Meteorology Department: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಲಿದೆ ಬಿಸಿಲು; ಹಲವೆಡೆ 30 ಡಿಗ್ರಿ ಸೆಲ್ಸಿಯಸ್ ಏರಿಕೆ

ರಾಜ್ಯದಲ್ಲಿ ತಾಪಮಾನ ಭಾರೀ ಪ್ರಮಾಣದಲ್ಲಿ ಏರಿಕೆ ಕಾಣುತ್ತಿದೆ. ಬೇಸಿಗೆ ಕಾಲ ಪ್ರಾರಂಭ ಆಗುತ್ತಿದ್ದಂತೆ ಬಿಸಿಲ ಧಗೆ ರಾಜ್ಯದಲ್ಲಿ ಏರಿಕೆ ಆಗುತ್ತಲೇ ಇದೆ. ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ತಾಪಮಾನ 30 ಡಿಗ್ರಿ ಸೆಲ್ಸಿಯಸ್‌ಗಿಂತ ಅಧಿಕವಾಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ವಾಯುವ್ಯ ಮತ್ತು ಮಧ್ಯ ಭಾರತದಲ್ಲಿ ಏಪ್ರಿಲ್ (April) ತಿಂಗಳಲ್ಲಿ ಸರಾಸರಿ ಗರಿಷ್ಠ ಉಷ್ಣಾಂಶ 35. 9 ಮತ್ತು 37.78 ಡಿಗ್ರಿ ಸೆಲ್ಸಿಯಸ್ ನಷ್ಟು ತಲುಪುವುದರೊಂದಿಗೆ 122 ವರ್ಷಗಳಲ್ಲಿ ಅತ್ಯಂತ ಹೆಚ್ಚಿನ ಬಿಸಿಲಿನ  ಅನುಭವಾಗಿದೆ ಎಂದು ಹವಾಮಾನ ಇಲಾಖೆ (Meteorology Department) ಶನಿವಾರ ತಿಳಿಸಿದೆ. ಸುದ್ದಿಗೋಷ್ಠಿಯಲ್ಲಿ (Press meet) ಮಾತನಾಡಿದ ಭಾರತೀಯ ಹವಾಮಾನ ಇಲಾಖೆ ಮಹಾನಿರ್ದೇಶಕ ಮೃತ್ಯುಂಜಯ ಮೊಹಾಪಾತ್ರ, ವಾಯುವ್ಯ ಮತ್ತು ಮಧ್ಯ ಭಾರತದ ಪ್ರದೇಶಗಳಾದ ಗುಜರಾತ್ (Gujarat), ರಾಜಸ್ಥಾನ, ಪಂಜಾಬ್ ಮತ್ತು ಹರಿಯಾಣದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಉಷ್ಣಾಂಶ (Temperature) ಮುಂದುವರೆಯಲಿದೆ ಎಂದು ತಿಳಿಸಿದರು.

ಏಪ್ರಿಲ್​ನಲ್ಲಿ ಹೆಚ್ಚಲಿದೆ ಬಿಸಿಲು

ಮೇ ತಿಂಗಳಲ್ಲಿ ದಕ್ಷಿಣದ ಪರ್ಯಾಯ ಪ್ರಸ್ಥಭೂಮಿಯಂತಹ ಕೆಲವೊಂದು ವಲಯಗಳನ್ನು ಹೊರತುಪಡಿಸಿದರೆ ದೇಶದ ಬಹುತೇಕ ಕಡೆಗಳಲ್ಲಿ ರಾತ್ರಿ ವೇಳೆಯೂ ಬಿಸಿಯ ವಾತಾವರಣ ಇರಲಿದೆ ಎಂದು ಮೊಹಪಾತ್ರ ಹೇಳಿದರು. ಏಪ್ರಿಲ್ ತಿಂಗಳಲ್ಲಿ ದೇಶಾದ್ಯಂತ ಸರಾಸರಿ 35. 05 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. 122 ವರ್ಷಗಳಲ್ಲಿ ನಾಲ್ಕನೇ ಬಾರಿಗೆ ಈ ರೀತಿಯ ಹೆಚ್ಚಿನ ಉಷ್ಣಾಂಶ ದಾಖಲಾಗಿದೆ ಎಂದು ಅವರು ತಿಳಿಸಿದರು.

ಮೇ ತಿಂಗಳಲ್ಲಿ ಸರಾಸರಿ ಮಳೆ

ಮೇ ತಿಂಗಳಲ್ಲಿ ರಾಷ್ಟ್ರದಲ್ಲಿ ಸರಾಸರಿ ಮಳೆ ಸಾಮಾನ್ಯಕ್ಕಿಂತ ಹೆಚ್ಚಿರುವ ಸಾಧ್ಯತೆಯಿದೆ. ಆದಾಗ್ಯೂ, ವಾಯುವ್ಯ ಮತ್ತು ಈಶಾನ್ಯ ಭಾರತದ ಪ್ರದೇಶಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಪ್ರಮಾಣದ ಮಳೆಯಾಗುವ ಸಾಧ್ಯತೆಯಿದೆ ಎಂದು ಅವರು ಮಾಹಿತಿ ನೀಡಿದರು.

ಇದನ್ನು ಓದಿ: ಬಿಸಿಲು ಹೆಚ್ಚಿರುವ ಹಿನ್ನಲೆ ವಿದ್ಯುತ್​​ ಬೇಡಿಕೆ ಹೆಚ್ಚಿದೆ; ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಶಿ

ಒಡಿಶಾಗಳಲ್ಲಿ ಬಿಸಿ ಗಾಳಿ ಎಚ್ಚರಿಕೆ

ರಾಜಸ್ಥಾನ, ದಿಲ್ಲಿ, ಉತ್ತರ ಪ್ರದೇಶ ಮತ್ತು ಒಡಿಶಾಗಳಲ್ಲಿ ಬಿಸಿ ಗಾಳಿ ಎಚ್ಚರಿಕೆ ಪ್ರಕಟಿಸಲಾಗಿದೆ. ಈ ರಾಜ್ಯಗಳಲ್ಲಿ 45 ಡಿಗ್ರಿ ಸೆಲ್ಸಿಯಸ್‌ಗೂ ಅಧಿಕ ಉಷ್ಣಾಂಶ ದಾಖಲಾಗಬಹುದು. ಮೇ ಮೊದಲ ವಾರದವರೆಗೂ ಈ ತೀವ್ರ ಪರಿಸ್ಥಿತಿ ಮುಂದುವರಿಯಲಿದ್ದು, ಅದರ ಬಳಿಕ ಮಳೆ ಹೆಚ್ಚಳದ ಸಂಭವವಿದೆ ಎಂದು ವಿಜ್ಞಾನಿ ತಿಳಿಸಿದ್ದಾರೆ.

ಎರಡು ತಿಂಗಳಲ್ಲಿ ನಾಲ್ಕು ಬಾರಿ ಬಿಸಿ ಗಾಳಿ ಆರ್ಭಟ

ವಿಪರೀತ ಬಿಸಿ ಗಾಳಿಯು ಮಹಾರಾಷ್ಟ್ರದಂತಹ ರಾಜ್ಯಗಳಲ್ಲಿ ಈಗಾಗಲೇ ವಿದ್ಯುತ್‌ಗೆ ಬೇಡಿಕೆಯನ್ನು ಗಣನೀಯವಾಗಿ ಹೆಚ್ಚಿಸಿದೆ. ರಾಜ್ಯವು ಕಳೆದ ಎರಡು ತಿಂಗಳಲ್ಲಿ ನಾಲ್ಕು ಬಾರಿ ಬಿಸಿ ಗಾಳಿ ಆರ್ಭಟ ಎದುರಿಸಿದೆ. ಮಹಾರಾಷ್ಟ್ರದ ಪ್ರಮುಖ ಥರ್ಮಲ್ ಪವರ್ ಪ್ಲಾಂಟ್‌ಗಳಲ್ಲಿ ಎರಡು ದಿನಗಳ ಒಳಗೆ ಕಲ್ಲಿದ್ದಲು ಖಾಲಿಯಾಗುವ ಸಂಭವವಿದ್ದು, 20 ಸಾವಿರ ಲಕ್ಷ ಮೆಟ್ರಿಕ್ ಟನ್ ಅಭಾವ ಉಂಟಾಗಿದೆ.

ನಾಲ್ಕು ಗಂಟೆಗಳ ವಿದ್ಯುತ್ ಕಡಿತ

ರಾಜಸ್ಥಾನವು ಫ್ಯಾಕ್ಟರಿಗಳಿಗೆ ನಾಲ್ಕು ಗಂಟೆಗಳ ವಿದ್ಯುತ್ ಕಡಿತ ನಿಗದಿಪಡಿಸಿದೆ. ಗುಜರಾತ್ ಮತ್ತು ಆಂಧ್ರಪ್ರದೇಶ ರಾಜ್ಯಗಳಲ್ಲಿ ಕೂಡ ಈಗಾಗಲೇ ಬಿಸಿ ಗಾಳಿಯಿಂದ ವಿದ್ಯುತ್ ಬೇಡಿಕೆ ಹೆಚ್ಚಿದ್ದು, ಕೈಗಾರಿಕಾ ಚಟುವಟಿಕೆಗಳಿಗೆ ಹಿನ್ನಡೆ ಉಂಟಾಗಿದೆ. ಗ್ರಾಮೀಣ ಭಾಗಗಳಲ್ಲಿ ಈಗಾಗಲೇ ನಾಲ್ಕು ಗಂಟೆ ಪವರ್ ಕಟ್ ನಡೆಸಲಾಗುತ್ತಿದ್ದು, ಮರುಭೂಮಿಯ ರಾಜ್ಯದಲ್ಲಿ ಸಾವಿರಾರು ಕುಟುಂಬಗಳು ಬಿಸಿಲಿನ ಝಳಕ್ಕೆ ಕಂಗಾಲಾಗಿವೆ.

ಇದನ್ನು ಓದಿ: ಹುಬ್ಬಳ್ಳಿ ಗಲಭೆ ಪ್ರಕರಣ; ಕಸ್ಟಡಿಯಲ್ಲಿದ್ದ ಆರೋಪಿಯಿಂದ ಆತ್ಮಹತ್ಯೆ ಯತ್ನ

ರಾಜ್ಯದಲ್ಲಿ ಏರಿದೆ ತಾಪಮಾನ

ರಾಜ್ಯದಲ್ಲಿ ತಾಪಮಾನ ಭಾರೀ ಪ್ರಮಾಣದಲ್ಲಿ ಏರಿಕೆ ಕಾಣುತ್ತಿದೆ. ಬೇಸಿಗೆ ಕಾಲ ಪ್ರಾರಂಭ ಆಗುತ್ತಿದ್ದಂತೆ ಬಿಸಿಲ ಧಗೆ ರಾಜ್ಯದಲ್ಲಿ ಏರಿಕೆ ಆಗುತ್ತಲೇ ಇದೆ. ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ತಾಪಮಾನ 30 ಡಿಗ್ರಿ ಸೆಲ್ಸಿಯಸ್‌ಗಿಂತ ಅಧಿಕವಾಗಿದೆ. ರಾಜ್ಯದಲ್ಲಿ ಅತೀ ಹೆಚ್ಚಿನ ಉಷ್ಣಾಂಶ ರಾಯಚೂರಿನಲ್ಲಿ ಇದ್ದು, ಜಿಲ್ಲೆಯಲ್ಲಿ ತಾಪಮಾನ 37.0 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆ ಕಂಡಿದೆ.

ಬೆಂಗಳೂರಲ್ಲಿ ನೆತ್ತಿ ಸುಡಲಿದೆ ಬಿಸಿಲು

ಬೆಂಗಳೂರಿನಲ್ಲಿ 32 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಎಚ್‌ಎಎಲ್‌ನಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 36.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್‌ಪೋರ್ಟ್‌ನಲ್ಲಿ 33.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಪಣಂಬೂರಿನಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
Published by:Pavana HS
First published: