಕರ್ತರು ಬಿಜೆಪಿ ಸರ್ಕಾರದ ವಿರುದ್ಧವೇ ಆಕ್ರೋಶ ಹೊರಹಾಕಿ ಸಾಮೂಹಿಕ ರಾಜೀನಾಮೆ ನೀಡುತ್ತಿದ್ದಾರೆ.

  • Share this:

ಚಿಕ್ಕಮಗಳೂರು : ಮಂಗಳೂರಿನ ಬಿಜೆಪಿ (BJP) ಯುವ ಮುಖಂಡ ಪ್ರವೀಣ್ ನೆಟ್ಟಾರ್ (Praveen Nettar)  ಕೊಲೆಯನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು (BJP workers ) ಬಿಜೆಪಿ ಸರ್ಕಾರದ (Karnataka Govt) ವಿರುದ್ಧವೇ ಆಕ್ರೋಶ ಹೊರಹಾಕಿ ಸಾಮೂಹಿಕ ರಾಜೀನಾಮೆ (Mass Resignation) ನೀಡಿದ್ದಾರೆ. ಹಿಂದುತ್ವದ ಆಧಾರದ ಮೇಲೆ ಅಧಿಕಾರಕ್ಕೆ ಬಂದ ಬಿಜೆಪಿಗೆ ಹಿಂದೂ ಕಾರ್ಯಕರ್ತರು ಹಾಗೂ ಪಕ್ಷದ ಕಾರ್ಯಕರ್ತರನ್ನ ಉಳಿಸಿಕೊಳ್ಳಲು ಆಗದಿರುವುದು ದುರಂತ ಎಂದು ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಯುವ ಮೋರ್ಚಾ ಬಿಜೆಪಿ ಸರ್ಕಾರದ ವಿರುದ್ಧವೇ ಕಿಡಿಕಾರಿದ್ದಾರೆ.  ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂದೀಪ್ ಅರವಿನಗಂಡಿ, ಪ್ರಧಾನ ಕಾರ್ಯದರ್ಶಿ ಸಂತೋಷ್, ಗಗನ್ ಕಡೂರು, ಉಪಾಧ್ಯಕ್ಷ ಸಚಿನ್, ಜಿಲ್ಲಾ ಕಾರ್ಯದರ್ಶಿ ಶಶಿ, ಮಂಡಲ ಅಧ್ಯಕ್ಷ ರಾಜೇಶ್, ಕಾಂಚನ್ ಗೌಡ ಸೇರಿದಂತೆ 30ಕ್ಕೂ ಹೆಚ್ಚು ಕಾರ್ಯಕರ್ತರು ರಾಜೀನಾಮೆ ನೀಡಿದ್ದಾರೆ.


ಮತ್ತಷ್ಟು ಕಾರ್ಯಕರ್ತರು ರಾಜೀನಾಮೆ ನೀಡುವ ಎಚ್ಚರಿಕೆ


ಸರ್ಕಾರ ಯಾವುದೇ ಹತ್ಯೆಯಾದಾಗಲೂ ಕಠಿಣ ಕ್ರಮದ ಭರವಸೆ ನೀಡುತ್ತೆ. ಆದರೆ, ಭರವಸೆ ಭರವಸೆಯಾಗೇ ಉಳಿಯುತ್ತಿದೆ. ಅಡ್ವಾಣಿ ಹಾಗೂ ವಾಜಪೇಯಿ ಅವರಂತಹಾ ಮಹಾನ್ ನಾಯಕರು ಕಟ್ಟಿದ ಪಕ್ಷಕ್ಕೆ ಸರ್ಕಾರ ಅವಮಾನ ಮಾಡದೆ ಇನ್ನು ಮುಂದಾದರೂ ಹಿಂದುಗಳು ಹಾಗೂ ಬಿಜೆಪಿ ಕಾರ್ಯಕರ್ತರನ್ನು ಉಳಿಸಿಕೊಂಡು ಹತ್ಯೆ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಜಾರಿಗೊಳಿಸಬೇಕೆಂದು ಆಗ್ರಹಿಸಿ 30ಕ್ಕೂ ಹೆಚ್ಚು ಜನ ರಾಜೀನಾಮೆ ನೀಡಿದ್ದಾರೆ. ಹತ್ಯೆಯನ್ನ ಖಂಡಿಸಿ ನಗರದ ಬಿಜೆಪಿ ಕಚೇರಿಯಿಂದ ಆಜಾದ್ ಪಾರ್ಕ್ ವೃತ್ತದವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ಕೊಲೆಗಡುಕರ ಕೂಡಲೇ ಬಂಧಿಸಿ, ಕಠಿಣ ಕಾನೂನು ಕ್ರಮ  ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಸರ್ಕಾರ ಕೂಡಲೇ ಕಠಿಣ ಕಾನೂನು ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಮತ್ತಷ್ಟು ಕಾರ್ಯಕರ್ತರು ರಾಜೀನಾಮೆ ನೀಡುವ ಎಚ್ಚರಿಕೆ ನೀಡಿದ್ದಾರೆ.


ಇದನ್ನೂ ಓದಿ: NIA ಗೆ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ? ಶಾಸಕ ರೇಣುಕಾಚಾರ್ಯ ರಾಜೀನಾಮೆ? ಬೆಳ್ಳಾರೆಯಲ್ಲಿ ಸೆಕ್ಷನ್ 144 ಜಾರಿ


ಆರೋಪಿಗಳ ಎನ್​​ ಕೌಂಟರ್​ಗೆ ಒತ್ತಾಯ


ಇನ್ನು ಇದೆ ವೇಳೆ ಮಾತನಾಡಿದ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂದೀಪ್ ಮಾತಾನಾಡಿ ಸರ್ಕಾರ ಕೊಲೆ ಮಾಡಿರುವ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಂಡು ಆರೋಪಿಗಳನ್ನು ನಡು ರಸ್ತೆಯಲ್ಲಿ ಎನ್ಕೌಂಟರ್ ಮಾಡಬೇಕೆಂದು ಒತ್ತಾಯಿಸಿದರು. ಹಿಂದೂಗಳ ಕೊಲೆಯಾದಾಗ ಪ್ರತಿಸಲ ಕ್ರಮ ತೆಗೆದುಕೊಳ್ಳುತ್ತೇವೆ ಎನ್ನುತ್ತಾರೆ. ಆದರೆ ಘಟನೆ ನಂತರ ಯಾವುದೇ ರೀತಿಯ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಿಲ್ಲ, ಸಾವನಪ್ಪಿದ ಕುಟುಂಬಗಳಿಗೆ ನ್ಯಾಯ ಕೂಡ ಸಿಗುವುದಿಲ್ಲ. ಹಾಗಾಗಿ ಹಿಂದುಗಳ ಹತ್ಯೆ ಇದೆ ಕೊನೆ ಆಗಬೇಕು , ಮುಂದೆ ಹೀಗಾಗಬಾರದು ಎಂದರೆ ಆರೋಪಿಗಳನ್ನ ನಡು ರಸ್ತೆಯಲ್ಲಿ ಎನ್ಕೌಂಟರ್ ಮಾಡಬೇಕೆಂದು ಒತ್ತಾಯಿಸಿದರು. ಇನ್ನು ಇದೆ ವೇಳೆ ಮಾತನಾಡಿದ ಬಿಜೆಪಿ ಯುವ ಮೋರ್ಚ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂತೋಷ್ ಮಾತಾನಾಡಿ ಸರ್ಕಾರದ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದರು, ಸರ್ಕಾರ ಕೊಲೆ ಮಾಡಿದ ಆರೋಪಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಆರೋಪಿಗಳನ್ನ ಎನ್ಕೌಂಟರ್ ಮಾಡಬೇಕೆಂದು ಒತ್ತಾಯಿಸಿದರು.


ಬಾಗಲಕೋಟೆಯಲ್ಲೂ ಕಾರ್ಯಕರ್ತರಿಂದ ರಾಜೀನಾಮೆ ನಿರ್ಧಾರ


ಪ್ರವೀಣ್​ ಹತ್ಯೆ ಖಂಡಿಸಿ, ಬಾಗಲಕೋಟೆ ಬಿಜೆಪಿ ಜಿಲ್ಲಾ ಯುವ ಮೋರ್ಚಾದ ಪದಾಧಿಕಾರಿಗಳಿಂದ ರಾಜೀನಾಮೆಗೆ ನಿಧಾ೯ರ ಮಾಡಿದ್ದಾರೆ. ಯುವ ಮೋರ್ಚಾದಿಂದ ಸಭೆ ನಡೆಸಿದ ಬಳಿಕ ತೀರ್ಮಾನ ತೆಗೆದುಕೊಂಡಿದ್ದೇವೆ ಎಂದು ಬಿಜೆಪಿ ಜಿಲ್ಲಾ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಆನಂದ ಇಂಗಳಗಾಂವಿ ಹೇಳಿದ್ದಾರೆ. ಜಿಲ್ಲೆಯ ಯುವ ಮೋರ್ಚಾದ 12 ಮಂಡಳಗಳ ಪದಾಧಿಕಾರಿಗಳು, ಕಾರ್ಯಕರ್ತರು ರಾಜೀನಾಮೆಗೆ ಮುಂದಾಗಿದ್ದಾರೆ.


ಕೊಪ್ಪಳದಲ್ಲೂ ಸಾಮೂಹಿಕ ರಾಜೀನಾಮೆ


ಪ್ರವೀಣ್ ಹತ್ಯೆ ಖಂಡಿಸಿ ಕೊಪ್ಪಳ ಯುವ ಮೋರ್ಚಾ ಕಾರ್ಯಕರ್ತರು ಸಹ ರಾಜೀನಾಮೆಗೆ ಮುಂದಾಗಿದ್ದಾರೆ. ಗ್ರಾಮೀಣ ಮಂಡಲದ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶೇಖರ್ ಪಾಟೀಲ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

top videos
    First published: