ನವದೆಹಲಿ, ಜೂ. 19: ಬೆಂಗಳೂರು (Bengaluru) ಮಹಾನಗರಕ್ಕೆ ಕುಡಿಯುವ ನೀರನ್ನು ಪೂರೈಸುವ ಮಹತ್ವಾಕಾಂಕ್ಷೆಯ ಮೇಕೆದಾಟು (Mekedatu) ಬಳಿ ಅಣೆಕಟ್ಟು ನಿರ್ಮಿಸುವ ಯೋಜನೆಯ ವಿಸ್ತ್ರತ ಯೋಜನಾ ವರದಿಗೆ (Detail Project Report) ಅನುಮತಿ ನೀಡುವ ಬಗ್ಗೆ ಜೂನ್ 23ರಂದು ನಡೆಯುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (Cauvery Water Management Authority) ಸಭೆಯಲ್ಲಿ ಚರ್ಚೆ ಆಗಲಿದೆ. ಕರ್ನಾಟಕದ ಮನವಿ ಮೇರೆಗೆ ಸಭೆಯ ಅಜೆಂಡಾದಲ್ಲಿ ಮೇಕೆದಾಟು ಡಿಪಿಆರ್ ವಿಷಯವನ್ನು ಸೇರಿಸಲಾಗಿದೆ. ಇದಕ್ಕೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ (Tamilnadu Chief Minister M.K. Stalin) ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೇಂದ್ರದ ನಿರ್ಧಾರಕ್ಕೆ ಸ್ಟಾಲಿನ್ ವಿರೋಧ
ಕೇಂದ್ರ ಸರ್ಕಾರವು ಜೂನ್ 23ರಂದು ನಡೆಯುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯ ಅಜೆಂಡಾದಲ್ಲಿ ಕರ್ನಾಟಕದ ಮನವಿ ಮೇರೆಗೆ ಮೇಕೆದಾಟು ಡಿಪಿಆರ್ ಗೆ ಅನುಮೋದನೆ ನೀಡುವ ಬಗೆಗಿನ ಅಜೆಂಡಾವನ್ನು ಸೇರಿಸಿದೆ. ಪ್ರಕರಣ ಇತ್ಯರ್ಥ ಆಗುವವರೆಗೆ ಮೇಕೆದಾಟು ಡಿಪಿಆರ್ ಗೆ ಒಪ್ಪಿಗೆ ನೀಡಬಾರದು ಎಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಸೂಚನೆ ನೀಡುವಂತೆ ತಮಿಳುನಾಡು ಸುಪ್ರೀಂ ಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದೆ.
ಪ್ರಕರಣ ಸುಪ್ರೀಂ ಕೋರ್ಟಿನಲ್ಲಿರುವಾಗ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಸಭೆಯಲ್ಲಿ ಮೇಕೆದಾಟು ಡಿಪಿಆರ್ ಬಗ್ಗೆ ಚರ್ಚೆ ಮಾಡುವ ಅಧಿಕಾರ ಇದೆಯೇ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಪ್ರಶ್ನಿಸಿದ್ದಾರೆ.
ಮುಖ್ಯಮಂತ್ರಿ @BSBommai ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಜಲ ಶಕ್ತಿ ಸಚಿವ @gssjodhpur ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಉಪಸ್ಥಿತರಿದ್ದರು. pic.twitter.com/ZSpmK3fH3c
— CM of Karnataka (@CMofKarnataka) June 17, 2022
ಇದನ್ನೂ ಓದಿ: Ashwath Narayan: ಜೂನ್ 20ರಂದು ಬೆಂಗಳೂರಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮ; ಪ್ರತಿಷ್ಠಿತ ಕಾಲೇಜುಗಳಿಗೆ ರಜೆ ಘೋಷಣೆ
ಗಜೇಂದ್ರ ಸಿಂಗ್ ಶೆಖಾವತ್ ಗೆ ದೂರು
ಮೇಕೆದಾಟು ಡಿಪಿಆರ್ ಬಗ್ಗೆ ಚರ್ಚೆ ಮಾಡುತ್ತೇವೆ ಎಂದಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ನಿಲುವಿನ ಬಗ್ಗೆ ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರನ್ನು ಭೇಟಿ ಮಾಡಿ ದೂರು ನೀಡಲಾಗುವುದು. ತಮಿಳುನಾಡು ಜಲಸಂಪನ್ಮೂಲ ಸಚಿವ ದೊರೈ ಮುರುಗನ್ ನೇತೃತ್ವದಲ್ಲಿ ರಾಜ್ಯದ ನಿಯೋಗದಿಂದ ದೂರು ಸಲ್ಲಿಸಲಾಗುವುದು ಎಂದು ಎಂ.ಕೆ. ಸ್ಟಾಲಿನ್ ತಿಳಿಸಿದ್ದಾರೆ.
ಪ್ರಧಾನಿಗೆ ಪತ್ರ ಬರೆದಿದ್ದ ಸ್ಟಾಲಿನ್
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯ ಅಜೆಂಡಾದಲ್ಲಿ ಮೇಕೆದಾಟು ಡಿಪಿಆರ್ ಗೆ ಅನುಮೋದನೆ ನೀಡುವ ಬಗ್ಗೆ ಚರ್ಚಿಸುವ ಅಜೆಂಡಾವನ್ನು ಸೇರಿಸಬಾರದು ಎಂದು ಜಲಸಂಪನ್ಮೂಲ ಸಚಿವಾಲಯಕ್ಕೆ ಸೂಚನೆ ನೀಡುವಂತೆ ಪ್ರಧಾನ ಮಂತ್ರಿಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಇತ್ತೀಚೆಗೆ ಪತ್ರ ಬರೆದಿದ್ದರು.
ಗಜೇಂದ್ರ ಸಿಂಗ್ ಶೆಖಾವತ್ ಭರವಸೆ
ಸ್ಟಾಲಿನ್ ಪತ್ರದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದೇ ಶುಕ್ರವಾರ ನವದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ ಗಜೆಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಮಾತುಕತೆ ವೇಳೆ ಗಜೇಂದ್ರ ಸಿಂಗ್ ಶೇಖಾವತ್ ಈ ಬಾರಿಯ ಪ್ರಾಧಿಕಾರದ ಸಭೆಯ ಅಜೆಂಡಾದಲ್ಲಿ ಮೇಕೆದಾಟು ಡಿಪಿಆರ್ ಗೆ ಒಪ್ಪಿಗೆ ನೀಡುವ ವಿಷಯವನ್ನು ಸೇರಿಸುವುದಾಗಿ ಭರವಸೆ ನೀಡಿದ್ದರು.
ಇದನ್ನೂ ಓದಿ: Karnataka Rains: ಮುಂದಿನ ಮೂರು ದಿನ ಮಳೆ ;13 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
ಇದಕ್ಕೂ ಮೊದಲು ಗುರುವಾರ ರಾಜ್ಯದ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಕೂಡ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ ಇದೇ ವಿಷಯವನ್ನು ಚರ್ಚೆ ಮಾಡಿದ್ದರು. ಆಗಲೂ ಗಜೇಂದ್ರ ಸಿಂಗ್ ಶೇಖಾವತ್ ಭರವಸೆ ನೀಡಿದ್ದರು.
ಇಂದು ನವದೆಹಲಿಯಲ್ಲಿ ಕೇಂದ್ರ ಜಲಸಂಪನ್ಮೂಲ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ರಾಜ್ಯದ ಯೋಜನೆಗಳಿಗೆ ತಕ್ಷಣ ಅನುಮತಿ ಕೊಡುವಂತೆ ಹಾಗೂ ಮಹದಾಯಿ, ಮೇಕೆದಾಟು, ಕೃಷ್ಣ ಮೇಲ್ದಂಡೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಯೋಜನೆಯ ಮಾನ್ಯತೆ ದೊರಕಿಸಿ ಕೊಡುವಂತೆ ವಿನಂತಿಸಿದೆನು.@gssjodhpur pic.twitter.com/0aickPrbDz
— Govind M Karjol (@GovindKarjol) June 16, 2022
ಹಾಗಾಗಿ ಈ ಬಾರಿಯ ಪ್ರಾಧಿಕಾರದ ಸಭೆಯಲ್ಲಿ ಮೇಕೆದಾಟು ಬಗ್ಗೆ ಚರ್ಚೆ ಮಾಡಲು ಅವಕಾಶ ಕಲ್ಪಿಸಲಾಗಿದೆ. ಆದರೀಗ ತಮಿಳುನಾಡಿನ ವಿರೋಧವೂ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಜೂನ್ 23ರಂದು ನಡೆಯುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ಮಹತ್ವ ಪಡೆದುಕೊಂಡಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ