ಕಾವೇರಿ ವಿಷಯದಲ್ಲಿ ಬಿಜೆಪಿ ಹೊಸ ವರಸೆ ಶುರು ಮಾಡಿತೇ? ಕೇಂದ್ರದಿಂದ Mekedatu ಯೋಜನೆಗೆ ಬಿಕ್ಕಟ್ಟಿನ ಲೇಪನ: HDK ಕಿಡಿ

ಮೇಕೆದಾಟು ಯೋಜನೆ ‘ವಿವಾದ’ವನ್ನು ಕರ್ನಾಟಕ-ತಮಿಳುನಾಡು ಪರಸ್ಪರ ಚರ್ಚೆ ನಡೆಸುವ ಮೂಲಕ ಬಗೆಹರಿಸಿಕೊಳ್ಳುವಂತೆ ಕೇಂದ್ರ ಜಲಸಂಪನ್ಮೂಲ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್‌ ಹೇಳಿದ್ದಾರೆ. ಅವರೇ ʼವಿವಾದʼ ಎನ್ನುವ ಮೂಲಕ ನಮ್ಮ ಜನರ ಕುಡಿಯುವ ನೀರಿನ ಯೋಜನೆಗೆ ʼಬಿಕ್ಕಟ್ಟಿನ ಲೇಪನʼ ಹಚ್ಚಿದ್ದಾರೆ.

ಹೆಚ್ ಡಿ ಕುಮಾರಸ್ವಾಮಿ

ಹೆಚ್ ಡಿ ಕುಮಾರಸ್ವಾಮಿ

  • Share this:
ರಾಜ್ಯದಲ್ಲಿ ಮೇಕೆದಾಟು ಯೋಜನೆ(Mekedatu Project)ಯ ಬಿಸಿ ಕಡಿಮೆ ಆಗುತ್ತಿಲ್ಲ. ಮೇಕೆದಾಟು ಯೋಜನೆಗೆ ಕಾಂಗ್ರೆಸ್ ಬೃಹತ್ ಪಾದಯಾತ್ರೆ (Congress Padayatra) ನಡೆಸಿತ್ತು. ಇದರ ಬೆನ್ನಲ್ಲೇ ಸಿಎಂ ಬಸವರಾಜ್ ಬೊಮ್ಮಾಯಿ (CM Basavaraj Bommai) ಬಜೆಟ್ (Karnataka Budget) ನಲ್ಲಿ ಮೇಕೆದಾಟು ಯೋಜನೆ 1000 ಕೋಟಿ ರೂ ಅನುದಾನ ಮೀಸಲಿರಿಸುವ ಮೂಲಕ ಕೈ ಪಡೆಗೆ ತಿರುಗೇಟು ನೀಡಿದ್ದರು. ಈ ಬೆನ್ನಲ್ಲೇ ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ (Union Jal Shakti Minister Gajendra Singh Shekhawat)ನೀಡಿರುವ ಹೇಳಿಕೆಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ (Former CM HD Kumaraswamy) ಆಕ್ರೋಶ ಹೊರ ಹಾಕಿದ್ದಾರೆ. ಎರಡೂ ರಾಷ್ಟ್ರೀಯ ಪಕ್ಷಗಳು ಮೇಕೆದಾಟು ಹೆಸರಿನಲ್ಲಿ ಜನರಿಗೆ ಮೋಸ ಮಾಡುತ್ತಿದ್ದು, ಚುನಾವಣೆಯ ಆಟ ಆರಂಭಿಸಿವೆ ಎಂದು ಕಿಡಿ ಕಾರಿದ್ದಾರೆ.

ಕೇಂದ್ರ ಸಚಿವರಿಂದ ಬಿಕ್ಕಟ್ಟಿನ ಲೇಪನ

ಮೇಕೆದಾಟು ಯೋಜನೆ ‘ವಿವಾದ’ವನ್ನು ಕರ್ನಾಟಕ-ತಮಿಳುನಾಡು ಪರಸ್ಪರ ಚರ್ಚೆ ನಡೆಸುವ ಮೂಲಕ ಬಗೆಹರಿಸಿಕೊಳ್ಳುವಂತೆ ಕೇಂದ್ರ ಜಲಸಂಪನ್ಮೂಲ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್‌ ಹೇಳಿದ್ದಾರೆ. ಅವರೇ ʼವಿವಾದʼ ಎನ್ನುವ ಮೂಲಕ ನಮ್ಮ ಜನರ ಕುಡಿಯುವ ನೀರಿನ ಯೋಜನೆಗೆ ʼಬಿಕ್ಕಟ್ಟಿನ ಲೇಪನʼ ಹಚ್ಚಿದ್ದಾರೆ. ಎರಡೂ ರಾಜ್ಯಗಳು ಕುಳಿತು ಚರ್ಚೆ ಮಾಡಿಕೊಂಡು ಒಮ್ಮತಕ್ಕೆ ಬರಬೇಕು ಎಂದು ಕೇಂದ್ರ ಸಚಿವರೇ ಹೇಳುವ ಮೂಲಕ, ʼಮೇಕೆದಾಟು ಯೋಜನೆಗೆ ಒಕ್ಕೂಟ‌ ವ್ಯವಸ್ಥೆಯ ಆಶಯಕ್ಕೆ ತಕ್ಕಂತೆ ಕಾನೂನಾತ್ಮಕ ಅನುಮತಿ ನೀಡುವ ಹೊಣೆಗಾರಿಕೆಯಿಂದ ಕೇಂದ್ರ ಸರಕಾರ ನುಣುಚಿಕೊಳ್ಳುತ್ತಿದೆʼ ಎನ್ನುವುದು ನನ್ನ ಸ್ಪಷ್ಟ ಅಭಿಪ್ರಾಯ.

ಇದನ್ನೂ ಓದಿ:  ಕುಳಿತು ಮಾತನಾಡಿ Mekedatu ವಿವಾದ ಬಗೆಹರಿಸಿಕೊಳ್ಳಿ; ಕರ್ನಾಟಕ-ತಮಿಳುನಾಡಿಗೆ ಕೇಂದ್ರ ಸಚಿವರ ಸಲಹೆ

ಮುಂಗಡ ಪತ್ರದಲ್ಲಿ ಯೋಜನೆಗೆ 1,000 ಕೋಟಿ ರೂ. ಕೊಟ್ಟೆವು ಎಂದು ಬಿಜೆಪಿ ಹಾಗೂ ನಮ್ಮ ಪಾದಯಾತ್ರೆಯಿಂದಲೇ ಹಣ ಘೋಷಿಸಲಾಯಿತು ಎಂದು ಕಾಂಗ್ರೆಸ್‌ ಕುಣಿಯುತ್ತಿವೆ. ಒಂದೇ ನಾಣ್ಯದ ಎರಡು ಮುಖಗಳಾದ ಎರಡೂ ರಾಷ್ಟ್ರೀಯ ಪಕ್ಷಗಳು, ಈಗ ಮೇಕೆದಾಟು ಇಟ್ಟುಕೊಟ್ಟುಕೊಂಡು ʼಚುನಾವಣಾ ಆಟʼ ಶುರು ಮಾಡಿವೆ.

ಮೇಕೆದಾಟು ಯೋಜನೆಯಲ್ಲಿ ಕೇಂದ್ರ ಸರ್ಕಾರದ ಪಾತ್ರವಿಲ್ಲವೇ?

ವಾಸ್ತವ ಏನು ಎಂಬುದನ್ನು ನಾನು ಬಹಳ ಹಿಂದೆಯೇ ಹೇಳಿದ್ದೆ. ಕೇಂದ್ರದ ಕಾನೂನು ಸುಳಿಯಲ್ಲಿ ಸಿಕ್ಕಿರುವ ಹಾಗೂ ಕೇಂದ್ರದ ಜಲ ಆಯೋಗ (CWC)ದಲ್ಲಿ ಕೊಳೆಯುತ್ತಿರುವ ಮೇಕೆದಾಟು ಯೋಜನೆಯು ಪಾದಯಾತ್ರೆಯಿಂದ ಬರುವುದಿಲ್ಲ. ಕೇಂದ್ರ ಸರಕಾರದ ಮೇಲೆ ಒತ್ತಡ ಹಾಕಿಯೇ ತಂದುಕೊಳ್ಳಬೇಕು ಎಂದಿದ್ದೆ.

ಈಗ ಕೇಂದ್ರ ಸಚಿವರಾದ ಶೇಖಾವತ್‌ ಅವರು; “ಮೇಕೆದಾಟು ಕುಡಿಯುವ ನೀರಿನ ಯೋಜನೆ ಬಗ್ಗೆ ಕರ್ನಾಟಕ ಉಂಟು, ತಮಿಳುನಾಡು ಉಂಟು. ನೀವು ನೀವೇ ಮಾತನಾಡಿಕೊಳ್ಳಿ” ಎಂದು ಕೈ ಎತ್ತಿಬಿಟ್ಟಿದ್ದಾರೆ. ಹಾಗಾದರೆ, ಯೋಜನೆಗೆ ಒಪ್ಪಿಗೆ ನೀಡುವಲ್ಲಿ ಕೇಂದ್ರ ಸರಕಾರದ ಪಾತ್ರವೇ ಇಲ್ಲವೇ?

ಕಾವೇರಿ ಬಗ್ಗೆ ಬಿಜೆಪಿ ಹೊಸ ವರಸೆ ಶುರು ಮಾಡಿತೇ?

ನಮ್ಮ ಪಾಲಿನ ನೀರನ್ನು ದಕ್ಕಿಸಿಕೊಳ್ಳುವುದು ಮತ್ತು ನಮ್ಮ ಜನರಿಗೆ ಕುಡಿಯುವ ನೀರು ಕೊಡುವ ಮೇಕೆದಾಟು ಯೋಜನೆ ಅನುಷ್ಠಾನ ಮಾಡುವುದು ಕರ್ನಾಟಕದ ಹಕ್ಕು. ಆದರೆ, ಕೇಂದ್ರ ಸಚಿವರು ʼನೀವೇ ಬಗೆಹರಿಸಿಕೊಳ್ಳಿʼ ಎಂದು ಹೇಳಿದ ಒಳಮರ್ಮವೇನು? ಕಾವೇರಿ ಬಗ್ಗೆ ಬಿಜೆಪಿ ʼಹೊಸ ವರಸೆʼ ಶುರು ಮಾಡಿತೇ ಎನ್ನುವ ಸಂಶಯ ನನ್ನದು.

ಇದನ್ನೂ ಓದಿ:  Pratap Simha: ಮೋದಿಗೆ ಗಟ್ಸ್ ಇರೋದ್ದಕ್ಕೆ ರಿಸ್ಕ್ ತಗೊಂಡು ಜನರನ್ನ ರಕ್ಷಿಸುತ್ತಿದ್ದಾರೆ, ಟೀಕೆಗೆ 'ಸಿಂಹ' ತಿರುಗೇಟು

ಈ ಬಗ್ಗೆ; 1,000 ಕೋಟಿ ಹಣ ಘೋಷಣೆ ಮಾಡಿದೊಡನೆ ಪಾದಯಾತ್ರೆಯಿಂದಲೇ ಆಯಿತು ಎಂದು ʼಹಿಗ್ಗಿ ಹೀರೆಕಾಯಿʼ ಆಗಿದ್ದ ಕಾಂಗ್ರೆಸ್‌ ನಿಲುವೇನು? ಅವರೀಗ ತಮ್ಮ ಮಿತ್ರಪಕ್ಷ ಡಿಎಂಕೆ ಅಧಿಕಾರದಲ್ಲಿರುವ ತಮಿಳುನಾಡು ಸರಕಾರದ ಜತೆ ಮಾತುಕತೆ ನಡೆಸಿ ಎಂದು ಕೇಂದ್ರ ಸರಕಾರದ ಮೇಲೆ ಒತ್ತಡ ಹಾಕುತ್ತಾರಾ ಎಂದು ಪ್ರಶ್ನೆ ಮಾಡಿ #ರಾಷ್ಟ್ರೀಯಪಕ್ಷಗಳಮೇಕೆದಾಟು_ಮಕ್ಮಲ್‌ಟೋಪಿ ಎಂಬ ಹ್ಯಾಶ್ ಟ್ಯಾಗ್ ಬಳಸಿದ್ದಾರೆ.
Published by:Mahmadrafik K
First published: