ಮೈಸೂರು: ಕರ್ನಾಟಕ ಚುನಾವಣೆಯನ್ನು ಸುಲಭವಾಗಿ ಗೆದ್ದಿದ್ದ ಕಾಂಗ್ರೆಸ್‌ಗೆ (Congress), ಸಿಎಂ (CM) ಸ್ಥಾನ ಯಾರಿಗೆ ನೀಡುವುದು ಅಂತ ಘೋಷಣೆ ಮಾಡುವುದು ಅಷ್ಟು ಸುಲಭವಾಗಿರಲಿಲ್ಲ. ಯಾಕೆಂದ್ರೆ ರಾಜ್ಯ ಕಾಂಗ್ರೆಸ್‌ನ ಪ್ರಬಲ ನಾಯಕರಾದ ಸಿದ್ದರಾಮಯ್ಯ (Siddaramaiah) ಹಾಗೂ ಡಿಕೆ ಶಿವಕುಮಾರ್ (DK Shivakumar) ಇಬ್ಬರೂ ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿದ್ದರು. ರಾಜ್ಯದಲ್ಲಿ ಈ ಗೊಂದಲಕ್ಕೆ ಪರಿಹಾರ ನೀಡಲಾಗದೇ, ದೆಹಲಿಯಲ್ಲಿ (Delhi) ಚರ್ಚೆ ಮೇಲೆ ಚರ್ಚೆ ನಡೆಸಲಾಗಿತ್ತು. ಕೊನೆಗೂ ಸಿದ್ದರಾಮಯ್ಯಗೆ ಸಿಎಂ ಪಟ್ಟ, ಡಿಕೆಶಿಗೆ ಡಿಸಿಎಂ (DCM) ಸ್ಥಾನ ನೀಡಲಾಗಿತ್ತು. ಎರಡೂವರೆ ವರ್ಷ ಸಿದ್ದರಾಮಯ್ಯ ಸಿಎಂ, ಮತ್ತೆರಡೂವರೆ ವರ್ಷ ಡಿಕೆ ಶಿವಕುಮಾರ್ ಸಿಎಂ ಆಗುವ ಒಪ್ಪಂದ ನಡೆದಿದೆ ಎನ್ನಲಾಗಿತ್ತು. ಇದೀಗ ಸಿದ್ದರಾಮಯ್ಯ ಅವರೇ ಮುಂದಿನ ಐದೂ ವರ್ಷ ಸಿಎಂ ಆಗಿರುತ್ತಾರಾ ಎಂಬ ಪ್ರಶ್ನೆ ಎದ್ದಿದೆ. ಅದಕ್ಕೆ ಕಾರಣ ಸಚಿವ ಹಾಗೂ ಸಿದ್ದು ಬಣದ ಆಪ್ತ ಎಂಬಿ ಪಾಟೀಲ್ (MB Patil) ನೀಡಿರುವ ಹೇಳಿಕೆ!
ಮುಂದಿನ 5 ವರ್ಷವೂ ಸಿದ್ದರಾಮಯ್ಯ ಸಿಎಂ!
ಹೀಗಂತ ಸಚಿವ ಹಾಗೂ ಸಿದ್ದು ಬಣದ ಆಪ್ತ ಎಂಬಿ ಪಾಟೀಲ್ ಹೇಳಿದ್ದಾರೆ. ರಾಜ್ಯದಲ್ಲಿ ಸಿದ್ದರಾಮಯ್ಯ 5 ವರ್ಷ ಪೂರ್ಣಾವಧಿ ಸಿಎಂ ಆಗಲಿದ್ದಾರೆ. ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ ಅಂತ ಎಂಬಿ ಪಾಟೀಲ್ ಹೇಳಿದ್ದಾರೆ.
ಮೈಸೂರಿನ ಸುತ್ತೂರಿನಲ್ಲಿ ಸಿಎಂ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ ಸಚಿವ ಎಂಬಿ ಪಾಟೀಲ್, ಲೋಕಸಭೆ ಚುನಾವಣೆ ಬಳಿಕ ರಾಜ್ಯದ ಸಿಎಂ ಸ್ಥಾನದಲ್ಲಿ ಯಾವುದೇ ಬದಲಾವಣೆ ಇಲ್ಲ. ಸಿಎಂ ಬದಲಾವಣೆ ಬಗ್ಗೆ ಎಐಸಿಸಿ ಮಟ್ಟದಲ್ಲಿ ಯಾವುದೇ ಚರ್ಚೆ ನಡೆದಿಲ್ಲ ಎಂದಿದ್ದಾರೆ.
ಇದನ್ನೂ ಓದಿ: Assembly Session: ಇಂದಿನಿಂದ ಹೊಸ ಸರ್ಕಾರದ ಮೊದಲ ಕಲಾಪ; ಸ್ಪೀಕರ್ ಆಯ್ಕೆ ಸಿಎಂಗೆ ತಲೆನೋವು!
ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ನಡೆದಿಲ್ಲ
ಸಿದ್ದರಾಮಯ್ಯ ಮುಂದಿನ ಐದು ವರ್ಷವೂ ಸಿಎಂ ಆಗಲಿದ್ದಾರೆ ಎಂದು ಎಐಸಿಸಿ ಕಾರ್ಯದರ್ಶಿ ವೇಣುಗೋಪಾಲ್ ಸ್ಪಷ್ಟಪಡಿಸಿದ್ದಾರೆ ಅಂತ ಎಂಬಿ ಪಾಟೀಲ್ ಹೇಳಿದ್ದಾರೆ. ಹೈಕಮಾಂಡ್ ಮಟ್ಟದಲ್ಲಿ ಅಧಿಕಾರ ಬದಲಾವಣೆ ಬಗ್ಗೆ ಚರ್ಚೆ ನಡೆದಿಲ್ಲ ಅಂತನೂ ಹೇಳಿದ್ದಾರೆ.
ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅಧಿಕಾರವಧಿಯಲ್ಲಿ ನಡೆದಿರುವ ಎಲ್ಲಾ ಹಗರಣಗಳ ಬಗ್ಗೆ ತನಿಖೆ ನಡೆಸುತ್ತೇವೆ ಅಂತ ಎಂಬಿ ಪಾಟೀಲ್ ಪುನರುಚ್ಚರಿಸಿದ್ದಾರೆ. ಪಿಎಸ್ಐ ನೇಮಕಾತಿ ಹಗರಣ, ಆರೋಗ್ಯ ಇಲಾಖೆ, ನೀರಾವರಿ ಇಲಾಖೆ ಹಾಗೂ ಇತರೆ ಇಲಾಖೆಗಳಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ತನಿಖೆ ನಡೆಸುತ್ತೇವೆ ಅಂತ ಸ್ಪಷ್ಟಪಡಿಸಿದ್ದಾರೆ.
ನೊಂದವರಿಗೆ ನ್ಯಾಯ ಕೊಡಿಸುತ್ತೇವೆ
ಎಲ್ಲಾ ಹಗರಣಗಳನ್ನು ಲಾಜಿಕ್ ಎಂಡ್ ಗೆ ತೆಗೆದುಕೊಂಡು ಹೋಗುತ್ತೇವೆ ಅಂತ ಹೇಳಿರುವ ಎಂಬಿ ಪಾಟೀಲ್, ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುತ್ತೇವೆ, ನೊಂದ ವಿದ್ಯಾರ್ಥಿಗಳಿಗೆ ನ್ಯಾಯ ಕೊಡಿಸುತ್ತೇವೆ ಅಂತ ಭರವಸೆ ನೀಡಿದ್ದಾರೆ.
ಇದನ್ನೂ ಓದಿ: Arun Kumar Puthila: ಕರಾವಳಿಯಲ್ಲಿ ಬಿಜೆಪಿಗೆ ಕಂಟಕವಾಗುತ್ತಾ ಪುತ್ತಿಲ ನಡೆ? RSSಗೇ ಶಾಕ್ ಕೊಟ್ಟ ಹಿಂದೂ ಮುಖಂಡ
5 ಗ್ಯಾರಂಟಿ ಜಾರಿ ಪಕ್ಕಾ
5 ಗ್ಯಾರಂಟಿಗಳ ಜಾರಿಗೆ ಮೊದಲ ಕ್ಯಾಬಿನೆಟ್ ಮೀಟಿಂಗ್‌ನಲ್ಲಿ ಚರ್ಚೆ ಆಗಿದೆ, ತಾತ್ವಿಕ ಒಪ್ಪಿಗೆಯೂ ನೀಡಲಾಗಿದೆ. ಈ ವಿಚಾರದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಅಂತ ಮೈಸೂರಿನ ಸುತ್ತೂರಿನಲ್ಲಿ ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ