ದೀಪಾವಳಿಗೆ ರಾಜ್ಯ ಸರ್ಕಾರದ ಕೊಡುಗೆ, ಚಿತ್ರದುರ್ಗದಲ್ಲಿ ಹೊಸ ವೈದ್ಯಕೀಯ ಕಾಲೇಜು: ಸಚಿವ ಡಾ.ಕೆ.ಸುಧಾಕರ್

ರಾಜೀವ್ ಗಾಂಧಿ ಆರೋಗ್ಯ ವಿವಿಯ ಎಲ್ಲ ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ಪ್ಯಾರಾ ಮೆಡಿಕಲ್, ನರ್ಸಿಂಗ್ ಮತ್ತು ಫಾರ್ಮಸಿ ಕಾಲೇಜುಗಳನ್ನು ಡಿಸೆಂಬರ್ 1 ರಿಂದ ಆರಂಭಿಸಲು ನಿರ್ಧರಿಸಲಾಗಿದೆ. ಕಾಲೇಜು ಹಾಗೂ ವಿದ್ಯಾರ್ಥಿಗಳು ಮಾರ್ಗಸೂಚಿ ಪಾಲಿಸಬೇಕು ಎಂದು ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದ್ದಾರೆ.

ಚಿತ್ರದುರ್ಗದಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣದ ನಕ್ಷೆ ವೀಕ್ಷಿಸಿದ ಸಚಿವರಾದ ಕೆ.ಸುಧಾಕರ್ ಮತ್ತು ಬಸವರಾಜ ಬೊಮ್ಮಾಯಿ.

ಚಿತ್ರದುರ್ಗದಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣದ ನಕ್ಷೆ ವೀಕ್ಷಿಸಿದ ಸಚಿವರಾದ ಕೆ.ಸುಧಾಕರ್ ಮತ್ತು ಬಸವರಾಜ ಬೊಮ್ಮಾಯಿ.

 • Share this:
  ಚಿತ್ರದುರ್ಗ (ನವೆಂಬರ್ 13); ಚಿತ್ರದುರ್ಗದಲ್ಲಿ ವೈದ್ಯಕೀಯ ವಿಜ್ಞಾನ ಸಂಸ್ಥೆ ನಿರ್ಮಾಣಕ್ಕೆ ಭೂಮಿ ಗುರುತಿಸಿದ್ದು, ಶೀಘ್ರದಲ್ಲಿ ಕಾಮಗಾರಿ ಆರಂಭವಾಗಿ 30 ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

  ಚಿತ್ರದುರ್ಗದಲ್ಲಿ ವೈದ್ಯಕೀಯ ವಿಜ್ಞಾನ ಸಂಸ್ಥೆ ನಿರ್ಮಾಣವಾಗಲಿರುವ ಜಾಗವನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರೊಂದಿಗೆ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾಕರ್ ಅವರು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ದೀಪಾವಳಿ ಹಬ್ಬದ ಉಡುಗೊರೆಯಾಗಿ ಚಿತ್ರದುರ್ಗದಲ್ಲಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಘೋಷಣೆ ಮಾಡಿ 50 ಕೋಟಿ ರೂ. ಅನುದಾನ ನೀಡಿದ್ದಾರೆ. ಇದೇ ವರ್ಷದಲ್ಲಿ ಇನ್ನೂ ಎರಡು ಹೊಸ ವೈದ್ಯಕೀಯ ಕಾಲೇಜುಗಳ ಶಂಕುಸ್ಥಾಪನೆ ಮಾಡಲಾಗುತ್ತಿದೆ. ಚಿಕ್ಕಬಳ್ಳಾಪುರ ಹಾಗೂ ಹಾವೇರಿಯಲ್ಲಿ ಕಾಲೇಜುಗಳ ಕಟ್ಟಡ ಶಂಕುಸ್ಥಾಪನೆ ನೆರವೇರಿದೆ. ಡಿಸೆಂಬರ್ ಒಳಗೆ ಚಿಕ್ಕಮಗಳೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲೂ ವೈದ್ಯಕೀಯ ಕಾಲೇಜು ಕಾಮಗಾರಿಗೆ ಚಾಲನೆ ದೊರೆಯಲಿದೆ ಎಂದು ತಿಳಿಸಿದರು.

  ಇದನ್ನು ಓದಿ: ದಕ್ಷಿಣ ಭಾರತದಲ್ಲಿಯೇ ಪ್ರಥಮ ಪೆಟ್ ಬಾಟಲ್ ಘಟಕ ಜನವರಿಯಂದು ಹಾಸನದಲ್ಲಿ ಲೋಕಾರ್ಪಣೆ; ಎಚ್.ಡಿ.ರೇವಣ್ಣ

  ಚಿತ್ರದುರ್ಗದಲ್ಲಿ 20 ಎಕರೆಗೂ ಹೆಚ್ಚು ವಿಸ್ತೀರ್ಣದ ಭೂಮಿಯಲ್ಲಿ ಕಟ್ಟಡ ನಿರ್ಮಾಣವಾಗಲಿದೆ. ಕೆಲ ಹಳೆ ಕಟ್ಟಡಗಳಿದ್ದು, ಅದನ್ನು ಕೂಡ ತೆರವು ಮಾಡಬಹುದು. ಶೀಘ್ರದಲ್ಲೇ ಕಟ್ಟಡ ಶಂಕುಸ್ಥಾಪನೆ ನೆರವೇರಿಸಿ, 30 ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸುವ ಗುರಿ ಇದೆ. ನರ್ಸಿಂಗ್, ಅರೆವೈದ್ಯಕೀಯ, ಲ್ಯಾಬ್ ಮೊದಲಾದ ಕೋರ್ಸುಗಳನ್ನು ಇಲ್ಲೇ ಆರಂಭಿಸಲಾಗುವುದು. ಎಲ್ಲ ವೈದ್ಯಕೀಯ ಕಾಲೇಜಿಗೆ ಹೊಂದಿಕೊಂಡ ಆಸ್ಪತ್ರೆಯಲ್ಲಿ 700 ಹಾಸಿಗೆ ಇರುವಂತೆ ಅಭಿವೃದ್ಧಿಪಡಿಸಲಾಗುತ್ತಿದೆ ಎಂದರು.

  ಡಿ.1ರಿಂದ ಕಾಲೇಜು ಆರಂಭ

  ರಾಜೀವ್ ಗಾಂಧಿ ಆರೋಗ್ಯ ವಿವಿಯ ಎಲ್ಲ ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ಪ್ಯಾರಾ ಮೆಡಿಕಲ್, ನರ್ಸಿಂಗ್ ಮತ್ತು ಫಾರ್ಮಸಿ ಕಾಲೇಜುಗಳನ್ನು ಡಿಸೆಂಬರ್ 1 ರಿಂದ ಆರಂಭಿಸಲು ನಿರ್ಧರಿಸಲಾಗಿದೆ. ಕಾಲೇಜು ಹಾಗೂ ವಿದ್ಯಾರ್ಥಿಗಳು ಮಾರ್ಗಸೂಚಿ ಪಾಲಿಸಬೇಕು ಎಂದು ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದ್ದಾರೆ.
  Published by:HR Ramesh
  First published: