• Home
 • »
 • News
 • »
 • state
 • »
 • Mekedatu: ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್​ ಸೇರಿ 29 ನಾಯಕರು ನಾಳೆಯೇ ಹಾಜರಾಗಿ; ಕೋರ್ಟ್​ ಸಮನ್ಸ್

Mekedatu: ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್​ ಸೇರಿ 29 ನಾಯಕರು ನಾಳೆಯೇ ಹಾಜರಾಗಿ; ಕೋರ್ಟ್​ ಸಮನ್ಸ್

ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ (ಸಂಗ್ರಹ ಚಿತ್ರ)

ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ (ಸಂಗ್ರಹ ಚಿತ್ರ)

ಇದೇ ವರ್ಷದ ಜನವರಿಯಲ್ಲಿ ಕೊರೊನಾ ಪ್ರಕರಣಗಳು ರಾಜ್ಯದಲ್ಲಿ ಏರುಗತಿಯಲ್ಲಿದ್ದಾಗ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಕೈಗೊಂಡಿತ್ತು. ಕೋರ್ಟ್ ತಾಕೀತಿನ ಬಳಿಕ ಪಾದಯಾತ್ರೆಯನ್ನು ಮೊಟಕುಗೊಳಿಸಿತ್ತು.

 • Share this:

  ಬೆಂಗಳೂರು: ಮೇಕೆದಾಟು ಪಾದಯಾತ್ರೆಯಲ್ಲಿ (Mekedatu Padayatra)  ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿದ (Covid 19 Guidelines Violation) ಆರೋಪದಡಿ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಸೇರಿದಂತೆ ಒಟ್ಟು 29 ಕಾಂಗ್ರೆಸ್ ನಾಯಕರಿಗೆ ಸಮನ್ಸ್ ಜಾರಿಗೊಳಿಸಲಾಗಿದೆ. ಕಾಂಗ್ರೆಸ್ ಪ್ರಮುಖ ನಾಯಕರಾದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಸಂಸದ ಡಿ.ಕೆ.ಸುರೇಶ್ ಸೇರಿ ಒಟ್ಟು 29 ನಾಯಕರಿಗೆ ಸಮನ್ಸ್ ಜಾರಿಗೊಳಿಸಲಾಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಸಮನ್ಸ್ ಜಾರಿಗೊಳಿಸಲಾಗಿದ್ದು ನಾಳೆ (ಮೇ 24) ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ (Summones) ಜಾರಿಯಾಗಿದೆ. ಇದೇ ವರ್ಷದ ಜನವರಿಯಲ್ಲಿ ಕೊರೊನಾ ಪ್ರಕರಣಗಳು (Corona Cases) ರಾಜ್ಯದಲ್ಲಿ ಏರುಗತಿಯಲ್ಲಿದ್ದಾಗ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ (Congress Mekedatu Padayatra) ಕೈಗೊಂಡಿತ್ತು. ಕೋರ್ಟ್ (Court) ತಾಕೀತಿನ ಬಳಿಕ ಪಾದಯಾತ್ರೆಯನ್ನು ಮೊಟಕುಗೊಳಿಸಿತ್ತು.


  ಕಾಂಗ್ರೆಸ್ ಪಾದಯಾತ್ರೆಯನ್ನು ತಡೆಯದ ರಾಜ್ಯ ಬಿಜೆಪಿ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು. ಆಗ ಅರ್ಧಕ್ಕೆ ನಿಲ್ಲಿಸಿದ್ದ ಪಾದಯಾತ್ರೆಯನ್ನು ಕೊರೊನಾ ಪ್ರಕರಣಗಳು ಕಡಿಮೆ ಆದ ಬಳಿಕ ಮುಂದುವರೆಸಿ ಪೂರ್ಣಗೊಳಿಸಿದ್ದರು.


  ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು
  ಇನ್ನು ಏಪ್ರಿಲ್ 13ರಂದು ಸಿಎಂ ಬೊಮ್ಮಾಯಿ ಮನೆಗೆ ಮುತ್ತಿಗೆ ಹಾಕಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಡಿಕೆಶಿ ಸೇರಿದಂತೆ 36 ಜನರ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.


  ಜನಪರ ಯೋಜನೆಗಾಗಿ ಕಾಂಗ್ರೆಸ್ ಪಾದಯಾತ್ರೆ
  ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪಾದಯಾತ್ರೆಗೂ ಮುನ್ನ ಮಾತನಾಡಿ, ಇದು ಪ್ರತಿಷ್ಠೆಗಾಗಿ ನಡೆಸುತ್ತಿರೋದಲ್ಲ. ಅಂತರ್ಜಲ ಮಟ್ಟ ಹೆಚ್ಚಾಗುತ್ತೆ, ಕುಡಿಯುವ ನೀರು ಮತ್ತು ವಿದ್ಯುತ್ ಸಿಗುತ್ತದೆ, ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಕಬಿನಿ, ಕೆ‌ಆರ್‌ಎಸ್, ಹೇಮಾವತಿ, ಹಾರಂಗಿ ಮೇಲಿನ ಒತ್ತಡ ಕಡಿಮೆಯಾಗುತ್ತೆ. ಬೇಸಿಗೆಯಲ್ಲಿ ಈ ಅಣೆಕಟ್ಟಿನಲ್ಲಿ ನೀರು ಕಡಿಮೆಯಾದಾಗ ಮೇಕೆದಾಟು ಇಂದ ಬಿಡಬಹುದು. ಇದರಿಂದ ತಮಿಳುನಾಡಿಗೆ ಏನೇನೂ ತೊಂದರೆಯಾಗಲ್ಲ ಎಂದು ಸಮರ್ಥಿಸಿಕೊಂಡಿದ್ದರು.


  ಇದನ್ನೂ ಓದಿ: D.K Shivakumar: ‘ಜೆಡಿಎಸ್​ನವ್ರು ನಮ್ಮ ಬ್ರದರ್ಸ್​ ಕಣ್ರೀ‘, ನೀವೂ ಬನ್ನಿ ಪಾದಯಾತ್ರೆಗೆ ಎಂದ್ರು ಡಿ.ಕೆ ಶಿವಕುಮಾರ್​


  ರಾಜಕೀಯ ಕಾರಣಕ್ಕೆ ಅವರು ತಕರಾರು ಮಾಡುತ್ತಿದ್ದಾರೆ. ವಿದ್ಯುತ್ ಉತ್ಪಾದನೆಗೆ ಬಳಕೆಯಾದ ನೀರು ಕೂಡ ತಮಿಳುನಾಡಿಗೆ ಹೋಗುತ್ತೆ. ಎರಡೂ ರಾಜ್ಯಗಳಿಗೆ ಇದರಿಂದ ಅನುಕೂಲ ಇದೆ. ಪರಿಸರ ಅನುಮತಿ ಪತ್ರ ಪಡೆಯಲು ಎರಡೂವರೆ ವರ್ಷ ಬೇಕಾ? ಇದೊಂದು ಜನಪರವಾದ ಯೋಜನೆ, ಹಾಗಾಗಿ ನಾವು ಪಾದಯಾತ್ರೆ ಮಾಡುತ್ತಿದ್ದೇವೆ ಎಂದು ಹೇಳಿದರು.


  ಮೇಧಾ ಪಾಟ್ಕರ್ ಅವರಿಗೆ ಮಾಹಿತಿ ಇಲ್ಲ ಎಂದಿದ್ದ ಸಿದ್ದು
  ತಮಿಳುನಾಡಿಗೆ ಅವರ ಪಾಲಿನ ನೀರು ಕೊಡುವುದಾಗಿ ಒಪ್ಪಿಕೊಂಡಿದ್ದೇವೆ, ಅಷ್ಟೆ. ಬೇರೇನು ಸಮಸ್ಯೆ? ಎಷ್ಟು ಅರಣ್ಯ ಮುಳುಗಡೆ ಆಗುತ್ತದೋ ಅಷ್ಟೇ ಪ್ರಮಾಣದ ಜಮೀನನ್ನು ನೀಡಲು ನಾವು ಒಪ್ಪಿಕೊಂಡಿದ್ದೇವೆ. ಮೇಧಾ ಪಾಟ್ಕರ್ ಅವರಿಗೆ ಈ ಬಗ್ಗೆ ಮಾಹಿತಿ ಇಲ್ಲ ಅನ್ನಿಸುತ್ತೆ. ತಮಿಳುನಾಡಿಗೆ ಯೋಜನೆ ಬಗ್ಗೆ ತಕರಾರು ಮಾಡಲು ಯಾವುದೇ ಕಾನೂನಾತ್ಮಕ ಹಕ್ಕಿಲ್ಲ. ಕಾವೇರಿ ವಿವಾದವನ್ನು ಜೀವಂತವಾಗಿಡಲು ತಮಿಳುನಾಡಿನ ಪಕ್ಷಗಳು ಪ್ರಯತ್ನ ಮಾಡುತ್ತಿವೆ ಎಂದು ಸಿದ್ದರಾಮಯ್ಯ ತಿಳಿಸಿದರು.


  ನ್ಯಾಯಮೂರ್ತಿಗಳ ನೇಮಕ
  ಕೃಷ್ಣಾ ನದಿಯ 2 ನೇ ಟ್ರಿಬ್ಯುನಲ್ ಗಳ ಅಧಿಸೂಚನೆಗೆ ಸಂಬಂಧಿಸಿದಂತೆ ಕಳೆದ ಬಾರಿ ನ್ಯಾಯಮೂರ್ತಿಗಳು ಹಿಂದೆ ಸರಿದಿದ್ದು, ಈ ಬಾರಿ ಹೊಸ ನ್ಯಾಯಮೂರ್ತಿಗಳ ನೇಮಕ್ಕಕ್ಕೆ ರಿಜಿಸ್ಟ್ರಾರ್ ಜನರಲ್ ಅವರ ಬಳಿ ಮುಂದಿನ ವಿಚಾರಣೆಯಷ್ಟರಲ್ಲಿ ನೇಮಕವಾಗಬೇಕೆಂದು ಅರ್ಜಿ ಸಲ್ಲಿಸಲಾಗಿತ್ತು.


  ಇದನ್ನೂ ಓದಿ: Mekedatu Project: ಫೆ. 27ರಿಂದ ಮತ್ತೆ ಮೇಕೆದಾಟು ಪಾದಯಾತ್ರೆ; ಡಿಕೆ ಶಿವಕುಮಾರ್​​


  ಮುಖ್ಯ ನ್ಯಾಯಮೂರ್ತಿಗಳು ಈ ಬಗ್ಗೆ ಕ್ರಮಕೈಗೊಳ್ಳಲಿದ್ದಾರೆ. ತಪ್ಪಿದಲ್ಲಿ ನ್ಯಾಯಾಲಯದಲ್ಲಿ ಈ ಬಗ್ಗೆ ಪ್ರಸ್ತಾಪ ಮಾಡಬೇಕೆಂದು ತೀರ್ಮಾನಿಸಲಾಗಿದೆ ಎಂದರು. ಕೇಂದ್ರ ಜಲ ಆಯೋಗದಲ್ಲಿ ಹಾಗೂ ಕಾವೇರಿ ನದಿ ಪ್ರಾಧಿಕಾರದ ಮುಂದೆಯೂ ನಮ್ಮ ನಿಲುವನ್ನು ಸ್ಪಷ್ಟಪಡಿಸಲು ತೀರ್ಮಾನಿಸಲಾಗಿದೆ. ಜಲಶಕ್ತಿ ಸಚಿವರನ್ನು ಭೇಟಿಯಾಗಿದ್ದು, ಪರಿಸರ ಅನುಮತಿ ದೊರೆಯಬೇಕಿದೆ ಎಂದರು.

  Published by:guruganesh bhat
  First published: